ತಮಿಳುನಾಡು: ಇಲ್ಲಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂನಲ್ಲಿ ಯುವಕನೊಬ್ಬ ದೀಪಾವಳಿಗೆ ಪೋಷಕರು ಹೊಸ ಬಟ್ಟೆ ಕೊಡಿಸಿಲ್ಲ ಎಂದು ಬೇಸರ ಮಾಡಿಕೊಂಡು ಆತ್ಮಹತ್ಯೆ (Suicide case) ಮಾಡಿಕೊಂಡಿದ್ದಾರೆ. ಶಿವಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ.
ನರ್ಸರಿ ಫಾರ್ಮ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಕುಮಾರ್, ಇತ್ತೀಚೆಗೆ ಯುವಕರ ಜತೆ ಸೇರಿ ಮದ್ಯ ವ್ಯಸನಿಯಾಗಿದ್ದ ಎಂದು ತಿಳಿದು ಬಂದಿದೆ. ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸುವಂತೆ ಪೋಷಕರನ್ನು ಪೀಡಿಸಿದ್ದ. ಪೋಷಕರು ಬಟ್ಟೆ ಕೊಡಿಸಲು ನಿರಾಕರಿಸಿದ್ದಕ್ಕೆ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯ ಬಾತ್ ರೂಮ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಡೆಂಕಣಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಇದನ್ನೂ ಓದಿ | Student suicide | ಶಾಲೆಯಿಂದ ಸಸ್ಪೆಂಡ್ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ