ಉತ್ತರಪ್ರದೇಶ: ಅತ್ಯಾಚಾರಿಯನ್ನು (rapist) ಕೊಂದ ಹದಿಹರೆಯದ ಬಾಲಕನನ್ನು (Teenage Boy Arrested) ಉತ್ತರಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 302 (Murder) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮೇ 20ರಂದು ಬಾಲಕನ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ತನಿಖೆಯ ಅನಂತರ ಹದಿಹರೆಯದವರನ್ನು ಶನಿವಾರ ಬಂಧಿಸಲಾಯಿತು.
ವ್ಯಕ್ತಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಅನಂತರ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಎಸ್ಪಿ (ಗ್ರಾಮೀಣ) ಆದಿತ್ಯ ಬನ್ಸಾಲ್ ಅವರು, ವಾರಗಳ ಹಿಂದೆ ಮೃತರು ಅಪ್ರಾಪ್ತ ವಯಸ್ಕನನ್ನು ಅಶ್ಲೀಲ ವಿಡಿಯೋ ಕ್ಲಿಪ್ ಅನ್ನು ರೆಕಾರ್ಡ್ ಮಾಡಿದ್ದರು. ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಮತ್ತು ಪದೇ ಪದೇ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು.
ಸೋಮವಾರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ಅನಂತರ, ವ್ಯಕ್ತಿ ತನ್ನ ಮನೆಗೆ ಬರುವಂತೆ ಬಾಲಕನಿಗೆ ಒತ್ತಾಯಿಸಿದ್ದನು. ಆತ ಕಿರುಕುಳ ನೀಡುತ್ತಿದ್ದುದರಿಂದ ಹುಡುಗ ತನ್ನ ಪಕ್ಕದಲ್ಲಿದ್ದ ಹರಿತವಾದ ವಸ್ತುವನ್ನು ಎತ್ತಿಕೊಂಡು ಹೋಗಿ ವ್ಯಕ್ತಿಯ ತಲೆ ಮತ್ತು ಗಂಟಲಿನ ಮೇಲೆ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಆತನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರೀತಿಗೆ ವಿರೋಧ; ಯುವಕ ಆತ್ಮಹತ್ಯೆ
ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಅಜಯ್ ಮನೋಹರ ಸೂರ್ಯವಂಶಿ (22) ಮೃತ ವ್ಯಕ್ತಿ. ಕೆಲವು ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಹಿಟ್ ಆ್ಯಂಡ್ ರನ್: ಪಾದಚಾರಿ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್ ಆ್ಯಂಡ್ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.
ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.