ಥಾಣೆ: ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್ ರೂಫ್ ಬಿದ್ದ(Thane Roof Collapse) ಪರಿಣಾಮ ಒಂಬತ್ತು ಮಕ್ಕಳು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಪೈಕಿ ಐವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿ ಮಳೆಯಿಂದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್ ರೂಫ್(tin roof falls on football) ತುಂಡಾಗಿ ಮೈದಾನದಲ್ಲಿ ಆಡವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಥಾಣೆಯ ಉಪವನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಸಮೀಪದ ಬೆಥನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಟಲ್ ಸೇತುಗೆ ಚಾಲನೆ ಸಿಕ್ಕ ಐದೇ ತಿಂಗಳಲ್ಲಿ ಬಿರುಕು
ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಕಾಂಗ್ರೆಸ್ ಆರೋಪಿಸಿದೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ (Nana Patole) ಅವರು ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ಜನರಿಗೆ ತೋರಿಸಿ ರಸ್ತೆ ಸುರಕ್ಷತೆಯನ್ನು ಪರಿಶೀಲಿಸಿದ್ದಾರೆ. ಹಾಗೆಯೇ, ಭಾರಿ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಆರೋಪಿಸಿದ್ದಾರೆ.
ಇದನ್ನೂ ಓದಿ Deep fake Scam: ಮುಖೇಶ್ ಅಂಬಾನಿಯ ಡೀಪ್ ಫೇಕ್ ವಿಡಿಯೋ; ನಿಜವೆಂದೇ ನಂಬಿದ್ದ ವೈದ್ಯೆಗೆ 7 ಲಕ್ಷ ರೂ ವಂಚನೆ
ನವಿ ಮುಂಬೈನ ಉಲ್ವೆ ಕಡೆ ಹೋಗುವ ಸೇತುವೆ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿವೆ. “ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು” ಎಂದು ನಾನಾ ಪಟೋಳೆ ಆರೋಪಿಸಿದ್ದಾರೆ.
ಈ ಸೇತುವೆ ನಿರ್ಮಾಣಕ್ಕೆ ತಗುಲಿದ ವೆಚ್ಚ ಬರೋಬ್ಬರಿ 17,840 ಕೋಟಿ ರೂಪಾಯಿ. ಈ ಪೈಕಿ 15,000 ಕೋಟಿ ರೂ. ಸಾಲ ಪಡೆದುಕೊಳ್ಳಲಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಇರುವ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಎಂಟಿಎಚ್ಎಲ್‌ನಲ್ಲಿ ಕಾರು, ಲಘು ವಾಹನಗಳು, ಮಿನಿ ಬಸ್‌ಗಳು ಮತ್ತು ಬಸ್‌ಗಳ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿ.ಮೀ. ಬೈಕ್‌ಗಳು ಸೇರಿದಂತೆ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಟ್ರ್ಯಾಕ್ಟರ್‌ಗಳ ಪ್ರವೇಶ ನಿಷೇಧಿಸಲಾಗಿದೆ.