ರಾಯಚೂರು: ರಾತ್ರಿ ದಾರಿಹೋಕರನ್ನು ಅಡ್ಡಗಟ್ಟಿ ದೋಚುವ, ಮನೆ-ಮನೆಗೆ ನುಗ್ಗಿ ಕಳವು (Theft case) ಮಾಡುವ ಅಪಾಯಕಾರಿ ಚೆಡ್ಡಿ ಗ್ಯಾಂಗ್ (Cheddi gang) ಹಿಂದೊಮ್ಮೆ ಬೆಂಗಳೂರಲ್ಲಿ ಕಾಣಿಸಿಕೊಂಡಿತ್ತು. ಈಗ ರಾಯಚೂರು ಜಿಲ್ಲೆಯಲ್ಲಿ ʻಬರಿ ಮೈಯಲ್ಲಿ ಬರುವ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.
ಮುಖಕ್ಕೆ ಮುಖಗವುಸು ಹಾಕಿಕೊಂಡು ಗುರುತು ಮರೆ ಮಾಡಿ, ಚೆಡ್ಡಿ ತೊಟ್ಟು, ಬರಿ ಮೈಯಲ್ಲಿ ಬಂದ ಮೂವರು ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೈಟೆಕ್ ಏರಿಯಾಗಳು ಹಾಗೂ ಒಂಟಿ ಮನೆಯನ್ನೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದೆ ಎಂದು ಭಾವಿಸಲಾಗಿದೆ.
ಇದನ್ನೂ ಓದಿ: Heart Attack : ಮಲಗಿದ್ದಲ್ಲೇ ನಿಂತು ಹೋಯ್ತು ಕಾನ್ಸ್‌ಟೇಬಲ್ ಹೃದಯ ಬಡಿತ!
ರಾಯಚೂರು ನಗರದ ಕೃಷ್ಣ ಮೆಡೋಸ್‌ನಲ್ಲಿ ಚೆಡ್ಡಿ ಧರಿಸಿ ಬರಿ ಮೈಯಲ್ಲೆ ಬಂದ ಮೂವರು ಕಳ್ಳರು ಕಳ್ಳತನಕ್ಕೆ ಯತ್ನಿಸಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಕಳ್ಳತನ ಪ್ರಯತ್ನ ಮಾಡಿದ್ದಾರೆ. ಕೈಯಲ್ಲಿ ಹರಿತವಾದ ಚಾಕು ಹಾಗೂ ಇನ್ನಿತರ ವಸ್ತುಗಳಿಂದ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದಾರೆ. ಆದರೆ ಸೆಕ್ಯೂರಿಟಿ ಗಾರ್ಡ್‌ನ ಸಮಯಪ್ರಜ್ಞೆಯಿಂದ ಕಳ್ಳರು ಓಡಿ ಹೋಗಿದ್ದಾರೆ.
ಅರೆಬೆತ್ತಲೆ ಕಳ್ಳರ ಕೈ ಚಳಕ
ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆ ಆಗಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಈ ಕುಖ್ಯಾತ ಗ್ಯಾಂಗ್‌ನ ಬೆನ್ನು ಬಿದ್ದಿದ್ದಾರೆ.
ಆನೇಕಲ್‌ನಲ್ಲಿ ಬೈಕ್ ಕಳ್ಳರ ಕಾಟ
ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳ ಕದ್ದು ಪರಾರಿ ಆಗಿದ್ದಾನೆ. ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕಳೆದ 7ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೊಮ್ಮಸಂದ್ರದ ಅಲ್ತೆರ ಲ್ಯಾಬಿರೇಟಿಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಉದ್ಯೋಗಿ ಆಗಿರುವ ಪ್ರಸಾದ್ ಕುಮಾರ್ ಎಂಬುವವರಿಗೆ ಸೇರಿದ ಪಲ್ಸರ್ ಬೈಕ್ ಕದ್ದಿದ್ದಾರೆ. ಸೆಕೆಂಡ್ ಶಿಫ್ಟ್ ಕೆಲಸಕ್ಕೆ ಬಂದಿದ್ದ ಪ್ರಸಾದ್ ಕುಮಾರ್, ಕಂಪನಿಯ ಮುಂಭಾಗ ಬೈಕ್ ಪಾರ್ಕಿಂಗ್ ಮಾಡಿ ಹೋಗಿದ್ದರು. ಬೈಕ್‌ನಲ್ಲಿ ಬಂದಿದ್ದ ಇಬ್ಬರು ಮುಸುಕುಧಾರಿ ಖದೀಮರು, ಬೈಕ್‌ನ ಹ್ಯಾಂಡಲ್ ಲಾಕ್ ಮುರಿದು ಕದ್ದು ಹೋಗಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಈ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. !
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ