Site icon Vistara News

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

theft Case

ದಾವಣಗೆರೆ/ತುಮಕೂರು: ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ತುಮಕೂರಿನ 2 ಸೂಪರ್ ಮಾರ್ಕೆಟ್‌ಗಳಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಶ್ರೀನಿವಾಸ ಹೈಪರ್ ಮಾರ್ಕೆಟ್ ಹಾಗೂ ಜಿಎಮ್‌ಆರ್ ಮೆಗಾ ಮಾರ್ಟ್‌ನಲ್ಲಿ ಕಳ್ಳತನವಾಗಿದೆ. ಕಳ್ಳರು ಜಿಎಮ್‌ಆರ್ ಮೆಗಾ ಮಾರ್ಟ್‌ನ ಬೀಗ ಮುರಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಕಳ್ಳತನ ತಡೆಯಲು ಬಂದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಂಗಡಿ ಮಾಲೀಕರನ್ನೇ ಹೆದರಿಸಿ ಕಳ್ಳರು ಪರಾರಿಯಾಗಿದ್ದಾರೆ.

theft Case

50 ಸಾವಿರ ರೂ. ನಗದು ಹಾಗೂ 10ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಕದ್ದಿದ್ದು, ಜತೆಗೆ ಸಿಸಿಟಿವಿಯ ಡಿವಿಆರ್ ಕದ್ದಿದ್ದಾರೆ. ಸುಮಾರು ನಾಲ್ಕೈದು ಕಳ್ಳರ ತಂಡ ಲಗ್ಗೆ ಇಟ್ಟ ಪೂರ್ತಿ ದೃಶ್ಯವು ಮತ್ತೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ (Air India Flight) 20 ಗಂಟೆಗಳ ಕಾಲ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಹವಾ ನಿಯಂತ್ರಣ ವ್ಯವಸ್ಥೆ ಇಲ್ಲದೆ ವಿಮಾನದೊಳಗೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಹೊರಡಲಿದೆ.

ಗುರುವಾರ ಪತ್ರಕರ್ತೆ ಶ್ವೇತಾ ಪುಂಜ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸಿ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದಾರೆ. ʼʼಫ್ಲೈಟ್ ನಂ. ಎಐ 183 ವಿಮಾನಕ್ಕೆ ಪ್ರಯಾಣಿಕರನ್ನು ಹತ್ತಿಸಲಾಯಿತು. ಹವಾ ನಿಯಂತ್ರಣವಿಲ್ಲದೆ ಹಲವರು ಪರದಾಡಿದರು. ಈ ವೇಳೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಪ್ರಯಾಣಿಕರಿಗೆ ವಿಮಾನದಿಂದ ನಿರ್ಗಮಿಸಲು ತಿಳಿಸಲಾಯಿತುʼʼ ಎಂದು ಅವರು ಬರೆದುಕೊಂಡಿದ್ದಾರೆ.

ದೆಹಲಿಯಲ್ಲಿ ಉಷ್ಣಾಂಶ ದಾಖಲೆಯ ಮಟ್ಟಕ್ಕೆ ಏರಿದೆ. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ 52.9 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಕಂಡು ಬಂದಿತ್ತು. ʼʼಇದು ಖಾಸಗೀಕರಣ ವಿಫಲವಾಗಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ. ಎಐ 183 ವಿಮಾನವು ಎಂಟು ಗಂಟೆಗಳಿಗಿಂತ ಹೆಚ್ಚು ವಿಳಂಬವಾಗಿದೆ. ಪ್ರಯಾಣಿಕರನ್ನು ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ವಿಮಾನವನ್ನು ಹತ್ತಿಸಿದ್ದು ಅಮಾನವೀಯ” ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟ್ಯಾಗ್ ಮಾಡಿ ಶ್ವೇತಾ ಪುಂಜ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಏರ್‌ ಇಂಡಿಯಾ ಹೇಳಿದ್ದೇನು?

ಶ್ವೇತಾ ಪುಂಜ್ ಅವರ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೇ ಏರ್‌ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ʼʼಈ ಘಟನೆಗಾಗಿ ವಿಷಾಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ತಂಡದವರು ಸೂಕ್ತವಾಗಿ ಸ್ಪಂದಿಸಲಿದ್ದಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕ್ರಮ ಕೈಗೊಳ್ಳಲಿದ್ದಾರೆʼʼ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಪ್ರಯಾಣಿಕ ಅಭಿಷೇಕ್ ಶರ್ಮಾ ತ್ವರಿತ ಕ್ರಮಕ್ಕಾಗಿ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದಾರೆ. ಬೋರ್ಡಿಂಗ್ ಪ್ರದೇಶದಲ್ಲಿ ಸಿಲುಕಿರುವ ಹಿರಿಯ ನಾಗರಿಕರಿಗೆ ಮನೆಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. ಅನೇಕ ಪ್ರಯಾಣಿಕರು ಪೋಸ್ಟ್ ಮಾಡಿದ ದೃಶ್ಯಗಳಲ್ಲಿ ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ನೆಲದ ಮೇಲೆ ಕುಳಿತಿರುವುದನ್ನು ಕಂಡು ಬಂದಿದೆ.

ಇದನ್ನೂ ಓದಿ: Air India: ನಿಯಮ ಉಲ್ಲಂಘಿಸಿದ ಏರ್‌ ಇಂಡಿಯಾಕ್ಕೆ ಬಿತ್ತು ಭಾರೀ ದಂಡ

ಕೆಲವು ತಿಂಗಳ ಹಿಂದೆ ಇಂತಹದ್ದೇ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಬೆಂಗಳೂರಿಗೆ ಡಿ. 23ರ ರಾತ್ರಿ 8.15ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು. ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು. ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version