20 ಲಕ್ಷ ರೂ. ಮೌಲ್ಯದ ವಸ್ತು ಕದ್ದು I LOVE YOU ಅಂತ ಬರೆದಿಟ್ಟು ಹೋದ! - Vistara News

ಕ್ರೈಂ

20 ಲಕ್ಷ ರೂ. ಮೌಲ್ಯದ ವಸ್ತು ಕದ್ದು I LOVE YOU ಅಂತ ಬರೆದಿಟ್ಟು ಹೋದ!

I LOVE YOU: ಮನೆಯ ವಸ್ತುಗಳನ್ನು ಕದ್ದು ಟಿವಿ ಸ್ಕ್ರೀನ್‌ ಮೇಲೆ ಪ್ರೇಮ ಸಂದೇಶ ಬರೆದಿಟ್ಟು ಹೋದ ಕಳ್ಳರು! ಕ್ರೇಜಿ ಕಳ್ಳರ ಇಂಟ್ರೆಸ್ಟಿಂಗ್‌ ಕತೆ

VISTARANEWS.COM


on

I LOVE YOU THIEF
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಣಜಿ: ಈ ಕಳ್ಳರು ಕೂಡಾ ತುಂಬಾ ಕ್ರೇಜಿಯಾಗಿರುತ್ತಾರೆ ಅನ್ನುವುದಕ್ಕೆ ಆಗಾಗ ಕೆಲವು ನಿದರ್ಶನಗಳನ್ನು ಕಾಣುತ್ತೇವೆ. ಮನೆ ಮುರಿದು ಒಳಗೆ ಬಂದವರೇ ಅಡುಗೆ ಮಾಡಿ ಊಟ ಮಾಡಿ ಹೋಗುವುದು, ಕೋಲ್ಡ್‌ ಡ್ರಿಂಕ್ಸ್‌ ಎಲ್ಲ ಕುಡಿದು ಆರಾಮದಲ್ಲಿ ನಿದ್ದೆ ಮಾಡುವುದು.. ಹೀಗೆ ಕದಿಯಲು ಬಂದರೂ ಯಾವುದೇ ಟೆನ್ಶನ್‌ ಇಲ್ಲದೆ ತಮ್ಮ ಕೆಲಸ ಮುಗಿಸಿ ಹೋಗುವವರು ಸಾಕಷ್ಟು ಜನ. ಇಲ್ಲೊಬ್ಬ ಕಳ್ಳ ಇನ್ನೂ ಕ್ರೇಜಿ ಆಗಿರುವ ಹಾಗಿದೆ. ಅವನು ಮನೆಯ ಸಾಮಗ್ರಿಗಳನ್ನೆಲ್ಲ ಹೊತ್ತೊಯ್ದರೂ ಹೋಗುವಾಗ I LOVE YOU ಅಂತ ಬರೆದಿಟ್ಟು ಹೋಗಿದ್ದಾನೆ.

ಈ ಘಟನೆ ನಡೆದಿರುವುದು ದಕ್ಷಿಣ ಗೋವಾದ ಮಾರ್ಗೋವಾ ಪಟ್ಟಣದ ಒಂದು ಮನೆಯಲ್ಲಿ.

ಆಸಿಬ್‌ ಕ್ಸೆಕ್‌ ಎಂಬವರು ಎರಡು ದಿನಗಳ ಮಟ್ಟಿಗೆ ಬೇರೆ ಊರಿಗೆ ರಜಾ ಪ್ರವಾಸ ಹೋಗಿದ್ದರು. ಎರಡು ದಿನ ಬಿಟ್ಟು ಬಂದು ನೋಡಿದರೆ ಮನೆಯ ಬಾಗಿಲು ಮುರಿದಿತ್ತು. ವಸ್ತುಗಳೆಲ್ಲ ಕಳವಾದಂತೆ ಕಂಡಿತು. ಆದರೆ, ಹಾಲ್‌ನಲ್ಲಿ ಟಿವಿ ಮಾತ್ರ ಹಾಗೆಯೇ ಇತ್ತು. ಅದರ ಮೇಲೆ `I LOVE YOU’ ಎಂದು ಬರೆದಿತ್ತು!

ಇದನ್ನೂ ಓದಿ | ಸ್ನೇಹಿತನ ಫೇಸ್‌ಬುಕ್‌ ಪೋಸ್ಟ್‌ನಿಂದ ಸಿಕ್ಕಿಬಿದ್ದ ಕಳ್ಳರು

ಬಂಗಲೆಗೆ ನುಗ್ಗಿದ್ದ ಕಳ್ಳ ಅಥವಾ ಕಳ್ಳರ ತಂಡ ಅತ್ಯಂತ ಸಾವಕಾಶವಾಗಿ ತಮ್ಮ ಕೆಲಸ ಮಾಡಿದಂತಿದೆ. ಮನೆಯಲ್ಲಿದ್ದ ಎಲ್ಲ ಭಾಗಗಳನ್ನು ಶೋಧಿಸಿ ಸುಮಾರು 20 lಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರ ಬೆಲೆ ಬಾಳುವ ವಸ್ತುಗಳನ್ನು ಕದ್ದುಕೊಂಡು ಹೋಗಿದ್ದಾನೆ. ಜತೆಗೆ 1.5 ಲಕ್ಷ ರೂ. ನಗದು ಕೂಡಾ.

ಮನೆಯನ್ನೆಲ್ಲ ದೋಚಿ ಮನೆ ಮಾಲೀಕನಿಗೆ ಐ ಲವ್‌ ಯೂ ಎಂದು ಪ್ರೇಮ ಸಂದೇಶ ಕಳುಹಿಸಿದ ಕಳ್ಳನ ಬಗ್ಗೆ ಎಲ್ಲರಿಗೂ ಕುತೂಹಲ ಮೂಡಿದೆ. ಮಾರ್ಗೋವಾ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮನೆ ಮುರಿದು ಕಳ್ಳತನ ಮಾಡಿದವನ ಶೋಧ ನಡೆಯುತ್ತಿದೆ ಎಂದು ಇನ್ಸ್‌ಪೆಕ್ಟರ್‌ ಸಚಿನ್‌ ನರ್ವೇಕರ್‌ ಹೇಳಿದ್ದಾರೆ.

ಇದನ್ನೂ ಓದಿ | ಮನೆಯಿಂದಲೇ 4 ಲಕ್ಷ ಕದ್ದು ಮೋಜು ಮಾಡಿ ನಕಲಿ ನೋಟು ತಂದಿಟ್ಟ ಮಕ್ಕಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical abuse: ಲೈಂಗಿಕ ಕಿರುಕುಳ ಕೇಸ್‌; ಅರ್ಜುನ ಪ್ರಶಸ್ತಿ ಪುರಸ್ಕೃತ ಅಧಿಕಾರಿ ವಜಾ

Physical abuse:ಸಿಆರ್‌ಪಿಎಫ್‌ನ ಡೆಪ್ಯೂಟಿ ಇನ್‌ಸ್ಪೆಕ್ಟರ್‌ ಜನರಲ್‌ ಶ್ರೇಣಿಯ ಕ್ರೀಡಾ ವಿಭಾಗದ ಅಧಿಕಾರಿಯಾಗಿರುವ ಖಂಜನ್‌ ಸಿಂಗ್‌ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವಿಚಾರಣೆ ನಡೆಸಿದ ಸಿಆರ್‌ಪಿಎಫ್‌ ಖಂಜನ್‌ ಸಿಂಗ್‌ ಅವರನ್ನು ದೋಷಿ ಎಂದು ಘೋಷಿಸಿದೆ.

VISTARANEWS.COM


on

By

Koo

ನವದೆಹಲಿ: ಲೈಂಗಿಕ ಕಿರುಕುಳ (Physical abuse) ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಹಿನ್ನೆಲೆ ಅರ್ಜುನ ಪ್ರಶಸ್ತಿ ಪುರಸ್ಕೃತ (Arjuna Awardee) ಕೇಂದ್ರೀಯ ಮೀಸಲು ಪಡೆಯ(CRPF) ಹಿರಿಯ ಅಧಿಕಾರಿಯೊಬ್ಬರನ್ನು ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿಆರ್‌ಪಿಎಫ್‌ನ ಡೆಪ್ಯೂಟಿ ಇನ್‌ಸ್ಪೆಕ್ಟರ್‌ ಜನರಲ್‌ (DIG) ಶ್ರೇಣಿಯ ಕ್ರೀಡಾ ವಿಭಾಗದ ಅಧಿಕಾರಿಯಾಗಿರುವ ಖಂಜನ್‌ ಸಿಂಗ್‌ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವಿಚಾರಣೆ ನಡೆಸಿದ ಸಿಆರ್‌ಪಿಎಫ್‌ ಖಂಜನ್‌ ಸಿಂಗ್‌ ಅವರನ್ನು ದೋಷಿ ಎಂದು ಘೋಷಿಸಿದೆ.

ಈ ಕುರಿರು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಖಂಜನ್‌ ಸಿಂಗ್‌ ವಿರುದ್ಧ ಆರೋಪ ಸಾಭೀತಾಗುತ್ತಿದ್ದಂತೆ ಸಿಆರ್‌ಪಿಎಫ್‌ ಕೇಂದ್ರ ಲೋಕ ಸೇವಾ ಆಯೋಗ(UPSC) ಗೆ ತನಿಖಾ ವರದಿ ಸಲ್ಲಿಸಿ ತಕ್ಷಣ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮನವಿ ಮಾಡಿತ್ತು. ಖಂಜನ್‌ ಸಿಂಗ್‌ ವಿರುದ್ಧ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗಿದೆ. ಬಳಿಕ ಅವರನ್ನು ವಜಾಗೊಳಿಸುವಂತೆ UPSC ಕೂಡ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಗೃಹ ಸಚಿವಾಲಯವೂ ಇದಕ್ಕೆ ಅನುಮತಿ ಸೂಚಿಸಿತ್ತು. ಹೀಗಾಗಿ ಸಿಆರ್‌ಪಿಎಫ್‌ ಖಂಜನ್‌ ಸಿಂಗ್‌ ಅವರನ್ನು ವಜಾಗೊಳಿಸಿ ನೋಟಿಸ್‌ ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಮುಂಬೈನಲ್ಲಿ ಸೇವೆ ಸಲ್ಲಿಸುತ್ತಿದ್ದ ಖಂಜನ್‌ ಸಿಂಗ್‌ ತಮ್ಮ ವಜಾದ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಆರ್‌ಪಿಎಫ್‌ ಅವರಿಗೆ ನೀಡಿರುವ ನೋಟಿಸ್‌ಗೆ 15 ದಿನದೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಇನ್ನು ಖಂಜನ್‌ ಸಿಂಗ್‌ ವಿರುದ್ಧ ಎರಡು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಇದೀಗ ಒಂದು ಪ್ರಕರಣದಲ್ಲಿ ಅವರು ದೋಷಿ ಎಂದು ಸಾಬೀತಾಗಿದ್ದು, ಮತ್ತೊಂದು ಪ್ರಕರಣದ ತನಿಖೆ ಮುಂದುವರಿದೆ ಎಂದು ಸಿಆರ್‌ಪಿಎಫ್‌ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಖಂಜನ್‌ ಸಿಂಗ್‌ ಸಿಆರ್‌ಪಿಎಫ್‌ನ ಕ್ರೀಡಾ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮುನ್ನ 1986ರಲ್ಲಿ ಸಿಯೋಲ್‌ ಏಷಿಯನ್‌ ಗೇಮ್ಸ್‌ನ ಈಜು ಸ್ಪರ್ಧೆಯಲ್ಲಿ ರಜತ ಪದಕ ಗೆದ್ದುಕೊಂಡಿದ್ದರು. 1951ರ ನಂತರ ಈಜು ಸ್ಪರ್ಧೆಯಲ್ಲ ಭಾರತ ಗೆದ್ದ ಮೊದಲ ಪದಕ ಆದಾಗಿತ್ತು. ಇದಾದ ಬಳಿಕ ಅವರ ಸೇವೆಯನ್ನು ಗುರುತಿಸಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಇನ್ನು ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದಂತೆ ಈ ಹಿಂದೆಯೇ ಖಂಜನ್‌ ಸಿಂಗ್‌ ಅದನ್ನು ನಿರಾಕರಿಸಿದ್ದರು. ತಮ್ಮ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಇಂತಹ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿಕೆ ಕೊಟ್ಟಿದ್ದರು.

ಇದನ್ನೂ ಓದಿ:Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

ಸಿಆರ್‌ಪಿಎಫ್‌ನಲ್ಲಿ 3.25ಲಕ್ಷಕ್ಕೂ ‍ಅಧಿಕ ಸಿಬ್ಬಂದಿಗಳಿದ್ದು, 1986ರಲ್ಲಿ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಯಿತು. ಪ್ರಸ್ತುತ ಒಟ್ಟು ಆರು ಮಹಿಳಾ ಬೆಟಾಲಿನ್‌ ಇದ್ದು, ಸುಮಾರು 8000ಕ್ಕೂ ಅಧಿಕ ಸಿಬ್ಬಂದಿಗಳಿದ್ದಾರೆ. ಅಲ್ಲದೇ ಕ್ರೀಡಾ ಹಾಗೂ ಆಡಳಿತ ವಿಭಾಗದಲ್ಲೂ ಮಹಿಳಾ ಸಿಬ್ಬಂದಿಯನ್ನು ಹೊಂದಿದೆ.

Continue Reading

ಕರ್ನಾಟಕ

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

Neha Murder Case: ನಮ್ಮ ಕುಟುಂಬಕ್ಕೆ ಬೆದರಿಕೆ ಇದೆ ಎಂದು ನೇಹಾ ತಂದೆ ನಿರಂಜನ್‌ ಹಿರೇಮಠ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದರು. ಹೀಗಾಗಿ ಅವರಿಗೆ ರಾಜ್ಯ ಸರ್ಕಾರ ಭದ್ರತೆ ವ್ಯವಸ್ಥೆ ಮಾಡಿದೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಮಗಳು ನೇಹಾ ಹತ್ಯೆ (Neha Murder Case) ನಡೆದ ಮೇಲೆ ತಮಗೂ ಜೀವ ಬೆದರಿಕೆ ಇದೆ ಎಂದು ನಿರಂಜನ ಹಿರೇಮಠ್‌ ಅವರು ಹೇಳಿದ ಹಿನ್ನೆಲೆಯಲ್ಲಿ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಏರ್ಪಡಿಸಿದೆ. ನೇಹಾ ಹಿರೇಮಠ್ ಹತ್ಯೆ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ಅವರು ನೇಹಾ ತಂದೆ ನಿರಂಜನ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ನೇಹಾ ತಂದೆಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಅವರು ಭದ್ರತೆ ಕೊಡುವುದಾಗಿ ಹೇಳಿದ್ದು, ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ನಿರಂಜನ್‌ ಗುರುವಾರ ತಿಳಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಳು.

ಇದನ್ನೂ ಓದಿ | Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಳು.

Continue Reading

ಕರ್ನಾಟಕ

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

Bike Accident: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ಭೀಕರ ಅಪಘಾತ ನಡೆದಿದೆ. ಬೈಕ್‌ ಡಿಕ್ಕಿಯಾಗಿ ಪಾದಚಾರಿ ಹಾಗೂ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Bike Accident
Koo

ಮೈಸೂರು: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ (Bike Accident) ನಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದರಿಂದ ಪಾದಚಾರಿ ಮತ್ತು ಬೈಕ್‌ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಮೃತ ದುರ್ದೈವಿಗಳು. ಮತ್ತೊಬ್ಬ ಸವಾರ ಅನಿಲ್ ಪಟೇಲ್ ಗಾಯಾಳು. ಶಿವಣ್ಣ ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ವೇಗವಾಗಿ ಬಂದ ಯುವಕರು, ನಡೆದು ತೆರಳುತ್ತಿದ್ದ ಶಿವಣ್ಣಗೆ ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಹಾಗೂ ಮಿಥುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

ತುಮಕೂರು: ಚುನಾವಣೆ (Lok sabha Election 2024) ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ (Water man) ಒಬ್ಬರು ಅನುಮಾನಾಸ್ಪದವಾಗಿ (UDR Case, unnatural death) ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Continue Reading

ಕರ್ನಾಟಕ

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Hassan News: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆ.ಬಿ‌.ಪಾಳ್ಯದಲ್ಲಿ ಕಾಂಗ್ರೆಸ್‌ನ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾನೆ.

VISTARANEWS.COM


on

Hassan News
Koo

ಹಾಸನ: ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Hassan News) ಹೊಳೆನರಸೀಪುರ ತಾಲೂಕಿನ ಕೆ.ಬಿ‌.ಪಾಳ್ಯದಲ್ಲಿ ನಡೆದಿದೆ.

ಕೆ.ಬಿ.ಪಾಳ್ಯದ ಮತಗಟ್ಟೆ ಸಂಖ್ಯೆ 249ರ ಬಳಿ ಕಾಂಗ್ರೆಸ್‌ನ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಕೈ ಕಾರ್ಯಕರ್ತನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತಗಟ್ಟೆಗೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಅವರ ತಾಯಿ ಅನುಪಮಾ ಮಹೇಶ್ ಭೇಟಿ ನೀಡಿದ್ದರು. ಈ ವೇಳೆ ಜೆಡಿಎಸ್‌ ಪಕ್ಷದ ಪರ ದಳ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಇದು ವಿಕೋಪಕ್ಕೆ ತಿರುಗಿ ಎರಡು ಪಕ್ಷದವರ ನಡುವೆ ಮಾರಾಮಾರಿ ನಡೆದಿದೆ.

ಜೆಡಿಎಸ್ ಕಾರ್ಯಕರ್ತರಾದ ಜೆಡಿಎಸ್‌‌ನ ಸಾಗರ್ ಹಾಗೂ ಪ್ರದೀಪ್ ಎಂಬುವವರು ಕಬ್ಬಿಣದ ರಾಡ್‌ನಿಂದ ಕಾಂಗ್ರೆಸ್‌ ಕಾರ್ಯಕರ್ತರಾದ ಮೋಹನ್‌ಕುಮಾರ್, ಗಿರೀಶ್, ಮಂಜುನಾಥ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ ಮೋಹನ್‌ಕುಮಾರ್ ಅವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಾಂಗ್ರೆಸ್ ಕಾರ್ಯಕರ್ತರಿಂದಲೂ ಜೆಡಿಎಸ್ ಕಾರ್ಯಕರ್ತರ ಮೇಲೂ ಹಲ್ಲೆ ನಡೆದಿದೆ ಎಂದ ಆರೋಪ ಕೇಳಿಬಂದಿದೆ. ಜೆಡಿಎಸ್‌ನ ಪ್ರದೀಪ್, ಸಾಗರ್ ಹಾಗೂ ಗೌತಮ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಜೆಡಿಎಸ್ ಕಾರ್ಯಕರ್ತನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಡಿಐಜಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಮುಕ್ತಾಯಗೊಂಡಿದೆ. ಆದರೆ, ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯಾ ಎಂಬುವವರ ಮೇಲೆ ಹಲ್ಲೆಯಾದ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಏಕೆ ಗಲಾಟೆ?

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

Continue Reading
Advertisement
jai sriram slogan viral news
ವೈರಲ್ ನ್ಯೂಸ್1 min ago

Jai SriRam Slogan: ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್;‌ ಪ್ರಾಧ್ಯಾಪಕರು ವಜಾ!

Ayushman Bharat Yojana
ಆರೋಗ್ಯ11 mins ago

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Sushant Singh Rajput
ಬಾಲಿವುಡ್20 mins ago

Sushant Singh Rajput: ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನ ಶುರು ಮಾಡಿದ ಸಹೋದರಿ!

donkey milk
ವಾಣಿಜ್ಯ47 mins ago

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

ವಿದೇಶ47 mins ago

US Sanction: ಭಾರತೀಯ ಮೂಲದ 3 ಕಂಪನಿಗಳಿಗೆ ಅಮೆರಿಕ ನಿರ್ಬಂಧ

Kalki 2898 AD to release on this date
ಟಾಲಿವುಡ್53 mins ago

Kalki 2898 AD: ಪ್ರಭಾಸ್, ದೀಪಿಕಾ, ಅಮಿತಾಭ್‌ ಮುಖ್ಯಭೂಮಿಕೆಯ ʻಕಲ್ಕಿ 2898 ADʼ ರಿಲೀಸ್‌ ಡೇಟ್‌ ಅನೌನ್ಸ್‌!

nota vote
ಪ್ರಮುಖ ಸುದ್ದಿ1 hour ago

NOTA: ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಸುಪ್ರೀಂ ಪ್ರಶ್ನೆ

anjali nimbalkar
ಉತ್ತರ ಕನ್ನಡ2 hours ago

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ದೇಶ2 hours ago

Physical abuse: ಲೈಂಗಿಕ ಕಿರುಕುಳ ಕೇಸ್‌; ಅರ್ಜುನ ಪ್ರಶಸ್ತಿ ಪುರಸ್ಕೃತ ಅಧಿಕಾರಿ ವಜಾ

lok sabha election 2024 voting
Lok Sabha Election 20242 hours ago

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ21 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202422 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202423 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌