ಮುಂಬೈ: ದೇಶದ ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ (Threat) ಮತ್ತೆ ಮುಂದುವರಿದಿದೆ. ಕಳೆದ ವರ್ಷ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳು ತುಂಬಿದ್ದ ಸ್ಕಾರ್ಪಿಯೋ ಪತ್ತೆಯಾಗಿದ್ದು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಈಗ ಮತ್ತೆ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮುಂಬೈನ ಗಿರಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ಲ್ಯಾಂಡ್‌ಲೈನ್‌ಗೆ ಅಫ್ಜಲ್ ಎಂಬ ವ್ಯಕ್ತಿಯು ಮೂರರಿಂದ ನಾಲ್ಕು ಬಾರಿ ಕರೆ ಮಾಡಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಪೊಲೀಸರು ಕರೆ ಮಾಡಿದವನ ಮೊಬೈಲ್ ನಂಬರ್ ಆಧರಿಸಿ ಆತನನ್ನು ಬಂಧಿಸಿದ್ದಾರೆ.
ಲ್ಯಾಂಡ್‌ಲೈನ್‌ಗೆ ಕರೆ ಮಾಡಿದ ಅಫ್ಜಲ್, ಪ್ರಾಥಮಿಕ ತನಿಖೆಯ ಪ್ರಕಾರ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸ “ಅಂಟಿಲಿಯಾ” ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿತ್ತು. ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದಲ್ಲದೆ, ಎನ್‌ಐಎ ತನಿಖೆಯೂ ನಡೆಯುತ್ತಿದೆ.
ಇದನ್ನೂ ಓದಿ | ಸತತ ಎರಡನೇ ವರ್ಷ ಸಂಬಳ ಬೇಡ ಎಂದ ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ