Site icon Vistara News

Rajasthan Horror: ಮಣ್ಣಾದ ಮಾನವೀಯತೆ; ಆದಿವಾಸಿ ಮಹಿಳೆ ಮೇಲೆ ಹಲ್ಲೆ, ಬೆತ್ತಲೆಗೊಳಿಸಿ ಮೆರವಣಿಗೆ

Rajasthan Woman Paraded Naked

Tribal Woman Stripped, Paraded Naked In Rajasthan By Husband, In-Laws; 3 Arrested

ಜೈಪುರ: ಮಣಿಪುರ ಹಾಗೂ ಪಶ್ಚಿಮ ಬಂಗಾಳದಲ್ಲಿ ಆದಿವಾಸಿ ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಅಮಾನವೀಯ ಘಟನೆಯ ಬೆನ್ನಲ್ಲೇ ರಾಜಸ್ಥಾನದಲ್ಲೂ ಆದಿವಾಸಿ ಮಹಿಳೆಯೊಬ್ಬರನ್ನು (Rajasthan Woman) ವಿವಸ್ತ್ರಗೊಳಿಸಿ, ಮೆರವಣಿಗೆ (Rajasthan Horror) ಮಾಡಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಮಹಿಳೆಯ ಪತಿ ಹಾಗೂ ಆತನ ಸಂಬಂಧಿಕರೇ ಮಹಿಳೆಯ ಬೆತ್ತಲೆ ಮೆರವಣಿಗೆ ಮಾಡಿರುವ ವಿಡಿಯೊ ವೈರಲ್‌ ಆಗುತ್ತಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಆಗಸ್ಟ್‌ 31ರಂದು ಅಮಾನವೀಯ ಘಟನೆ ನಡೆದಿದೆ. 21 ವರ್ಷದ ಬುಡಕಟ್ಟು ಸಮುದಾಯದ ಮಹಿಳೆಯನ್ನು ಗ್ರಾಮದಿಂದ ಅಪಹರಣ ಮಾಡಿದ ಪತಿ ಹಾಗೂ ಆತನ ಸಂಬಂಧಿಕರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಲವಂತವಾಗಿ ಆಕೆಯ ಬಟ್ಟೆ ಬಿಚ್ಚಿ, ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಇಟ್ಟುಕೊಂಡ ಹಿನ್ನೆಲೆಯಲ್ಲಿ ಪತಿ ಹಾಗೂ ಸಂಬಂಧಿಕರು ಹೀಗೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಿಳೆ ಮೇಲೆ ದೌರ್ಜನ್ಯ

“ಮೊದಲು ಮಹಿಳೆಯನ್ನು ಗ್ರಾಮದಿಂದ ಅಪಹರಣ ಮಾಡಿದ್ದಾರೆ. ಇದಾದ ಬಳಿಕ ಆಕೆಯ ಬಟ್ಟೆ ಬಿಚ್ಚಿ, ಮೆರವಣಿಗೆ ಮಾಡಿದ್ದಾರೆ. ಸೆಪ್ಟೆಂಬರ್‌ 1ರಂದು ಬೆಳಗ್ಗೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ” ಎಂದು ರಾಜಸ್ಥಾನ ಪೊಲೀಸ್‌ ಮಹಾ ನಿರ್ದೇಶಕ ಉಮೇಶ್‌ ಮಿಶ್ರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Assault Case: ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; ಇನ್ಸ್‌ಪೆಕ್ಟರ್ ಎತ್ತಂಗಡಿ

ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ವಿಡಿಯೊ ವೈರಲ್‌ ಆಗುತ್ತಲೇ ಜನರಿಂದ ಆಕ್ರೋಶ ವ್ಯಕ್ತವಾಯಿತು. ಪ್ರತಿಪಕ್ಷ ಬಿಜೆಪಿಯೂ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌ (ಈಗ X) ಮಾಡಿ ಘಟನೆಯನ್ನು ಖಂಡಿಸಿದರು. ಹಾಗೆಯೇ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

Exit mobile version