UDR Case: ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ - Vistara News

ಕ್ರೈಂ

UDR Case: ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ

UDR Case: ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

VISTARANEWS.COM


on

udr case foreigner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore crime) ವಿದೇಶಿ ಪ್ರಜೆಯ (Foreigner) ಶವ (Body) ಕೊಳೆತ ಸ್ಥಿತಿಯಲ್ಲಿ (UDR Case) ಪತ್ತೆಯಾಗಿದೆ. ಯುಕೆ ಮೂಲದ ಪ್ರಜೆ ಗೇವಿನ್ ಜೇಮ್ಸ್ ಯಂಗ್ (59) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ಇದೆ.

ಕೋರಮಂಗಲ 7ನೇ ಬ್ಲಾಕ್‌ಲ್ಲಿ ಘಟನೆ ನಡೆದಿದೆ. ಮೃತ ಜೇಮ್ಸ್‌ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 1ರಂದು ಬೆಂಗಳೂರಿಗೆ ಬಂದಿದ್ದ ಜೇಮ್ಸ್ ಯಂಗ್, ಆಪ್ ಮೂಲಕ ಕೋರಮಂಗಲದಲ್ಲಿ ಮನೆ ಬಾಡಿಗೆಗೆ ಪಡೆದಿದ್ದ. ಜನಾರ್ದನ್ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದ. ಶೆಫ್ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ.

ಜೇಮ್ಸ್‌ ಹೆಂಡತಿಯಿಂದ ಡೈವೋರ್ಸ್‌ ಕೂಡ ಪಡೆದಿದ್ದು, ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಅನಾರೋಗ್ಯದಿಂದ ಕೂಡ ಬಳಲುತ್ತಿದ್ದ ಜೇಮ್ಸ್‌ಗೆ ಬಿಪಿ, ಶುಗರ್ ಕೂಡ ಇತ್ತು. ಶುಗರ್ ಹಿನ್ನೆಲೆಯಲ್ಲಿ ಮಾತ್ರೆ ಹಾಗೂ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದ. ಓವರ್ ಡೋಸ್ ಟ್ಯಾಬ್ಲೆಟ್ ಹಾಗೂ ಇನ್ಸುಲಿನ್ ತಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅನುಮಾನಿಸಲಾಗಿದೆ.

ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕೂಡಲೇ ಕೋರಮಂಗಲ ಪೊಲೀಸರಿಗೆ ಮನೆ ಮಾಲೀಕ ಜನಾರ್ದನ್ ಮಾಹಿತಿ ನೀಡಿದ್ದಾರೆ. ಕೋರಮಂಗಲ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಈ ಬಗ್ಗೆ ಎಫ್ಆರ್‌ಆರ್‌ಓಗೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ

Rameshwaram Cafe Blast: ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

VISTARANEWS.COM


on

rameshwaram cafe blast scene
Koo

ಬೆಂಗಳೂರು: ಬೆಂಗಳೂರಿನ (Bangalore Bomb Blast) ವೈಟ್‌ಫೀಲ್ಡ್‌ನಲ್ಲಿರುವ (Whitfield) ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ (Rameshwaram Cafe Blast) ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, ಬಾಂಬ್‌ ಇರಿಸಿದ ಉಗ್ರನನ್ನು (Terrorist) ಕರೆತಂದು ಇಡೀ ಘಟನೆಯನ್ನು ರಿಕ್ರಿಯೇಟ್‌ ಮಾಡಿ ದಾಖಲಿಸಿಕೊಳ್ಳಲಾಗುತ್ತಿದೆ. ಇಂದು ಬೆಳಗ್ಗೆ ಎನ್‌ಐಎ (NIA) ಟೀಮ್‌ ಬಂಧಿತ ಉಗ್ರನನ್ನು ಸ್ಥಳಕ್ಕೆ ಕರೆತಂದು ಹಲವು ಬಾರಿ ಈ ಡ್ರಿಲ್‌ ನಡೆಸಿತು.

ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ ತನಿಖೆ ಭರದಿಂದ ಸಾಗಿದ್ದು, ಇಂದು ಮುಂಜಾನೆ ರಾಮೇಶ್ವರಂ ಕೆಫೆಗೆ ಎನ್ಐಎ ಅಧಿಕಾರಿಗಳು ಭೇಟಿ ನೀಡಿದರು. ಜೊತೆಗೆ ಬಾಂಬ್‌ ಇರಿಸಿದ ಭಯೋತ್ಪಾದಕ ಮುಜಾವೀರ್ ಹುಸೇನ್ ಶಾಜಿಬ್‌ನನ್ನೂ ಕರೆತರಲಾಗಿದೆ. ಕಳೆದ ಮಾರ್ಚ್ 1ರಂದು ನಡೆದಿದ್ದ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎನ್ಐಎ, ಪ್ರಮುಖ ಶಂಕಿತ ಉಗ್ರರನ್ನು ಈಗಾಗಲೇ ಬಂಧಿಸಿದೆ.

ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

ಕೃತ್ಯ ನಡೆಸಿದ ಸಂದರ್ಭದಲ್ಲಿ ಆತ ಧರಿಸಿದ್ದ ಬಟ್ಟೆ ಹಾಗೂ ಕ್ಯಾಪ್ ಅನ್ನು ಆತನಿಗೆ ತೊಡಿಸಲಾಗಿದೆ. ಅವತ್ತಿನ ರೀತಿ ಬ್ಲಾಕ್ ಬ್ಯಾಗ್ ಹೆಗಲಿಗೆ ಹಾಕಿಕೊಂಡು ವಿಡಿಯೋ ಮರುಸೃಷ್ಟಿ ಮಾಡಿಸಲಾಗಿದೆ. ಎಲ್ಲವನ್ನೂ ಎನ್ಐಎ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಹಲವು ಬಾರಿ ಈ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಯಿತು. ಕೆಫೆಗೆ ಸಮೀಪದ ಬಸ್‌ ನಿಲ್ದಾಣದಲ್ಲಿಯೂ ಈ ಚಿತ್ರಣವನ್ನು ಚಿತ್ರೀಕರಿಸಲಾಗಿದೆ. ಬಸ್ಸಿಗಾಗಿ ಎಷ್ಟು ಹೊತ್ತು, ಎಲ್ಲಿ ಕುಳಿತು ಕಾದಿದ್ದ ಎಂಬುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಮಾರ್ಚ್ 1, 2024ರ ಮಧ್ಯಾಹ್ನ 12:56ಕ್ಕೆ ಬಾಂಬ್ ಸ್ಫೋಟಿಸಲಾಗಿತ್ತು. ಮೂವರು ಹೋಟೆಲ್ ಸಿಬ್ಬಂದಿ ಸೇರಿ ಹತ್ತು ಜನರಿಗೆ ಗಾಯವಾಗಿತ್ತು. ಆರಂಭದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರಿಂದ‌ ತನಿಖೆ ನಡೆದಿದ್ದು, ಮಾರ್ಚ್ 3ರಂದು ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಮಾರ್ಚ್ 5ರಂದು ಎನ್‌ಐಎನಿಂದ ಶಂಕಿತ ಆರೋಪಿಗಳ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು.

ಮಾರ್ಚ್ 15ರಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜ್ ಮುನೀರ್ ಆಹಮ್ಮದ್‌ನನ್ನು, ಮಾರ್ಚ್ 28ರಂದು ಚಿಕ್ಕಮಗಳೂರಿನಲ್ಲಿ ಮುಜಾಮಿಲ್ ಷರೀಪ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಮಾರ್ಚ್ 29ರಂದು ಪ್ರಮುಖ ಆರೋಪಿಗಳಾದ ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹ ಇಬ್ಬರ ಫೋಟೋ ಬಿಡುಗಡೆ ಮಾಡಲಾಗಿತ್ತು. ಏಪ್ರಿಲ್ 12ರಂದು ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹರನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿತ್ತು.

ಮೇ 21ರಂದು ಈ ಪ್ರಕರಣದ ಸಂಬಂಧಿಸಿ ದೇಶದ 11 ಕಡೆ ಎನ್ಐಎ ದಾಳಿ ನಡೆಸಿತ್ತು. ಮೇ 24ರಂದು ಪ್ರಕರಣದಲ್ಲಿ ಐದನೆ ಆರೋಪಿಯಾಗಿ ಶೋಯೆಬ್ ಅಹಮ್ಮದ್ ಮಿರ್ಜಾ ಎಂಬವನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Continue Reading

ಪ್ರಮುಖ ಸುದ್ದಿ

Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ

Court Verdict: 31 ವರ್ಷಗಳಿಂದ ಪುರುಷನೊಂದಿಗೆ ಒಪ್ಪಿತ ದೈಹಿಕ ಸಂಬಂಧದಲ್ಲಿದ್ದು, ನಂತರ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆಯ ದೂರನ್ನು ಬಾಂಬೇ ಹೈಕೋರ್ಟ್‌ ರದ್ದುಗೊಳಿಸಿದೆ.

VISTARANEWS.COM


on

court verdict
Koo

ಮುಂಬಯಿ: 31 ವರ್ಷಗಳಿಂದ ಪುರುಷನೊಂದಿಗೆ ಲೈಂಗಿಕ ಸಂಬಂಧ (Physical relationship) ಹೊಂದಿದ್ದು ನಂತರ ಆತನ ವಿರುದ್ಧ ರೇಪ್‌ ಕೇಸ್‌ (Physical abuse) ದಾಖಲಿಸಿದ ಮಹಿಳೆಯ ದೂರನ್ನು ಬಾಂಬೆ ಹೈಕೋರ್ಟ್ (Bombay High Court Verdict) ರದ್ದುಗೊಳಿಸಿದೆ. 73 ವರ್ಷದ ಪುರುಷನ ಈಕೆ ದೂರು ದಾಖಲಿಸಿದ್ದು, 1987ರಿಂದ 2017ರವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಳು.

ಮಹಿಳೆ 2018ರವರೆಗೆ ಯಾವುದೇ ಪ್ರಕರಣವನ್ನು ಪುರುಷನ ವಿರುದ್ಧ ದಾಖಲಿಸಿಲ್ಲ. ಆದ್ದರಿಂದ ಇದು ಒಪ್ಪಿತ ಸಂಬಂಧವಾಗಿದ್ದು, ಇಬ್ಬರ ನಡುವಿನ ಸಂಬಂಧ ಹಳಸಿದಾಗ ದೂರು ದಾಖಲಿಸುವಂತಹ ಪ್ರಕರಣ ಇದಾಗಿದೆ ಎಂದು ನ್ಯಾಯಾಲಯ ಹೇಳಿದೆ. ವರದಿಗಳ ಪ್ರಕಾರ ಮಹಿಳೆ 1987ರಿಂದ ಪುರುಷನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆ ಸಮಯದಲ್ಲಿ, ಪುರುಷನು ಬಲವಂತವಾಗಿ ಲೈಂಗಿಕ ಸಂಬಂಧ ಹೊಂದುವುದಾಗಿ ಮಹಿಳೆಗೆ ಒತ್ತಡ ಹಾಕಿದ್ದ ಎನ್ನಲಾಗಿದೆ.

ಎಫ್‌ಐಆರ್‌ನ ಪ್ರಕಾರ, 1987ರಿಂದ 2017 ರವರೆಗೆ ಕಲ್ಯಾಣ್, ಭಿವಂಡಿ ಮತ್ತು ಇತರ ಸ್ಥಳಗಳ ವಿವಿಧ ಹೋಟೆಲ್‌ಗಳಲ್ಲಿ 31 ವರ್ಷಗಳ ಕಾಲ ಪುರುಷ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈಗಾಗಲೇ ಮದುವೆಯಾಗಿದ್ದ ಪುರುಷ, ಮಹಿಳೆಯನ್ನು ತನ್ನ ಎರಡನೇ ಹೆಂಡತಿ ಎಂದು ಘೋಷಣೆ ಮಾಡಿ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನಂತೆ. 1993 ರಲ್ಲಿ ಅವಳ ಕುತ್ತಿಗೆಗೆ ಮಂಗಳಸೂತ್ರ ಕಟ್ಟಿದ್ದನಂತೆ. ಈ ಭರವಸೆಗಳೊಂದಿಗೆ ಆತ ಮಹಿಳೆಯನ್ನು ಬೇರೆಯವರೊಂದಿಗೆ ಮದುವೆಯಾಗದಂತೆ ತಡೆದಿದ್ದನಂತೆ.

1996 ರಲ್ಲಿ ಪುರುಷನಿಗೆ ಹೃದಯಾಘಾತವಾದ ನಂತರ ಮಹಿಳೆ ಆತನ ಕಂಪನಿಯನ್ನು ನೋಡಿಕೊಳ್ಳಲು ಪ್ರಾರಂಭಿಸಿದಳು. ಆದರೆ ನಂತರ ಸೆಪ್ಟೆಂಬರ್ 2017 ರಲ್ಲಿ ಮಹಿಳೆಯ ತಾಯಿಗೆ ಕ್ಯಾನ್ಸರ್ ಪತ್ತೆಯಾಗಿದ್ದರಿಂದ ಮಹಿಳೆ ತನ್ನ ಕೆಲಸಕ್ಕೆ ರಜೆ ಹಾಕಿದಳು. ಕಂಪನಿಗೆ ವಾಪಸ್ ಬಂದಾಗ ಕಂಪನಿ ಸೇರಿದಂತೆ ಕಚೇರಿ ಬಂದ್ ಆಗಿದ್ದನ್ನ ತಿಳಿದುಕೊಂಡಳಂತೆ. ಈ ವೇಳೆ ಆಕೆ ಕಂಪನಿ ಮಾಲೀಕನನ್ನು ಸಂಪರ್ಕಿಸಿದಾಗ ಆತ ಅವಳನ್ನು ಮದುವೆಯಾಗಲು ಮತ್ತು ಭೇಟಿಯಾಗಲು ನಿರಾಕರಿಸಿದನಂತೆ. ಜೊತೆಗೆ ಬ್ಯಾಂಕಿಂಗ್, ಆದಾಯ ತೆರಿಗೆ, ಕಂಪನಿಗೆ ಸಂಬಂಧಿಸಿದ ಒಪ್ಪಂದ ಮತ್ತು ಚಿನ್ನದ ಮಂಗಳಸೂತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳಲು ನಿರಾಕರಿಸಿದನಂತೆ.

ಮಹಿಳೆಯ ಆರೋಪಗಳನ್ನು ಕೇಳಿದ ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ನೇತೃತ್ವದ ನ್ಯಾಯಾಲಯವು ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಲು ನಿರಾಕರಿಸಿತು. ಪ್ರಕರಣವು ಒಮ್ಮತದ ಸಂಬಂಧವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಕಕ್ಷಿದಾರರು 31 ವರ್ಷಗಳಿಂದ ಲೈಂಗಿಕ ಸಂಬಂಧದಲ್ಲಿ ತೊಡಗಿದ್ದರು. ಆದರೂ 31 ವರ್ಷದ ನಡುವೆ ಈ ಸಂಬಂಧಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. ಇದೀಗ ಕಕ್ಷಿದಾರರ ನಡುವಿನ ಸಂಬಂಧವು ಹಳಸಿದ್ದು ಇದೇ ಕಾರಣದಿಂದ ಪೊಲೀಸ್ ದೂರು ದಾಖಲಿಸಿರುವಂತಹ ಪ್ರಕರಣ ಇದಾಗಿದೆ ಎಂದು ಹೇಳಿದರು.

ಮಹಿಳೆ ವಿದ್ಯಾವಂತಳಾಗಿದ್ದು, ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದುವೆ ಕಾನೂನುಬಾಹಿರವಾಗಿದ್ದರೂ ಎರಡನೇ ಮದುವೆಯ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ವಿಚ್ಛೇದನ ಅಂಗೀಕಾರವಾಗುವವರೆಗೆ ಎರಡನೇ ಮದುವೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿದಿದ್ದರೂ ಮಹಿಳೆ ಎರಡನೇ ಮದುವೆಯ ಭರವಸೆಯನ್ನು ಒಪ್ಪಿಕೊಂಡಿದ್ದಾಳೆ ಎಂದು ಎಫ್‌ಐಆರ್ ಸೂಚಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ಅಲ್ಲದೇ ಪುರುಷ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಿ ನಿನ್ನನ್ನು ಮದುವೆಯಾಗುತ್ತೇನೆಂದು ಮಹಿಳೆಗೆ ಭರವಸೆ ನೀಡಿದ್ದನೆಂಬ ಬಗ್ಗೆಯೂ ದೂರಿನಲ್ಲಿ ಉಲ್ಲೇಖವಾಗಿಲ್ಲ. 31 ವರ್ಷದಲ್ಲಿ ಮಹಿಳೆ ಪುರುಷನ ಸಂಬಂಧದಿಂದ ಹಿಂದೆ ಸರಿಯುವ ಅಥವಾ ದೂರು ನೀಡುವ ಅವಕಾಶವಿದ್ದರೂ ಆಕೆ ಅಂತಹ ಕೆಲಸ ಮಾಡಿಲ್ಲ ಎಂದು ಹೇಳಿದ ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸಿತು.

ಇದನ್ನೂ ಓದಿ: ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

Continue Reading

ಸ್ಯಾಂಡಲ್ ವುಡ್

Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

Actor Darshan: ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ 17 ಜನ ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

VISTARANEWS.COM


on

Actor Darshan Fans troll ACP Chandan kumar
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿಬರುತ್ತಿದ್ದಕ್ಕೆ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್ ಹಾಗೂ ವಿಜಯನಗರದ ಎಸಿಪಿ ಚಂದನ್‌ ಕುಮಾರ್‌ ಕಾರ್ಯಪ್ರವೃತ್ತರಾಗಿದ್ದರು. ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಎಸಿಪಿ ಚಂದನ್ ಕಾರ್ಯದಕ್ಷತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ನಟ ದರ್ಶನ್ ಅಭಿಮಾನಿಗಳು ಮಾತ್ರ ಅವರನ್ನು ಟಾರ್ಗೆಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ 17 ಜನ ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

ಈ ವರ್ಷ ನಟ ದರ್ಶನ್ ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಎಸಿಪಿ ಚಂದನ್ ಸಹ ಅಲ್ಲಿಗೆ ಹೋಗಿದ್ದರು. ನಟ ದರ್ಶನ್ ಕೈ ಕುಲುಕಿ ಶುಭ ಕೋರಿದ್ದರು. ಈ ವೀಡಿಯೋವನ್ನು ಕೆಲವರು ವೈರಲ್ ಮಾಡಿ `ಹುಲಿ ಅಂತೆ ಹುಲಿ, ಈ ಹುಲಿಗೆ ಹೆಬ್ಬುಲಿ ಡಿ ಬಾಸ್’ ಎಂದು ಹಾಕಿದ್ದಾರೆ.ದರ್ಶನ್ ಸರ್ ಬರ್ತ್‌ಡೇಗೂ ಅವನೇ ಸೆಕ್ಯೂರಿಟಿ ಆಗಿದ್ದ, ಇವಾಗ ಡಿಬಾಸ್ ಜೈಲಿಂದ ರಿಲೀಸ್ ಆಗಬೇಕಾದ್ರೆ ಇವನೇ ಸೆಕ್ಯೂರಿಟಿ ಆಗಿರ್ತಾನೆ ಅಂತೆಲ್ಲಾ ಬರೆದು ವೈರಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

Continue Reading

ಕ್ರೈಂ

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Bengaluru: ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಮಹಿಳೆಯೊಬ್ಬರು ವಾಕಿಂಗ್‌ ಮಾಡುತ್ತಿದ್ದರು. ಇದೇ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್‌ ಕೊಟ್ಟು ಆತ ಪರಾರಿಯಾಗಿದ್ದಾನೆ. ಈ ವಿಡಿಯೊ ಈಗ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Bengaluru
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸಿಸಿಟಿವಿ ದೃಶ್ಯಾವಳಿ

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ ಗ್ಯಾಂಗ್‌ಗಳು ಕೂಡ ಪೊಲೀಸರಿಗೆ ತಲೆನೋವಾಗಿವೆ. ಹರಿಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading
Advertisement
rameshwaram cafe blast scene
ಕ್ರೈಂ10 mins ago

Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ

Electrocution
ದೇಶ23 mins ago

Electrocution: ಡಿಜೆ ವಾಹನಕ್ಕೆ ಹೈಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ಆಘಾತ; 8 ಮಂದಿ ಭಕ್ತರ ಸಾವು

Vishwa Kundapura Kannada Dina 2024 in banglore celebrate
ಬೆಂಗಳೂರು31 mins ago

Vishwa Kundapura Kannada Dina: ಬೆಂಗಳೂರಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಗಮ್ಮತ್ತು ಹೀಗಿತ್ತು!

court verdict
ಪ್ರಮುಖ ಸುದ್ದಿ46 mins ago

Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ

Actor Darshan Fans troll ACP Chandan kumar
ಸ್ಯಾಂಡಲ್ ವುಡ್49 mins ago

Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

drink water
ಫ್ಯಾಷನ್53 mins ago

Water For Health: ಆರೋಗ್ಯವಾಗಿರಬೇಕೆಂದರೆ ನಾವು ದಿನಕ್ಕೆಷ್ಟು ನೀರು ಕುಡಿಯಬೇಕು?

Bangladesh Protests
ವಿದೇಶ1 hour ago

Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Arjun Rampal Says He Knows A Lot Of People Who Need Another Woman
ಬಾಲಿವುಡ್1 hour ago

Arjun Rampal: ಅಕ್ರಮ ಸಂಬಂಧ ಕೆಲವರಿಗೆ ಚಟ, ಮಹಿಳೆಗಾಗಿ ಹಪಹಪಿಸುವುದನ್ನು ನಾನು ನೋಡಿದ್ದೇನೆ ಎಂದ ಖ್ಯಾತ ಬಾಲಿವುಡ್‌ ನಟ!

Independence Day 2024
ಕ್ರೀಡೆ2 hours ago

Independence Day 2024: ಸ್ವಾತಂತ್ರ್ಯಪೂರ್ವದಲ್ಲಿ ಭಾರತದ ಎದುರು ಸೋಲುವ ಭಯ; ಹಾಕಿ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಿರಲಿಲ್ಲ ಗ್ರೇಟ್‌ ಬ್ರಿಟನ್‌!

bagalakote soldier death
ಬಾಗಲಕೋಟೆ2 hours ago

Soldier Death: ಉಸಿರಾಟದ ತೊಂದರೆಯಿಂದ ಯೋಧ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ20 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌