ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore crime) ವಿದೇಶಿ ಪ್ರಜೆಯ (Foreigner) ಶವ (Body) ಕೊಳೆತ ಸ್ಥಿತಿಯಲ್ಲಿ (UDR Case) ಪತ್ತೆಯಾಗಿದೆ. ಯುಕೆ ಮೂಲದ ಪ್ರಜೆ ಗೇವಿನ್ ಜೇಮ್ಸ್ ಯಂಗ್ (59) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ಇದೆ.
ಕೋರಮಂಗಲ 7ನೇ ಬ್ಲಾಕ್‌ಲ್ಲಿ ಘಟನೆ ನಡೆದಿದೆ. ಮೃತ ಜೇಮ್ಸ್ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 1ರಂದು ಬೆಂಗಳೂರಿಗೆ ಬಂದಿದ್ದ ಜೇಮ್ಸ್ ಯಂಗ್, ಆಪ್ ಮೂಲಕ ಕೋರಮಂಗಲದಲ್ಲಿ ಮನೆ ಬಾಡಿಗೆಗೆ ಪಡೆದಿದ್ದ. ಜನಾರ್ದನ್ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದ. ಶೆಫ್ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ.
ಜೇಮ್ಸ್ ಹೆಂಡತಿಯಿಂದ ಡೈವೋರ್ಸ್ ಕೂಡ ಪಡೆದಿದ್ದು, ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಅನಾರೋಗ್ಯದಿಂದ ಕೂಡ ಬಳಲುತ್ತಿದ್ದ ಜೇಮ್ಸ್‌ಗೆ ಬಿಪಿ, ಶುಗರ್ ಕೂಡ ಇತ್ತು. ಶುಗರ್ ಹಿನ್ನೆಲೆಯಲ್ಲಿ ಮಾತ್ರೆ ಹಾಗೂ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದ. ಓವರ್ ಡೋಸ್ ಟ್ಯಾಬ್ಲೆಟ್ ಹಾಗೂ ಇನ್ಸುಲಿನ್ ತಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅನುಮಾನಿಸಲಾಗಿದೆ.
ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಕೂಡಲೇ ಕೋರಮಂಗಲ ಪೊಲೀಸರಿಗೆ ಮನೆ ಮಾಲೀಕ ಜನಾರ್ದನ್ ಮಾಹಿತಿ ನೀಡಿದ್ದಾರೆ. ಕೋರಮಂಗಲ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಈ ಬಗ್ಗೆ ಎಫ್ಆರ್‌ಆರ್‌ಓಗೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ವಾಕಿಂಗ್ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್, ಪರ್ಸ್ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.
ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.
ಶುಕ್ರವಾರ (ಆಗಸ್ಟ್ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.
ವಿಡಿಯೊ ವೈರಲ್ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ