Site icon Vistara News

Rape In Uttar Pradesh | 15 ವರ್ಷದ ಬಾಲಕಿಯನ್ನು ಅಪಹರಿಸಿ 1 ತಿಂಗಳು ಅತ್ಯಾಚಾರಗೈದ 17ರ ಬಾಲಕ

Rape

ಲಖನೌ: ಉತ್ತರ ಪ್ರದೇಶದಲ್ಲಿ ಪ್ರತಿ ಮೂರು ಗಂಟೆಗೆ ಒಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂಬ ವರದಿ ಬಹಿರಂಗವಾದ ಬೆನ್ನಲ್ಲೇ ರಾಜ್ಯದ ಬಲಿಯಾ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Rape In Uttar Pradesh) ನಡೆದಿದೆ. 15 ವರ್ಷದ ಬಾಲಕಿಯನ್ನು 17 ವರ್ಷದ ಬಾಲಕ ಅಪಹರಣ ಮಾಡಿ, ಒಂದು ತಿಂಗಳು ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಒಂದು ತಿಂಗಳ ಹಿಂದೆ ಬಾಲಕನು ತನ್ನದೇ ಗ್ರಾಮದ ಬಾಲಕಿಯನ್ನು ಅಪಹರಣ ಮಾಡಿದ್ದಾನೆ. ಆಕೆಯನ್ನು ಗುಜರಾತ್‌ಗೆ ಕರೆದುಕೊಂಡು ಹೋಗಿ ಒಂದು ತಿಂಗಳು ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಡಿಸೆಂಬರ್‌ 25ರಂದು ಬಾಲಕಿಯ ತಂದೆಯು ದೂರು ನೀಡಿದ್ದಾರೆ. ಇದರ ಅನ್ವಯ ಪೊಲೀಸರು ತನಿಖೆ ನಡೆಸಿದ್ದು, ಉತ್ತರ ಪ್ರದೇಶದ ಗದ್ವರ್‌ಮೋರ್‌ ಗ್ರಾಮದ ಬಳಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಬಾಲಕನ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಕ್ಕಳ ಸುಧಾರಣೆ ನಿಲಯಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Jalebi Baba | 120 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಜಿಲೇಬಿ ಬಾಬಾ ದೋಷಿ, ಅರ್ಚಕನಾಗಿದ್ದ ಈತನ ಕತೆಯೇ ರೋಚಕ

Exit mobile version