Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ - Vistara News

ಕ್ರೈಂ

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

Valmiki Corporation Scam: ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಇವತ್ತು ಸೇರಿ ಜುಲೈ 22 ರವರೆಗೂ ಇಡಿ ವಶಕ್ಕೆ ನೀಡಿ 82ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

VISTARANEWS.COM


on

b nagendra valmiki corporation scam 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (Enforcement Directorate) ಬಂಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರಿಗೆ ಮತ್ತೆ 5 ದಿನಗಳ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಇವತ್ತು ಸೇರಿ ಜುಲೈ 22 ರವರೆಗೂ ಇಡಿ ವಶಕ್ಕೆ ನೀಡಿ 82ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

ಮಾಚಿ ಸಚಿವ ನಾಗೇಂದ್ರ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದರು. ನಾಗೇಂದ್ರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸರ್ಚಿಂಗ್ ಮುಗಿದಿದೆ. ಸೀಜಿಂಗ್ ಕಾರ್ಯ ಮುಗಿದಿದೆ. ಆರೋಪಿಯ ವಿಚಾರಣೆಯೂ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆಯುವ ಅವಶ್ಯಕತೆ ಇಲ್ಲ. ಇಡಿ ಅಧಿಕಾರಿಗಳು ಪೊಲೀಸರಲ್ಲ. ಅವರನ್ನು ಕಸ್ಟಡಿಗೆ ಪಡೆದ ಉದ್ದೇಶ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ಮಾಡೋದೇನಿದೆ? ಎಂದು ಪ್ರಶ್ನಿಸಿದ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್‌, ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲೇಖಿಸಿದರು.

ಇಡಿ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಹಾಜರಾದರು. ದಾಳಿ ವೇಳೆ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಕಂತೆ ಕಂತೆ ಹಣ ಪತ್ತೆಯಾಗಿದೆ. ಆರೋಪಿ ಎಲ್ಲವೂ ಗೊತ್ತಿದ್ದು ಅಪರಾಧ ಕೃತ್ಯ ಎಸಗಿದ್ದಾರೆ. ಆರೋಪಿ ತನ್ನ ಸಹಚರರಿಗೆ ಸೂಚನೆ ನೀಡಿದ್ದಾರೆ. ಅವರ ಸೂಚನೆ ಮೇರೆಗೆ ನಿಗಮದಲ್ಲಿ ಕೋಟಿ ಕೋಟಿ ಹಗರಣ ನಡೆದಿದೆ. ಈಗಾಗಲೇ ಕೆಲವು ಆರೋಪಿಗಳ‌ ಮೊಬೈಲ್ ಪರಿಶೀಲನೆ ಮಾಡಲಾಗುತ್ತಿದೆ. ಆರೋಪಿ ನಾಗೇಂದ್ರ ಪತ್ನಿಯನ್ನು ವಿಚಾರಣೆ ನಡೆಸಿ ‌ಆಕೆಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇನ್ನಷ್ಟು ಮಾಹಿತಿ ಬೇಕಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಮನವಿ ಮಾಡಿದರು. ಇಲ್ಲಿಯವರೆಗೆ ನಡೆದ ತನಿಖಾ ಮಾಹಿತಿ ದಾಖಲೆಗಳನ್ನೊಳಗೊಂಡ ಕಡತಗಳನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಸಿದರು.

ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ತೆಗೆದುಕೊಂಡು ಇಡಿ ವಿಚಾರಣೆ ಮಾಡಿತ್ತು. ಅಧಿಕಾರಿಗಳು 7ರಿಂದ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಮಾಡಿದ್ದರು. ಸಾಕಷ್ಟು ವಿಚಾರಗಳನ್ನು ಹೊರ ತೆಗೆದಿದ್ದಾರೆ. ಪತಿ ಪತ್ನಿಯನ್ನು ಮುಖಾಮುಖಿ ಕೂರಿಸಿ ಪ್ರಶ್ನೆ ಮಾಡಲಾಗಿದೆ. ಹಣದ ಅವ್ಯವಹಾರದಲ್ಲಿ ನಾಗೇಂದ್ರ ಪತ್ನಿಯ ಅಕೌಂಟ್‌ನಲ್ಲಿ ಕೂಡ ಅನಧಿಕೃತ ಹಣ ಕಂಡುಬಂದಿದ್ದು, ಈ ಬಗ್ಗೆ ಪ್ರಶ್ನಿಸಲಾಗಿದೆ.

ಕಳೆದೊಂದು ವಾರದಿಂದ ನಾಗೇಂದ್ರ ಇಡಿ ವಶದಲ್ಲಿದ್ದಾರೆ. ಅವರ ಮನೆ ಸೇರಿ 23 ಕಡೆಗಳಲ್ಲಿ ಇಡಿ ಏಕಕಾಲಕ್ಕೆ ದಾಳಿ ಮಾಡಿತ್ತು. 6 ದಿನಗಳ ಕಾಲದ ಇಡಿ ವಿಚಾರಣೆ ವಿಚಾರಣೆಯಲ್ಲಿ ನಾಗೇಂದ್ರ ಸಮರ್ಪಕವಾಗಿ ಉತ್ತರ ನೀಡಿಲ್ಲ. ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ಕೂಡ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿಗೆ ಬೇಕಾಗಿದ್ದಾರೆ. ಈಗಾಗಲೇ ಬಂಧಿತ ಆರೋಪಿಗಳನ್ನು ಪ್ರಶ್ನಿಸಿದಾಗ ದದ್ದಲ್‌ ಪಿಎಯ ಕೈವಾಡ ಕೂಡ ಇದರಲ್ಲಿ ಕಂಡುಬಂದಿದೆ.

ಆದರೆ ಮನೆಗೆ ಇಡಿ ದಾಳಿಯ ಬಳಿಕ ಇಡಿ ಬಂಧನ ತಪ್ಪಿಸಿಕೊಳ್ಳಲು ದದ್ದಲ್‌ ಎಸ್‌ಐಟಿ ಮುಂದೆ ಹಾಜರಾಗಿ ಇಡೀ ದಿನ ಕೂತಿದ್ದರು. ನಂತರ ಅಲ್ಲಿಂದ ಹೊರಬಿದ್ದು ಮೂರು ದಿವಸ ಕಣ್ಮರೆಯಾಗಿದ್ದ ದದ್ದಲ್‌, ನಾಲ್ಕನೇ ದಿವಸ ವಿಧಾನಮಂಡಲ ಅಧಿವೇಶನ ಶುರುವಾದಾಗ ವಿಧಾನಸಭೆಯಲ್ಲಿ ಕಾಣಿಸಿಕೊಂಡಿದ್ದರು. ವಿಚಾರಣೆಗೆ ಬರುವಂತೆ ದದ್ದಲ್‌ ಅವರಿಗೆ ಇಡಿ ನೋಟೀಸ್‌ ನೀಡಿದೆ ಎನ್ನಲಾಗಿದೆ. ಆದರೆ ನನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದಿದ್ದಾರೆ ದದ್ದಲ್.‌ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವಾಗ ಸ್ಪೀಕರ್‌ ಅನುಮತಿ ಇಲ್ಲದೆ ಶಾಸಕರನ್ನು ಇಡಿ ಬಂಧಿಸುವಂತಿಲ್ಲ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ರಸ್ತೆಯಲ್ಲೇ ಸಿಸಿಟಿವಿ ಕ್ಯಾಮೆರಾ ಅಳವಡಿಗೆ- ಸೇನಾ ಮಾಹಿತಿ ಪಾಕಿಸ್ತಾನಕ್ಕೆ ರವಾನೆ-ಆರೋಪಿ ಬಂಧನ

VISTARANEWS.COM


on

ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಬಯಲಿಗೆಳೆದಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಚಕ್ ಧಾರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಬಂಧಿತ ಆರೋಪಿ.ಈತ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನಗಳ ಮೇಲೆ ಕಣ್ಣಿಡಲು ರಾಷ್ಟ್ರೀಯ ಹೆದ್ದಾರಿ-44 ರ ಪಠಾಣ್‌ಕೋಟ್-ಜಮ್ಮು ಪ್ರದೇಶದ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ ಎಂದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

40 ಸಾವಿರ ಆಸೆಗೆ ಭಾರತೀಯ ಸೇನಾ ಮಾಹಿತಿ ರವಾನೆ

ಪಾಕಿಸ್ತಾನ ಮತ್ತು ವಿದೇಶದಲ್ಲಿರುವವರಿಗೆ ಸಿಸಿಟಿವಿ ಕಣ್ಗಾವಲು ಮಾಹಿತಿಯನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ರವಾನಿಸಲಾಗುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ದಲ್ಜಿಂದರ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಸಿಂಗ್ ಜನವರಿಯಲ್ಲಿ ಸುಜನ್‌ಪುರ ಬಳಿಯ ಹೆದ್ದಾರಿಯಲ್ಲಿರುವ ಅಂಗಡಿಯಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಜೊತೆಗೆ ದುಬೈನಲ್ಲಿರುವ ಅಪರಿಚಿತ ವ್ಯಕ್ತಿಯಿಂದ ನಿರ್ದೇಶನ ಬರುತ್ತಿದ್ದು, 40,000ರೂ.ಗಳನ್ನು ಪಡೆದಿರುವುದಾಗಿ ಪೊಲೀಸ್‌ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸದ್ಯ ಬಂಧಿತನಿಂದ ಸಿಸಿಟಿವಿ ಕ್ಯಾಮೆರಾ, ಇಂಟರ್‌ನೆಟ್‌ ವೈಫೈ ರೂಟರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣ ಸಂಬಂಧ ನಾಲ್ವರು ಆರೆಸ್ಟ್

ಪಠಾಣ್‌ಕೋಟ್-ಜಮ್ಮು ಹೆದ್ದಾರಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಸುಜನ್‌ಪುರ ಪೊಲೀಸರು, ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು, ವಿಕ್ರಮ್‌ಜಿತ್ ಸಿಂಗ್ ಅಲಿಯಾಸ್ ವಿಕ್ಕಾ, ಬಲ್ವಿಂದರ್ ಸಿಂಗ್ ಅಲಿಯಾಸ್ ವಿಕ್ಕಿ ಮತ್ತು ತರಣ್‌ಪ್ರೀತ್ ಸಿಂಗ್ ಅಲಿಯಾಸ್ ತನ್ನು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳು ಅಪರಾಧ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳಿಗೆ ವಿವರಣೆ ನೀಡಲಾಗಿದ್ದು, ಬೇಹುಗಾರಿಕೆಯ ಹಿಂದಿನ ಹಣಕಾಸಿನ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading

ಕ್ರೈಂ

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರಬೀಳ್ತಿದ್ದಂತೆ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದ್ರೀಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಮಿಸ್‌‌ ಆಗಿ ಆಪ್ತನ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟೌಟ್‌‌ ಮಾಡಿದ್ದಾರೆ.

Continue Reading
Advertisement
ನೀಟ್ 2026 ಪರೀಕ್ಷೆ
Latest9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest11 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest2 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest2 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌