ವಿಜಯನಗರ: ನಿಂತಿದ್ದ ಲಾರಿಗೆ ಟಿಟಿ ವ್ಯಾನ್ ಡಿಕ್ಕಿಯಾದ (Road Accident) ಪರಿಣಾಮ ಒಬ್ಬ ಸಾವಿಗೀಡಾಗಿ 10 ಜನರಿಗೆ (injured) ಗಾಯಗಳಾಗಿವೆ. ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ (National highway) 50ರಲ್ಲಿ ಅಪಘಾತ ನಡೆದಿದೆ.
ವಿಜಯನಗರ (Vijayanagara news) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ ಬಳಿ ನಡೆದಿರುವ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಕೃಷ್ಣಪ್ಪ(62) ಎಂಬವರು. ಗಾಯಗೊಂಡ 10 ಜನಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಟಿಟಿಯಲ್ಲಿದ್ದ ಇವರು ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿ ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ 16 ಜನ ಪ್ರಯಾಣಿಸುತ್ತಿದ್ದರು.
ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೂಡ್ಲಿಗಿ ಬಳಿ ಕೆಟ್ಟು ನಿಂತಿತ್ತು. ನಿಂತಿದ್ದ ಲಾರಿಗೆ ಹಿಂಬದಿಯಿಂದ ಹೋಗಿ ಟಿಟಿ ವಾಹನ ಗುದ್ದಿದೆ. ಡಿಕ್ಕಿ ರಭಸಕ್ಕೆ ಟಿಟಿ ನಜ್ಜುಗುಜ್ಜಾಗಿದೆ. ಇಬ್ಬರು ವಾಹನದಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಹರಸಾಹಸಪಟ್ಟು ಹೊರತೆಗೆಯಲಾಯಿತು. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲಸದಿಂದ ತೆಗೆದದ್ದಕ್ಕೆ ನೊಂದು ಯುವಕ ಆತ್ಮಹತ್ಯೆ
ಮೈಸೂರು: ಕಂಪನಿಯಲ್ಲಿ ಕೆಲಸದಿಂದ ತೆಗೆದು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ಯುವಕ.
ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್‌ನಲ್ಲಿ ಯುವಕ ಕಿರಣ್ ಕೆಲಸ ಮಾಡುತ್ತಿದ್ದ. ಆದರೆ, ಕಂಪನಿಯಲ್ಲಿ ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್ ಹಾಗೂ ಎಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ಡೆತ್ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.
ನನ್ನನ್ನು ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಲೋಕೇಶ್ ಮತ್ತು ಅನಿಲ್ ಅವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್ʼಗೆ ಸಿಕ್ಕಿದ್ದು ಹೇಗೆ?