Site icon Vistara News

Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ (Vinod Dondale) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆ ಸಂಜೆಯಷ್ಟೇ ನಿನಾಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ವಿನೋದ್ ದೊಂಡಾಲೆ ಬಂದಿದ್ದರು ಎನ್ನಲಾಗಿದೆ. ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ನಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅತಿಥಿ,ಬೇರು,ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು. ನಟ, ನಿರ್ದೇಶಕ, ನಿರ್ಮಾಪಕರಾಗಿಯೂ ಸಕ್ರಿಯರಾಗಿದ್ದರು.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

ಇನ್ನೂ ಕೆಲವು ಸಿನಿಮಾಗಳ ಎರಡನೇ ಭಾಗದ ಚಿತ್ರೀಕರಣ ನಡೆಯುತ್ತಿದೆ. ಈಗ ಸತೀಶ್‌ ನೀನಾಸಂ ನಟನೆಯ ‘ಅಶೋಕ ಬ್ಲೇಡ್‌’ ಸಿನಿಮಾ ಸಹ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ.ಅವರ ವೃತ್ತಿ ಬದುಕಿನ ಬಹಳ ವಿಶೇಷ ಸಿನಿಮಾ ಎಂದೇ ಅನಿಸಿಕೊಂಡಿರುವ ಮತ್ತು ಬಿಗ್‌ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾವನ್ನು ವಿನೋದ್‌ ವಿ ದೊಂಡಾಲೆ ನಿರ್ದೇಶನ ಮಾಡುತ್ತಿದ್ದಾರೆ. 70ರ ದಶಕದಲ್ಲಿ ನಡೆಯಲಿರುವ ಇದರ ಕಥೆಯನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

Exit mobile version