Viral News : ಅಪ್ಪ ಓದಿಕೋ ಎಂದಿದ್ದೇ ತಪ್ಪಾಯ್ತು; ನೇಣು ಬಿಗಿದುಕೊಂಡು ಮೃತಳಾದ 9 ವರ್ಷದ ಇನ್‌ಸ್ಟಾ ಕ್ವೀನ್! - Vistara News

ಕ್ರೈಂ

Viral News : ಅಪ್ಪ ಓದಿಕೋ ಎಂದಿದ್ದೇ ತಪ್ಪಾಯ್ತು; ನೇಣು ಬಿಗಿದುಕೊಂಡು ಮೃತಳಾದ 9 ವರ್ಷದ ಇನ್‌ಸ್ಟಾ ಕ್ವೀನ್!

ಅಪ್ಪ ಓದಿಕೊಳ್ಳುವುದಕ್ಕೆ ಹೇಳಿದರು ಎನ್ನುವ ಕಾರಣಕ್ಕೇ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ವಿಚಾರ ಎಲ್ಲೆಡೆ ಸುದ್ದಿಯಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಮಕ್ಕಳೆಂದ ಮೇಲೆ ಆಟ, ಪಾಠ ಇರಲೇಬೇಕು. ಓದದೆ ಆಟವನ್ನೇ ಆಡುತ್ತಿದ್ದರೆ ತಂದೆ ತಾಯಿ ಬೈಯುವುದು, ಹೊಡೆಯುವುದು ಸಾಮಾನ್ಯವೇ. ಆದರೆ ತಮಿಳುನಾಡಿನಲ್ಲಿ ಬಾಲಕಿಯೊಬ್ಬಳು ತನ್ನ ತಂದೆ ಓದಿಕೊಳ್ಳುವುದಕ್ಕೆ ಹೇಳಿದರು ಎನ್ನುವ ಕಾರಣಕ್ಕೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್‌ಸ್ಟಾಗ್ರಾಂನಲ್ಲಿ ಮಿಂಚುತ್ತಿದ್ದ ಆ ಬಾಲಕಿಯ ಸಾವು ಇದೀಗ ಎಲ್ಲೆಡೆ ವೈರಲ್‌ (Viral News) ಸುದ್ದಿಯಾಗಿದೆ. ಈ ಬಾಲಕಿ ಇನ್‌ಸ್ಟಾ ಕ್ವೀನ್ ಎಂದೇ ಖ್ಯಾತಳಾಗಿದ್ದಳು.

ಇದನ್ನೂ ಓದಿ: Viral Video: ಐಸ್​ ಕ್ರೀಂ ತಯಾರಿಸೋಕೆ ಫ್ರಿಜ್​ ಬೇಡ್ವೇ ಬೇಡ; ಸೀಲಿಂಗ್ ಫ್ಯಾನ್ ಇದ್ದರೂ ಸಾಕು ಎನ್ನುತ್ತಿದ್ದಾರೆ ಈ ಮಹಿಳೆ
ತಮಿಳುನಾಡಿನ ತಿರವಲ್ಲೂರು ನಿವಾಸಿ ಶಿವಮೂರ್ತಿ ಅವರ ಮಗಳು ಪ್ರತೀಕ್ಷಾ ಈಗಿನ್ನೂ 9ನೇ ವರ್ಷದಲ್ಲಿದ್ದಳು. ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌, ಪೋಸ್ಟ್‌ಗಳನ್ನು ಹಾಕುತ್ತಿದ್ದ ಪ್ರತೀಕ್ಷಾ ಊರಲೆಲ್ಲ ತುಂಬ ಪ್ರಸಿದ್ಧಳಾಗಿದ್ದಳಂತೆ. ಊರವರೆಲ್ಲರೂ ಆಕೆಗೆ ಇನ್‌ಸ್ಟಾ ಕ್ವೀನ್‌ ಎಂದೇ ಕರೆಯುತ್ತಿದ್ದರಂತೆ. ಸೋಮವಾರದಂದು ಆಕೆ ಶಿವಮೂರ್ತಿ ಅವರ ಮಾವನ ಮನೆ ಬಳಿ ಆಟವಾಡುತ್ತಿದ್ದಳು. ಅದನ್ನು ಕಂಡ ಶಿವಮೂರ್ತಿ ಆಟವಾಡಿದ್ದು ಸಾಕು, ಮನೆಗೆ ಹೋಗಿ ಓದಿಕೋ ಎಂದು ಹೇಳಿದ್ದಾರೆ. ಹಾಗೆಯೇ ಮನೆಯ ಕೀಯನ್ನು ಆಕೆಯ ಕೈಗೆ ಕೊಟ್ಟಿದ್ದಾರೆ.

ಮಗಳಿಗೆ ಕೀ ಕೊಟ್ಟ ಶಿವಮೂರ್ತಿ ಬೈಕ್‌ಗೆ ಪೆಟ್ರೋಲ್‌ ಹಾಕಿಸಿಕೊಂಡು ಬರಲೆಂದು ತೆರಳಿದ್ದಾರೆ. ರಾತ್ರಿ 8.15ರ ವೇಳೆಗೆ ಮನೆಗೆ ವಾಪಸು ಬಂದಿದ್ದಾರೆ. ಆಗ ಮನೆ ಒಳಗಿನಿಂದ ಲಾಕ್‌ ಆಗಿತ್ತು. ಎಷ್ಟೇ ಕರೆದರೂ ಮಗಳು ಬಂದು ಬಾಗಿಲು ತೆರೆದಿಲ್ಲ. ಗಾಬರಿಗೊಂಡ ಶಿವಮೂರ್ತಿ ಮನೆಯ ಕಿಟಕಿಯೊಂದನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಪ್ರತೀಕ್ಷಾ ಟವಲ್‌ ಒಂದರಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಆಕೆಯ ಜೀವ ಹೋಗದೆ ಒದ್ದಾಡುತ್ತಿದ್ದ ಹಿನ್ನೆಲೆ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Road Accident : ಬೈಕ್‌ಗೆ (Bike Accident) ಲಾರಿ ಡಿಕ್ಕಿಯಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಆನೇಕಲ್: ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯಲ್ಲಿ ಘಟನೆ (Road Accident) ನಡೆದಿದೆ.

ರಾಕೇಶ್ (28) ಮೃತ ದುರ್ದೈವಿ. ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಇವರಿಬ್ಬರು ಆನೇಕಲ್ ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆಯಲ್ಲಿ ಕೆಲಸ ಮಾಡುತ್ತಿದ್ದರು.

ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ರಾಕೇಶ್ ತಲೆಯ ಮೇಲೆಯೇ ಲಾರಿಯ ಚಕ್ರ ಹರಿದಿದೆ. ಪರಿಣಾಮ ನಜ್ಜುಗುಜ್ಜಾದ ರಾಕೇಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಅಪಘಾತದಲ್ಲಿ ವಿನಯ್‌ಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Attempt To Murder : ಹಣದಾಸೆಗೆ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ಕಾರ್ಮಿಕರಿಬ್ಬರು ಪ್ರಾಣವನ್ನು (Accident Case) ಕಳೆದುಕೊಂಡಿದ್ದಾರೆ. ಹುಣಸೆ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಕಬ್ಬಿಗೆರೆ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಗುಡ್ಡದ ಜೋಗಿಹಳ್ಳಿ ಮೂಲದ ಮಂಜುನಾಥ್ (32) ಮೃತ ದುರ್ದೈವಿ.

ಕಬ್ಬಿಗೆರೆ ಗ್ರಾಮದಲ್ಲಿ ಜವರೇಗೌಡ ಎಂಬುವವರ ಜಮೀನಿನಲ್ಲಿ ಹುಣಸೆ ಹಣ್ಣನ್ನು ಕೀಳಲು ಮಂಜುನಾಥ್‌ ಹೋಗಿದ್ದರು. ಮಂಜುನಾಥ್ ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದರು. ಮರ ಹತ್ತಿ ಕೋಲಿನಿಂದ ಹಣ್ಣು ಬಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದಾರೆ.

ಮರದಿಂದ ಕೆಳಗೆ ಬಿದ್ದ ರಭಸಕ್ಕೆ ಮಂಜುನಾಥ್‌ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

Accident Case : ತುಮಕೂರಿನಲ್ಲಿ ಒಂದೇ ದಿನ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಒಬ್ಬರು ವಿದ್ಯುತ್ ಶಾಕ್‌ನಿಂದ ಮತ್ತೊಬ್ಬರು ಹುಣಸೆ ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ.

VISTARANEWS.COM


on

By

Accident Case
ಒಬ್ಬ ಹುಣಸೆ ಮರದಿಂದ ಬಿದ್ದು ಮತ್ತೊಬ್ಬ ಕರೆಂಟ್‌ನಿಂದ ಕಾರ್ಮಿಕ ಸಾವು
Koo

ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ಕಾರ್ಮಿಕರಿಬ್ಬರು ಪ್ರಾಣವನ್ನು (Accident Case) ಕಳೆದುಕೊಂಡಿದ್ದಾರೆ. ಹುಣಸೆ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಕಬ್ಬಿಗೆರೆ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಗುಡ್ಡದ ಜೋಗಿಹಳ್ಳಿ ಮೂಲದ ಮಂಜುನಾಥ್ (32) ಮೃತ ದುರ್ದೈವಿ.

ಕಬ್ಬಿಗೆರೆ ಗ್ರಾಮದಲ್ಲಿ ಜವರೇಗೌಡ ಎಂಬುವವರ ಜಮೀನಿನಲ್ಲಿ ಹುಣಸೆ ಹಣ್ಣನ್ನು ಕೀಳಲು ಮಂಜುನಾಥ್‌ ಹೋಗಿದ್ದರು. ಮಂಜುನಾಥ್ ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದರು. ಮರ ಹತ್ತಿ ಕೋಲಿನಿಂದ ಹಣ್ಣು ಬಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದಾರೆ.

ಮರದಿಂದ ಕೆಳಗೆ ಬಿದ್ದ ರಭಸಕ್ಕೆ ಮಂಜುನಾಥ್‌ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಹಾಸನದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುವ ಜಾಲ ಬಯಲಾಗಿದೆ. ಸುಮಾರು 60 ಗೋವುಗಳನ್ನು ಮಾರಾಟಗಾರರು ವಧೆ ಮಾಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ.

VISTARANEWS.COM


on

Cows
Koo

ಹಾಸನ: ಗೋವುಗಳ ಅಕ್ರಮ ಸಾಗಣೆ (Cow Smuggling), ಅಕ್ರಮವಾಗಿ ಗೋಮಾಂಸ ಮಾರಾಟ ನಿಯಂತ್ರಣಕ್ಕೆ ಎಷ್ಟೇ ಕಾನೂನು ಜಾರಿಯಲ್ಲಿದ್ದರೂ ಕೆಲವೆಡೆ ಯಥೇಚ್ಛವಾಗಿ ಗೋಮಾಂಸ ಮಾರಾಟ ದಂಧೆ ಮುಂದುವರಿದಿದೆ. ಇದಕ್ಕೆ ಉದಾಹರಣೆ ಎಂಬಂತೆ, ಹಾಸನದಲ್ಲಿ (Hassan) ಗೋಮಾಂಸದ ಅಕ್ರಮ ಮಾರಾಟದ ಜಾಲವೊಂದು ಬಯಲಾಗಿದೆ. ಮಾಂಸ ಮಾರಾಟಕ್ಕಾಗಿ ದುರುಳರು ಸುಮಾರು 60ಕ್ಕೂ ಅಧಿಕ ಗೋವುಗಳನ್ನು ವಧೆ (Cow Slaughter) ಮಾಡಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಸುಮಾರು 60 ಗೋವುಗಳನ್ನು ಕೊಂದಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಿಖರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಐದು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು 60 ಗೋವುಗಳನ್ನು ಕೊಂದ ದುಷ್ಕರ್ಮಿಗಳು, ಅವುಗಳನ್ನು ನೇತು ಹಾಕಿದ್ದಾರೆ. ಪೊಲೀಸರು ಸುಮಾರು 10 ಸಾವಿರ ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Cow slaugher near bynduru

ಮೊಹಮ್ಮದ್‌ ಅಬ್ದುಲ್‌ ಹಕ್‌ ವಿರುದ್ಧ ಆರೋಪ

ಮೊಹಮ್ಮದ್‌ ಅಬ್ದುಲ್‌ ಹಕ್‌ ಎಂಬುವವರು ಗೋವುಗಳ ಮಾಂಸವನ್ನು ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಗೋವುಗಳನ್ನು ವಧೆ ಮಾಡುವಾಗಲೇ ಪೊಲೀಸರು ದಾಳಿ ನಡೆಸಿದ್ದು, ದುಷ್ಕರ್ಮಿಗಳು ಕೂಡಲೇ ಪರಾರಿಯಾಗಿದ್ದಾರೆ. ಗೋವುಗಳನ್ನು ಸಂಹರಿಸಿ, ಅವುಗಳ ರಕ್ತವನ್ನು ಕೆರೆ ಬಿಡುತ್ತಿದ್ದರು ಎಂಬ ಕುರಿತು ಕೂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋಮಾಂಸವನ್ನು ವಶಪಡಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಂಧಿ ಕರುಗಳ ರಕ್ಷಣೆ

ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಂಧಿ ಕರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಳಗಿನ ಜಾವ 4.30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿದ ಪೊಲೀಸರು 26 ಸಿಂಧಿ ಕರುಗಳನ್ನು ರಕ್ಷಿಸಿದ್ದಾರೆ. ಇದರೊಂದಿಗೆ ಒಂದೇ ದಿನ ಎರಡು ಕಡೆ ಪೊಲೀಸರು ದಾಳಿ ನಡೆಸಿದ್ದು, ಕರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪೊಲೀಸರನ್ನು ಕಾಣುತ್ತಲೇ ವಾಹನ ಚಾಲಕ ಸೇರಿ ಹಲವು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಗೋವುಗಳ ರಕ್ಷಣೆಗೆ ಕೈ ಜೋಡಿಸಲು ನಿವೃತ್ತ ಆರ್‌ಸಿ ಮಹಾಂತೇಶ ಹಿರೇಮಠ ಕರೆ

ಕೆಲ ತಿಂಗಳ ಹಿಂದಷ್ಟೇ ಎರಡು ಹಸುಗಳಿಗೆ ಗುಂಡಿಕ್ಕಿ ಕೊಂದ ಘಟನೆ ಹಾಸನದ ಬೇಲೂರು ತಾಲೂಕಿನ ಹಿರೇಹಸಡೆ ಗ್ರಾಮದಲ್ಲಿ ನಡೆದಿತ್ತು. ಗ್ರಾಮದ ವಸಂತ್‌‌ಕುಮಾರ್, ಶಿವಮ್ಮ ಎಂಬುವವರಿಗೆ ಸೇರಿದ ಹಸುಗಳು ಕಾಣೆಯಾಗಿದ್ದವು. ವಸಂತ್‌ಕುಮಾರ್, ಶಿವಮ್ಮ ಸೇರಿ ಗೋವುಗಳಿಗಾಗಿ ಹುಡುಕಾಡಿದ್ದರು. ಎರಡು ದಿನಗಳ ಐಬಿಸಿ ಎಸ್ಟೇಟ್‌ನಲ್ಲಿ ಗೋವುಗಳ ಮೃತದೇಹ ಪತ್ತೆಯಾಗಿದ್ದವು. ಕಿರಾಕತರು ಎರಡು ಗಬ್ಬದ ಹಸುಗಳನ್ನು ಗುಂಡು ಹಾರಿಸಿ ಕೊಂದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಮನೆಯ ಎದುರು ಮಲಗಿದ್ದ ವೃದ್ಧ ಅತ್ತೆಯನ್ನು ಸೊಸೆಯು ಎಳೆದೊಯ್ದು ತಿಪ್ಪೆಗೆ ಎಸೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸೊಸೆಯ ಕ್ರೌರ್ಯದ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Chikkaballapur
Koo

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ನನಗೇಕೆ ಕುಕ್ಕರ್‌ ನೀಡಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಇನ್ನು, ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Drowned in canal
ದಾವಣಗೆರೆ2 mins ago

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Unmukt Chand
ಕ್ರೀಡೆ17 mins ago

Unmukt Chand: ಭಾರತ ತಂಡ ತೊರೆದು ಯುಎಸ್​ಎ ಸೇರಿದ ಉನ್ಮುಕ್ತ್‌ಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಅನುಮಾನ

Bullet Train
ದೇಶ53 mins ago

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Lok Sabha Election 2024 BJP JDS coordination committee meeting successful Fight to win with the workers
Lok Sabha Election 20241 hour ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ1 hour ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ1 hour ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sonarika Bhadoria
ಕಿರುತೆರೆ1 hour ago

Sonarika Bhadoria: ಹನಿಮೂನ್‌ನ ಹಾಟ್‌ ಫೋಟೊ ಶೇರ್‌ ಮಾಡಿದ ಹಿಂದಿ ಸೀರಿಯಲ್‌ ನಟಿ!

Riyan Parag
ಕ್ರೀಡೆ2 hours ago

Riyan Parag: 3 ದಿನ ನೋವು ನಿವಾರಕ ಮಾತ್ರೆ ಸೇವಿಸಿ ಹಾಸಿಗೆಯಲ್ಲಿದ್ದೆ; ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ಭಾವುಕರಾದ ​ಪರಾಗ್

Accident Case
ತುಮಕೂರು2 hours ago

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

shani louk photo hamas terrorists
ವಿದೇಶ2 hours ago

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌