ಕಾಣೆಯಾಗಿದ್ದ ಮಹಿಳೆ ಶವ ನೀರಿನ ಟ್ಯಾಂಕ್​​ನಲ್ಲಿ ಪತ್ತೆ; ಯಾರನ್ನು ಹುಡುಕಿ ಹೋಗಿದ್ದಳೋ ಅವನಿಂದಲೇ ಹತ್ಯೆ - Vistara News

ಕ್ರೈಂ

ಕಾಣೆಯಾಗಿದ್ದ ಮಹಿಳೆ ಶವ ನೀರಿನ ಟ್ಯಾಂಕ್​​ನಲ್ಲಿ ಪತ್ತೆ; ಯಾರನ್ನು ಹುಡುಕಿ ಹೋಗಿದ್ದಳೋ ಅವನಿಂದಲೇ ಹತ್ಯೆ

ರಾಜ್​ ಕೇಸರ್ ಮನೆಯವರು ಮೇ 30ರಂದು ಕೊಟ್ಟ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದ್ದರು. ಆಕೆಯ ಫೋನ್​ ಕರೆ ಡಿಟೇಲ್ಸ್​ ಪರಿಶೀಲನೆ ಮಾಡಿದಾಗ ಅರವಿಂದ್ ಮೇಲೆ ಅನುಮಾನ ಹುಟ್ಟಿತ್ತು.

VISTARANEWS.COM


on

Woman body found at water tank in Uttar Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಯಾಗ್​ರಾಜ್​ 15 ದಿನಗಳ ಹಿಂದೆ ಕಾಣೆಯಾಗಿದ್ದ 35ವರ್ಷದ ಮಹಿಳೆ ಇದೀಗ ಆಕೆಯ ಪ್ರಿಯಕರನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ (woman’s Body Found). ನಿರ್ಮಾಣ ಹಂತದಲ್ಲಿರುವ ಮನೆಯ ನೀರಿನ ಟ್ಯಾಂಕ್​​ನಿಂದ ಅವಳ ದೇಹವನ್ನು ಹೊರತೆಗೆಯಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆ ಹೆಸರು ರಾಜ್​ ಕೇಸರ್​. ಆರೋಪಿ ಅರವಿಂದ್​.

ಯಮುನಾಪರ್​ ಕರ್ಚನಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಮಹೇವಾ ಎಂಬಲ್ಲಿ ಅರವಿಂದ್ ವಾಸವಾಗಿದ್ದ. ಆತನ ಮನೆ ನಿರ್ಮಾಣ ಹಂತದಲ್ಲಿ ಇದೆ. ಕಾಮಗಾರಿ ನಡೆಯುತ್ತಿತ್ತು. ಈಗ ಅದೇ ಮನೆಯ ನೀರಿನ ಟ್ಯಾಂಕ್​​ನಲ್ಲಿ ಮಹಿಳೆ ಶವ ಸಿಕ್ಕಿದ್ದಾಗಿ ಪೊಲೀಸ್ ಅಧಿಕಾರಿ ವಿಶ್ವಜಿತ್ ಸಿಂಗ್​ ತಿಳಿಸಿದ್ದಾರೆ. ರಾಜ್ ಕೇಸರ್​ ಮತ್ತು ಅರವಿಂದ್ ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ಈಗ ಬೆಳಕಿಗೆ ಬಂದಿದೆ. 15 ದಿನಗಳ ಹಿಂದೆ ರಾಜ್ ಕೇಸರ್​ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಕುಟುಂಬದವರು ಪೊಲೀಸರಿಗೆ ದೂರು ಕೊಟ್ಟಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಅವಳ ಮೃತದೇಹವನ್ನು ಪತ್ತೆಹಚ್ಚಿದ್ದಾರೆ.

ಇದನ್ನೂ ಓದಿ: Molestation Case: ಮೊಬೈಲ್‌ ಕೊಡುವೆ ಬಾ ಎಂದ ಪ್ರಿಯಕರ; ಗೆಳೆಯನೊಂದಿಗೆ ಸೇರಿ ಅತ್ಯಾಚಾರ

‘ರಾಜ್​ ಕೇಸರ್ ಮನೆಯವರು ಮೇ 30ರಂದು ಕೊಟ್ಟ ದೂರಿನ ಅನ್ವಯ ತನಿಖೆ ಪ್ರಾರಂಭ ಮಾಡಿದೆವು. ರಾಜ್​ ಕೇಸರ್​ ಫೋನ್​ ಕಾಲ್​ ಡಿಟೇಲ್ಸ್​ ಪರಿಶೀಲನೆ ನಡೆಸಿದಾಗ ಅರವಿಂದ್ ನಂಬರ್​ಗೆ ಹೆಚ್ಚಿನ ಕರೆ ಹೋಗಿದ್ದು ಗೊತ್ತಾಯಿತು. ಆತನನ್ನು ಹಿಡಿದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ರಾಜ್​ ಕೇಸರ್​​ಳ ಜತೆ ತನಗೆ ಸಂಬಂಧವಿತ್ತು, ಆಕೆ 15ದಿನಗಳ ಹಿಂದೆ ನನ್ನನ್ನು ಹುಡುಕಿಕೊಂಡು ಬಂದಿದ್ದಳು. ಆಕೆಯನ್ನು ನಾನೇ ಕೊಂದಿದ್ದೇನೆ ಎಂದು ಅವನು ಒಪ್ಪಿಕೊಂಡಿದ್ದಾನೆ. ಹಾಗೇ, ಶವ ಬಚ್ಚಿಟ್ಟ ಸ್ಥಳವನ್ನೂ ತೋರಿಸಿದ್ದಾನೆ‘ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಅಂದಹಾಗೇ, ಈತ ಕೊಲೆ ಮಾಡಲು ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Car Accident: ಅತಿ ವೇಗದಲ್ಲಿ ಕಾರು ಚಲಿಸುತ್ತಿದ್ದ ವೇಳೆ ಟೈರ್ ಬ್ಲಾಸ್ಟ್​ ಆಗಿದ್ದರಿಂದ ಕಾರಿನ ಚಾಲಕನ ನಿಯಂತ್ರಣ ತಪ್ಪಿದೆ. ಅದು ಬೈಕ್​ಗೆ ಗುದ್ದಿದ್ದು ಬೈಕ್ ಸವಾರು ಎಗರಿಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಅವರನ್ನು ರಾಯಬಾಗ ತಾಲೂಕಿನ ಬೆನ್ನಿವಾಡ ಗ್ರಾಮದ ರಮೇಶ ಪಾಟೀಲ ಎಂದು ತಿಳಿದುಬಂದಿದೆ.

VISTARANEWS.COM


on

Car Accident
Koo

ಬೆಳಗಾವಿ : ವೇಗವಾಗಿ ಚಲಿಸುತ್ತಿದ್ದ ಕಾರಿನ ಹಿಂಭಾಗದ ಟೈರ್​ ಬ್ಲಾಸ್ಟ್​​ ಆದ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗೊಂದಕ್ಕೆ ಗುದ್ದಿ ಪಲ್ಟಿಯಾದ (Car Accident) ಹಿನ್ನೆಲೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ಪಟ್ಟಣದ ರೈಲ್ವೆ ಬ್ರಿಡ್ಜ್ ಬಳಿಯ ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್​ ಬ್ಲಾಸ್ಟ್ ಆಗಿದ್ದರಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ.

ಅತಿ ವೇಗದಲ್ಲಿ ಕಾರು ಚಲಿಸುತ್ತಿದ್ದ ವೇಳೆ ಟೈರ್ ಬ್ಲಾಸ್ಟ್​ ಆಗಿದ್ದರಿಂದ ಕಾರಿನ ಚಾಲಕನ ನಿಯಂತ್ರಣ ತಪ್ಪಿದೆ. ಅದು ಬೈಕ್​ಗೆ ಗುದ್ದಿದ್ದು ಬೈಕ್ ಸವಾರು ಎಗರಿಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಅವರನ್ನು ರಾಯಬಾಗ ತಾಲೂಕಿನ ಬೆನ್ನಿವಾಡ ಗ್ರಾಮದ ರಮೇಶ ಪಾಟೀಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

ಕಾರಿನಲ್ಲಿ ಏಳು ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಉಳಿದವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾನಾಪೂರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕ್ರೈಂ

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

Road Accident: ಚಾಲಕನ ನಿಯಂತ್ರಣ ತಪ್ಪಿದ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ಜರುಗಿದೆ.

VISTARANEWS.COM


on

driver lost control and the jeep hit a tree driver died on the spot
Koo

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಇದನ್ನೂ ಓದಿ: Karnataka Weather : ನಾಳೆ ಬೆಳಗಾವಿ, ಚಾಮರಾಜನಗರದಲ್ಲಿ ಮಳೆ ; ಉಳಿದೆಡೆ ಬಿಸಿಲ ಶಾಕ್‌

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

Latest

Gyanvapi Mosque: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶ ನೀಡಿದ್ದ ಜಡ್ಜ್‌ಗೆ ವಿದೇಶದಿಂದ ಜೀವ ಬೆದರಿಕೆ

ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Mosque complex) ಯ ವೀಡಿಯೋಗ್ರಾಫಿಕ್‌ ಸಮೀಕ್ಷೆಗೆ (Videographic survey) ಮಾಡುವಂತೆ ಆದೇಶ ನೀಡುವ ಮೂಲಕ ದೇಶ ಮಾತ್ರವಲ್ಲದೇ ವಿದೇಶದಲ್ಲೂ ಗಮನ ಸೆಳೆದಿದ್ದ ಹೆಚ್ಚುವರಿ ಸೆಶನ್ಸ್‌ ಜಡ್ಜ್‌ ರವಿ ಕುಮಾರ್‌ ದಿವಾಕರ್‌ (Ravi kumar Diwakar) ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ.

VISTARANEWS.COM


on

By

Gyanvapi Mosque
Koo

ಬರೇಲಿ(ಉತ್ತರ ಪ್ರದೇಶ): ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Mosque complex) ಯ ವೀಡಿಯೋಗ್ರಾಫಿಕ್‌ ಸಮೀಕ್ಷೆ (Videographic survey) ಮಾಡುವಂತೆ ಆದೇಶ ನೀಡುವ ಮೂಲಕ ದೇಶ ಮಾತ್ರವಲ್ಲದೇ ವಿದೇಶದಲ್ಲೂ ಗಮನ ಸೆಳೆದಿದ್ದ ಹೆಚ್ಚುವರಿ ಸೆಶನ್ಸ್‌ ಜಡ್ಜ್‌ ರವಿ ಕುಮಾರ್‌ ದಿವಾಕರ್‌ (Ravi kumar Diwakar) ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. ವಿದೇಶಿ ಫೋನ್‌ ನಂಬರ್‌ಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು (International threat calls) ಬರುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶ ದಿವಾಕರ್‌ ಪೊಲೀರಿಗೆ ದೂರು ನೀಡಿದ್ದಾರೆ. ಏ. 15 ರಂದು ಅಂತಾರಾಷ್ಟ್ರೀಯ ನಂಬರ್‌ನಿಂದ ಕರೆ ಬಂದಿದ್ದು, ಅನಾಮಧೇಯ ವ್ಯಕ್ತಿಯೊಬ್ಬ ಜೀವ ಬೆದರಿಕೆಯೊಡ್ಡಿದ್ದ. ಇದಾದ ಕೆಲವು ದಿನಗಳ ನಂತರ ಅಂತಹದ್ದೇ ಮತ್ತೊಂದು ಕರೆ ಬಂದಿದೆ ಎಂದು ದಿವಾಕರ್‌ ದೂರಿನಲ್ಲಿ ತಿಳಿಸಿದ್ದಾರೆ.

2022ರಲ್ಲಿ ಕಾಶಿ ವಿಶ್ವನಾಥ ದೇಗುಲ (Kashi Vishwanath temple) ಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯ ವಿಡಿಯೋಗ್ರಾಫಿಕ್‌ ಸಮೀಕ್ಷೆಗೆ ದಿವಾಕರ್‌ ಆದೇಶಿದ್ದರು. ಅಲ್ಲದೇ ಶುದ್ಧೀಕರಣ ಪ್ರದೇಶವನ್ನು ಸೀಲ್‌ ಮಾಡುವಂತೆಯೂ ತಮ್ಮ ತೀರ್ಪಿನಲ್ಲಿ ಆದೇಶಿಸಿದ್ದರು. ಮಸೀದಿಯ ಪಶ್ಚಿಮ ಗೋಡೆಯ ಮೇಲಿರುವ ಕೆಲವು ದೇವತೆಗಳ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಾಲಯವು ಈ ಹಿಂದೆ ಸಮೀಕ್ಷೆಗೆ ಆದೇಶಿಸಲಾಗಿತ್ತು. ಇದಾದ ಬಳಿಕ ಅವರಿಗೆ ಆಗಾಗ ಬೆದರಿಕೆ ಕರೆಗಳು ಬರಲು ಶುರುವಾಗಿತ್ತು.

ಇತ್ತೀಚೆಗಷ್ಟೇ ಬರೇಲಿಗೆ ವರ್ಗಾವಣೆಗೊಂಡಿದ್ದ ದಿವಾಕರ್‌, ಈ ಹಿಂದೆಯೂ ತಮಗೆ ಹಾಗೂ ತಮ್ಮ ಕುಟುಂಬಸ್ಥರಿಗೆ ಜೀವ ಬೆದರಿಕೆ ಕರೆ ಬಂದಿರುವ ಬಗ್ಗೆ ದೂರು ನೀಡಿ ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಇದಾದ ಬಳಿಕ ಅವರು ಬರೇಲಿಗೆ ವರ್ಗಾವಣೆಗೊಂಡಿದ್ದರು. ಬರೇಲಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 2018ರಲ್ಲಿ ನಡೆದಿದ್ದ ಬರೇಲಿ ಗಲಭೆ ಪ್ರಕರಣ ಕೈಗೆತ್ತಿಕೊಂಡಿದ್ದರು. ಗಲಭೆಯ ಮಾಸ್ಟರ್‌ಮೈಂಡ್‌ ಮೌಲಾನಾ ತೌಖೀರ್‌ ರಾಝಾ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದ್ದರು. ಈ ಗಲಭೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿಗಳು ನಾಶವಾಗಿದ್ದವು. ಅಲ್ಲದೇ ಬರೇಲಿಯಲ್ಲಿ ಬರೋಬ್ಬರಿ 27 ದಿನಗಳ ಕಾಲ ನಿಷೇದಾಜ್ಞೆ ಹೊರಡಿಸಲಾಗಿತ್ತು.

ಇದನ್ನೂ ಓದಿ: Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

ನ್ಯಾಯಾಧೀಶ ದಿವಾಕರ್‌ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಕರೆ ಬಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಅಲಹಾಬಾದ್‌ ಹೈಕೋರ್ಟ್‌ ಅವರಿಗೆ ವೈ ಕೆಟಗರಿ ಭದ್ರತೆ ನೀಡುವಂತೆ ಆದೇಶ ಹೊರಿಡಿಸಿತ್ತು. ಬಳಿಕ ಅದನ್ನು ಎಕ್ಸ್‌ ಕೆಟಗೆರಿ ಭದ್ರತೆಗೆ ಇಳಿಸಲಾಯಿತು. ಪ್ರಸ್ತುತ ದಿವಾಕರ್‌ ಅವರ ಭದ್ರತೆಗೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಆದರೆ ಅವರ ಸಹೋದ್ಯೋಗಿಗಳ ಪ್ರಕಾರ ಭದ್ರತಾ ಸಿಬ್ಬಂದಿಗಳಿಗೆ ಯಾವುದೇ ಬಂದೂಕುಗಳನ್ನು ನೀಡಿಲ್ಲ. ಹೀಗಾಗಿ ಜೀವ ಬೆದರಿಕೆ ಕರೆಗಳು ಆಗಾಗ ಬರುತ್ತಿದ್ದರೂ ನ್ಯಾಯಾಧೀಶರಿಗೆ ಕನಿಷ್ಠ ಭದ್ರತೆ ಸಿಗದಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

Viral Video: ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿ ಯುವಕನೊಬ್ಬ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಘಟನೆಯನ್ನು ಚಿತ್ರೀಕರಿಸಿ ಆತ್ಮಹತ್ಯೆಯ ಕಾರಣವನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಗ್ರಾಮದ ಮುಖ್ಯಸ್ಥ ಮತ್ತು ಆತನ ಸಹಚರರ ಕಿರುಕುಳಕ್ಕೆ ಹೇಗೆ ಬಲಿಯಾದೆ ಎನ್ನುವುದನ್ನು ವಿವರಿಸಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Viral Video
Koo

‍ಧರ್ಮಶಾಲಾ: ಬೆಚ್ಚಿ ಬೀಳಿಸುವ ಘಟನೆಯೊಂದರಲ್ಲಿ ಯುವಕನೊಬ್ಬ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಘಟನೆಯನ್ನು ಚಿತ್ರೀಕರಿಸಿ ಆತ್ಮಹತ್ಯೆಯ ಕಾರಣವನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video). ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತನನ್ನು 22 ವರ್ಷದ ಸುನಿಲ್ ತಿವಾರಿ ಅಲಿಯಾಸ್ ಛೋಟು ಎಂದು ಗುರುತಿಸಲಾಗಿದೆ.

ಸಾಯುವ ಮೊದಲು ಸುನಿಲ್ ತಿವಾರಿ 1 ನಿಮಿಷ 22 ಸೆಕೆಂಡುಗಳ ವಿಡಿಯೊ ರೆಕಾರ್ಡ್ ಮಾಡಿದ್ದಾನೆ. ಅದರಲ್ಲಿ ಆತ ಗ್ರಾಮದ ಮುಖ್ಯಸ್ಥ ಮತ್ತು ಆತನ ಸಹಚರರ ಕಿರುಕುಳಕ್ಕೆ ಹೇಗೆ ಬಲಿಯಾದೆ ಎನ್ನುವುದನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ನೋಡಿದ ನೆಟ್ಟಿಗರು ಆಘಾತ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಹೊಲದಲ್ಲಿ ಕುಳಿತಿರುವ ಸುನಿಲ್ ತಿವಾರಿಯನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಬಳಿಕ ಆತ ವಿಷದ ಬಾಟಲಿಯನ್ನು ಕ್ಯಾಮೆರಾದ ಎದುರು ಹಿಡಿಯುತ್ತ, ಅಳುತ್ತ ಮಾತನಾಡುತ್ತಾನೆ. ಗ್ರಾಮದ ಮುಖ್ಯಸ್ಥ ಮತ್ತು ಅವನ ಸಹಚರರು ಹೇಗೆ ಕಿರುಕುಳ ನೀಡಿದರು ಎನ್ನುವುದನ್ನು ವಿವರಿಸುತ್ತಾನೆ. ಜತೆಗೆ ವಿಷದ ಮಾತ್ರೆ ಸೇವಿಸಿರುವುದಾಗಿ ತಿಳಿಸಿದ್ದಾನೆ. ಸಾಯಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದರ ಬಗ್ಗೆ ಗೊತ್ತಿಲ್ಲ ಎಂದೂ ಹೇಳುತ್ತಾನೆ.

“ಗ್ರಾಮದ ಮುಖ್ಯಸ್ಥ ಮತ್ತು ಅವನ ಸಹಚರರು ನನಗೆ ಚಿತ್ರಹಿಂಸೆ ನೀಡಿದ್ದಾರೆ ಮತ್ತು ಅದಕ್ಕಾಗಿಯೇ ಇಂದು ನಾನು ನನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ. ನಾನು ಈ ವಿಷವನ್ನು ಸೇವಿಸಿದ್ದೇನೆ ಮತ್ತು ನಾನು ಎಷ್ಟು ಹೊತ್ತು ಬದುಕುತ್ತೇನೆ ಎಂಬುದು ನನಗೆ ತಿಳಿದಿಲ್ಲ. ನಾನು 5 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇನೆ. ನಾನು ಇಂದು ಹೊರಡುತ್ತಿದ್ದೇನೆ. ನಿಮ್ಮ ಪ್ರಾರ್ಥನೆಯಲ್ಲಿ ನನ್ನನ್ನು ನೆನಪಿಸಿಕೊಳ್ಳಿ. ನಾನು ನಿಮ್ಮನ್ನು ಮತ್ತೆ ಎಂದಿಗೂ ಭೇಟಿಯಾಗುವುದಿಲ್ಲʼʼ ಎಂದು ಸುನಿಲ್‌ ಹೇಳಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

ವರದಿಗಳ ಪ್ರಕಾರ, ಸುನಿಲ್ ಅವರನ್ನು ಬುಧವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಝಾನ್ಸಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ʼʼಕೆಲವು ವ್ಯಕ್ತಿಗಳೊಂದಿಗಿನ ವಿವಾದದ ನಂತರ ನನ್ನ ಸಹೋದರ ಸುನಿಲ್ ವಿಷ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಆರೋಪಿಸಿ ಸುನಿಲ್ ಸಹೋದರ ಶೀತಲ್ ಬುಧವಾರ ಮಜ್ಗವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

ಇಬ್ಬರ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುನಿಲ್‌ ತನ್ನ ವಿಡಿಯೊದಲ್ಲಿ ಉಲ್ಲೇಖಿಸಿರುವ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬರೈಲ್ ಗ್ರಾಮದ ಮುಖ್ಯಸ್ಥ ದಿನೇಶ್, ರಾಜ್ ಕುಮಾರ್, ಪ್ರಶಾಂತ್, ಧನ್ನಿ ಮತ್ತು ಆಯುಷ್ ವಿರುದ್ಧ ಐಪಿಸಿ ಸೆಕ್ಷನ್ 30 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 18ರಂದು ಹರಿದ್ವಾರ ಬಾಬಾ ಗ್ರಾಮದ ಹೊರಗೆ ಸುನಿಲ್ ಮತ್ತು ಧನ್ನಿ ನಡುವೆ ವಾಗ್ವಾದ ನಡೆದಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಬಂದಾಗ ಸುನಿಲ್ ತನ್ನ ಸಂಬಂಧಿಕರೊಂದಿಗೆ ಹೊರಟು ಹೋಗಿದ್ದ. ಬಳಿಕ ಎರಡೂ ಕಡೆಯವರಿಗೆ ಠಾಣೆಗೆ ಬರಲು ತಿಳಿಸಲಾಗಿತ್ತು. ಆದರೆ ಹಾಜರಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

Continue Reading
Advertisement
Car Accident
ಪ್ರಮುಖ ಸುದ್ದಿ11 mins ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Narendra Modi
ದೇಶ27 mins ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ34 mins ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Minister Dinesh Gundurao latest statement
ಕರ್ನಾಟಕ1 hour ago

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Namma metro
ಕ್ರೀಡೆ1 hour ago

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Job Alert
ಉದ್ಯೋಗ2 hours ago

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Viral Video
ವೈರಲ್ ನ್ಯೂಸ್2 hours ago

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

world record
ಕ್ರೀಡೆ2 hours ago

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

driver lost control and the jeep hit a tree driver died on the spot
ಕ್ರೈಂ2 hours ago

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ7 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ7 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ10 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202412 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌