ಲಖನೌ: ಉತ್ತರ ಪ್ರದೇಶದ ಆಗ್ರಾದಲ್ಲಿ ಚಲಿಸುತ್ತಿದ್ದ ಟ್ಯಾಕ್ಸಿಯಲ್ಲಿಯೇ ಮಹಿಳೆಯೊಬ್ಬರ ಮೇಲೆ ಮೂವರು ಅತ್ಯಾಚಾರ (Gang Rape In UP) ಎಸಗಿದ್ದಾರೆ. ನೊಯ್ಡಾದಲ್ಲಿ ಮಹಿಳೆಯೊಬ್ಬರು ಟ್ಯಾಕ್ಸಿ ಹತ್ತಿದ್ದು, ಮೂವರು ಸಹ ಪ್ರಯಾಣಿಕರು ಅದರಲ್ಲಿದ್ದರು. ಆದರೆ, ಆಗ್ರಾ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
“ಮಂಗಳವಾರ ರಾತ್ರಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರ ಎಸಗಿದ ಬಳಿಕ ಎತ್ಮಾದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯನ್ನು ಬಿಟ್ಟು ಹೋಗಿದ್ದಾರೆ. ಇದಾದ ಬಳಿಕ ಮಹಿಳೆ ದೂರು ದಾಖಲಿಸಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“ನೊಯ್ಡಾದ ಸೆಕ್ಟರ್ 37ರಲ್ಲಿ ಮಹಿಳೆಯು ರಾತ್ರಿ 8.30ರ ಸುಮಾರಿಗೆ ಶೇರಿಂಗ್ ಆಯ್ಕೆ ಮೂಲಕ ಟ್ಯಾಕ್ಸಿ ಬುಕ್ ಮಾಡಿದ್ದಾರೆ. ಟ್ಯಾಕ್ಸಿಯಲ್ಲಿದ್ದ ಮೂವರು ಸಹ ಪ್ರಯಾಣಿಕರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ | Pocso case | ಕೊಪ್ಪಳದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ