ಲಖನೌ: ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಸಾಮೂಹಿಕವಾಗಿ ಅತ್ಯಾಚಾರ (Gang Rape) ಎಸಗಿದ್ದಾರೆ. ನಂದಗ್ರಾಮ್‌ದಲ್ಲಿರುವ ಸಹೋದರನನ್ನು ಭೇಟಿಯಾಗಲು ಆಗಮಿಸಿದ ವೇಳೆ ಐವರು ದುಷ್ಕರ್ಮಿಗಳು ಮಹಿಳೆಯನ್ನು ಅಪಹರಣ ಮಾಡಿ, ಎರಡು ದಿನಗಳವರೆಗೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯ ಗುಪ್ತಾಂಗಕ್ಕೆ ರಾಡ್ ತುರುಕಿ ವಿಕೃತಿ ಮೆರೆದಿದ್ದಾರೆ.
ದೆಹಲಿಯ ನಂದನಗರಿ ನಿವಾಸಿಯಾದ ಮಹಿಳೆಯು ಘಾಜಿಯಾಬಾದ್‌ನ ಆಶ್ರಮ ರಸ್ತೆ ಬದಿ ಬಿದ್ದಿದ್ದನ್ನು ಕಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಅಕ್ಟೋಬರ್ ೧೮ರಂದು ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆಸ್ತಿ ವಿಚಾರಕ್ಕಾಗಿ ಅತ್ಯಾಚಾರ:
ಅತ್ಯಾಚಾರಕ್ಕೀಡಾದ ಮಹಿಳೆಯ ಸಹೋದರ ಹಾಗೂ ದುಷ್ಕರ್ಮಿಗಳ ಮಧ್ಯೆ ಆಸ್ತಿ ವಿಚಾರಕ್ಕಾಗಿ ಜಗಳ ನಡೆದಿದೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿವಾದ ಇತ್ಯರ್ಥವಾಗುವ ಮುನ್ನವೇ ದುರುಳರು ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಹಿನ್ನೆಲೆ: ಮಂಡ್ಯ ಜಿಲ್ಲೆಯಲ್ಲಿ ಅನಧಿಕೃತ ಟ್ಯೂಷನ್‌ಗೆ ನಿಷೇಧ