Site icon Vistara News

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

illegal hunting chikkamagaluru

ಚಿಕ್ಕಮಗಳೂರು: ಶಿಕಾರಿಗೆ (Illegal hunting) ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ (misfire) ಆದ ಪರಿಣಾಮ, ಯುವಕ ಸ್ಥಳದಲ್ಲೇ (crime news) ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ (Chikkamagaluru crime) ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ.

ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಂಜಲಿ ಹಂತಕನ ಬಂಧನ, ಸಾರ್ವಜನಿಕರಿಂದ ಗೂಸಾ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.

ಆರೋಪಿಯನ್ನು‌ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಸ್ನೇಹಿತನೂ ಕೊಲೆ ಆರೋಪಿ

ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Exit mobile version