ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ - Vistara News

ಕರ್ನಾಟಕ

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.

VISTARANEWS.COM


on

Vistara Editorial, Janata Darshan by CM must appreciated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್‌ ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.

ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್‌; ಭಾರತದಲ್ಲಿ ರೈಲು ಕ್ರಾಂತಿ

ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೋಲಾರ

Lovers Death : ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಅಪ್ರಾಪ್ತೆ ಸಾವು, ಹುಡುಗ ಗಂಭೀರ

Lovers Death : ಮನೆಯಲ್ಲಿ ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯಲ್ಲಿ ಅಪ್ರಾಪ್ತೆ ಮೃತಪಟ್ಟರೆ, ಹುಡುಗನ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

By

Lovers Death
Koo

ಕೋಲಾರ: ತಮಿಳುನಾಡಿನ ಗಡಿ ಅರಣ್ಯದಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ (Lovers Death) ಮಾಡಿಕೊಂಡಿದ್ದಾರೆ. ಹುಡುಗಿ ಸ್ಥಳದಲ್ಲಿಯೇ ಮೃತಪಟ್ಟರೆ, ಹುಡುಗ ಸಾವು ಬದುಕಿನ ಹೋರಾಟ ನಡೆಸುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪ್ರಾಪ್ತೆ ರಶ್ಮಿ (16) ಮೃತ ದುರ್ದೈವಿ. ಅಭಿಷೇಕ್ (20) ಅಸ್ವಸ್ಥಗೊಂಡವನು.

ತಮಿಳುನಾಡಿನ ಗಡಿ ಅಂಚಿನ ಮಾಲೂರು ತಾಲೂಕಿನ ನಿಡುಮಾಕನಹಳ್ಳಿ ಗ್ರಾಮದ ರಶ್ಮಿ, ಹಾಲೇರಿ ಗ್ರಾಮದ ಅಭಿಷೇಕ್ ಇಬ್ಬರು ಪ್ರೀತಿಸುತ್ತಿದ್ದರು. ಈ ಪ್ರೇಮಿಗಳು ಸಂಬಂಧಿಕರಾಗಿದ್ದು, ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದು ದುಡುಕು ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಸ್ತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Karnataka Rain : ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ನಿನ್ನೆ (ಅ.5) ಸುರಿದ ಭಾರಿ ಮಳೆಗೆ (Bengaluru Rain) ಬೆಂಗಳೂರಿನ ಮಲ್ಲೇಶ್ವರದ 13ನೇ ಕ್ರಾಸ್‌ನಲ್ಲಿ ರಸ್ತೆ ಕುಸಿದಿದೆ. ಎರಡು ವಾರದ ಹಿಂದೆ ಗುಂಡಿ ಮುಚ್ಚಲು ಹಾಕಿದ್ದ ಟಾರು ಮಳೆಯಿಂದಾಗಿ (Karnataka Rain) ಕುಸಿದು ಬಿದ್ದಿದೆ. ಕಳಪೆ ಕಾಮಗಾರಿ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ರಸ್ತೆಗಳಲ್ಲೇ ನೀರು ನಿಂತಿದ್ದರಿಂದ ಹಲವು ಕಡೆಗಳಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಕೋಗಿಲು ಕ್ರಾಸ್ ಬಳಿ ತಡೆಗೋಡೆ ಕುಸಿದು ಅಪಾರ್ಟ್‌ಮೆಂಟ್‌ ಒಳಗೆ ನೀರು ನುಗ್ಗಿದೆ. ಬಿನ್ನಿಪೇಟೆ ಬಳಿ ಚೇಂಬರ್ ಕಾಂಪೌಂಡ್ ಕುಸಿದು ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದೆ. ಹಲವು ಮನೆಗಳಿಗೆ ನೀರು ನುಗ್ಗಿದೆ. ಬಸವೇಶ್ವರ ನಗರ, ಪುಟ್ಟೇನಹಳ್ಳಿ ಯಲಹಂಕಾ ಸೇರಿದಂತೆ ಹಲವೆಡೆ ಮನೆಗಳಿಗೆ ಜಲಕಂಟಕ ಎದುರಾಗಿದೆ. ನಗರದಲ್ಲಿ ಸರಾಸರಿ 36 ಮಿ.ಮೀ ಮಳೆ ದಾಖಲಾಗಿದೆ. ಕೊಟ್ಟಿಗೆ ಪಾಳ್ಯದಲ್ಲಿ 113 ಮಿ.ಮೀ ದಾಖಲೆಯ ಮಳೆಯಾದರೆ, ಹಂಪಿನಗರ, ನಾಗಪುರಗಳಲ್ಲಿ 10 ಸೆಂ.ಮೀಗಿಂತಲೂ ಮಳೆಯಾಗಿದೆ.

Karnataka Rain
Karnataka Rain

ಯಾವ್ಯಾವ ಭಾಗದಲ್ಲಿ ಎಷ್ಟು ಮಳೆ?

ಕೊಟ್ಟಿಗೆಪಾಳ್ಯ : 113 ಮಿ.ಮೀ
ಹಂಪಿನಗರ : 108 ಮಿ.ಮೀ
ನಾಗಪುರ : 107.5 ಮಿ.ಮೀ
ಚೌಡೇಶ್ವರಿ : 79.5 ಮಿ.ಮೀ
ಮಾರುತಿಮಂದಿರ : 75.5 ಮಿ.ಮೀ
ನಂದಿನಿ ಲೇಔಟ್ : 71.5 ಮಿ.ಮೀ
ರಾಜಾಜಿನಗರ : 59 ಮಿ.ಮೀ
ನಾಯಂಡಹಳ್ಳಿ : 46 ಮಿ.ಮೀ
HAL ಏರ್ಪೋರ್ಟ್ : 45 ಮಿ.ಮೀ
ವಿದ್ಯಾರಣ್ಯಪುರ : 45 ಮಿ.ಮೀ
ಪುಟ್ಟೇನಹಳ್ಳಿ : 42.5 ಮಿ.ಮೀ
RR ನಗರ : 42.5 ಮಿ.ಮೀ
ರಾಜಮಹಲ್ ಗುಟ್ಟಹಳ್ಳಿ : 42.5 ಮಿ.ಮೀ

ಸೇರಿದಂತೆ ಸರಾಸರಿ 36 ಮಿ.ಮೀ ಮಳೆ ದಾಖಲು

Karnataka Rain

ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತ

ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿದೆ. ಅಪಾರ್ಟ್‌ಮೆಂಟ್‌ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಅಪಾರ್ಟ್‌ಮೆಂಟ್‌ ಆವರಣಕ್ಕೆ ನೀರು ನುಗ್ಗಿದೆ. ಸುಮಾರು 20 ವರ್ಷಕ್ಕೂ ಹಿಂದಿನ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದೆ. ಒಂಭತ್ತು ಎಕರೆ ವಿಸ್ತೀರ್ಣವುಳ್ಳ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಆವರಣದಲ್ಲಿ 603 ಫ್ಲಾಟ್‌ನಲ್ಲಿ ಎರಡು ಸಾವಿರ ಮಂದಿ ವಾಸವಿದ್ದಾರೆ. ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ನಿವಾಸಿಗಳು ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದ್ದಾರೆ. ಟ್ರ್ಯಾಕ್ಟರ್ ಮೂಲಕ ಅಪಾರ್ಟ್‌ಮೆಂಟ್‌ ನಿವಾಸಿಗಳನ್ನು ಕರೆದೊಯ್ದಬೇಕಾಯಿತು.

Karnataka Rain
Karnataka Rain

ಅಗ್ನಿಶಾಮಕದಳ ಸಿಬ್ಬಂದಿಯಿಂದ ನಿರಂತರವಾಗಿ ನೀರನ್ನು ಹೊರಹಾಕುವ ಕಾರ್ಯ ನಡೆಯಿತು. 80ಕ್ಕೂ ಹೆಚ್ಚು ಕಾರು ನೂರಕ್ಕೂ ಹೆಚ್ಚು ಬೈಕ್ ಭಾಗಶ: ನೀರಿನಲ್ಲಿ ಮುಳುಗಡೆಯಾಗಿದೆ. ಟ್ರ್ಯಾಕ್ಟರ್ ಹಾಗೂ ಬೋಟ್ ಮೂಲಕ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ಹಿರಿಯ ನಾಗರೀಕರು ಮತ್ತು ಮಕ್ಕಳನ್ನು ಕರೆದೊಯ್ಯಲು ನಿವಾಸಿಗಳು ಪರದಾಡಿದರು.

ಕೆರೆಯಂತಾದ ಕ್ರೀಡಾಂಗಣ

ರಾತ್ರಿ ಸುರಿದ ಮಳೆಗೆ ಕ್ರೀಡಾಂಗಣ ಜಲಾವೃತವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿನ ತಾಲೂಕು ಮಟ್ಟದ ಕ್ರೀಡಾಂಗಣವು ಕೆರೆಯಂತೆ ಭಾಸವಾಗುತ್ತಿದೆ. ಪ್ರತಿಬಾರಿ ಮಳೆ ಬಂದಾಗ ಕ್ರೀಡಾಂಗಣ ಜಲಾವೃತಗೊಳ್ಳುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣವು ಕ್ರೀಡಾ ಇಲಾಖೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆ ಆಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣ ಹಾಳಾಗಿದೆ.

ಕೆಸರು ಗದ್ದೆಯಾದ ರಸ್ತೆ

ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯು ಕೆಸರು ಗದ್ದೆಯಾಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಆನೇಕಲ್‌ನ ಚಂದಾಪುರ ಪುರಸಭೆ ವಾರ್ಡ್ ನಂಬರ್ 20ರಲ್ಲಿ ಘಟನೆ ನಡೆದಿದೆ. ಹೆಡ್ ಮಾಸ್ಟರ್ ಲೇಔಟ್‌ಗೆ ಸಂಪರ್ಕ್ ಕಲ್ಪಿಸುವ ರಸ್ತೆ ಇದಾಗಿದೆ. ಮಳೆ ಬಂದಾಗ ರಸ್ತೆ ಜಲಾವೃತಗೊಂಡು ಸಂಪೂರ್ಣ ಕೆಸರುಮಯವಾಗಿದೆ. ನಿತ್ಯ ಓಡಾಡುವ ಜನರಿಗೆ ಈ ರಸ್ತೆಯಲ್ಲಿ ಸಂಚರಿಸುವುದೆ ನರಕಯಾತನೆ ಆಗಿದೆ. ಮಳೆ ಬಂದಾಗ ಕೆಸರು ಗದ್ದೆ, ಬಿಸಿಲಿನ ಸಮಯದಲ್ಲಿ ಧೂಳಿನ ಸಮಸ್ಯೆ ಎದುರಾಗಿದೆ. ರಸ್ತೆಯಲ್ಲಿ ಹಳ್ಳಗುಂಡಿಗಳು ಕಾಣದೆ ಬಿದ್ದು ನಿವಾಸಿಗಳು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಚಂದಾಪುರ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Karnataka Weather Forecast : ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Heavy Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕ ಕಡೆ ಭಾರೀ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ 14 ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ ಸೇರಿದಂತೆ ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಯಚೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಗುಡುಗು ಸಹಿತ ಮಳೆ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ಮಲ್ಲಪ್ಪ ಬಡಿಗೇರ್ (50) ಮೃತ ದುರ್ದೈವಿ. ರಾಯಚೂರಿನ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಶುಕ್ರವಾರ ಸಂಜೆ 4.30 ಗಂಟೆಗೆ ಬಳಗಾನೂರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಳಗಾನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರುಣನ ಅರ್ಭಟ ಜೋರಾಗಿತ್ತು. ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ವಡಗೇರಾ ಪಟ್ಟಣದ ನಿವಾಸಿಗಳ ಸಂಕಷ್ಟ ಅನುಭವಿಸಿದರು. ಕಲಬುರಗಿಯಲ್ಲೂ ಬಿಸಿಲ‌ ಬೇಗೆಗೆ ತತ್ತರಿಸಿದ ಜನತೆಗೆ ವರುಣ ತಂಪೆರಿದ್ದ. ನಗರದ ಹಲವೆಡೆ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇತ್ತ ಶುಕ್ರವಾರ ಬೆಂಗಳೂರು ಗ್ರಾಮಾಂತರದ ಆನೇಕಲ್, ಅತ್ತಿಬೆಲೆ, ಜಿಗಣಿ, ಚಂದಾಪುರ ಸೇರಿದಂತೆ ಹಲವೆಡೆ ಮಳೆಯಾಗಿತ್ತು. ರಸ್ತೆಯಲ್ಲಿಯೇ ಮಳೆ ನೀರು ನಿಂತು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರ ಪರದಾಡಿದರು.

Continue Reading

ಬೆಂಗಳೂರು

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Navaratri: ನವರಾತ್ರಿಯಂದು ಬಣ್ಣಕ್ಕೂ ಎಲ್ಲಿಲ್ಲದ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಒಂದೇ ತರಹ ಬಟ್ಟೆ ಧರಿಸಿ ಮಿಂಚಿದ್ದಾರೆ.

VISTARANEWS.COM


on

By

navaratri
Koo

ಬೆಂಗಳೂರು: ನವರಾತ್ರಿಯ(Navaratri) ಸಂಭ್ರಮ ಎಲ್ಲೆಡೆ ಕಳೆಕಟ್ಟಿದೆ. ದೇವಿಯನ್ನು ವಿವಿಧ ರೂಪದಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಇನ್ನೊಂದು ವಿಶೇಷ ಎಂದರೆ 9 ದಿನಗಳಿಗೆ 9 ಬಣ್ಣದ ಬಟ್ಟೆ. ಒಂದೊಂದು ದಿನ ಒಂದೊಂದು ಬಣ್ಣದ ಬಟ್ಟೆ ಧರಿಸುವುದು ವಾಡಿಕೆ. ಹೀಗೆ ನವರಾತ್ರಿಯ ವೈಭವ ಜೋರಾಗಿದ್ದು, ಹೆಂಗಳೆಯರು ಒಂದೇ ತರಹದ ಸೀರೆಯನ್ನುಟ್ಟು ಮಿಂಚಿದ್ದಾರೆ.

ಜೆ.ಎಸ್.ಎಸ್ ಪದವಿ ಮಹಾವಿದ್ಯಾಲಯದ ಬೋಧಕ – ಬೋಧಕೇತರ ಮಹಿಳಾ ಸಿಬ್ಬಂದಿ ಶರನ್ನವರಾತ್ರಿ ಸಂಭ್ರಮದ ಮೊದಲ ದಿನ .

ಶರನ್ನವರಾತ್ರಿ ಸಂಭ್ರಮದ ಎರಡನೇ ದಿನ ಹಸಿರು ಸೀರೆಯಲ್ಲಿ ಮಿಂಚಿ ಸಂಭ್ರಮಿಸಿ ಮಹಿಳಾಮಣಿಯರು

ತರ್ಮಾಕೋಲ್‌ನಲ್ಲಿ ಮೂಡಿ ಬಂತು ಅಂಬಾರಿ

ನಾಡ ಹಬ್ಬ ದಸರಾ ಹಾಗೂ ನವರಾತ್ರಿ ಸಂಭ್ರಮ ಶುರುವಾಗಿದೆ. ವಿಜಯ ದಶಮಿಯಂದು ಗರ್ಜಿಸಲು ತರ್ಮಾಕೋಲ್ ಆನೆಗಳು, ಅಂಬಾರಿ ಸಹ ರಗಡ್ಡಗಿದ್ದು, ಗತಿಸಿ ಹೋದ ಇತಿಹಾಸ ಇಲ್ಲಿ ಕಾಣಸಿಗುತ್ತಿವೆ. ಒಂಬತ್ತು ದಿನಗಳ ನವರಾತ್ರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಹೆಂಗಳೆಯರು ಕಲರ್ ಕಲರ್ ಸೀರೆಯುಟ್ಟು ಮಸ್ತಿ ಮಾಡುತ್ತಿದ್ದರೆ, ಇತ್ತ ವಿಜಯದಶಮಿ ದಿನಕ್ಕೆ ತರ್ಮಾಕೋಲ್‌ನಲ್ಲಿ ಅಂಬಾರಿ ಮೂಡಿ ಬಂದಿದೆ. ಇದನ್ನು ನೋಡಿದರೆ ಸೇಮ್‌ ಮೈಸೂರು ಅಂಬಾರಿಯಂತೆ ಭಾಸವಾಗುತ್ತದೆ.

ಅಂದಹಾಗೆ ವುಡ್‌ನಲ್ಲಿ ಬೇಕಾದಂತಹ ಐಟಮ್ಸ್ ತಯಾರಿಸೋದು ಕಷ್ಟವಲ್ಲ ಆದರೆ ಅದನ್ನು ಮೆಂಟೇನ್ ಮಾಡೋದು ಕಷ್ಟಕರವೆಂದು ಜನರು ತರ್ಮಾಕೋಲ್ ಗೊಂಬೆಗಳಿಗೆ ಮೊರೆ ಹೋಗಿದ್ದಾರೆ. ತರ್ಮಾಕೋಲ್‌ನಲ್ಲಿ ಅಂಬಾರಿ, ಜೋಡಿ ಗೊಂಬೆಗಳು, ಹಂಪಿಯ ದೇವಸ್ಥಾನ, ಯಕ್ಷಗಾನದ ಮಂಟಪ, ಆನೆ, ಕಮಲದ ಹೂಗಳು ಮಾತ್ರವಲ್ಲ ಮೈಸೂರು ಅರಮನೆ ಸೇರಿದಂತೆ ಹಲವಾರು ವಿಭಿನ್ನವಾದ ಕಲೆಗಳು ಮೂಡಿ ಬಂದೀವೆ. ಸಿಲಿಕಾನ್ ಸಿಟಿ ಜನರಿಗೆ ಹಬ್ಬದ ಸಂಭ್ರಮಕ್ಕೆ ತರ್ಮಾಕೋಲ್‌ನಿಂದ ಮಾಡಿರುವ ವಸ್ತುಗಳು ಗಮನ ಸೆಳೆಯುತ್ತಿವೆ.

Continue Reading
Advertisement
Lovers Death
ಕೋಲಾರ28 ನಿಮಿಷಗಳು ago

Lovers Death : ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಅಪ್ರಾಪ್ತೆ ಸಾವು, ಹುಡುಗ ಗಂಭೀರ

Karnataka Rain
ಮಳೆ1 ಗಂಟೆ ago

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Dina Bhvishya
ಭವಿಷ್ಯ2 ಗಂಟೆಗಳು ago

Dina Bhavishya : ಅತಿರೇಕದಲ್ಲಿ ಮಾತನಾಡುವ ಮುನ್ನ ಈ ರಾಶಿಯವರು ಯೋಚಿಸಿ

karnataka Weather Forecast
ಮಳೆ1 ದಿನ ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Dina Bhavishya
ಭವಿಷ್ಯ1 ದಿನ ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

navaratri
ಬೆಂಗಳೂರು2 ದಿನಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು2 ದಿನಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು2 ದಿನಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು2 ದಿನಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು2 ದಿನಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌