2nd PUC Exam 3 Result : ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ - Vistara News

ಶಿಕ್ಷಣ

2nd PUC Exam 3 Result : ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

2nd PUC Exam 3 : ರಾಜ್ಯಾದ್ಯಂತ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವು ಜು.16ರಂದು ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ತಮ್ಮ ಮೊಬೈಲ್‌ನಲ್ಲೇ ನೋಡಬಹುದಾಗಿದೆ.

VISTARANEWS.COM


on

2nd PUC Exam 3
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯ(Education News) ಫಲಿತಾಂಶವು ಜು.16ರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸಿಸಿ ಕಣ್ಗಾವಲಿನಲ್ಲಿ ರಾಜ್ಯಾದ್ಯಂತ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.

ಇದನ್ನೂ ಓದಿ: Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಫಲಿತಾಂಶ ನೋಡಲು ಈ ಹಂತಗಳನ್ನು ಪಾಲಿಸಿ

-karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
-ಮುಖಪುಟದಲ್ಲಿ ನೀಡಲಾದ ಪಿಯುಸಿ ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
-ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
-ನಿಮ್ಮ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Round table meeting: ಶಿಕ್ಷಣ ಗುಣಮಟ್ಟ ಸುಧಾರಿಸಲು ಜು.16ರಂದು ದುಂಡು ಮೇಜಿನ ಸಭೆ

Round table meeting: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಗುಣಮಟ್ಟ ಅಭಿವೃದ್ಧಿ ಚಿಂತನ ಜಂಟಿ ಸಮಿತಿ ವತಿಯಿಂದ ಜು.16ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ಶಾಸಕರ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಗುಣಮಟ್ಟ ಸುಧಾರಿಸಲು “ದುಂಡು ಮೇಜಿನ ಸಭೆ” ಏರ್ಪಡಿಸಲಾಗಿದೆ.

VISTARANEWS.COM


on

Round table meeting on June 16 in Bengaluru
Koo

ಬೆಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಗುಣಮಟ್ಟ ಅಭಿವೃದ್ಧಿ ಚಿಂತನ ಜಂಟಿ ಸಮಿತಿ ವತಿಯಿಂದ ಜು.16 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ಶಾಸಕರ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಗುಣಮಟ್ಟ ಸುಧಾರಿಸಲು “ದುಂಡು ಮೇಜಿನ ಸಭೆ” (Round table meeting)‌ ಏರ್ಪಡಿಸಲಾಗಿದೆ.

ಇದನ್ನೂ ಓದಿ: Tata Motors: ಟಾಟಾ ಮೋಟರ್ಸ್‌ನಿಂದ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಮೂಲಕ 4000 ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ

ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ್‌ ಶಿವಲಿಂಗಪ್ಪ ಹೊರಟ್ಟಿ ಸಭೆಯನ್ನು ಉದ್ಘಾಟಿಸುವರು. ಗೌರವ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಪಾಲ್ಗೊಳ್ಳುವರು. ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಅಧ್ಯಕ್ಷತೆ ವಹಿಸುವರು.

ಇದನ್ನೂ ಓದಿ: Grassroot Boxing: ಬೆಂಗಳೂರಿನಲ್ಲಿ ರೋಮಾಂಚನಗೊಳಿಸಿದ ಬಾಕ್ಸಿಂಗ್‌ ಪಂದ್ಯ

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ ಸದಸ್ಯರಾದ ಶಶಿಲ್‌ ಜಿ. ನಮೋಶಿ, ಎಸ್‌.ಎಲ್‌. ಭೋಜೇಗೌಡ, ಡಾ.ಚಂದ್ರಶೇಖರ್‌ ಬಸವರಾಜ ಪಾಟೀಲ್‌, ಎಸ್‌.ವಿ.ಸಂಕನೂರ, ಹನುಮಂತ್‌ ನಿರಾಣಿ, ಪ್ರಕಾಶ್‌ ಹುಕ್ಕೇರಿ, ಚಿದಾನಂದ್‌ ಎಂ.ಗೌಡ, ಮಧು ಜಿ. ಮಾದೇಗೌಡ, ಡಿ.ಟಿ. ಶ್ರೀನಿವಾಸ್‌, ರಾಮೋಜಿಗೌಡ, ಡಾ. ಧನಂಜಯ ಸರ್ಜಿ, ವಿವೇಕಾನಂದ ಹಾಗೂ ಶಿಕ್ಷಣ ತಜ್ಞ ಪ್ರೊ. ಗಣೇಶ್‌ ಭಟ್‌, ಪ್ರೊ. ಬಿ.ರಮೇಶ್‌ ಪಾಲ್ಗೊಳ್ಳಲಿದ್ದಾರೆ ಎಂದು ಕೆ.ಪಿ.ಎಂ.ಟಿ.ಸಿ.ಸಿ. ಸಂಚಾಲಕ ಡಿ.ಶಶಿಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Tata Motors: ಟಾಟಾ ಮೋಟರ್ಸ್‌ನಿಂದ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಮೂಲಕ 4000 ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ

Tata Motors: ಟಾಟಾ ಮೋಟಾರ್ಸ್ ಕಂಪನಿಯು ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ. ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದ್ದು, ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ.

VISTARANEWS.COM


on

Automotive skill training for 4000 students through Automotive Skill Labs by Tata Motors
Koo

ಬೆಂಗಳೂರು: ಯುವ ಪ್ರತಿಭೆಗಳನ್ನು ಬೆಳೆಸುವ ಮತ್ತು ಆಟೋಮೋಟಿವ್ ಉದ್ಯಮಕ್ಕೆ ಬೇಕಾಗುವ ನುರಿತ ಉದ್ಯೋಗಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು (Tata Motors) ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ.

ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದೆ. ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ. ಅಷ್ಟು ಮಂದಿಯಲ್ಲಿ 30% ಮಂದಿ ಹುಡುಗಿಯರಾಗಿರುತ್ತಾರೆ ಎನ್ನುವುದು ವಿಶೇಷ.

‘ರಾಷ್ಟ್ರೀಯ ಶಿಕ್ಷಣ ನೀತಿ 2020’ ರಲ್ಲಿ ಪರಿಕಲ್ಪಿಸಲಾದ ವೃತ್ತಿಪರ ಕೋರ್ಸ್‌ಗಳ ಸಾಲಿನಲ್ಲಿ ನಿಲ್ಲುವ ಟಾಟಾ ಮೋಟಾರ್ಸ್‌ನ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್,’ 9 ರಿಂದ 12 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿಯೇ ಅವರಿಗೆ ಅಗತ್ಯವಾಗಿ ಬೇಕಾಗುವ ವಿಷಯ ಜ್ಞಾನ, ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯುವುದರ ಕಡೆಗೆ ಮತ್ತು ಅವರಿಗೆ ಉತ್ತಮವಾದ ಔದ್ಯಮಿಕ ಕ್ಷೇತ್ರದ ಅರಿವು ನೀಡುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ.

ಇದನ್ನೂ ಓದಿ: Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

ಜತೆಗೆ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್‌ನ ಘಟಕಗಳಿಗೆ ಭೇಟಿ ನೀಡಬಹುದು. ಸರ್ವೀಸ್ ಮತ್ತು ಡೀಲರ್‌ಶಿಪ್ ವೃತ್ತಿಪರರ ಜತೆ ಸಂವಹನ ನಡೆಸಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಉದ್ಯಮ ತಜ್ಞರ ಉಪನ್ಯಾಸ ಕಾರ್ಯಕ್ರದಲ್ಲಿ ಭಾಗಿಯಾಗಿ ಹೆಚ್ಚು ಜ್ಞಾನ ಪಡೆಯುವ ಮತ್ತು ಉತ್ತಮ ಅನುಭವ ಹೊಂದುವ ಅವಕಾಶ ಪಡೆಯಲಿದ್ದಾರೆ. ಅಷ್ಟು ಮಾತ್ರವಲ್ಲದೆ ಈ ಲ್ಯಾಬ್‌ಗಳಲ್ಲಿ ಬೋಧನೆ ಮಾಡುವ ಬೋಧಕರು ಕಂಪನಿಯ ಪ್ಲಾಂಟ್‌ಗಳಿರುವ ಸ್ಥಳಗಳಲ್ಲಿ ಅಗತ್ಯ ತರಬೇತಿಯನ್ನು ಪಡೆಯುತ್ತಾರೆ. ಪುಣೆಯ ಸ್ಕಿಲ್ ಲ್ಯಾಬ್‌ನಲ್ಲಿ ವಿದ್ಯಾರ್ಥಿಗಳು ರಚಿಸಿರುವ ಇ-ರಿಕ್ಷಾ ಈ ವಿಶಿಷ್ಟವಾದ ಕಲಿಕಾ ಉಪಕ್ರಮದ ಯಶಸ್ಸಿಗೆ ಒಂದು ಶ್ರೇಷ್ಠ ಪುರಾವೆಯಾಗಿದೆ.

ಈ ಕಲಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್ ಮತ್ತು ಎನ್‌ವಿಎಸ್ ನಿಂದ ಜಂಟಿ ಪ್ರಮಾಣಪತ್ರ ಸ್ವೀಕರಿಸುತ್ತಾರೆ. ತಮ್ಮ ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಡಿಪ್ಲೊಮಾ ಇನ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿಗೆ ಸೇರಿಕೊಳ್ಳಬಹುದು. ಸೇರಿಕೊಳ್ಳುವವರಿಗೆ ಪೂರ್ತಿ ಸ್ಟೈಫಂಡ್ ನೀಡಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್‌ನ ಉತ್ಪಾದನಾ ಘಟಕಗಳಲ್ಲಿ ಉದ್ಯೋಗ ತರಬೇತಿಯನ್ನೂ ಪಡೆಯಬಹುದಾಗಿದೆ. ಜತೆಗೆ ಟಾಟಾ ಮೋಟಾರ್ಸ್‌ನಲ್ಲಿ ಮುಂದುವರಿಯಲು ಆಸಕ್ತಿಯುಳ್ಳವರು ಆಯ್ದ ಎಂಜಿನಿಯರಿಂಗ್ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸುವ 3.5 ವರ್ಷಗಳ ವಿಶೇಷ ಶಿಕ್ಷಣ ಕಾರ್ಯಕ್ರಮವಾದ ಬಿಟೆಕ್ ಇನ್ ಎಂಜಿನಿಯರಿಂಗ್‌ ಪದವಿಗೆ ಸೇರಿಕೊಳ್ಳಬಹುದು. ಹಾಗೆ ಮಾಡಿದರೆ ಐದು ವರ್ಷಗಳ ನಂತರ ಟಾಟಾ ಮೋಟಾರ್ಸ್‌ನಲ್ಲಿ ಪರ್ಮನೆಂಟ್ ಉದ್ಯೋಗಕ್ಕೆ ಸೇರಿಕೊಳ್ಳಬಹುದು.

ಈ ಕುರಿತು ಟಾಟಾ ಮೋಟಾರ್ಸ್‌ನ ಸಿಎಸ್‌ಆರ್ ಮುಖ್ಯಸ್ಥ ವಿನೋದ್ ಕುಲಕರ್ಣಿ ಮಾತನಾಡಿ, “ನಮ್ಮ ಆಟೋಮೋಟಿವ್ ಸ್ಕಿಲ್ ಲ್ಯಾಬ್‌ಗಳು ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ಯುವಜನತೆಗೆ ಬೆಳೆಯುತ್ತಿರುವ ಆಟೋಮೋಟಿವ್‌ ಕ್ಷೇತ್ರದ ಉದ್ಯೋಗ ಗಳಿಸಲು ಬೇಕಾಗುವ ಸೂಕ್ತವಾದ ಕೌಶಲ್ಯಗಳನ್ನು ಕಲಿಸಿ ಅವರನ್ನು ಸಶಕ್ತಗೊಳಿಸುತ್ತವೆ. ಈ ಲ್ಯಾಬ್ ಗಳು 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಉದ್ಯೋಗಾವಕಾಶಗಳನ್ನು ಹೊಂದಲು ದಾರಿಗಳನ್ನು ಸೃಷ್ಟಿಸುತ್ತದೆ.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

‘ಸ್ಕಿಲ್ ಇಂಡಿಯಾ ಮಿಷನ್ʼಗೆ ಕೊಡುಗೆ ನೀಡುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನವೀನ ಚಿಂತನೆ, ಉದ್ಯಮಶೀಲತಾ ಮನೋಭಾವ, ವಿಶ್ಲೇಷಣಾತ್ಮಕ ಮನಸ್ಥಿತಿ ಮತ್ತು ವಿಮರ್ಶಾತ್ಮಕ ಸಂವಹನ ಇತ್ಯಾದಿ ಕೌಶಲಗಳನ್ನು ಬೆಳೆಸುತ್ತದೆ. ಈ ಉಪಕ್ರಮಕ್ಕೆ ವಿದ್ಯಾರ್ಥಿಯರು ಕೂಡ ಉತ್ತಮವಾಗಿ ಸ್ಪಂದಿಸಿದ್ದು, ಆ ಮೂಲಕ ವಿಕಸಿತ ಭಾರತ @2047 ಪರಿಕಲ್ಪನೆಗೆ ಪೂರಕವಾಗಿ ಭವಿಷ್ಯದ ನಾಯಕರನ್ನು ಸಜ್ಜುಗೊಳಿಸುವ ನಮ್ಮ ಬದ್ಧತೆಗೆ ಬಲ ದೊರೆತಿದೆ” ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

Karnataka Rain : ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

VISTARANEWS.COM


on

By

karnataka Rain
Koo

ಕೊಡಗು/ಮಂಗಳೂರು/ಕಾರವಾರ: ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು,‌ ರೆಡ್‌ ಅಲರ್ಟ್‌ ಘೋಷಣೆ (Karnataka Rain) ಮಾಡಲಾಗಿದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಸೋಮವಾರ ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Heavy rain Effect) ಮಾಡಲಾಗಿದೆ. ಮುಖ್ಯವಾಗಿ ಕೊಡಗಿನಲ್ಲಿ ವರುಣಾರ್ಭಟ ತೀವ್ರಗೊಂಡಿದ್ದು, ಭಾರಿ ಗಾಳಿ ಬೀಸುತ್ತಿದೆ. ಕೊಡಗಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜು.15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Holiday for Schools) ಮಾಡಲಾಗಿದೆ.

ಜತೆಗೆ ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಗಣನೀಯ ಪ್ರಮಾಣದಲ್ಲಿ ಒಳಹರಿವು ಏರಿಕೆ ಆಗುತ್ತಿದೆ. ಹೀಗಾಗಿ ನದಿಗೆ ಹತ್ತು‌ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಮಾಹಿತಿ ನೀಡಿದ್ದಾರೆ.

karnataka Rain

ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜತೆಗೆ ಉತ್ತರಕನ್ನಡ ಜಿಲ್ಲೆಯಲ್ಲೂ ಮಳೆಯ ಅಬ್ಬರ ಇದ್ದು, ಎಡಬಿಡದೇ ಸುರಿಯುತ್ತಿದೆ. ನಿನ್ನೆ ಭಾನುವಾರದಿಂದಲ್ಲೂ ಜಿಲ್ಲೆಯ ಹಲವು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾರವಾರ ಸೇರಿದಂತೆ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಜಿಲ್ಲೆಯ 10 ತಾಲೂಕುಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲಾ -ಕಾಲೇಜಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ: Assault Case: ಆಪದ್ಬಾಂಧವನಲ್ಲ ವಿಕೃತ! ಮಗಳ ಅಶ್ಲೀಲ ವಿಡಿಯೋ ಮಾಡಿದ ಆಸೀಫ್‌ನ ಇನ್ನೊಂದು ವಿಕೃತಿ ಬಯಲು

ಕರಾವಳಿ-ಮಲೆನಾಡಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿಯಲ್ಲೂ ಮಳೆಯು ಅಬ್ಬರಿಸಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಜತೆಗೆ ಬೀದರ್, ಗದಗ, ಕೊಪ್ಪಳ ಸೇರಿ ರಾಯಚೂರು, ಬಳ್ಳಾರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲಿ ಗಾಳಿ ಜತೆಗೆ ಜಿಟಿಜಿಟಿ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲ್ಲೂ ಮೋಡ ಕವಿದ ವಾತಾವರಣ ಇದೆ. ಬೆಳಗ್ಗೆಯಿಂದಲೇ ಹಗುರದಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಗಾಳಿಯ ವೇಗವು ನಿರಂತರವಾಗಿ ಇರಲಿದ್ದು, 30-40 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

NSUI: ದೆಹಲಿ ವಿವಿಯಲ್ಲಿ ಗಲಾಟೆ ಮಾಡಿ, ರಾಮನ ಮೂರ್ತಿ ಒಡೆದ ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ಸದಸ್ಯರು; ಭಾರಿ ವಿವಾದ!

NSUI: ಎಬಿವಿಪಿ ಆರೋಪವನ್ನು ಎನ್‌ಎಸ್‌ಯುಐ ಅಲ್ಲಗಳೆದಿದೆ. “ಎಬಿವಿಪಿ ಉಪಾಧ್ಯಕ್ಷ ಅಭಿ ದಹಿಯಾ ಹಾಗೂ ಅಧ್ಯಕ್ಷ ತುಷಾರ್‌ ದೇಢಾ ಅವರು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂಬ ಸಂಗತಿಯನ್ನು ಎನ್‌ಎಸ್‌ಯುಐ ಬಯಲು ಮಾಡಿದೆ. ಇದರ ಸೇಡಿನ ಭಾಗವಾಗಿಯೇ ಎಬಿವಿಪಿ ಕಾರ್ಯಕರ್ತರು ವಿವಿಯಲ್ಲಿರುವ ಎನ್‌ಎಸ್‌ಯುಐ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ” ಎಂದು ಎನ್‌ಎಸ್‌ಯುಐ ತಿಳಿಸಿದೆ.

VISTARANEWS.COM


on

NSUI
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಗಳ ಕಲಹ ಜೋರಾಗಿದೆ. ದೆಹಲಿ ವಿಶ್ವವಿದ್ಯಾಲಯದಲ್ಲಿ (Delhi University) ಕಾಂಗ್ರೆಸ್‌ ವಿದ್ಯಾರ್ಥಿ ಘಟಕವಾದ ನ್ಯಾಷನಲ್‌ ಸ್ಟುಡೆಂಟ್ಸ್‌ ಯುನಿಯನ್‌ ಆಫ್‌ ಇಂಡಿಯಾ (NSUI) ಹಾಗೂ ಆರ್‌ಎಸ್‌ ವಿದ್ಯಾರ್ಥಿ ಘಟಕವಾದ ಎಬಿವಿಪಿ ಮಧ್ಯೆ ಗಲಾಟೆ ನಡೆದಿದೆ. ಅದರಲ್ಲೂ, ದೆಹಲಿ ವಿವಿಯಲ್ಲಿರುವ ದೆಹಲಿ ವಿವಿ ವಿದ್ಯಾರ್ಥಿಗಳ ಒಕ್ಕೂಟದ (DUSU) ಕಚೇರಿಗೆ ಎನ್‌ಎಸ್‌ಯುಐ ಘಟಕದ ಮುಖಂಡರು ದಾಳಿ ನಡೆಸಿದ್ದು, ಅಲ್ಲಿದ್ದ ರಾಮನ ಮೂರ್ತಿಯನ್ನು ಒಡೆದು ಹಾಕಿ, ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ವಿರೂಪಗೊಳಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ.

ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಅಭಿ ದಹಿಯಾ ಅವರು ದಾಳಿಯ ಕುರಿತು ಮಾಹಿತಿ ನೀಡಿದ್ದಾರೆ. “ಡಿಯುಎಸ್‌ಯು ಅಧ್ಯಕ್ಷ ತುಷಾರ್‌ ದೇಢಾ, ಕಾರ್ಯದರ್ಶಿ ಅಪರಾಜಿತಾ, ಜಂಟಿ ಕಾರ್ಯದರ್ಶಿ ಸಚಿನ್‌ ಬೈಸ್ಲಾ ಸೇರಿ ಹಲವರ ಕಚೇರಿಗೆ ಭಾನುವಾರ ಬೆಳಗ್ಗೆ ಎನ್‌ಎಸ್‌ಯುಐ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ದಾಳಿಕೋರರು ಮೊದಲು ಮದ್ಯಪಾನ ಮಾಡಿದ್ದಾರೆ. ಇದಾದ ಬಳಿಕ ಡಿಯುಎಸ್‌ಯು ಪದಾಧಿಕಾರಿಗಳ ಕಚೇರಿಗಳಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದಿದ್ದಾರೆ.

ಅಭಿ ದಹಿಯಾ ಕಚೇರಿಯಲ್ಲಿ ಮದ್ಯದ ಬಾಟಲಿಗಳು ಬಿದ್ದಿರುವ, ವಿವೇಕಾನಂದರ ಫೋಟೊವನ್ನು ವಿರೂಪಗೊಳಿಸಿರುವ, ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಕಚೇರಿಯಲ್ಲಿದ್ದ ಶ್ರೀರಾಮನ ಮೂರ್ತಿಯನ್ನು ಕೂಡ ಒಡೆದು ಹಾಕಲಾಗಿದೆ ಎಂಬುದಾಗಿ ಒಕ್ಕೂಟವು ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಕೂಡ ಆರೋಪ-ಪ್ರತ್ಯಾರೋಪಕ್ಕಿಳಿದಿದ್ದಾರೆ.

ಎಬಿವಿಪಿ ಆರೋಪವನ್ನು ಎನ್‌ಎಸ್‌ಯುಐ ಅಲ್ಲಗಳೆದಿದೆ. “ಎಬಿವಿಪಿ ಉಪಾಧ್ಯಕ್ಷ ಅಭಿ ದಹಿಯಾ ಹಾಗೂ ಅಧ್ಯಕ್ಷ ತುಷಾರ್‌ ದೇಢಾ ಅವರು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂಬ ಸಂಗತಿಯನ್ನು ಎನ್‌ಎಸ್‌ಯುಐ ಬಯಲು ಮಾಡಿದೆ. ಇದರ ಸೇಡಿನ ಭಾಗವಾಗಿಯೇ ಎಬಿವಿಪಿ ಕಾರ್ಯಕರ್ತರು ವಿವಿಯಲ್ಲಿರುವ ಎನ್‌ಎಸ್‌ಯುಐ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ” ಎಂದು ಎನ್‌ಎಸ್‌ಯುಐ ತಿಳಿಸಿದೆ. ಅಭಿ ದಹಿಯಾ ಅವರನ್ನು ಡಿಯುಎಸ್‌ಯು ಉಪಾಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ. ಇದರ ಭಾಗವಾಗಿಯೇ, ಗಲಾಟೆ ಶುರುವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: JNU Election: ದಿಲ್ಲಿಯ ಜೆಎನ್‌ಯು ವಿದ್ಯಾರ್ಥಿ ಚುನಾವಣೆಯಲ್ಲಿ ಎಡಪಕ್ಷಗಳ ಕ್ಲೀನ್‌ ಸ್ವೀಪ್

Continue Reading
Advertisement
Iti Acharya
ಸಿನಿಮಾ3 seconds ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 min ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ4 mins ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

valmiki corporation scam culprits
ಪ್ರಮುಖ ಸುದ್ದಿ27 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Anant Ambani Wedding
ದೇಶ31 mins ago

Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

Former MPs
ದೇಶ32 mins ago

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Hardik Pandya
ಕ್ರೀಡೆ35 mins ago

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Monkey Attack
Latest1 hour ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Actor Yash
ಸಿನಿಮಾ1 hour ago

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

assault case viral video
ವೈರಲ್ ನ್ಯೂಸ್1 hour ago

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ22 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌