Site icon Vistara News

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-1ರ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ; ಆಕ್ಷೇಪಣೆ ಸಲ್ಲಿಕೆಗೆ ಮಾ.21 ಕೊನೇ ದಿನ

II PUC Exam-1 Question Papers and Answer Released

ಬೆಂಗಳೂರು: 2023-2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ (2nd PUC Exam) ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation)ಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಮಂಡಲಿಯ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು, ಮಾದರಿ ಉತ್ತರಗಳನ್ನು ಪಡೆಯಬಹುದಾಗಿದೆ.

ಮಾರ್ಚ್‌ 1ರಂದು ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ-1, ಮಾರ್ಚ್ 22ಕ್ಕೆ ಮುಕ್ತಾಯವಾಗಲಿದೆ. ಸದ್ಯ ಮಾ.1ರಿಂದ 18ರವರೆಗೆ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಮಾತ್ರ ಪ್ರಕಟಿಸಿದ್ದು, ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಲಿ ತಿಳಿಸಿದೆ.

ವಿದ್ಯಾರ್ಥಿಗಳು, ಪೋಷಕರು ಈ ಕೆಳಗಿನ ಅಂಶಗಳಿಗೆ ಮಾತ್ರ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.

1) ದ್ವಂದ್ವಾರ್ಥ ಬರುವ ಪ್ರಶ್ನೆಗಳಿಗೆ
2) ಅಪೂರ್ಣ ಪ್ರಶ್ನೆಗಳಿಗೆ
3) ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು.
4) ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂತದ್ದು
5) ಒಂದು ಆಯ್ಕೆಗಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳು

ಇದನ್ನೂ ಓದಿ | School Teachers : ಶಿಕ್ಷಕರು ಅರ್ಧ ಗಂಟೆ ಮೊದಲು ಬರಬೇಕು, ಸ್ಕೂಲ್‌ ಟೈಮಲ್ಲಿ ಹೊರಗೆ ಹೋಗುವಂತಿಲ್ಲ!

ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್‌ 19ರಿಂದ 21ರ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಮಾ.21ರ ಸಂಜೆ 5 ಗಂಟೆ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಆಕ್ಷೇಪಣೆ ಸಲ್ಲಿಸುವವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೆಬ್‌ಸೈಟ್‌ (https://kseab.karnataka.gov.in/ -Latest News- Click here for filing objections for II PUC Examination-1 March 2024 Scheme of Evaluation) ಭೇಟಿ ನೀಡಿ.

5,8,9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಅಯೋಮಯ; ತೀರ್ಪು ಕಾದಿರಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ‌ ಮಾರ್ಚ್‌ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆ (Public Exam) ಕುರಿತ ವಿವಾದ ತಕ್ಷಣಕ್ಕೆ ಇತ್ಯರ್ಥವಾಗುವ ಸಾಧ್ಯತೆ ಕಾಣಿಸುತ್ತಿಲ್ಲ. ಮಾರ್ಚ್‌ 13ರಂದು ಸುಪ್ರೀಂಕೋರ್ಟ್‌ (Stay from Supreme Court) ಈ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ನಲ್ಲಿ (Karnataka High Court) ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿಸಿತ್ತು. ಆದರೆ, ಹೈಕೋರ್ಟ್‌ನಲ್ಲಿ ಇನ್ನೂ ವಿವಾದ ಇತ್ಯರ್ಥವಾಗಿಲ್ಲ. ಮೂರು ದಿನಗಳ ಕಾಲ ವಿಚಾರಣೆ ನಡೆದ ಬಳಿಕ ಈಗ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ (High Court Reserves order). ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಇನ್ನೂ ಗೊಂದಲದಲ್ಲೇ ಇರುವಂತಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education Department) ನಡೆಸುತ್ತಿರುವ ಈ ಪರೀಕ್ಷೆ ಮಾರ್ಚ್‌ 11ರಂದು ಆರಂಭಗೊಂಡು ಮಾರ್ಚ್‌ 18ಕ್ಕೆ ಮುಗಿಯಬೇಕಾಗಿತ್ತು. ಮಾರ್ಚ್‌ 12ರಂದು ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿ ಹೈಕೋರ್ಟ್‌ಗೆ ಹೋಗುವಂತೆ ಸೂಚಿಸಿದಾಗ ಸರ್ಕಾರ ತಕ್ಷಣವೇ ಹೈಕೋರ್ಟ್‌ ಬಾಗಿಲು ತಟ್ಟುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂದು ತಿಳಿಯದ ಶಿಕ್ಷಣ ಇಲಾಖೆ ಮತ್ತು ಅಧಿಕಾರಿಗಳು ಒಂದೆರಡು ದಿನ ತಡವಾಗಿ ಹೈಕೋರ್ಟ್‌ ಮೊರೆ ಹೊಕ್ಕಿದ್ದರು.

ಇದೀಗ ಹೈಕೋರ್ಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ವಿಚಾರಣೆ ನಡೆಯುತ್ತಿದೆ. ಶಿಕ್ಷಣ ಇಲಾಖೆಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಅಧಿಕಾರವಿಲ್ಲ ಮತ್ತು ಅದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ ಎಂಬ ವಾದದೊಂದಿಗೆ ಖಾಸಗಿ ಶಾಲೆಗಳ ಸಂಘಟನೆ ರುಪ್ಸಾ ವಾದ ಮಂಡಿಸುತ್ತಿದೆ. ಈ ಹಗ್ಗ ಜಗ್ಗಾಟ ಇನ್ನೂ ಮುಗಿದಿಲ್ಲ. ಮೂರು ದಿನಗಳ ವಾದ ವಿವಾದಗಳ ಬಳಿಕ ಹೈಕೋರ್ಟ್‌ ತೀರ್ಪು ನೀಡುವ ಹಂತಕ್ಕೆ ಬಂದಿದೆ. ಆದರೆ, ಅದು ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ಪರೀಕ್ಷೆ ವಿಚಾರದ ಗೊಂದಲ ಮುಂದುವರಿದಿದೆ.

ಏನಿದು ಪಬ್ಲಿಕ್‌ ಪರೀಕ್ಷೆ ಮತ್ತು ಕಾನೂನು ಹೋರಾಟ?

ಮೊದಲ ಹಂತ: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education department) ಮತ್ತು ಸರ್ಕಾರ ಜಂಟಿಯಾಗಿ 5,8,9 ಮತ್ತು 11ನೇ ತರಗತಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು 2023ರ ಡಿಸೆಂಬರ್‌ನಲ್ಲಿ ಸುತ್ತೋಲೆ ಹೊರಡಿಸಿದ್ದವು.

ಎರಡನೇ ಹಂತ : ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.

ಇದನ್ನೂ ಓದಿ : Public Exam : 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕಥೆ ಏನು? ಇಂದು ಹೈಕೋರ್ಟ್‌ ಇತ್ಯರ್ಥ ಸಾಧ್ಯತೆ

ಮೂರನೇ ಹಂತ: ಖಾಸಗಿ ಶಾಲೆಗಳ ಸಂಘಟನೆಯ ವಾದವನ್ನು ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ 2024ರ ಮಾರ್ಚ್‌ 5ರಂದು ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿತ್ತು. ಅಂದರೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಸೂಚನೆ ನೀಡಿತ್ತು.

ನಾಲ್ಕನೇ ಹಂತ: ಪಬ್ಲಿಕ್‌ ಪರೀಕ್ಷೆಗೆ ತಡೆ ನೀಡಿದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಮಾರ್ಚ್‌ 7ರಂದು ಮೇಲ್ಮನವಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಏಕಸದಸ್ಯ ಪೀಠವು ವಿಧಿಸಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಅಂದರೆ ಮಾರ್ಚ್‌ 11ರಂದು ಆರಂಭವಾಗುವ 5,8,9ನೇ ತರಗತಿಯ ಪರೀಕ್ಷೆಗಳು ಯಥಾವತ್ತಾಗಿ ನಡೆಯಲಿದೆ ಎಂದು ತಿಳಿಸಲಾಗಿತ್ತು.

ಐದನೇ ಹಂತ: 11ನೇ ತರಗತಿ ಪರೀಕ್ಷೆಗಳು ಆಗಲೇ ನಡೆದು ಮುಕ್ತಾಯವಾಗಿವೆ. 5,8,9ನೇ ತರಗತಿ ಪರೀಕ್ಷೆಗಳು ಮಾರ್ಚ್‌ 11ರಂದು ಆರಂಭವಾಗಿದ್ದವು.

ಆರನೇ ಹಂತ: ಖಾಸಗಿ ಶಿಕ್ಷಣ ಸಂಸ್ಥೆಗಳು ಯಥಾವತ್ತಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಿದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿವೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಿದ ಸುಪ್ರೀಂಕೋರ್ಟ್‌ ಮಂಗಳವಾರ (ಮಾರ್ಚ್‌ 12) ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿತು. ಮತ್ತು ಶಿಕ್ಷಣ ಇಲಾಖೆ ಕೂಡಾ ಎಲ್ಲಾ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿತು.

ಏಳನೇ ಹಂತ: ಒಂದು ಕಡೆ ಸುಪ್ರೀಂಕೋರ್ಟ್‌ ಪರೀಕ್ಷೆಗೆ ತಡೆಯಾಜ್ಞೆ ನೀಡಿದ ಬೆನ್ನಿಗೇ, ಬೋರ್ಡ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ರುಪ್ಸಾ ಬೆಂಬಲಿತ ಕೆಲವು ಪೋಷಕರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿತು. ಆದರೆ, ಒಟ್ಟಾರೆ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿತು. ಇದು‌ ಮಾರ್ಚ್‌ 14ರಂದು ನಡೆದಿತ್ತು.

ಎಂಟನೇ ಹಂತ: ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಅವಕಾಶ ಕಲ್ಪಿಸಬಾರದು ಎಂದು ಕೋರಿ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಪೀಠ ನಡೆಸಿತು.

ಒಂಬತ್ತನೇ ಹಂತ : ಹೈಕೋರ್ಟ್‌ನ ವಿಭಾಗೀಯ ಪೀಠವು ಮಾರ್ಚ್‌ 18ರಂದು ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

Exit mobile version