2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ - Vistara News

ಶಿಕ್ಷಣ

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

2nd PUC Exam 3: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ (Free Bus) ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ. ಈ ಸಂಬಂಧ ನಿಗಮವು ಆದೇಶ ಹೊರಡಿಸಿದೆ.

VISTARANEWS.COM


on

2nd Puc Exam 3
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75, 995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ರಾಜ್ಯಾದ್ಯಂತ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇನ್ನೂ ಸಿಸಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣದಳಗಳನ್ನು ರಚಿಸಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

NEET Aspirant: 17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

VISTARANEWS.COM


on

NEET Aspirant
Koo

ಜೈಪುರ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಳೆದ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿರುವ, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲು ಸಿಬಿಐಗೆ ಹೊಣೆ ನೀಡಿದರೂ ಕೆಲ ರಾಜ್ಯಗಳು ನೀಟ್‌ ಪರೀಕ್ಷೆಯೇ ಬೇಡ ಎಂದು ಹೇಳುತ್ತಿವೆ. ಇದರ ಮಧ್ಯೆಯೇ, ರಾಜಸ್ಥಾನದ ಕೋಟಾದಲ್ಲಿ (Kota) ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಅಭ್ಯರ್ಥಿಯೊಬ್ಬ (NEET Aspirant) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಛೋಟಾ ಚೌರಾಹಿನ್‌ ಡಬಾಬರಿ ಪ್ರದೇಶದಲ್ಲಿ ಈತನು ವಾಸಿಸುತ್ತಿದ್ದ. ಗುರುವಾರ (ಜೂನ್‌ 27) ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಲವು ಸಹಪಾಠಿಗಳು ಬಾಗಿಲು ಬಡಿದಿದ್ದಾರೆ. ತುಂಬ ಹೊತ್ತಾದರೂ ಬಾಗಿಲು ತೆಗೆಯದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Kota Coaching Centre Room

ಪೊಲೀಸರು ಬಂದು ಬಾಗಿಲು ಮುರಿದು ಒಳಗೆ ತೆರಳಿದಾಗ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆದಾಗ್ಯೂ, ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಕೋಟಾದ ಕೋಚಿಂಗ್‌ ಸೆಂಟರ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ, ಜೆಇಇ, ನೀಟ್‌ಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಪ್ರತಿ ವರ್ಷ ಸುದ್ದಿಯಾಗುತ್ತಲೇ ಇರುತ್ತವೆ. ಪ್ರಸಕ್ತ ವರ್ಷದಲ್ಲಿಯೇ 12 ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲೂ, ಈಗ ನೀಟ್‌ ಅಕ್ರಮದ ಬಳಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತ ವರದಿಗಳು ಪೋಷಕರು, ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ದೂಡಿವೆ.

ನೀಟ್‌ ಅಕ್ರಮ; ಇಬ್ಬರ ಬಂಧನ

ಕಳೆದ ಮೇ ತಿಂಗಳಲ್ಲಿ ನಡೆದ ನೀಟ್‌ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರದ ಪಟನಾದವರಾದ ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲು ಇಬ್ಬರೂ ಆರೋಪಿಗಳನ್ನು ವಿಚಾರಣೆಗೆ ಕರೆದ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಅವರು ವಿದ್ಯಾರ್ಥಿಗಳಿಗೆ ಖಾಲಿ ಇರುವ ಶಾಲೆಯೊಂದಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಿದ್ದರು. ಖಾಲಿ ಇರುವ ಶಾಲೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಇವರು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳಿಗೆ ಇವರೇ ತಮ್ಮ ಮನೆಯಲ್ಲಿ ಆಶ್ರಯ ಕೂಡ ನೀಡಿದ್ದರು ಎನ್ನಲಾಗಿದೆ.

ಇಬ್ಬರೂ ದುರುಳರು ಪಟನಾದಲ್ಲಿರುವ ಬಾಯ್ಸ್‌ ಹಾಸ್ಟೆಲ್‌ನಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಮೇ 5ರಂದು ನೀಟ್‌ ಪರೀಕ್ಷೆ ನಡೆದಿದ್ದು, ಮೇ 4ರಂದು ಅಭ್ಯರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಸೋರಿಕೆಯಾಗಿದ್ದ ಪ್ರಶ್ನೆಗಳನ್ನು ಓದಿಕೊಂಡು, ಉತ್ತರ ಬರೆದು, ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಇವರು ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: NEET UG Retest: ನೀಟ್‌ ಮರುಪರೀಕ್ಷೆಗೆ ಅರ್ಧದಷ್ಟು ಅಭ್ಯರ್ಥಿಗಳು ಗೈರು; ಇವರ ಭವಿಷ್ಯದ ಗತಿ ಏನು?

Continue Reading

ಪ್ರಮುಖ ಸುದ್ದಿ

NEET Paper Leak: ನೀಟ್‌ ಅಕ್ರಮ; 2 ಆರೋಪಿಗಳನ್ನು ಬಂಧಿಸಿದ ಸಿಬಿಐ, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಇವರ ಪಾತ್ರವೇನು?

NEET Paper Leak: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೇಂದ್ರ ಸರ್ಕಾರವು ಸಿಬಿಐಗೆ ವಹಿಸಿದೆ. ಇದರ ಬೆನ್ನಲ್ಲೇ, ಸಿಬಿಐ ಅಧಿಕಾರಿಗಳು ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

NEET Paper Leak
Koo

ಪಟನಾ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆಗಳನ್ನು ಸೋರಿಕೆ (NEET Paper Leak) ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಬಿಐ ಅಧಿಕಾರಿಗಳು ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಗುರುವಾರ (ಜೂನ್‌ 27) ಬಂಧಿಸಿದ್ದಾರೆ. ಪ್ರಕರಣವನ್ನು ಸಿಬಿಐಗೆ (CBI) ವಹಿಸಿದ ಬಳಿಕ ಇದೇ ಮೊದಲ ಬಾರಿಗೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಬಿಹಾರದ ಪಟನಾದವರಾದ ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲು ಇಬ್ಬರೂ ಆರೋಪಿಗಳನ್ನು ವಿಚಾರಣೆಗೆ ಕರೆದ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಅವರು ವಿದ್ಯಾರ್ಥಿಗಳಿಗೆ ಖಾಲಿ ಇರುವ ಶಾಲೆಯೊಂದಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಿದ್ದರು. ಖಾಲಿ ಇರುವ ಶಾಲೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಇವರು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳಿಗೆ ಇವರೇ ತಮ್ಮ ಮನೆಯಲ್ಲಿ ಆಶ್ರಯ ಕೂಡ ನೀಡಿದ್ದರು ಎನ್ನಲಾಗಿದೆ.

ಇಬ್ಬರೂ ದುರುಳರು ಪಟನಾದಲ್ಲಿರುವ ಬಾಯ್ಸ್‌ ಹಾಸ್ಟೆಲ್‌ನಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಮೇ 5ರಂದು ನೀಟ್‌ ಪರೀಕ್ಷೆ ನಡೆದಿದ್ದು, ಮೇ 4ರಂದು ಅಭ್ಯರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಸೋರಿಕೆಯಾಗಿದ್ದ ಪ್ರಶ್ನೆಗಳನ್ನು ಓದಿಕೊಂಡು, ಉತ್ತರ ಬರೆದು, ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಇವರು ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಇಬ್ಬರನ್ನೂ ಅಧಿಕಾರಿಗಳು ಬಂದಿಸಿದ್ದಾರೆ.

ನೀಟ್‌ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮದ ಕುರಿತು ತನಿಖೆ ಆರಂಭಿಸಿರುವ ಸಿಬಿಐ, ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಹಾಗೆಯೇ, ಇನ್ನೂ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಇದರ ಜತೆಗೆ, ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತಂಡಗಳು ಬಿಹಾರ ಹಾಗೂ ಗುಜರಾತ್‌ಗೆ ತೆರಳಿವೆ. ಇನ್ನು, ನೀಟ್‌ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಯುಜಿಸಿ ನೆಟ್‌ ಪರೀಕ್ಷೆಯನ್ನೂ ರದ್ದುಗೊಳಿಸಲಾಗಿದೆ.

ನೀಟ್‌ ಸೇರಿ ಹಲವು ಪರೀಕ್ಷೆಗಳನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹಾ ನಿರ್ದೇಶಕ ಸುಬೋಧ್‌ ಕುಮಾರ್‌ ಸಿಂಗ್‌ ಅವರನ್ನು ಕೇಂದ್ರ ಸರ್ಕಾರವು ಹುದ್ದೆಯಿಂದ ಕೆಳಗಿಳಿಸಿದೆ. ಅವರ ಜಾಗಕ್ಕೆ ಪ್ರದೀಪ್‌ ಸಿಂಗ್‌ ಖರೋಲಾ ಅವರನ್ನು ನೇಮಿಸಿದೆ. ಶನಿವಾರ (ಜೂನ್‌ 22) ಸಿಬಿಐ ತನಿಖೆಗೆ ವಹಿಸಿದ ಕೇಂದ್ರ ಸರ್ಕಾರವು, “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿತ್ತು.

ಇದನ್ನೂ ಓದಿ: Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Continue Reading

ಶಿಕ್ಷಣ

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

ECE V/S CSE: ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ECE) ಮತ್ತು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ (CSE) ಈ ಎರಡರಲ್ಲಿ ಯಾವುದರ ಆಯ್ಕೆ ಉತ್ತಮ, ಯಾವ ಕೋರ್ಸ್ ತೆಗೆದುಕೊಂಡರೆ ಯಾವ ಉದ್ಯೋಗ (career guidance) ಪಡೆಯಬಹುದು? ಈ ಎರಡೂ ಕೋರ್ಸ್‌ಗಳ ವ್ಯತ್ಯಾಸ ಏನು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

ECE V/S CSE
Koo

ಸಿಇಟಿ ಕೌನ್ಸೆಲಿಂಗ್‌ಗೆ ದಿನಗಣನೆ (career guidance) ಆರಂಭವಾಗಿದೆ. ಪಿಯುಸಿ ಮುಗಿಸಿ ಸಿಇಟಿ ರ‍್ಯಾಂಕ್‌ ಪಡೆದಿರುವ ವಿದ್ಯಾರ್ಥಿಗಳು ಯಾವ ಕೋರ್ಸ್‌ ತೆಗೆದುಕೊಳ್ಳಬೇಕು ಎಂಬ ಯೋಚನೆಯಲ್ಲಿ ತೊಡಗಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ECE) ಹಾಗೂ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ (CSE) ಈ ಎರಡರಲ್ಲಿ ಯಾವುದು ಆಯ್ಕೆ (ECE V/S CSE) ಮಾಡಬೇಕು ಎನ್ನುವ ಗೊಂದಲವಿದೆಯೇ? ಯಾವ ಕೋರ್ಸ್ ನಮಗೆ ಉತ್ತಮ ಭವಿಷ್ಯಕ್ಕೆ ದಾರಿ ಮಾಡಿ ಕೊಡಬಹುದು ಎನ್ನುವ ಚಿಂತೆಯೇ? ಹಾಗಿದ್ದರೆ ಇಲ್ಲಿದೆ ಈ ಕುರಿತ ಸಂಪೂರ್ಣ ಮಾಹಿತಿ.

ಎಂಜಿನಿಯರಿಂಗ್ ಕೋರ್ಸ್ ಗಳಲ್ಲಿ (Engineering course) ಇಂದು ಆಯ್ಕೆಗಳು ಸಾಕಷ್ಟಿವೆ. ಅಸಂಖ್ಯಾತ ವಿದ್ಯಾರ್ಥಿಗಳು ತಾವು ಯಾವ ಕೋರ್ಸ್ ಪಡೆಯಬೇಕು ಎನ್ನುವ ಗೊಂದಲದಲ್ಲಿ ಕೊನೆಗೆ ಯಾವುದಾದರೊಂದು ಪಡೆದು ಬಿಡುತ್ತಾರೆ. ಸರಿಯಾದ ಆಯ್ಕೆ ಮಾಡಿದರೆ ಮಾತ್ರ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು.

ಇಸಿಇ ಅಥವಾ ಸಿಎಸ್‌ಇ

ಇಸಿಇ ಎಲೆಕ್ಟ್ರಾನಿಕ್ಸ್, ಸಂವಹನ ವ್ಯವಸ್ಥೆಗಳು ಮತ್ತು ಸಿಗ್ನಲ್ ಪ್ರೊಸೆಸಿಂಗ್ ಮೇಲೆ ಕೇಂದ್ರೀಕರಿಸುತ್ತದೆ. ಇದು ಸರ್ಕ್ಯೂಟ್‌ಗಳು, ಮೈಕ್ರೊಪ್ರೊಸೆಸರ್‌ ಮತ್ತು ಇಂಟಿಗ್ರೇಟೆಡ್ ಸರ್ಕ್ಯೂಟ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಕಲಿಸುತ್ತದೆ. ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಸ್ಮಾರ್ಟ್ ಹೋಮ್‌ಗಳವರೆಗೆ ಇಸಿಇ ಪದವೀಧರರು ನಮ್ಮೆಲ್ಲರನ್ನೂ ಸಂಪರ್ಕಿಸುವ ವೈರ್‌ಲೆಸ್ ಸಂವಹನ ಜಾಲದ ಬಗ್ಗೆ ಕಲಿಯುತ್ತಾರೆ.

ಸಿಎಸ್‌ಇ ವಿಭಾಗವು ಕಂಪ್ಯೂಟರ್ ವಿಜ್ಞಾನದ ತತ್ತ್ವಗಳು, ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಕಂಪ್ಯೂಟಿಂಗ್ ಮೇಲೆ ಕೇಂದ್ರೀಕರಿಸುತ್ತದೆ. ಇದು ಅಲ್ಗಾರಿದಮ್‌ಗಳು, ಡೇಟಾ ರಚನೆಗಳು ಮತ್ತು ಸಾಫ್ಟ್‌ವೇರ್ ಸಿಸ್ಟಮ್‌ಗಳನ್ನು ವಿನ್ಯಾಸಗೊಳಿಸುವುದು, ಕಾರ್ಯಗತಗೊಳಿಸುವುದು ಮತ್ತು ವಿಶ್ಲೇಷಿಸುವುದನ್ನು ಒಳಗೊಂಡಿರುತ್ತದೆ. ವಿಡಿಯೋ ಗೇಮ್‌ಗಳಿಂದ ಕೃತಕ ಬುದ್ಧಿಮತ್ತೆಯವರೆಗೆ ಸಿಎಸ್‌ಇ ಪದವೀಧರರು ತಮ್ಮ ಕೋಡಿಂಗ್ ಪರಿಣತಿಯೊಂದಿಗೆ ಉದ್ಯಮಗಳನ್ನು ಕ್ರಾಂತಿಗೊಳಿಸುವುದರ ಬಗ್ಗೆ ಕಲಿಯುತ್ತಾರೆ.


ಇಸಿಇ ಮತ್ತು ಸಿಎಸ್‌ಇ ನಡುವಿನ ಪ್ರಮುಖ ವ್ಯತ್ಯಾಸಗಳೇನು?

ಇಸಿಇ ಎನ್ನುವುದು ಹಾರ್ಡ್‌ವೇರ್ ಆಧಾರಿತವಾಗಿದ್ದು, ಸಿಎಸ್‌ಇ ಸಾಫ್ಟ್‌ವೇರ್ ಆಧಾರಿತವಾಗಿದೆ.

ಇಸಿಇ ಎಲೆಕ್ಟ್ರಾನಿಕ್ಸ್, ಸಂವಹನ ವ್ಯವಸ್ಥೆ ಮತ್ತು ಸಿಗ್ನಲ್ ಪ್ರೊಸೆಸಿಂಗ್ ಅಧ್ಯಯನವಾಗಿದ್ದು, ಸಿಎಸ್‌ಇ ಎನ್ನುವುದು ಸಾಫ್ಟ್‌ವೇರ್ ಅಭಿವೃದ್ಧಿ, ಅಲ್ಗಾರಿದಮ್‌ಗಳು ಮತ್ತು ಸಮಸ್ಯೆ ಪರಿಹರಿಸುವ ಅಧ್ಯಯನವಾಗಿದೆ.

ಇಸಿಇ ಎಲೆಕ್ಟ್ರಾನಿಕ್ ಸಾಧನಗಳನ್ನು ವಿನ್ಯಾಸಗೊಳಿಸುತ್ತದೆ ಮತ್ತು ಅಭಿವೃದ್ಧಿಪಡಿಸುತ್ತದೆ ಮತ್ತು ಸಿಎಸ್‌ಇ ಸಾಫ್ಟ್ ವೇರ್ ಸಿಸ್ಟಮ್, ಅಲ್ಗಾರಿದಮ್‌ಗಳು ಮತ್ತು ಡೇಟಾ ರಚನೆಗಳನ್ನು ವಿನ್ಯಾಸ ಮತ್ತು ಅಳವಡಿಕೆ ಮಾಡುವ ಕೌಶಲವನ್ನು ಕಲಿಸುತ್ತದೆ.

ಇಸಿಇನಲ್ಲಿ ಸರ್ಕ್ಯೂಟ್ ಡಿಸೈನ್, ಸಿಗ್ನಲ್ ಪ್ರೊಸೆಸಿಂಗ್, ಸಂವಹನ ಕೌಶಲವನ್ನು ಕಲಿತರೆ, ಸಿಎಸ್ ಇ ನಲ್ಲಿ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್, ಅಲ್ಗಾರಿದಮ್‌, ಸಾಫ್ಟ್ ವೇರ್ ಅಭಿವೃದ್ಧಿಯನ್ನು ಕಲಿಯಬಹುದು.

ಇಸಿಇನಲ್ಲಿ ಗಣಿತ, ಮತ್ತು ಭೌತಶಾಸ್ತ್ರ ಪಠ್ಯಕ್ರಮವನ್ನು ಒಳಗೊಂಡಿದ್ದರೆ ಸಿಎಸ್ ಇ ಪಠ್ಯಕ್ರಮವು ಗಣಿತ ಮತ್ತು ಅಲ್ಗಾರಿದಮ್‌ಗಳನ್ನು ಒಳಗೊಂಡಿದೆ.

ಇಸಿಇನಲ್ಲಿ ಸರ್ಕ್ಯೂಟ್ ಥಿಯರಿ ಮತ್ತು ನೆಟ್ವರ್ಕ್ಸ್, ಸಂಕೇತಗಳು ಮತ್ತು ವ್ಯವಸ್ಥೆಗಳು, ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಸರ್ಕ್ಯೂಟ್‌ಗಳು.

ಯಾವುದರಲ್ಲಿ ಏನು ಕಲಿಯಬಹುದು?

ಡಿಜಿಟಲ್ ಎಲೆಕ್ಟ್ರಾನಿಕ್ಸ್, ವಿದ್ಯುತ್ಕಾಂತೀಯ ಕ್ಷೇತ್ರಗಳು ಮತ್ತು ಅಲೆಗಳ ಕುರಿತು ಅಧ್ಯಯನಕ್ಕೆ ಅವಕಾಶವಿದ್ದು, ಸಿಎಸ್‌ಇನಲ್ಲಿ ಡೇಟಾ ರಚನೆಗಳು ಮತ್ತು ಕ್ರಮಾವಳಿಗಳು, ಆಪರೇಟಿಂಗ್ ಸಿಸ್ಟಮ್ಸ್, ಡೇಟಾಬೇಸ್ ಮ್ಯಾನೇಜ್ಮೆಂಟ್ ಸಿಸ್ಟಮ್ಸ್, ಕಂಪ್ಯೂಟರ್ ನೆಟ್ವರ್ಕ್ಸ್, ವೆಬ್ ತಂತ್ರಜ್ಞಾನಗಳ ಕುರಿತು ಕಲಿಯಬಹುದು.

ತಂತ್ರಜ್ಞಾನ ಕ್ಷೇತ್ರದಲ್ಲಿ ಇಸಿಇಯಲ್ಲಿ ಇಂಟರ್ನೆಟ್ ಆಫ್ ಥಿಂಗ್ಸ್ (IoT), ಎಡ್ಜ್ ಕಂಪ್ಯೂಟಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್., ನವೀಕರಿಸಬಹುದಾದ ಶಕ್ತಿ, 5 ಜಿ ಇತ್ಯಾದಿಗಳನ್ನು ಕಲಿಸಿದರೆ, ಸಿಎಸ್ಇ ನಲ್ಲಿ ಕೃತಕ ಬುದ್ಧಿಮತ್ತೆ (AI), ಯಂತ್ರ ಕಲಿಕೆ (ML), ಕ್ಲೌಡ್ ಕಂಪ್ಯೂಟಿಂಗ್, ಬಿಗ್ ಡೇಟಾ ಅನಾಲಿಟಿಕ್ಸ್, ವರ್ಧಿತ ರಿಯಾಲಿಟಿ (AR), ವರ್ಚುವಲ್ ರಿಯಾಲಿಟಿ (ವಿಆರ್) ಬಗ್ಗೆ ಕಲಿಯಬಹುದು.

ಇದನ್ನೂ ಓದಿ: NTA Website: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಎನ್‌ಟಿಎ ವೆಬ್‌ಸೈಟ್‌ ಹ್ಯಾಕ್‌? ಸಂಸ್ಥೆ ಹೇಳೋದಿಷ್ಟು

ಉದ್ಯೋಗವಕಾಶ

ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್

ಇಸಿಇ ಕಲಿತವರಿಗೆ ದೂರಸಂಪರ್ಕ, ಎಂಬೆಡೆಡ್ ಸಿಸ್ಟಮ್ಸ್, ಸೆಮಿಕಂಡಕ್ಟರ್ ಉದ್ಯಮ, ಪವರ್ ಆಂಡ್ ಎನರ್ಜಿ, ರಕ್ಷಣಾ ಮತ್ತು ಏರೋಸ್ಪೇಸ್‌ನಲ್ಲಿ ಉದ್ಯೋಗಾವಕಾಶ ಲಭ್ಯವಿದೆ. ಈ ವಿಭಾಗದಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದವರು ಖಾಸಗಿ ಮಾತ್ರವಲ್ಲ, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರಿಯನ್ನೂ ಹೆಚ್ಚಿನ ಪ್ರಮಾಣದಲ್ಲಿ ಪಡೆಯಬಹುದು. ಮುಂಬರುವ ದಿನಗಳಲ್ಲಿ ಸೆಮಿ ಕಂಡಕ್ಟರ್‌ ಉದ್ಯಮ ಭಾರತದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದಲಿದೆ. ಹಾಗಾಗಿ ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್ ಓದಿದವರಿಗೆ ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ಈ ವಿಭಾಗದಲ್ಲಿ ಓದಿದವರು ಪೂರಕ ಕೋರ್ಸ್‌ಗಳನ್ನು ಮಾಡುವ ಮೂಲಕ ಸಾಫ್ಟ್‌ವೇರ್‌ ಉದ್ಯಮದಲ್ಲೂ ಉದ್ಯೋಗ ಗಿಟ್ಟಿಸಲು ಅವಕಾಶ ಇರುತ್ತದೆ. ಈ ವಿಭಾಗದಲ್ಲಿ ಕಂಪ್ಯೂಟರ್‌ ಸೈನ್ಸ್‌ಗೆ ಹೋಲಿಸಿದರೆ ವೇತನ ಪ್ಯಾಕೇಜ್‌ ಸದ್ಯ ಸ್ವಲ್ಪ ಕಡಿಮೆ ಇದೆ. ಆದರೆ ಆರ್ಥಿಕ ಕುಸಿತ ಇತ್ಯಾದಿ ಸಂದರ್ಭಗಳಲ್ಲಿ ದಿಢೀರ್‌ ಉದ್ಯೋಗ ಕುಸಿತ ಆಗುವ ಅಪಾಯ ಕಡಿಮೆ. ಕ್ರಿಯಾಶೀಲ ಮನಸ್ಸಿನ ಮತ್ತು ಸ್ವಂತ ಉದ್ದಿಮೆ ಸ್ಥಾಪಿಸುವ ಕನಸಿರುವ ಯುವ ಜನತೆಗೆ ಈ ವಿಭಾಗ ಸೂಕ್ತ.

ಕಂಪ್ಯೂಟರ್‌ ಸೈನ್ಸ್‌

ಸಿಎಸ್‌ಇ ಕಲಿತವರಿಗೆ ಸಾಫ್ಟ್‌ವೇರ್ ಅಭಿವೃದ್ಧಿ, ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್, ಕೃತಕ ಬುದ್ಧಿಮತ್ತೆ (AL) ಮತ್ತು ಯಂತ್ರ ಕಲಿಕೆ (ML), ಸೈಬರ್ ಭದ್ರತೆ, ವೆಬ್ ಅಭಿವೃದ್ಧಿ ಮತ್ತು ಇ-ಕಾಮರ್ಸ್ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಪಿಯುಸಿ ಮುಗಿಸಿದ ಬಹುತೇಕ ವಿದ್ಯಾರ್ಥಿಗಳ ಮೊದಲ ಆಯ್ಕೆ ಕಂಪ್ಯೂಟರ್‌ ಸೈನ್ಸ್‌ ಆಗಿರುತ್ತದೆ. ಸಾಫ್ಟ್‌ವೇರ್‌ ಉದ್ಯಮ ಅತ್ಯಂತ ವಿಶಾಲವಾಗಿದೆ. ಹಾಗಾಗಿ ಲಕ್ಷಾಂತರ ಉದ್ಯೋಗವಕಾಶ ಇಲ್ಲಿದೆ. ಕಂಪ್ಯೂಟರ್‌ ಸೈನ್ಸ್‌ನಲ್ಲಿ ಎಐ, ರೊಬಾಟಿಕ್‌, ಡೇಟಾ ಸೈನ್ಸ್‌ ಇತ್ಯಾದಿ ಹಲವಾರು ವಿಭಾಗಗಳಿವೆ. ಖ್ಯಾತನಾಮ ಸಾಫ್ಟ್‌ವೇರ್‌ ಬ್ರಾಂಡ್‌ನ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿದರೆ ಕೈತುಂಬ ಸಂಬಳ ಸಂಪಾದಿಸಬಹುದು. ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್ ವಿಭಾಗಕ್ಕೆ ಹೋಲಿಸಿದರೆ ಇಲ್ಲಿ ಸಂಬಳದ ಪ್ಯಾಕೇಜ್‌ ತುಸು ಹೆಚ್ಚೇ ಇರುತ್ತದೆ. ಆದರೆ ಇಲ್ಲಿ ಪೈಪೋಟಿಯೂ ವಿಪರೀತ ಹೆಚ್ಚಿದೆ. ತಂತ್ರಜ್ಞಾನ ಆಗಾಗ ಅಪ್‌ಡೇಟ್‌ ಆಗುತ್ತ ಇರುತ್ತದೆ. ಕಂಪ್ಯೂಟರ್‌ ಸೈನ್ಸ್‌ನಲ್ಲಿ ಎಂಜಿನಿಯರಿಂಗ್‌ ಓದಿದರೂ ಪೂರಕವಾಗಿ ಹೊಸ ಹೊಸ ತಂತ್ರಜ್ಞಾನದ ಕೋರ್ಸ್‌ ಕಲಿಯಲೇಬೇಕಾಗುತ್ತದೆ. ಇಲ್ಲಿ ಉದ್ಯೋಗವಕಾಶ ಹೆಚ್ಚಿದೆ, ಸಂಬಳವೂ ಹೆಚ್ಚಿದೆ. ಆದರೆ ಆಗಾಗ ಉಂಟಾಗುವ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಉದ್ಯೋಗ ಅಭದ್ರತೆಯ ಅಪಾಯವೂ ಇರತ್ತದೆ.

ಅಂತಿಮವಾಗಿ ಹೇಳಬೇಕೆಂದರೆ: ಪೋಷಕರ ಒತ್ತಾಯಕ್ಕೆ ಅಥವಾ ಯಾರೋ ಈ ಕೋರ್ಸ್‌ ಮಾಡಿದ್ದಾರೆ ಎಂಬ ಪ್ರಭಾವಕ್ಕೆ ಒಳಗಾಗದೆ ನಿಮಗೆ ಯಾವ ವಿಷಯದಲ್ಲಿ ಆಸಕ್ತಿ ಇದೆಯೋ ಆ ಕೋರ್ಸನ್ನೇ ಆಯ್ಕೆ ಮಾಡುವುದು ಉತ್ತಮ. ಏಕೆಂದರೆ ಬಿಇ ಅಥವಾ ಬಿಟೆಕ್‌ ಮುಗಿದ ಮೇಲೆ ಈ ಪದವಿಗಿಂತ ಹೆಚ್ಚಾಗಿ ನಿಮ್ಮ ಆಸಕ್ತಿ ಮತ್ತು ಕ್ರಿಯಾಶೀಲತೆಯ ಮೇಲೆ ನಿಮ್ಮ ಉದ್ಯೋಗದ ಉಜ್ವಲ ಭವಿಷ್ಯ ನಿಂತಿರುತ್ತದೆ.

Continue Reading

ಕರ್ನಾಟಕ

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

PGCET 2024: ಜುಲೈ 13 ಮತ್ತು 14ರಂದು ನಿಗದಿಯಾಗಿದ್ದ ಪಿಜಿಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.

VISTARANEWS.COM


on

PGCET 2024
Koo

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (PGCET 2024)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಈ ಹಿಂದೆ ಜುಲೈ 13 ರಂದು ಎಂಇ, ಎಂ ಟೆಕ್, ಎಂ ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಹಾಗೂ ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನಿಗದಿಯಾಗಿತ್ತು. ಆದರೆ, ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು 10ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪಿಜಿಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದು, ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು. ಪರೀಕ್ಷೆಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದ್ದು, ಜುಲೈ 7ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಜುಲೈ 9ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ https://kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

ಯುಜಿಸಿಇಟಿಗೆ ಜೂನ್ 29ರವರೆಗೆ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

UGCET 2024

ಬೆಂಗಳೂರು: ಯುಜಿಸಿಇಟಿ-2024ರ (UGCET 2024) ಆನ್‌ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ. ಎನ್, ಜೆಡ್- ಈ ಕ್ಲಾಸ್‌ಗಳನ್ನು ಕ್ಲೇಮ್‌ ಮಾಡಿರುವ ಹಾಗೂ ರ‍್ಯಾಂಕ್‌ ಪಡೆದಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ದಾಖಲಾತಿ ಪರಿಶೀಲನೆಯು ಜೂನ್ 25ರಿಂದ 29 ರವರೆಗೆ ಬೆಂಗಳೂರಿನ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಖುದ್ದು ಹಾಜರಾಗಲು ಸೂಚಿಸಿದ್ದಾರೆ. ಇನ್ನೂ “ವೈ” ಅರ್ಹತಾ ಕಂಡಿಕೆಯನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಎಂದೂ ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, [ಬಿ.ಎಸ್ಸಿ (ಆನರ್ಸ್) ಕೃಷಿ, ಬಿ.ಎಸ್ಸಿ (ಆನರ್ಸ್) (ರೇಷ್ಮೆ ಕೃಷಿ) ಮುಂತಾದವು], ಬಿ.ಎಸ್ಸಿ (ನರ್ಸಿಂಗ್), ಬಿ.ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ
ಇದು ಅನ್ವಯವಾಗುತ್ತದೆ.

ವಿದ್ಯಾರ್ಥಿಗಳು ತಮ್ಮ ರ‍್ಯಾಂಕ್‌ ಆಧರಿಸಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿರುವ ಇ-ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ಕಂಡಿಕೆಗೆ ಅನುಸಾರವಾಗಿ ಅವಶ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಅರ್ಹತಾ ಕಂಡಿಕೆ “ಎ”, “ಇ”, “ಎಫ್”, “ಜಿ”, “ಹೆಚ್”, “ಓ” ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಯುಜಿಸಿಇಟಿ-2024ರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುತ್ತಿದೆ. ಈ ಬಗ್ಗೆ ವಿವರ ಮಾಹಿತಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಸನ್ನ ತಿಳಿಸಿದ್ದಾರೆ.

UGCET 2024

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IND vs ENG Semi Final
ಕ್ರೀಡೆ46 mins ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ3 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ4 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ4 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು10 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌