ಬಳ್ಳಾರಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಪ್ರಕಟವಾಗಿದ್ದು, ಬಳ್ಳಾರಿ ನಗರದ ಜ್ಞಾನಾಮೃತ ಪಿಯು ಕಾಲೇಜಿಗೆ ಶೇ.100ರಷ್ಟು ಫಲಿತಾಂಶ ಬಂದಿದೆ.
ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ದೇವರಾಜ್ 600ಕ್ಕೆ 590 ಅಂಕಗಳನ್ನು ಪಡೆದು ಬಳ್ಳಾರಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದಿದ್ದಾನೆ. ಕನ್ನಡ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ಇದನ್ನೂ ಓದಿ: Chandrayaan-3 mission: ಇಸ್ರೋದ ಚಂದ್ರಯಾನ-3 ಟೀಮ್‌ಗೆ ಅಮೆರಿಕದ ಪ್ರಶಸ್ತಿ: ʼಸ್ಫೂರ್ತಿʼ ಎಂದ ಸ್ಪೇಸ್ ಫೌಂಡೇಶನ್
ಸತತ 4ನೇ ವರ್ಷವು ವಿಜ್ಞಾನ ಹಾಗೂ ವಾಣಿಜ್ಯ ಎರಡೂ ವಿಭಾಗದಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದು, ಶೇ.50 ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಹೆಚ್ಚಳ ಮುಂದುವರಿಕೆ; ಇಂದೂ ಏರಿದೆ ₹380; ಎಷ್ಟಿದೆ ದರ?
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಜಿ. ಗೌಡ, ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಗೌಡ, ಜ್ಞಾನಸುಧಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.