2nd PUC Result 2023 Supplementary Exams Fee and Other Details in kannada2nd PUC Result 2023 : ಪಾಸ್‌ ಆದವರು ಇದನ್ನು ಓದಬೇಕಾಗಿಲ್ಲ! ಫೇಲ್‌ ಆದವರು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ - Vistara News

ಪ್ರಮುಖ ಸುದ್ದಿ

2nd PUC Result 2023 : ಪಾಸ್‌ ಆದವರು ಇದನ್ನು ಓದಬೇಕಾಗಿಲ್ಲ! ಫೇಲ್‌ ಆದವರು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ (2nd PUC Result 2023). ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ (supplementary exam) ಬರೆಯಬಹುದಾಗಿದೆ. ಈ ಪರೀಕ್ಷೆಯ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

SSSLC Exam from March 25 2348 students registered in Koratagere taluk
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (kseeb) ದ್ವಿತೀಯ ಪಿಯುಸಿಯ ಫಲಿತಾಂಶ (2nd PUC Result 2023) ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ (supplementary exam) ಬರೆಯಬಹುದಾಗಿದೆ. ಈ ಪರೀಕ್ಷೆ ಬರೆಯಬೇಕಿರುವ ವಿದ್ಯಾರ್ಥಿಗಳು ಗಮನಿಸಬೇಕಾದ ವಿಷಯಗಳು ಇಲ್ಲಿವೆ.

ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಅಂಕಪಟ್ಟ ಅರ್ಜಿಗಳನ್ನು ಮಂಡಳಿಯಿಂದ ನೀಡಲಾಗುವುದಿಲ್ಲ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಳಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ ( result sheet) ಆಧಾರದ ಮೇಲೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

2023ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಮೂಲ ಅನುತ್ತೀರ್ಣ ಅಂಕಪಟ್ಟ/ಅರ್ಜಿ ಅಥವಾ ಹಿಂದಿನ ಎಂ.ಸಿ.ಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಪರೀಕ್ಷೆಗೆ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಮಂಡಳಿ ವಿವರಿಸಿದೆ.

    2022ರ ಆಗಸ್ಟ್‌ ನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಫಲಿತಾಂಶ ತಿರಸ್ಕರಿಸಿ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಇಚ್ಛೆಸಿದಲ್ಲಿ, ಅಂತಹ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿ/ಫಲಿತಾಂಶ ಪಟ್ಟಿಗಳ ಆಧಾರದ ಮೇಲೆ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ.

    ಇಂದಿನಿಂದಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್‌ 26 ದಂಡವಿಲ್ಲದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 27 ರಿಂದ ಮೇ 2 ರವರೆಗೆ 50 ರೂ. ದಂಡದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

    ಇತ್ತ ಗಮನಿಸಿ
    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 21-04-2023
    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-04-2023
    2023ನೇ ಸಾಲಿನ ಏಪ್ರಿಲ್/ಮೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-04-2023
    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-05-2023
    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-05-2023
    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2023

    ಶುಲ್ಕದಲ್ಲಿ ಬದಲಾವಣೆ ಇಲ್ಲ

    2018ರಲ್ಲಿ ಜಾರಿಗೆ ತಂದಂತೆ ಪೂರಕ ಪರೀಕ್ಷೆಗೆ ಈ ಬಾರಿಯೂ ಶುಲ್ಕ ವಿಧಿಸಲಾಗುತ್ತಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ
    ಒಂದು ವಿಷಯಕ್ಕೆ ರೂ. 140/-
    ಎರಡು ವಿಷಯಕ್ಕೆ ರೂ. 270/-
    ಮೂರು ಅಥವಾ ಹೆಚ್ಚಿನ ಎಷಯಗಳು ರೂ. 400/- ರೂ. ಶುಲ್ಕ ವಿಧಿಸಲಾಗುತ್ತದೆ.

    ಶುಲ್ಕ ಪಾವತಿಸಲು ವೇಳಾಪಟ್ಟಿ

    2nd PUC Result 2023 Supplementary Exams Fee and Other Details in kannada

    ಪೂರಕ ಪರೀಕ್ಷೆ ಯಾವಾಗ?

    ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಇಂದಿನಿಂದಲೇ ನೋಂದಣಿಗೆ ಅವಕಾಶ ನೀಡಲಾಗಿದೆ. ಏಪ್ರಿಲ್ ಕೊನೆ ವಾರದಲ್ಲಿ ಮರುಪರೀಕ್ಷೆಯ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

    ಹೆಚ್ಚಿನ ಮಾಹಿತಿಗೆ ಭೇಟಿನೀಡಬೇಕಾದ ವೆಬ್‌ಸೈಟ್‌ ವಿಳಾಸ: https://kseab.karnataka.gov.in

    ಇದನ್ನೂ ಓದಿ : 2nd PUC Result 2023: ಕೂಲಿ ಮಾಡುವವರ ಮಗ ರಾಹುಲ್‌ ಈಗ ಪಿಯುಸಿ ಟಾಪರ್‌! ಸಾಧನೆಗೆ ಅಡ್ಡಿಯಾಗದ ಬಡತನ

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಭವಿಷ್ಯ

    Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

    Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    VISTARANEWS.COM


    on

    By

    Dina Bhavishya
    Koo

    ಚಂದ್ರನು ವೃಷಭ ರಾಶಿಯಿಂದ ಬುಧವಾರ ರಾತ್ರಿ 07:20ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ,ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ.ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

    ಇಂದಿನ ಪಂಚಾಂಗ (kannada panchanga) (08-05-2024)

    ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
    ತಿಥಿ: ಅಮಾವಾಸ್ಯೆ 08:50 ವಾರ: ಬುಧವಾರ
    ನಕ್ಷತ್ರ: ಭರಣಿ 13:32 ಯೋಗ: ಸೌಭಾಗ್ಯ 17:39
    ಕರಣ: ನಾಗವಾನ್ 08:50 ಅಮೃತಕಾಲ: ಬೆಳಗ್ಗೆ 09:09 ರಿಂದ 10:37
    ದಿನದ ವಿಶೇಷ: ಅಕ್ಷ ತದಿಗೆ, ಅಮಾವಾಸ್ಯೆ

    ಸೂರ್ಯೋದಯ : 05:56   ಸೂರ್ಯಾಸ್ತ : 06:36

    ರಾಹುಕಾಲ :ಮಧ್ಯಾಹ್ನ 12.00 ರಿಂದ 1.30
    ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
    ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

    ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

    Horoscope Today

    ಮೇಷ: ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ ಇದು ಮನೆಯ ವಾತಾವರಣ ಹಾಳುಗೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

    Horoscope Today

    ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ.ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ.ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

    Horoscope Today

    ಮಿಥುನ: ಅನಿವಾರ್ಯವಾಗಿ ಖರ್ಚು, ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮವಾಗಿರಲಿದೆ, ಕೌಟುಂಬಿಕವಾಗಿ ಮಿಶ್ರಫಲ.
    ಅದೃಷ್ಟ ಸಂಖ್ಯೆ: 6

    Horoscope Today

    ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
    ಅದೃಷ್ಟ ಸಂಖ್ಯೆ: 6

    Horoscope Today

    ಸಿಂಹ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

    Horoscope Today

    ಕನ್ಯಾ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ,ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

    ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

    Horoscope Today

    ತುಲಾ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
    ಅದೃಷ್ಟ ಸಂಖ್ಯೆ: 7

    Horoscope Today

    ವೃಶ್ಚಿಕ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಇರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
    ಅದೃಷ್ಟ ಸಂಖ್ಯೆ: 5

    Horoscope Today

    ಧನಸ್ಸು: ದೈಹಿಕವಾಗಿ ಹಾಗೂ ಮಾನಸಿಕವಾಗಿ ಒತ್ತಡಕ್ಕೆ ಸಿಲುಕುವಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ.
    ಅದೃಷ್ಟ ಸಂಖ್ಯೆ: 4

    Horoscope Today

    ಮಕರ: ಹೂಡಿಕೆ ಮಾಡುವಾಗ ಆಲೋಚಿಸಿ ಮುಂದುವರಿಯಿರಿ. ಹೊಸ ಸ್ನೇಹಿತರ ಪರಿಚಯದಿಂದ ಉದ್ಯೋಗದಲ್ಲಿ ಲಾಭವಾಗಲಿದೆ. ಕೌಟುಂಬಿಕವಾಗಿ ಶುಭಫಲ.
    ಅದೃಷ್ಟ ಸಂಖ್ಯೆ: 4

    Horoscope Today

    ಕುಂಭ: ಅವಸರದಲ್ಲಿ ಯಾವ ಕೆಲಸವನ್ನು ಮಾಡಬೇಡಿ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
    ಅದೃಷ್ಟ ಸಂಖ್ಯೆ: 2

    Horoscope Today

    ಮೀನ: ಈ ದಿನ ಆರೋಗ್ಯ ಪರಿಪೂರ್ಣವಾಗಿರಲಿದೆ. ಗಾಡಿ ಓಡಿಸುವಾಗ ಎಚ್ಚರಿಕೆ ವಹಿಸಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
    ಅದೃಷ್ಟ ಸಂಖ್ಯೆ: 8

    Horoscope Today

    ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
    ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

    M: 9481854580 | pnaveenshastri@gmail.com

    Continue Reading

    ಕರ್ನಾಟಕ

    Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

    Lok Sabha Election 2024: ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿದೆ.

    VISTARANEWS.COM


    on

    Lok Sabha Election 2024
    ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತಗಟ್ಟೆಯಲ್ಲಿ ಚುನಾವಣೆ ಇವಿಎಂ, ವಿವಿ ಪ್ಯಾಟ್‌ ಸೇರಿ ಇತರೆ ಸಾಮಗ್ರಿಗಳನ್ನು ಭದ್ರಪಡಿಸಿದರು.
    Koo

    ಬೆಂಗಳೂರು: ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ 2ನೇ ಹಂತದ ಮತದಾನ (Lok Sabha Election 2024) ಮಂಗಳವಾರ ಮುಕ್ತಾಯವಾಯಿತು. ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನೆರವೇರಿದೆ. 2ನೇ ಹಂತದಲ್ಲಿ ಶೇ. 70.41 ಮತದಾನ (Voter Turnout) ದಾಖಲಾಗಿದ್ದು, ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂದಿದೆ.

    14 ಕ್ಷೇತ್ರಗಳಿಂದ 227 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮತದಾನ ಮುಕ್ತಾಯವಾಗಿದ್ದರಿಂದ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದ್ದು, ಜೂನ್‌ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.76.99 ಮತದಾನವಾಗಿದ್ದು, ಕಲಬುರಗಿ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ 61.73 ಮತದಾನವಾಗಿದೆ. ಇನ್ನೂ ಈ ಬಾರಿ ದಕ್ಷಿಣ ಕರ್ನಾಟಕಕ್ಕೆ (ಶೇ.69.23) ಹೋಲಿಸಿದರೆ ಉತ್ತರ ಕರ್ನಾಟಕವೇ(ಶೇ.70.41) ಶೇಕಡಾವಾರು ಮತದಾನದಲ್ಲಿ ಮುಂದಿದೆ.

    ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮಂಗಳವಾರ ಮುಗಿದಿರುವ 2ನೇ ಹಂತದ ಚುನಾವಣೆಯಲ್ಲಿ ಶೇ. 70.41 ಮತದಾನ ದಾಖಲಾಗಿದೆ. ಇನ್ನು 2019 ಚುನಾವಣೆಯ ಮೊದಲ ಹಂತದಲ್ಲಿ ಶೇ. 68.96, ಎರಡನೇ ಹಂತದಲ್ಲಿ 68.66 ಮತದಾನವಾಗಿತ್ತು.

    ಇದನ್ನೂ ಓದಿ | West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

    ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

    ಕ್ಷೇತ್ರ20242019
    ಚಿಕ್ಕೋಡಿಶೇ. 76.99ಶೇ. 75.62
    ಬೆಳಗಾವಿಶೇ. 71ಶೇ. 67.84
    ಬಾಗಲಕೋಟೆ
    ಶೇ.70.10ಶೇ. 70.70
    ವಿಜಯಪುರ
    ಶೇ. 64.71ಶೇ.61.89
    ಕಲಬುರಗಿ
    ಶೇ. 61.73ಶೇ. 61.18
    ರಾಯಚೂರುಶೇ. 64.10ಶೇ. 58.34
    ಬೀದರ್
    ಶೇ. 63.55ಶೇ. 63
    ಕೊಪ್ಪಳ
    ಶೇ. 69.87ಶೇ. 68.56
    ಬಳ್ಳಾರಿ
    ಶೇ.72.35ಶೇ. 69.76
    ಹಾವೇರಿ
    ಶೇ.76.78ಶೇ. 74.21
    ಧಾರವಾಡ
    ಶೇ. 72.53ಶೇ. 70.29
    ಉತ್ತರ ಕನ್ನಡ
    ಶೇ. 73.52ಶೇ. 74.16
    ದಾವಣಗೆರೆ
    ಶೇ. 76.23ಶೇ. 73.19
    ಶಿವಮೊಗ್ಗಶೇ. 76.05
    ಶೇ. 76.58
    ಒಟ್ಟು ಶೇ. ಮತದಾನ ಶೇ. 70.41

    ಉತ್ಸಾಹದಿಂದ ಹಕ್ಕು ಚಲಾವಣೆ

    ಯುವಕ-ಯುವತಿಯರು, ಮಹಿಳೆಯರು, ವೃದ್ಧರು ಸೇರಿ ಎಲ್ಲ ವಯೋಮಾನದ ಮತಾದಾರರು ಅತ್ಯಂತ ಉತ್ಸಾಹದಿಂದ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ಮತ ಚಲಾಯಿಸುವ ಮೂಲಕ ಸಂಭ್ರಮಿಸಿದರು. ಇನ್ನು ಹಲವೆಡೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು, ವೃದ್ಧರು, ಶತಾಯುಷಿ ಮತದಾರರು ಹಕ್ಕು ಚಲಾವಣೆ ಮಾಡುವ ಮೂಲಕ ಯುವ ಮತದಾರರಿಗೆ ಮಾದರಿಯಾದರು.

    ಇದನ್ನೂ ಓದಿ | Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

    ಗಮನ ಸೆಳೆದ ವಿಷಯಾಧಾರಿತ ಮತಗಟ್ಟೆಗಳು

    ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಉಪ್ಪಾರಗೇರಿಯಲ್ಲಿ ಸಾಂಪ್ರದಾಯಿಕ ಮತಗಟ್ಟೆ ಮತದಾರರನ್ನು ಆಕರ್ಷಿಸಿತು.

    ಎರಡನೇ ಹಂತದ ಮತದಾನದಲ್ಲಿ ವಿಭಿನ್ನ ವಿಷಯಾಧಾರಿತ ಮತಗಟ್ಟೆಗಳು ಗಮನಸೆಳೆದವು. ಮಹಿಳೆಯರಿಂದ ಕಾರ್ಯ ನಿರ್ವಹಿಸಲ್ಪಡುವ ಮಾದರಿ ಮತಗಟ್ಟೆಯಾದ ಸಖಿ ಮತಗಟ್ಟೆ, ಅದೇ ರೀತಿ ವಿಶೇಷ ಚೇತನರ ಮಾದರಿ ಮತಗಟ್ಟೆ, ಸಾಂಪ್ರದಾಯಿಕ ಮತಗಟ್ಟೆ, ಗ್ರೀನ್ ಬೂತ್, ಯುವ ಮತಗಟ್ಟೆಗಳು ಮತದಾರರನ್ನು ಆಕರ್ಷಿಸಿದವು.

    ಕಾಗವಾಡದಲ್ಲಿ ಶತಾಯುಷಿ ಮಹಿಳೆ ಮತದಾನ

    ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ 103 ವಯಸ್ಸಿನ ಹಿರಿಯ ಮಹಿಳೆ ನೀಲವ್ವ ಶಿವಗೌಡ ಗಾಳಿ ಅವರು ಉತ್ಸಾಹದಿಂದ ಮತ ಚಲಾಯಿಸಿದರು. ಅದೇ ರೀತಿ ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ತಮ್ಮ 96 ವರ್ಷದ ಇಳಿ ವಯಸ್ಸಿನಲ್ಲಿ ಸಿದ್ದವ್ವ ಡೊನೂರ ಅವರು ಮರಿಮೊಮ್ಮಗಳೊಡನೆ ಮಸಬಿನಾಳ ಗ್ರಾಮದ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸಿ ಎಲ್ಲರಿಗೂ ಆದರ್ಶರಾದರು.

    ಸವದತ್ತಿ ತಾಲೂಕಿನ ಆಲದಕಟ್ಟಿ ಕೆ.ಎಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಕಟ್ಟಿ ಕೆ.ಎಂ ಗ್ರಾಮದ ನಿವಾಸಿ ಅಂತಾರಾಷ್ಟ್ರೀಯ ಮಟ್ಟದ ವ್ಹೀಲ್‌ಚೇರ್‌ ಬಾಸ್ಕೆಟ್ ಬಾಲ್ ಕ್ರೀಡಾಪಟು ಕುಮಾರಿ ಲಕ್ಷ್ಮೀ ರಾಯಪ್ಪ ರಾಯಣ್ಣವರ ಅವರು ಸ್ವಗ್ರಾಮದಲ್ಲಿ ಮತ ಚಲಾಯಿಸಿ ಅನಿಸಿಕೆ ಹಂಚಿಕೊಂಡರು. ಇನ್ನು ಅಂತಾರಾಷ್ಟ್ರೀಯ ಈಜುಗಾರ ವಿಶೇಷ ಮತದಾರರಾದ ಮೊಯಿನ್ ಅವರು ಬೆಳಗಾವಿ ನಗರದಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸಿದರು.

    ಇದನ್ನೂ ಓದಿ | Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

    ಹಲವೆಡೆ ಮತದಾನ ಬಹಿಷ್ಕಾರ

    ವಿವಿಧ ಕಾರಣಗಳಿಗಾಗಿ ಹಲವೆಡೆ ಜನರು ಮತದಾನ ಬಹಿಷ್ಕಾರ ಮಾಡಿರುವುದು ಕಂಡುಬಂದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ 18ನೇ ವಾರ್ಡ್‌ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು ಪ್ರಕರಣ ಖಂಡಿಸಿ ಮತಗಟ್ಟೆ ಸಂಖ್ಯೆ 147 ರಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದರು. ಅದೇ ರೀತಿ ಕುಕನೂರು ತಾಲೂಕಿನ ಗುದ್ನೆಪ್ಪನಮಠ ಗ್ರಾಮದಲ್ಲಿ ಸೇವಾದಾರರ ಭೂಮಿಯನ್ನು ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಒತ್ತುವರಿ ವಿರೋಧಿಸಿ ಮತದಾನ ಬಹಿಷ್ಕಾರವಾಗಿದೆ.

    ರಾಯಚೂರಿನ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಮತಗಟ್ಟೆ ಸಂಖ್ಯೆ 254 ಹಾಗೂ 255 ರಲ್ಲಿ ಮತದಾನ ಸ್ಥಗಿತವಾಗಿತ್ತು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡದ ಹಿನ್ನೆಲೆ ಮತದಾರರು ಮತ ಹಾಕಲಿಲ್ಲ. ಕಂದಾಯ ಗ್ರಾಮ ಮಾಡಿ ಮೂಲಭೂತ ಸೌಲಭ್ಯ ನೀಡಲು ಆಗ್ರಹಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಳವ ತರ್ಲಗಟ್ಟ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿದೆ.

    ವೋಟರ್‌ ಲಿಸ್ಟ್‌ನಲ್ಲಿ ಹೆಸರು ಡಿಲೀಟ್; ಮತದಾರರ ಆಕ್ರೋಶ

    ಹುಬ್ಬಳ್ಳಿ: ಮತಗಟ್ಟೆಯಲ್ಲಿ 200 ರಿಂದ 300 ಜನ ಮತದಾರರ ಹೆಸರುಗಳು ಡಿಲೀಟ್ ಆಗಿವೆ ಎಂದು ಮತಗಟ್ಟೆ ಮುಂದೆ ಮತದಾರರು ಆಕ್ರೋಶ ಹೊರಹಾಕಿದ ಘಟನೆ ಹುಬ್ಬಳ್ಳಿಯ ಪೆಂಡಾರಗಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆಯಿತು. ಪೆಂಡಾರಗಲ್ಲಿಯ ಮತಗಟ್ಟೆ ಸಂಖ್ಯೆ 26 ಹಾಗೂ 27 ರಲ್ಲಿ ಹಲವು ಹೆಸರು ನಾಪತ್ತೆಯಾಗಿವೆ ಎಂದು ಮತದಾರರು ಕಿಡಿಕಾರಿದರು.

    ಇದನ್ನೂ ಓದಿ | Lok Sabha Election: 3ನೇ ಹಂತದಲ್ಲಿ ಶೇ.60ರಷ್ಟು ಮತದಾನ, ಕಳೆದ ಬಾರಿಗಿಂತಲೂ ಕಡಿಮೆ

    ಬಿಜೆಪಿ ಪರ‌ ಮತ ಹಾಕಿ ಎಂದ ಅಧಿಕಾರಿ ವಿರುದ್ಧ ಆಕ್ರೋಶ

    ಚಿಕ್ಕೋಡಿ: ಬಿಜೆಪಿ ಪರ‌ ಮತ ಚಲಾಯಿಸುವಂತೆ ಮತಗಟ್ಟೆ ಒಳಗಿನ ಅಧಿಕಾರಿ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ಎದುರು ಪ್ರತಿಭಟನೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋಟೆಬಾಗ ಶಾಲೆಯ ಬೂತ್ ನಂಬರ್ 162 ರಲ್ಲಿ ನಡೆಯಿತು. ಮಹಿಳೆಯರಿಗೆ ಬಿಜೆಪಿ ಪರ ಮತಚಲಾಯಿಸುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎಂದು ಮತಗಟ್ಟೆಗೆ ಕೈ ಕಾರ್ಯಕರ್ತರು ಆಗಮಿಸಿ ಆಕ್ರೋಶ ಹೊರಹಾಕಿದರು. ಇದರಿಂದ ಅವರನ್ನು ತಡೆಯಲು ಹೋದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

    ಮೊದಲ ಹಂತದ ಚುನಾವಣೆಯಲ್ಲಿ ಶೇ.69.23 ಮತದಾನ

    ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಏ.26ರಂದು ನಡೆದಿತ್ತು. ಬೆಂಗಳೂರು, ಮೈಸೂರು ಸೇರಿ 14 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿತ್ತು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿತ್ತು.

    ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

    ಕ್ಷೇತ್ರ20242019
    ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
    ಹಾಸನಶೇ. 77.51ಶೇ. 77.35
    ದಕ್ಷಿಣ ಕನ್ನಡ
    ಶೇ. 77.43ಶೇ. 77.99
    ಚಿತ್ರದುರ್ಗ
    ಶೇ. 73.11ಶೇ. 70.80
    ತುಮಕೂರು
    ಶೇ. 77.70ಶೇ. 77.43
    ಮಂಡ್ಯಶೇ. 81.48ಶೇ. 80.59
    ಮೈಸೂರುಕೊಡಗು
    ಶೇ. 70.45ಶೇ. 69.51
    ಚಾಮರಾಜನಗರ
    ಶೇ. 76.59ಶೇ. 75.35
    ಬೆಂಗಳೂರು ಗ್ರಾಮಾಂತರ
    ಶೇ.67.29ಶೇ. 64.98
    ಬೆಂಗಳೂರು ಉತ್ತರ
    ಶೇ.54.42ಶೇ. 54.76
    ಬೆಂಗಳೂರು ಸೆಂಟ್ರಲ್‌
    ಶೇ. 52.81ಶೇ. 54.32
    ಬೆಂಗಳೂರು ದಕ್ಷಿಣ
    ಶೇ. 53.15ಶೇ. 53.70
    ಚಿಕ್ಕಬಳ್ಳಾಪುರ
    ಶೇ. 76.82ಶೇ. 76.74
    ಕೋಲಾರಶೇ. 78.07
    ಶೇ. 77.25
    ಒಟ್ಟು ಶೇಕಡಾವಾರು ಮತದಾನ 69.23

    2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?

    2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

    Continue Reading

    ಪ್ರಮುಖ ಸುದ್ದಿ

    Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

    Mayawati: ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ.

    VISTARANEWS.COM


    on

    Mayawati
    Koo

    ಲಖನೌ: ಬಹುಜನ ಸಮಾಜ ಪಕ್ಷದ (BSP) ವರಿಷ್ಠ ನಾಯಕಿ ಮಾಯಾವತಿ (Mayawati) ಅವರು ಸೋದರಳಿಯ ಆಕಾಶ್‌ ಆನಂದ್‌ (Akash Anand) ಅವರನ್ನು ತಮ್ಮ ಉತ್ತರಾಧಿಕಾರಿ ಹುದ್ದೆಯಿಂದ ವಜಾಗೊಳಿಸಿದ್ದಾರೆ. ನೇಮಕ ಮಾಡಿದ ಐದೇ ತಿಂಗಳಲ್ಲಿ ಬಿಎಸ್‌ಪಿಯ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದಲೂ ಮಾಯಾವತಿಯವರು ವಜಾಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಮಾಯಾವತಿಯವರು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಭಾರಿ ಚರ್ಚೆಗೂ ಗ್ರಾಸವಾಗಿದೆ.

    ಆಕಾಶ್‌ ಆನಂದ್‌ ಅವರನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿರುವ ಕುರಿತು ಮಾಯಾವತಿಯವರೇ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. “ಆಕಾಶ್‌ ಆನಂದ್‌ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಗಳನ್ನು ನಿಯೋಜಿಸಲಾಗಿತ್ತು. ಆದರೆ, ಬದಲಾದ ಸಾಮಾಜಿಕ ವ್ಯವಸ್ಥೆ, ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಷ್ಟ್ರೀಯ ಸಂಚಾಲಕ ಹಾಗೂ ಉತ್ತರಾಧಿಕಾರಿ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಈಗಲೂ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಪಾಲಿಸಲು ಕಟಿಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

    ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಮೊದಲಿನಂತೆ ಸಹೋದರ, ಆಕಾಶ್‌ ಆನಂದ್‌ ಅವರ ತಂದೆ ಆನಂದ್‌ ಕುಮಾರ್‌ ಅವರು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂಬುದಾಗಿ ಮಾಯಾವತಿ ಹೇಳೀದ್ದಾರೆ.

    ಯಾರಿವರು ಆಕಾಶ್‌ ಆನಂದ್?

    ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

    ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

    ಇದನ್ನೂ ಓದಿ: Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

    Continue Reading

    ಪ್ರಮುಖ ಸುದ್ದಿ

    IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

    IPL 2024: ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

    VISTARANEWS.COM


    on

    IPL 2024
    Koo

    ನವ ದೆಹಲಿ : ಜಿದ್ದಾಜಿದ್ದಿನಿಂದ ಕೂಡಿದ್ದ ಐಪಿಎಲ್​ 17ನೇ ಆವೃತ್ತಿಯ (IPL 2024) 56ನೇ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ 20 ರನ್​ಗಳಿಂದ ಗೆಲುವು ಸಾಧಿಸಿದೆ. ಗೆಲ್ಲಲೇಬೇಕಾದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಆಟಗಾರರು ಗೆಲುವು ತಮ್ಮದಾಗಿಸಿಕೊಂಡು. ಇದು ಡೆಲ್ಲಿ ತಂಡದಕ್ಕೆ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 6ನೇ ಗೆಲುವಾಗಿದೆ. 12 ಅಂಕಗಳನ್ನು ಸಂಪಾದಿಸಿರುವ ರಿಷಭ್​ ಪಂತ್ ಬಳಗ ಲಕ್ನೊ ಸೂಪರ್ ಜೈಂಟ್ಸ್​ ತಂಡವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿತು. ಅತ್ತ ರಾಜಸ್ಥಾನ್ ತಂಡ ಆಡಿರುವ 11 ಪಂದ್ಯಗಳಲ್ಲಿ 3ನೇ ಸೋಲಿಗೆ ಒಳಗಾಯಿತು. ಆದಾಗ್ಯೂ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ.

    ಇಲ್ಲಿನ ಅರುಣ್​ ಜೇಟ್ಲಿ ಕ್ರಿಕ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

    ಸಂಜು ಹೋರಾಟ ವ್ಯರ್ಥ

    ಸಂಜು ಸ್ಯಾಮ್ಸನ್​ 46 ಎಸೆತಕ್ಕೆ 86 ರನ್ ಬಾರಿಸಿದ್ದ ತನಕ ಪಂದ್ಯ ರಾಜಸ್ಥಾನ್ ತಂಡದ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನಗೊಳ್ಳುತ್ತಿದ್ದಂತೆ ಏಕಾಏಕಿ ಕುಸಿತ ಕಂಡ ಡೆಲ್ಲಿ ಕ್ಯಾಪಿಟಲ್ಸ್ ಬಳಗ ಸೋಲಿಗೆ ಸಿಲುಕಿತು. ಕುಲ್ದೀಪ್​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಏತನ್ಮಧ್ಯೆ ಸಂಜು ಸ್ಯಾಮ್ಸನ್​ ವಿಕೆಟ್ ವಿವಾದಾತ್ಮಕ ವಿಕೆಟ್ ಆಗಿ ಪರಿವರ್ತನೆಗೊಂಡಿತು. ಮುಖೇಶ್ ಕುಮಾರ್​ ಎಸೆತವನ್ನು ಸಂಜು ಬೌಂಡರಿ ಲೈನ್ ಮೇಲೆ ಹೊಡೆಯಲು ಯತ್ನಿಸಿದ್ದರು. ಆದರೆ, ಲೈನ್​ನಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿದ ಶಾಯ್​ ಹೋಪ್ ಕ್ಯಾಚ್ ನೀಡಿದರು. ಥರ್ಡ್​ ಅಂಪೈರ್ ಅದನ್ನು ಮರುಪರಿಶೀಲಿಸಿ ಔಟ್​ ನೀಡಿದರು. ಆದರೆ, ಸಂಜು ಸ್ಯಾಮ್ಸನ್​ ಫೀಲ್ಡರ್ ಕಾಲು ಬೌಂಡರಿ ಲೈನ್​ಗೆ ತಾಗಿದೆ ಎಂದು ಅಂಪೈರ್​ಗಳ ಜತೆ ವಾದ ಮಾಡಿದರು.

    ರಾಜಸ್ಥಾನ್ ರಾಯಲ್ಸ್​ ಗುರಿ ಬೆನ್ನಟ್ಟುವ ಹಾದಿಯಲ್ಲಿ ಆರಂಭಿಕ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್​ 4 ರನ್​ಗೆ ಔಟಾದರೆ ಜೋಸ್ ಬಟ್ಲರ್​ 19 ರನ್ ಬಾರಿಸಿದರು. ರಿಯಾನ್ ಪರಾಗ್​ 27 ಹಾಗೂ ಶುಭಂ ದುಬೆ 25 ರನ್ ಬಾರಿಸಿ ಗೆಲುವಿನ ಕನಸು ಬಿತ್ತಿದರು. ಆದರೆ, ಕೊನೇ ಹಂತದಲ್ಲಿ ಡೆಲ್ಲಿ ಬೌಲರ್​ಗಳು ಗೆಲುವಿನ ಅವಕಾಶವನ್ನು ತಮ್ಮದಾಗಿಸಿಕೊಂಡರು.

    ಉತ್ತಮ ಆರಂಭ

    ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ದೊರಕಿತು. ಪ್ರೇಸರ್ ಮೆಕ್​ಗುರ್ಕ್​ 20 ಎಸೆತಕ್ಕೆ 50 ರನ್​ ಬಾರಿಸಿದರೆ ಅಭಿಷೇಕ್ ಪೊರೆಲ್​ 65 ರನ್​ ಬಾರಿಸಿದರು. ಶಾಯ್​ ಹೋಪ್​ ವಿಫಲರಾಗಿ 1 ರನ್​ಗೆ ಔಟಾದಾಗ ಡೆಲ್ಲಿ ರನ್ ಗಳಿಕೆ ವೇಗ ಕಡಿಮೆಯಾಯಿತು. ಅಕ್ಷರ್ ಪಟೇಲ್​ ಹಾಗೂ ರಿಷಭ್​ ಪಂತ್​ ತಲಾ 15 ರನ್ ಬಾರಿಸಿದರು. ಆದರೆ, ಕೊನೇ ಹಂತದಲ್ಲಿ ಟ್ರಿಸ್ಟಾನ್​ ಸ್ಟಬ್ಸ್​​ 20 ಎಸೆತಕ್ಕೆ 41 ರನ್ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು.

    ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್​ ಅಶ್ವಿನ್​ 24 ರನ್​ಗಳ ವೆಚ್ಚದಲ್ಲಿ 3 ವಿಕೆಟ್​ ಉರುಳಿಸುವ ಮೂಲಕ ಉತ್ತಮ ಸಾಧನೆ ಮಾಡಿದರು.

    Continue Reading
    Advertisement
    Dina Bhavishya
    ಭವಿಷ್ಯ15 mins ago

    Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

    70.94 percent voting in Koppal Lok Sabha constituency says Koppal DC Nalin Atul
    ಕೊಪ್ಪಳ5 hours ago

    Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

    Rampura PSI Mahesh Hosapete admitted to the hospital Hanagal village road accident injured persons
    ಕರ್ನಾಟಕ5 hours ago

    Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

    Lok Sabha Election 2024
    ಕರ್ನಾಟಕ5 hours ago

    Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

    Mayawati
    ಪ್ರಮುಖ ಸುದ್ದಿ5 hours ago

    Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

    IPL 2024
    ಪ್ರಮುಖ ಸುದ್ದಿ6 hours ago

    IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

    Music Festival
    ಬೆಂಗಳೂರು6 hours ago

    Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

    Amanatullah Khan
    ದೇಶ6 hours ago

    Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

    Yuzvendra Chahal
    ಕ್ರಿಕೆಟ್6 hours ago

    Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

    Bescom Helpline
    ಕರ್ನಾಟಕ6 hours ago

    BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

    Sharmitha Gowda in bikini
    ಕಿರುತೆರೆ7 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ7 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ5 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ7 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ6 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Dina Bhavishya
    ಭವಿಷ್ಯ15 mins ago

    Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

    Prajwal Revanna Case HD Revanna has severe chest pain Admission in Victoria
    ರಾಜಕೀಯ8 hours ago

    Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

    Karnataka Weather Forecast
    ಮಳೆ11 hours ago

    Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

    Prajwal Revanna Case Government work against Revanna HD Kumaraswamy gives details of the case
    ರಾಜಕೀಯ13 hours ago

    Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

    Prajwal Revanna Case 2nd accused in KR Nagar victim abduction case sent to SIT custody Trouble for Revanna
    ಕ್ರೈಂ1 day ago

    Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

    karnataka weather forecast
    ಮಳೆ1 day ago

    Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

    Prajwal Revanna Case DK Shivakumar behind Prajwal video leak Devaraje Gowda demands CBI probe
    ಕ್ರೈಂ1 day ago

    Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

    Dina bhavishya
    ಭವಿಷ್ಯ2 days ago

    Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

    Prajwal Revanna Case HD Revanna sent to judicial custody Shift to Parappana Agrahara
    ಕ್ರೈಂ2 days ago

    Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

    Prajwal Revanna Case No evidence against me its a conspiracy says HD Revanna
    ಕರ್ನಾಟಕ2 days ago

    Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

    ಟ್ರೆಂಡಿಂಗ್‌