ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (kseeb) ದ್ವಿತೀಯ ಪಿಯುಸಿಯ ಫಲಿತಾಂಶ (2nd PUC Result 2023) ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ (supplementary exam) ಬರೆಯಬಹುದಾಗಿದೆ. ಈ ಪರೀಕ್ಷೆ ಬರೆಯಬೇಕಿರುವ ವಿದ್ಯಾರ್ಥಿಗಳು ಗಮನಿಸಬೇಕಾದ ವಿಷಯಗಳು ಇಲ್ಲಿವೆ.
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಅಂಕಪಟ್ಟ ಅರ್ಜಿಗಳನ್ನು ಮಂಡಳಿಯಿಂದ ನೀಡಲಾಗುವುದಿಲ್ಲ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಳಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ ( result sheet) ಆಧಾರದ ಮೇಲೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
2023ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಮೂಲ ಅನುತ್ತೀರ್ಣ ಅಂಕಪಟ್ಟ/ಅರ್ಜಿ ಅಥವಾ ಹಿಂದಿನ ಎಂ.ಸಿ.ಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಪರೀಕ್ಷೆಗೆ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಮಂಡಳಿ ವಿವರಿಸಿದೆ.
2022ರ ಆಗಸ್ಟ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಫಲಿತಾಂಶ ತಿರಸ್ಕರಿಸಿ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಇಚ್ಛೆಸಿದಲ್ಲಿ, ಅಂತಹ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿ/ಫಲಿತಾಂಶ ಪಟ್ಟಿಗಳ ಆಧಾರದ ಮೇಲೆ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ.
ಇಂದಿನಿಂದಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 26 ದಂಡವಿಲ್ಲದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 27 ರಿಂದ ಮೇ 2 ರವರೆಗೆ 50 ರೂ. ದಂಡದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇತ್ತ ಗಮನಿಸಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸ್ಕ್ಯಾನ್ಡ್ ಪ್ರತಿಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 21-04-2023
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸ್ಕ್ಯಾನ್ಡ್ ಪ್ರತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-04-2023
2023ನೇ ಸಾಲಿನ ಏಪ್ರಿಲ್/ಮೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸ್ಕ್ಯಾನ್ಡ್ ಪ್ರತಿಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-04-2023
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-05-2023
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-05-2023
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2023
ಶುಲ್ಕದಲ್ಲಿ ಬದಲಾವಣೆ ಇಲ್ಲ
2018ರಲ್ಲಿ ಜಾರಿಗೆ ತಂದಂತೆ ಪೂರಕ ಪರೀಕ್ಷೆಗೆ ಈ ಬಾರಿಯೂ ಶುಲ್ಕ ವಿಧಿಸಲಾಗುತ್ತಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ
ಒಂದು ವಿಷಯಕ್ಕೆ ರೂ. 140/-
ಎರಡು ವಿಷಯಕ್ಕೆ ರೂ. 270/-
ಮೂರು ಅಥವಾ ಹೆಚ್ಚಿನ ಎಷಯಗಳು ರೂ. 400/- ರೂ. ಶುಲ್ಕ ವಿಧಿಸಲಾಗುತ್ತದೆ.
ಶುಲ್ಕ ಪಾವತಿಸಲು ವೇಳಾಪಟ್ಟಿ
ಪೂರಕ ಪರೀಕ್ಷೆ ಯಾವಾಗ?
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಇಂದಿನಿಂದಲೇ ನೋಂದಣಿಗೆ ಅವಕಾಶ ನೀಡಲಾಗಿದೆ. ಏಪ್ರಿಲ್ ಕೊನೆ ವಾರದಲ್ಲಿ ಮರುಪರೀಕ್ಷೆಯ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಭೇಟಿನೀಡಬೇಕಾದ ವೆಬ್‌ಸೈಟ್ ವಿಳಾಸ: https://kseab.karnataka.gov.in
ಇದನ್ನೂ ಓದಿ : 2nd PUC Result 2023: ಕೂಲಿ ಮಾಡುವವರ ಮಗ ರಾಹುಲ್ ಈಗ ಪಿಯುಸಿ ಟಾಪರ್! ಸಾಧನೆಗೆ ಅಡ್ಡಿಯಾಗದ ಬಡತನ