2nd PUC Result: ಪಿಯುಸಿ ನಂತರ ಮುಂದೇನು? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ - Vistara News

ಶಿಕ್ಷಣ

2nd PUC Result: ಪಿಯುಸಿ ನಂತರ ಮುಂದೇನು? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ

2nd PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಇದರ ಜತೆಗೆ ಮುಂದೆ ಯಾವ ರೀತಿಯ ಕೋರ್ಸ್‌ ಆಯ್ಕೆ ಮಾಡಬೇಕು ಎನ್ನುವ ಗೊಂದಲ ಮೂಡುವುದು ಸಹಜ. ಸೈನ್ಸ್‌, ಆರ್ಟ್ಸ್‌, ಕಾಮರ್ಸ್‌ ವಿಷಯಗಳನ್ನು ಆಯ್ದುಕೊಂಡ ವಿದ್ಯಾರ್ಥಿಗಳು ಮುಂದೇನು ಮಾಡಬೇಕು? ಯಾವೆಲ್ಲ ಕ್ಷೇತ್ರಗಳಲ್ಲಿ ಉತ್ತಮ ಉದ್ಯೋಗಾವಕಾಶಗಳಿವೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

2nd PUC Result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಪ್ರಕಟವಾಗಿದೆ. ಏಪ್ರಿಲ್‌ 10ರಂದು ಫಲಿತಾಂಶವನ್ನು ಘೋಷಿಸಲಾಗಿದ್ದು, ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ.  ಈ ಮಧ್ಯೆ ದ್ವಿತೀಯ ಪಿಯುಸಿ ನಂತರ ಮುಂದೇನು? ಎನ್ನುವ ಗೊಂದಲ ಕಾಡುವುದು ಸಹಜ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ. ಅವಕಾಶಗಳನ್ನು ವೃತ್ತಿ ಸಂಬಂಧಿ ಮತ್ತು ಸಾಮಾನ್ಯ ಶಿಕ್ಷಣವೆಂದು ವಿಂಗಡಿಸಬಹುದು. ವೃತ್ತಿ ಸಂಬಂಧಿ ಶಿಕ್ಷಣ ವಿವಿಧ ಕಸುಬುಗಳ ಕುರಿತಂತೆ ಪ್ರಾಯೋಗಿಕ ತರಬೇತಿ ಮತ್ತು ಪರಿಣಿತಿಯನ್ನು ನೀಡುತ್ತದೆ. ಸಾಮಾನ್ಯ ಶಿಕ್ಷಣ ವ್ಯಕ್ತಿಯ ಜ್ಞಾನ, ಆಲೋಚನಾ ಶಕ್ತಿ ಮತ್ತು ಬುದ್ಧಿವಂತಿಕೆಯನ್ನು ಹೆಚ್ಚಿಸಲು ಸಹಕಾರಿಯಾಗಿರುತ್ತದೆ. ಜತೆಗೆ ಉನ್ನತ ಶಿಕ್ಷಣ ಪಡೆಯಲು ಮೂಲಭೂತ ಅವಶ್ಯಕತೆಯಾಗಿರುತ್ತದೆ.

ನೀವು ಪಿಯುಸಿಯಲ್ಲಿ ಆರ್ಟ್ಸ್‌ (ಕಲಾ) ಓದಿದ್ದರೆ, ಮುಂದೇನು ಓದಬಹುದು, ಯಾವ ಉದ್ಯೋಗ ಪಡೆಯಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ:

ನೀವು ಪಿಯುಸಿಯಲ್ಲಿ ವಿಜ್ಞಾನ (ಸೈನ್ಸ್‌) ವಿಭಾಗದಲ್ಲಿ ಓದಿದ್ದರೆ, ಮುಂದೇನು ಓದಬಹುದು, ಯಾವ ಉದ್ಯೋಗ ಪಡೆಯಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ:

ನೀವು ಪಿಯುಸಿಯಲ್ಲಿ ಕಾಮರ್ಸ್‌ (ವಾಣಿಜ್ಯ) ವಿಭಾಗದಲ್ಲಿ ಓದಿದ್ದರೆ, ಮುಂದೇನು ಓದಬಹುದು, ಯಾವ ಉದ್ಯೋಗ ಪಡೆಯಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ:

ನೀವು ಪಿಯುಸಿಯಲ್ಲಿ ಪಿಸಿಎಂಬಿ ಮತ್ತು ಪಿಸಿಬಿ ವಿಷಯ ಓದಿದ್ದರೆ, ಮುಂದೇನು ಓದಬಹುದು, ಯಾವ ಉದ್ಯೋಗ ಪಡೆಯಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ:

ಇದನ್ನೂ ಓದಿ: 2nd PUC Result: ಸ್ಕೋರ್‌ ಕಡಿಮೆಯಾಗಿದೆಯಾ? ಚಿಂತೆ ಬೇಡ; ಇನ್ನೆರಡು ಪರೀಕ್ಷೆ ಇದೆ! ಇಲ್ಲಿದೆ ವಿವರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಬಡ ಮೀನುಗಾರನ ಮಗಳು ಸಿಎ ಪರೀಕ್ಷೆಯಲ್ಲಿ ಪಾಸ್‌; ಸ್ಫೂರ್ತಿಯುತ ಸಾಧನೆ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ಮೂಲದ, ಹಾಲಿ ಹೆಬಳೆ ಹೆರ್ತಾರ ಗ್ರಾಮದ ನಿವಾಸಿಯಾಗಿರುವ ಕಲ್ಪನಾ ಮಾಸ್ತಿ ಮೊಗೇರ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಬಡ ಮೀನುಗಾರ ಕುಟುಂಬದಲ್ಲಿ ಬೆಳೆದ ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತಿಷ್ಠಿತ ಸಿಎ ಪರೀಕ್ಷೆಯಲ್ಲಿ ಸಾಧನೆಗೈದು ಇಡೀ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ.

VISTARANEWS.COM


on

a poor fisherman family student Kalpana Masti Mogera passed the CA exam
Koo

ಕಾರವಾರ: ಭಟ್ಕಳ ತಾಲೂಕಿನ ಮುಂಡಳ್ಳಿ ಮೂಲದ, ಹಾಲಿ ಹೆಬಳೆ ಹೆರ್ತಾರ ಗ್ರಾಮದ ನಿವಾಸಿಯಾಗಿರುವ ಕಲ್ಪನಾ ಮಾಸ್ತಿ ಮೊಗೇರ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಬಡ ಮೀನುಗಾರ ಕುಟುಂಬದಲ್ಲಿ ಬೆಳೆದ ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತಿಷ್ಠಿತ ಸಿಎ ಪರೀಕ್ಷೆಯಲ್ಲಿ ಸಾಧನೆಗೈದು ಇಡೀ ಸಮುದಾಯಕ್ಕೆ ಹೆಮ್ಮೆ (Uttara Kannada News) ತಂದಿದ್ದಾಳೆ.

ಕಳೆದ ಮೇ ತಿಂಗಳಲ್ಲಿ ಜರುಗಿದ ಸಿಎ ಪರೀಕ್ಷೆಯನ್ನು ಕಲ್ಪನಾ ಎದುರಿಸಿದ್ದರು. 2022ರಲ್ಲಿ ಗ್ರೂಪ್ 1 ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇದೀಗ ಗ್ರೂಪ್ 2 ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Anant Ambani Wedding:  ಅನಂತ್‌ ಅಂಬಾನಿ ಮದುವೆಯಲ್ಲಿ ಯುವಕರೂ ನಾಚುವಂತೆ ಸ್ಟೆಪ್ಸ್‌ ಹಾಕಿದ ರಜನಿಕಾಂತ್‌!

ಕಲ್ಪನಾ ಮೂಲತಃ ಮುಂಡಳ್ಳಿಯ ಮೊಗೇರಕೇರಿಯವರಾದ ಸೀತಾ ಮತ್ತು ಮಾಸ್ತಿ ಮೊಗೇರ ದಂಪತಿಯ ಪುತ್ರಿ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಕಲ್ಪನಾ ಮೊಗೇರ ಮುಂಡಳ್ಳಿ ಮೊಗೇರಕೇರಿ ಶಾಲೆಯಲ್ಲಿ ಒಂದನೇ ತರಗತಿ, ಎರಡರಿಂದ ಐದನೇ ತರಗತಿವರೆಗೆ ಹೆರ್ತಾರ ಶಾಲೆಯಲ್ಲಿ, ಆರರಿಂದ ಏಳನೇ ತರಗತಿವರೆಗೆ ತೆಂಗಿನಗುಂಡಿ ಶಾಲೆಯಲ್ಲಿ ಓದಿದ ಕಲ್ಪನಾ ನಂತರದ ಶಿಕ್ಷಣವನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದ್ದಾರೆ. ಕಲ್ಪನಾ ತಂದೆ ಮಾಸ್ತಿ ಮೊಗೇರ ವೃತ್ತಿಯಲ್ಲಿ ಮೀನುಗಾರರಾಗಿದ್ದು, ಮಗಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ.

ತಾನು ಸಿಎ ಪರೀಕ್ಷೆಯಲ್ಲಿ ಪಾಸಾಗಿದ್ದರ ಹಿಂದೆ ತುಂಬಾ ಶ್ರಮವಿದೆ. ಯಾರ ಸಹಾಯ ಪಡೆಯದೇ ಪಾಸಾಗಿರುವುದಕ್ಕೆ ನನಗೆ ಖುಷಿಯಾಗುತ್ತಿದೆ ಎಂದು ಕಲ್ಪನಾ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: KEA Exam: ಕ್ಯಾಮೆರಾ ಕಣ್ಗಾವಲಿನಲ್ಲಿ ಕೆಇಎ ಸ್ಪರ್ಧಾತ್ಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಪರಿಶೀಲಿಸಿದ ಉನ್ನತ ಶಿಕ್ಷಣ ಸಚಿವ

ಕಲ್ಪನಾ ಸಾಧನೆಗೆ ಕುಟುಂಬಸ್ಥರು, ಬಂಧು-ಮಿತ್ರರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Continue Reading

ಕರ್ನಾಟಕ

Bengaluru News: ಮಕ್ಕಳು ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳಸಿಕೊಳ್ಳಿ: ಐಶ್ವರ್ಯ ಡಿಕೆಎಸ್ ಹೆಗ್ಡೆ

Bengaluru News: ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಶಕ್ತಿಯನ್ನು ಬೆಳಸಿಕೊಳ್ಳಬೇಕು. ಈ ಕೌಶಲ್ಯವು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಯಶಸ್ಸಿಗೆ ನಿರ್ಣಾಯಕವಾಗಿದೆ ಎಂದು ಖ್ಯಾತ ಶಿಕ್ಷಣ ತಜ್ಞೆ ಐಶ್ವರ್ಯ ಡಿ.ಕೆ.ಎಸ್.ಹೆಗ್ಡೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

VISTARANEWS.COM


on

Children should develop the ability to question says Aishwarya DKS Hegde
Koo

ಬೆಂಗಳೂರು: ವಿದ್ಯಾರ್ಥಿಗಳು ಪ್ರಶ್ನೆ ಮಾಡಿ ಕಲಿಯುವ ಮತ್ತು ತಿಳಿಯುವ ಸಾಮರ್ಥ್ಯವನ್ನು ಬೆಳಸಿಕೊಳ್ಳಬೇಕು ಎಂದು ಖ್ಯಾತ ಶಿಕ್ಷಣ ತಜ್ಞೆ ಐಶ್ವರ್ಯ ಡಿ.ಕೆ.ಎಸ್. ಹೆಗ್ಡೆ (Bengaluru News) ಹೇಳಿದರು.

ನಗರದ ಬಾಲ್ಡ್‌ವಿನ್‌ ಬಾಲಕಿಯರ ಪ್ರೌಢಶಾಲೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಶಕ್ತಿಯನ್ನು ಬೆಳಸಿಕೊಳ್ಳಬೇಕು. ಈ ಕೌಶಲ್ಯವು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಯಶಸ್ಸಿಗೆ ನಿರ್ಣಾಯಕವಾಗಿದೆ ಎಂದು ಸಲಹೆ ನೀಡಿದರು.

ಆಧುನಿಕ ತಂತ್ರಜ್ಞಾನ ಕುರಿತು ಮಾತನಾಡಿದ ಅವರು, ಇಂದು ಜಗತ್ತನ್ನು ನೋಡಿ ಪರಿವರ್ತನೆ ಹೊಂದುತ್ತಿದೆ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಂದ ಚಾಟ್‌ ಜಿಪಿಟಿ (ChatGPT) ಯಂತಹ ಸಾಧನಗಳ ಮೊರೆ ಹೋಗುತ್ತಿದ್ದಾರೆ. ಚಾಟ್‌ ಜಿಪಿಟಿಯ ಸಾರವು ಸರಿಯಾದ ಪ್ರಶ್ನೆಗಳನ್ನು ಕೇಳಿದಾಗ ಉತ್ತರ ಸಿಗುವುದು. ಅದೇ ರೀತಿ ನೀವು ಸರಿಯಾದ ಪ್ರಶ್ನೆಗಳನ್ನು ಕೇಳುವ ಮೂಲಕ ಮಾತ್ರ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಪಡೆಯುವಿರಿ. ನೀವು ಪ್ರಶ್ನೆ ಕೇಳುವ ಧೈರ್ಯವನ್ನು ಹೊಂದಿದಾಗ ಮಾತ್ರ ನೀವು ನಿಮ್ಮ ಜೀವನದಲ್ಲಿ ಉತ್ತರ ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಪ್ರಾಂಶುಪಾಲೆ ಆಶಾ ಮಾರ್ಗರೇಟ್ ಮಾತನಾಡಿ, ಶತಮಾನಗಳಿಂದ ಬಾಲ್ಡ್‌ವಿನ್ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಬಾಲ್ಡ್‌ವಿನ್ ಸಂಸ್ಥೆಗಳ ಅಧ್ಯಕ್ಷ ಬಿಷಪ್ ಎನ್.ಎಲ್. ಕರ್ಕರೆ ಅವರ ನೇತೃತ್ವದಲ್ಲಿ ಮಕ್ಮಳಿಗೆ ಸಮಗ್ರ ಜ್ಞಾನ ನೀಡುವುದನ್ನು ತನ್ನ ಧ್ಯೇಯವಾಗಿಸಿಕೊಂಡು ಆ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ಮ್ಯಾನೇಜರ್ ಫೆಬೆ ಶೀಲಾ ರಾಣಿ ಮಾತನಾಡಿ, ಬಾಲ್ಡ್‌ವಿನ್ ಮಕ್ಕಳ ಶೈಕ್ಷಣಿಕ ಪ್ರಗತಿಯ ಜತೆಗೆ ಶೈಕ್ಷಣಿಕೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲವಾಗಿ ತೊಡಗಿಕೊಳ್ಳಲು ನೆರವಾಗುತ್ತಿದೆ. ಸಮಾಜಕ್ಕೆ ಜವಾಬ್ದಾರಿಯುತ ಮಕ್ಕಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಮೀಡಿಯಾ ಕನೆಕ್ಟ್ ಸಂಸ್ಥೆಯ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ ಮತ್ತು ಶೀತಲ್ ಖುಲ್ಲಾರ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

ಈ ಸಂದರ್ಭದಲ್ಲಿ ಬಾಲ್ಡ್ ವಿನ್ ಸಂಸ್ಥೆಗಳ ಅಧ್ಯಕ್ಷೆ ಕಮಲ್ ಕರ್ಕರೆ, ಕಾರ್ಯದರ್ಶಿ ಡಾ. ಜೋಶುವಾ ಸ್ಯಾಮ್ಯುಯೆಲ್, ಅನಿತಾ ಐಸಾಕ್, ಉಪ ಪ್ರಾಂಶುಪಾಲೆ ಸುಜಾತಾ ಕ್ಯಾಥರೀನ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Education News: ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಕರ್ನಾಟಕದ 148 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಎಬಿಬಿ ಇಂಡಿಯಾ ನೆರವು

Education News: ಎಬಿಬಿ ಇಂಡಿಯಾ ಸಂಸ್ಥೆಯು ತನ್ನ ಸಿಎಸ್ಆರ್ ಉಪಕ್ರಮಗಳ ಭಾಗವಾಗಿ ಆಯೋಜಿಸಿರುವ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುತ್ತಿರುವುದಾಗಿ ಇಂದು ಘೋಷಿಸಿದ್ದು, ನೆಲಮಂಗಲದ 98 ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗಿರುವ ಈ ಕಾರ್ಯಕ್ರಮಗಳನ್ನು ಈ ಶೈಕ್ಷಣಿಕ ವರ್ಷದಿಂದ ಪೀಣ್ಯದಲ್ಲಿರುವ 50 ಸರ್ಕಾರಿ ಶಾಲೆಗಳಿಗೂ ವಿಸ್ತರಿಸಲಾಗಿದೆ. ಈ ಕಾರ್ಯಕ್ರಮಗಳಿಂದ ಪೀಣ್ಯ ಮತ್ತು ನೆಲಮಂಗಲದ ಒಟ್ಟು 148 ಶಾಲೆಗಳ ಸುಮಾರು 10000 ವಿದ್ಯಾರ್ಥಿಗಳಿಗೆ ನೆರವಾಗಲಿದೆ.

VISTARANEWS.COM


on

ABB India is helping students of 148 government schools in Karnataka through educational programs
Koo

ಬೆಂಗಳೂರು: ಒಳಗೊಳ್ಳುವಿಕೆಯ ಮತ್ತು ಸಮಾನ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಎಬಿಬಿ ಇಂಡಿಯಾ ತನ್ನ ಸಿಎಸ್ಆರ್ ಉಪಕ್ರಮಗಳ ಭಾಗವಾಗಿ ಆಯೋಜಿಸಿರುವ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುತ್ತಿರುವುದಾಗಿ ಇಂದು ಘೋಷಿಸಿದ್ದು, ನೆಲಮಂಗಲದ 98 ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗಿರುವ ಈ ಕಾರ್ಯಕ್ರಮಗಳನ್ನು ಈ ಶೈಕ್ಷಣಿಕ ವರ್ಷದಿಂದ ಪೀಣ್ಯದಲ್ಲಿರುವ 50 ಸರ್ಕಾರಿ ಶಾಲೆಗಳಿಗೂ ವಿಸ್ತರಿಸಲಾಗಿದೆ. ಈ ಕಾರ್ಯಕ್ರಮಗಳಿಂದ ಪೀಣ್ಯ ಮತ್ತು ನೆಲಮಂಗಲದ ಒಟ್ಟು 148 ಶಾಲೆಗಳ ಸುಮಾರು 10000 ವಿದ್ಯಾರ್ಥಿಗಳಿಗೆ (Education News) ನೆರವಾಗಲಿದೆ.

ಎಸ್‌ಟಿಇಎಂ (ಸೈನ್ಸ್ ಟೆಕ್ನಾಲಟಿ ಇಂಜಿನಿಯರಿಂಗ್ ಮ್ಯಾತ್ಸ್) ಅವೇರ್‌ನೆಸ್ ಮತ್ತು ಫೌಂಡೇಷನಲ್ ಲಿಟರೆಸಿ ಆಂಡ್ ನ್ಯುಮರಿಕಲ್ ಸ್ಕಿಲ್ಸ್ ಪ್ರೋಗ್ರಾಮ್ (ಎಫ್ಎಲ್ಎನ್) ನ ಯುವ ವಿದ್ಯಾರ್ಥಿಗಳಿಗೆ ಅಗತ್ಯವಾದ ಬೇಕಾಗಿರುವ ವೈಜ್ಞಾನಿಕ ಪರಿಕಲ್ಪನೆಗಳು ಮತ್ತು ಎಸ್‌ಟಿಇಎಂ ವಿಷಯಗಳ ಜತೆಗೆ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದ ಅರಿವು ಮತ್ತು ಆ ವಯಸ್ಸಿಗೆ ಸೂಕ್ತವಾದ ಕೌಶಲ್ಯಗಳನ್ನು ಕಲಿಸುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: KEA : ಜು.13,14ಕ್ಕೆ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಅಕ್ರಮ ತಡೆಯಲು ಮೊದಲ ಬಾರಿಗೆ ವೆಬ್ ಕಾಸ್ಟಿಂಗ್

ಶಾಲೆಯ ವೇಳಾಪಟ್ಟಿಯ ಜತೆಗೆ ಈ ಕಾರ್ಯಕ್ರಮಗಳನ್ನು ಸಂಯೋಜಿಸಲಾಗಿದ್ದು, ಕಲಿಕೆಯನ್ನು ಸಂವಾದಾತ್ಮಕವಾಗಿಸಲು ಮತ್ತು ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಲು ಪ್ರಾಯೋಗಿಕ ಕಲಿಕಾ ಕ್ರಮವನ್ನು ಬಳಸಲಾಗುತ್ತದೆ. ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅರಿವನ್ನು ಹೆಚ್ಚಿಸುವ ಮೂಲಕ ಅವರ ಬೆಳವಣಿಗೆಗೆ ಅಗತ್ಯವಾದ ಸಾಮರ್ಥ್ಯ ಒದಗಿಸುವ ಮೂಲಕ ಶಿಕ್ಷಣದ ಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಈ ಕಾರ್ಯಕ್ರಮದ ಜತೆಗೆ ಪರಿಸರ ಶಿಕ್ಷಣ ಕೇಂದ್ರ (ಸೆಂಟರ್ ಫಾರ್ ಎನ್‌ವಿರಾನ್ಮೆಂಟ್ ಎಜುಕೇಷನ್- ಸಿಇಇ) ಸಹಯೋಗದ ಮೂಲಕ ಪರ್ಯಾವರಣ ಮಿತ್ರ ಎಂಬ ಇನ್ನೊಂದು ಕಾರ್ಯಕ್ರಮವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ. ಶಾಲೆ ಮತ್ತು ಅದರ ಸುತ್ತಮುತ್ತಲಿನ ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ಮೂಲಕ ಪರಿಸರ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ಅವರನ್ನು ಈ ಕಾರ್ಯಕ್ರಮದ ಮೂಲಕ ಸಿದ್ಧಪಡಿಸುವ ಗುರಿಯನ್ನು ಹೊಂದಲಾಗಿದೆ.

ನೀರು ಮತ್ತು ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ, ವಿದ್ಯುತ್ ಇತ್ಯಾದಿಗಳಂತಹ ಪ್ರಮುಖ ವಿಷಯಗಳನ್ನು ಒಳಗೊಂಡ ಈ ಕಾರ್ಯಕ್ರಮದ ವಿನ್ಯಾಸ ಮತ್ತು ಅನುಷ್ಠಾನದಲ್ಲಿ ರಾಜ್ಯದ ಶಿಕ್ಷಣ ಇಲಾಖೆಯು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಶಾಲೆಗಳು ಮತ್ತು ತರಗತಿ ಕೊಠಡಿಗಳ ಆಚೆ ಬಂದು ಕಲಿಯಲು ಸಹಾಯ ಮಾಡುತ್ತದೆ ಮತ್ತು ಅವರನ್ನು ಪ್ರಕೃತಿ, ಸಮಾಜ ಮತ್ತು ಸಮುದಾಯಗಳ ಜತೆ ಬೆರೆಯುವುಂತೆ ಮಾಡುತ್ತದೆ.

ಈ ಕುರಿತು ಎಬಿಬಿ ಇಂಡಿಯಾದ ಮೋಷನ್ ಬಿಸಿನೆಸ್ ಪ್ರೆಸಿಡೆಂಟ್ ಸಂಜೀವ್ ಅರೋರಾ ಮಾತನಾಡಿ, ಎಬಿಬಿ ಸಂಸ್ಥೆಯು ಒಳಗೊಳ್ಳುವಿಕೆಯ ಶಿಕ್ಷಣ ಮತ್ತು ಪರಿಸರ ಸುಸ್ಥಿರತೆಗೆ ನೆರವಾಗಲು ಬದ್ಧವಾಗಿದೆ. ನಾವು ನಮ್ಮ ಕಾರ್ಯಾಚರಣೆಗಳಲ್ಲಿ ಸುಸ್ಥಿರ ಮಾರ್ಗಗಳನ್ನು ಕಲಿಯಲು ಮತ್ತು ಅಳವಡಿಸಿಕೊಳ್ಳುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಮುಂದಿನ ಪೀಳಿಗೆಯು ಕೂಡ ಪರಿಸರದ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ತಿಳಿದಿರಬೇಕು ಎಂದು ನಾವು ಭಾವಿಸುತ್ತೇವೆ. ಉತ್ತಮವಾಗಿ ವಿನ್ಯಾಸಗೊಳಿಸಿರುವ ಈ ಕಾರ್ಯಕ್ರಮಗಳ ಮೂಲಕ ಅವರು ಅಗತ್ಯವಿರುವ ಸಾಮರ್ಥ್ಯಗಳನ್ನು ಪಡೆದು ತಮ್ಮನ್ನು ತಾವು ಸಿದ್ಧಗೊಳಿಸುತ್ತಾರೆ ಮತ್ತು ಜೀವನದಲ್ಲಿ ಹೆಚ್ಚು ಸುಸ್ಥಿರ ಆಯ್ಕೆಗಳನ್ನು ಮಾಡಲು ಕಲಿಯುತ್ತಾರೆ ಎಂದು ನಾವು ನಂಬುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಭವಿಷ್ಯಕ್ಕೆ ಬೇಕಾಗಿರುವ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಎನ್‌ಎಸ್‌ಡಿಸಿ, ವಿಟಿಯು ನಡುವೆ ಸಹಭಾಗಿತ್ವ

2022ರಲ್ಲಿ ಪ್ರಾರಂಭವಾದ ಈ ಉಪಕ್ರಮವು ವಿದ್ಯಾರ್ಥಿಗಳಲ್ಲಿ ಅರಿವಿನ ಮಟ್ಟವನ್ನು ಯಶಸ್ವಿಯಾಗಿ ಹೆಚ್ಚಿಸಿದೆ. ಪ್ರಮುಖ ವೈಜ್ಞಾನಿಕ ಪರಿಕಲ್ಪನೆಗಳಲ್ಲಿನ ಇದ್ದ ಮಹತ್ವಾಕಾಂಕ್ಷೆ ಮತ್ತು ವಾಸ್ತವದ ಮಧ್ಯದ ಅಂತರವನ್ನು ಕಡಿಮೆ ಮಾಡಿದೆ. ಕಾಲಕಾಲಕ್ಕೆ ಮಾಡಲಾದ ಮೌಲ್ಯಮಾಪನಗಳಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಮತ್ತು ಅರಿವಿನ ಮಟ್ಟಗಳಲ್ಲಿ ಪ್ರಗತಿ ಆಗಿರುವುದು ಕಂಡುಬಂದಿದೆ.

ನೆಲಮಂಗಲ ಬ್ಲಾಕ್‌ನ 98 ಶಿಕ್ಷಕರಿಗೆ ಈ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬೇಕಾಗಿರುವ ತರಬೇತಿ ಮತ್ತು ಅಪ್‌ಡೇಟ್ ಆಗಿರುವ ಪರಿಕಲ್ಪನೆಗಳು ಮತ್ತು ಅದಕ್ಕೆ ಪೂರಕವಾದ ಸಂಪನ್ಮೂಲಗಳನ್ನು ಒದಗಿಸಲಾಗಿದೆ. ಈ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ಎಲ್ಲಾ ಶ್ರೇಣಿಗಳ ವಿದ್ಯಾರ್ಥಿಗಳು ಎಸ್‌ಟಿಇಎಂ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಇದೇ ರೀತಿಯ ಶಿಕ್ಷಕರ ತರಬೇತಿ ಮತ್ತು ಓರಿಯಂಟೇಶನ್ ಕಾರ್ಯಕ್ರಮವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪೀಣ್ಯ ಬ್ಲಾಕ್‌ನಲ್ಲಿ ಕೂಡ ಜಾರಿಗೊಳಿಸಲಾಗುತ್ತದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ ನೋಡಿ

ಲೀಲಾ ಪೂನಾವಾಲ ಫೌಂಡೇಶನ್‌ನ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ ಎಂಜಿನಿಯರಿಂಗ್ ವಿದ್ಯಾರ್ಥಿವೇತನದ ಮೂಲಕ ಎಸ್‌ಟಿಇಎಂನಲ್ಲಿ ಮಹಿಳಾ ಶಿಕ್ಷಣವನ್ನು ಕೂಡ ಎಬಿಬಿ ಸಂಸ್ಥೆ ಬೆಂಬಲಿಸುತ್ತದೆ. ಈ ಕಾರ್ಯಕ್ರಮದ ಮೂಲಕ ಇದುವರೆಗೆ ಎರಡು ಬ್ಯಾಚ್‌ಗಳು ಪದವಿ ಪಡೆದಿವೆ ಎಂದು ತಿಳಿಸಿದೆ.

Continue Reading

ಬೆಂಗಳೂರು

Bengaluru News: ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು: ಕೆ.ವಿ. ಪ್ರಭಾಕರ್‌

Bengaluru News: ಮೊಬೈಲ್ ಫೋನ್ ಒಂದು ಉಪಯುಕ್ತ ಸಾಧನ. ಆದರೆ ಒಳಿತು ಕೆಡುಕು ಆಯ್ಕೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆದ್ದರಿಂದ, ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮೊಬೈಲ್ ಫೋನ್ ಬಳಸುವುದನ್ನು ತಿಳಿದಿರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ತಿಳಿಸಿದ್ದಾರೆ.

VISTARANEWS.COM


on

Students should use mobile phones responsibly says KV Prabhakar
Koo

ಬೆಂಗಳೂರು: ಮೊಬೈಲ್ ಫೋನ್ ಒಂದು ಉಪಯುಕ್ತ ಸಾಧನ. ಆದರೆ ಒಳಿತು ಕೆಡುಕು ಆಯ್ಕೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆದ್ದರಿಂದ, ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮೊಬೈಲ್ ಫೋನ್ ಬಳಸುವುದನ್ನು ತಿಳಿದಿರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌ (Bengaluru News) ತಿಳಿಸಿದರು.

ನಗರದ ಬಾಲ್ಡ್‌ವಿನ್‌ ಬಾಲಕಿಯರ ಶಾಲೆಯಲ್ಲಿ ಶುಕ್ರವಾರ 10ನೇ ತರಗತಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮೊಬೈಲ್‌ ಬಳಕೆಯ ಮಹತ್ವವನ್ನು ಒತ್ತಿ ಹೇಳಿದರು.

ಶಾಲಾ ಶಿಕ್ಷಣವು ಹೈಟೆಕ್ ಆಗಿ ಮಾರ್ಪಟ್ಟಿದೆ ಮತ್ತು ಅನೇಕರು ಮೊಬೈಲ್ ತಂತ್ರಜ್ಞಾನಕ್ಕೆ ವ್ಯಸನಿಯಾಗಿದ್ದಾರೆ. ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ನಾನು ಹೇಳುವುದಿಲ್ಲ. ಆದರೆ ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಾರದು. ಮೊಬೈಲ್‌ನ ದುಷ್ಪರಿಣಾಮಗಳ ಬಗ್ಗೆ ನಾವು ಪ್ರತಿದಿನ ಓದುತ್ತೇವೆ. ಆದ್ದರಿಂದ ಮೊಬೈಲ್ ಅನ್ನು ಅಗತ್ಯ ಕೆಲಸಕ್ಕೆ ಮಾತ್ರ ಬಳಸಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: Samsung Galaxy: ಸ್ಯಾಮ್‌ಸಂಗ್‌ನಿಂದ 2 ಹೊಸ ಫೋಲ್ಡೆಬಲ್ ಫೋನ್‌ ಬಿಡುಗಡೆ; ವಿಶೇಷತೆ ಏನೇನು?

ವಿದ್ಯಾರ್ಥಿಗಳು ಪೋಷಕರ ಕನಸುಗಳನ್ನು ಈಡೇರಿಸುವುದು ಕರ್ತವ್ಯವಾಗಿದೆ. ನೀವು ಯಾವ ವೃತ್ತಿಯನ್ನು ಆರಿಸಿಕೊಂಡರೂ, ಮೊದಲು ಉತ್ತಮ ಮನುಷ್ಯನಾಗಲು ಶ್ರಮಿಸಿ ಮತ್ತು ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡಿ ಎಂದರು.

ಈ ವೇಳೆ ವೈಯಕ್ತಿಕ ವಿಚಾರವನ್ನು ಹಂಚಿಕೊಂಡ ಅವರು, ”ನನ್ನ ತಂದೆ ನಾನು ಐಟಿಐ ಮಾಡಬೇಕೆಂದು ಬಯಸಿದ್ರು, ಆದರೆ ನನಗೆ ಬರವಣಿಗೆಯ ಉತ್ಸಾಹವಿತ್ತು, ಆದ್ದರಿಂದ ನಾನು ಪತ್ರಿಕೋದ್ಯಮವನ್ನು ಆರಿಸಿದೆ. ಎಪಿಜೆ ಅಬ್ದುಲ್ ಕಲಾಂ ಅವರಂತೆ ನಾನು ಮನೆ ಮನೆಗಳಿಗೆ ಪತ್ರಿಕೆಗಳನ್ನು ಹಂಚಿದ್ದೇನೆ. ಮಾಧ್ಯಮ ಸಲಹೆಗಾರನಾಗಿ ಸೇವೆ ಸಲ್ಲಿಸುತ್ತಿರುವ ನನ್ನ ಯಶಸ್ಸಿನ ಪಯಣವು ಹಂತಹಂತವಾಗಿ ಗುರಿ ಮುಟ್ಟಿರುವುದು. ಈ ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುವುದು ನನ್ನ ಆಶಯ ಎಂದು ಹೇಳಿದರು.

ಇದನ್ನೂ ಓದಿ: Bengaluru News: ಭವಿಷ್ಯಕ್ಕೆ ಬೇಕಾಗಿರುವ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಎನ್‌ಎಸ್‌ಡಿಸಿ, ವಿಟಿಯು ನಡುವೆ ಸಹಭಾಗಿತ್ವ

ಕಾರ್ಯಕ್ರಮದಲ್ಲಿ ಬಾಲ್ಡ್‌ವಿನ್‌ ಸಂಸ್ಥೆಗಳ ಅಧ್ಯಕ್ಷ ಬಿಷಪ್ ಎನ್.ಎಲ್. ಕರ್ಕರೆ, ಅಧ್ಯಕ್ಷೆ ಮೇಡಂ ಕಮಲ್ ಕರ್ಕರೆ, ಎಂ. ಜೋಶುವಾ ಸ್ಯಾಮ್ಯುಯೆಲ್, ಪ್ರಾಂಶುಪಾಲೆ ಆಶಾ ಮಾರ್ಗರೇಟ್ ದಾಸ್, ಉಪಪ್ರಾಂಶುಪಾಲೆ ಸುಜಾತಾ ಕ್ಯಾಥರೀನ್, ಅನಿತಾ ಐಸಾಕ್, ದಿವ್ಯಾ ರಂಗೇನಹಳ್ಳಿ ಮತ್ತು ವಸತಿ ಸಚಿವ ಜಮೀರ್‌ ಅಹಮದ್‌ ಅವರ ಮಾಧ್ಯಮ ಸಲಹೆಗಾರ ಲಕ್ಷ್ಮೀನಾರಾಯಣ ಅವರು ಉಪಸ್ಥಿತರಿದ್ದರು.

Continue Reading
Advertisement
Car Catches fire
ಕೊಡಗು9 mins ago

Car Catches fire: ಮಡಿಕೇರಿ ಬಳಿ ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಸ್ವಿಫ್ಟ್‌ ಕಾರು!

Bypoll Results
ದೇಶ24 mins ago

Bypoll Results: ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ; 13ರ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟಕ್ಕೆ ಜಯ!

MS Dhoni
ಪ್ರಮುಖ ಸುದ್ದಿ26 mins ago

MS Dhoni : ಅಂಬಾನಿ ಪುತ್ರನ ಮದುವೆಯಲ್ಲಿ ಬಿಂದಾಸ್​ ​ ಡಾನ್ಸ್ ಮಾಡಿದ ಮಹೇಂದ್ರ ಸಿಂಗ್ ಧೋನಿ

CM Siddaramaiah
ಕರ್ನಾಟಕ43 mins ago

CM Siddaramaiah: ಕೆಪಿಸಿಸಿ ಕಚೇರಿ ಸ್ವಚ್ಛತಾ ಸಿಬ್ಬಂದಿಗೆ ಮನೆ ನೀಡಲು ಸಿಎಂ ಸೂಚನೆ

Israel Hamas War
ವಿದೇಶ51 mins ago

Israel Hamas War: ಗಾಜಾ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

karnataka Weather Forecast
ಮಳೆ58 mins ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

Healthy Food For Dengue
ಫ್ಯಾಷನ್1 hour ago

Healthy Food For Dengue: ಈ ಆಹಾರಗಳನ್ನು ತಿನ್ನಿ; ಡೆಂಗ್ಯೂಗೆ ಡೋಂಟ್ ಕೇರ್ ಅನ್ನಿ

radioactive material
ದೇಶ1 hour ago

Radioactive Material: ಅಪಾಯಕಾರಿ ರಾಸಾಯನಿಕ ವಸ್ತು ತುಂಬಿದ್ದ ಬಾಕ್ಸ್‌ಗಳು ಪತ್ತೆ; ಐವರು ಅರೆಸ್ಟ್‌

Ambani Wedding Fashion
ಫ್ಯಾಷನ್2 hours ago

Ambani Wedding Fashion: ಅನಂತ್ ಅಂಬಾನಿ ಶೆರ್ವಾನಿ ಬೆಲೆಯೇ 214 ಕೋಟಿ ರೂ! ಹೇಗಿತ್ತು ನೋಡಿ ಅಂಬಾನಿ ಜೋಡಿಯ ವೆಡ್ಡಿಂಗ್ ಫ್ಯಾಷನ್!

Bagalkot news
ಕರ್ನಾಟಕ2 hours ago

Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ58 mins ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ7 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ5 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಟ್ರೆಂಡಿಂಗ್‌