Site icon Vistara News

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

sslc supplementary result

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು (sslc supplementary result 2023) ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ನೋಡಬಹುದಾಗಿದೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್‌ ನಂಬರ್‌ ಅನ್ನು ಎಂಟ್ರಿಮಾಡಿ, ಜನ್ಮ ದಿನಾಂಕವನ್ನು ಸೆಲೆಕ್ಟ್‌ ಮಾಡಿ ನಂತರ ಸಬ್‌ಮಿಟ್‌ ಒತ್ತಿದರೆ ಫಲಿತಾಂಶ ತೆರೆಯ ಮೇಲೆ ಪ್ರಕಟವಾಗಲಿದೆ. ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್‌ಗೆ ಎಸ್‌ಎಂಎಸ್‌ ಮೂಲಕ ರವಾನಿಸಲಾಗಿದೆ. ಶಾಲೆಗಳಲ್ಲಿ ಮಧ್ಯಾಹ್ನ 1 ಗಂಟೆಯ ನಂತರ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ಜೂನ್ 12 ರಿಂದ ಜೂನ್ 19 ರ ವರೆಗೆ ಈ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ ಮೌಲ್ಯಮಾಪನ ನಡೆಸಿದ್ದು, ಈಗ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ 458 ಕೇಂದ್ರಗಳಲ್ಲಿ ಈ ಪೂರಕ ಪರೀಕ್ಷೆ ನಡೆದಿದ್ದು, 11,810 ಪ್ರೌಢಶಾಲೆಗಳ 1,11,781 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.

ಫಲಿತಾಂಶ ಪಡೆಯಲು ವಿದ್ಯಾರ್ಥಿಗಳು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ ಇಂತಿದೆ; https://karresults.nic.in/first_sl_sup_kar.asp

2023 ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು (SSLC Exam 2023) ಒಟ್ಟು 8,35,102ವಿದ್ಯಾರ್ಥಿಗಳು ಬರೆದಿದ್ದರು.ಈ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು (ಶೇ. 83.89 ರಷ್ಟು ಫಲಿತಾಂಶ). ಇದರಲ್ಲಿ 3,59,511 ಬಾಲಕಿಯರು ಉತ್ತೀರ್ಣರಾದರೆ, 3,41,108 ಬಾಲಕರು ಉತ್ತೀರ್ಣರಾಗಿದ್ದರು. ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ಪೂರಕ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ : SSLC Result 2023 : ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?; ಇಲ್ಲಿದೆ ಉಪಯುಕ್ತ ಟಿಪ್ಸ್‌

Exit mobile version