Jio Institute: ಎಐ, ಡೇಟಾ ಸೈನ್ಸ್‌‌ನಲ್ಲಿ ಬೋಧಕರಿಗೆ ಕಾರ್ಯಕ್ರಮ; ಜಿಯೋ ಸಂಸ್ಥೆ ಜತೆ ಕೈಜೋಡಿಸಿದ ಎಐಸಿಟಿಇ Vistara News

ದೇಶ

Jio Institute: ಎಐ, ಡೇಟಾ ಸೈನ್ಸ್‌‌ನಲ್ಲಿ ಬೋಧಕರಿಗೆ ಕಾರ್ಯಕ್ರಮ; ಜಿಯೋ ಸಂಸ್ಥೆ ಜತೆ ಕೈಜೋಡಿಸಿದ ಎಐಸಿಟಿಇ

Jio Institute: ಜಿಯೋ ಇನ್‌ಸ್ಟಿಟ್ಯೂಟ್ ಮತ್ತು ಎಐಸಿಟಿಇ ಜತೆಗೂಡಿ ಡೇಟಾ ಸೈನ್ಸ್ ಹಾಗೂ ಕೃತಕ ಬುದ್ಧಿಮತ್ತೆಯಲ್ಲಿ ಬೋಧಕ ವೃಂದಕ್ಕೆ ಹೆಚ್ಚಿನ ಜ್ಞಾನವನ್ನು ಒದಗಿಸುವ ಕೆಲಸವನ್ನು ಮಾಡಲಿವೆ.

VISTARANEWS.COM


on

Jio Institute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ, ಮಹಾರಾಷ್ಟ್ರ: ಕೃತಕ ಬುದ್ಧಿಮತ್ತೆ (ಎಐ) ಮತ್ತು ಡೇಟಾ ಸೈನ್ಸ್ ಕುರಿತು ಬೋಧಕ ವೃಂದದವರಿಗೆ ಬೆಳವಣಿಗೆ ಕಾರ್ಯಕ್ರಮಗಳಿಗಾಗಿ ಜಿಯೋ ಇನ್‌ಸ್ಟಿಟ್ಯೂಟ್ (Jio Institute) ಜತೆಗೆ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ (All India Council for Technical Education – AICTE) ಪಾಲುದಾರಿಕೆ ಮಾಡಿಕೊಂಡಿದೆ. ಎಐಸಿಟಿಇಯ ಅಟಲ್- ATAL (ಎಐಸಿಟಿಇ ತರಬೇತಿ ಮತ್ತು ಕಲಿಕೆ) ಕಾರ್ಯಕ್ರಮದ ಅಡಿಯಲ್ಲಿ ಈ ಸಹಯೋಗದ ಪ್ರಯತ್ನ ಪ್ರಾರಂಭಿಸಲಾಗಿದೆ. ಎಐಸಿಟಿಇ ಅನುಮೋದಿತ ಸಂಸ್ಥೆಗಳಿಂದ ಅಧ್ಯಾಪಕರ ಕೌಶಲವನ್ನು ಹೆಚ್ಚಿಸುವ ಮತ್ತು ಪುನರ್ ಕೌಶಲ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ವಿಶ್ವದರ್ಜೆಯ ಕೃತಕ ಬುದ್ಧಿಮತ್ತೆ (Artificial Intelligence) ಹಾಗೂ ಡೇಟಾ ಸೈನ್ಸ್ (Data Science)ಕಾರ್ಯಕ್ರಮಕ್ಕೆ ಖ್ಯಾತಿ ಪಡೆದಿರುವ ಜಿಯೋ ಇನ್‌ಸ್ಟಿಟ್ಯೂಟ್ ಈ 5-ದಿನಗಳ ವಸತಿ ಸಹಿತ ಬೋಧಕ ವೃಂದದ ಬೆಳವಣಿಗೆ ಕಾರ್ಯಕ್ರಮಕ್ಕೆ ಆಯೋಜಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.

ಎಐಸಿಟಿಇ ಅಧ್ಯಕ್ಷರಾದ ಪ್ರೊ. ಟಿ.ಜಿ. ಸೀತಾರಾಮ್ (Prof T G Sitharam) ಅವರು ಖುದ್ದಾಗಿ ಇದೇ ಆಗಸ್ಟ್ 21ರಂದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್‌ನ ಆಳವಾದ ತಿಳಿವಳಿಕೆಯೊಂದಿಗೆ ಶೈಕ್ಷಣಿಕ ನಾಯಕರು ಮತ್ತು ಹಿರಿಯ ಅಧ್ಯಾಪಕ ಸದಸ್ಯರನ್ನು ಸಬಲೀಕರಣಗೊಳಿಸುವ ಉದ್ದೇಶವನ್ನು ಈ ಸಹಯೋಗದ ಉಪಕ್ರಮ ಹೊಂದಿದೆ ಮತ್ತು ತೀವ್ರ ಕಲಿಕೆಗಾಗಿ ಕೃತಕ ಬುದ್ಧಿಮತ್ತೆ ಪರಿಕರಗಳನ್ನು ಬಳಸಿಕೊಳ್ಳುವ ನೈತಿಕ ಪರಿಗಣನೆಗಳಿಗೆ ಒತ್ತು ನೀಡುತ್ತದೆ. ಈ ಕಾರ್ಯಕ್ರಮವು ಅಧ್ಯಾಪಕರು ಸೇರಿದಂತೆ ಆಯ್ದ ಎಐಸಿಟಿಇಯ 40 ಸದಸ್ಯರಿಗೆ ತೀವ್ರ ತರಬೇತಿಯನ್ನು ನೀಡುತ್ತದೆ.

“ಜಿಯೋ ಇನ್‌ಸ್ಟಿಟ್ಯೂಟ್ ಜತೆಗಿನ ಈ ಸಹಭಾಗಿತ್ವವು ನಮ್ಮ ಅಧ್ಯಾಪಕ ವೃಂದದವರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ಅತ್ಯಾಧುನಿಕ ಶಿಕ್ಷಣಕ್ಕೆ ಉತ್ತೇಜಿಸುವ ನಮ್ಮ ಬದ್ಧತೆಗೆ ಉದಾಹರಣೆ ಆಗಿದೆ. ಇದು ಸಂಕೀರ್ಣವಾದ ಶೈಕ್ಷಣಿಕ ವ್ಯಾಪ್ತಿಯನ್ನು ಪೂರ್ತಿಯಾಗಿ ಅನ್ವೇಷಿಸುವುದಕ್ಕೆ ಅಗತ್ಯವಾದ ಕೌಶಲಗಳ ಜತೆಗೆ ಶಿಕ್ಷಕರಿಗೆ ನೆರವು ಒದಗಿಸಲು ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಶೈಕ್ಷಣಿಕ ಉತ್ಕೃಷ್ಟತೆಯತ್ತ ಸಾಗುವ ನಮ್ಮ ಸಂಕಲ್ಪವನ್ನು ಒತ್ತಿಹೇಳುತ್ತದೆ,” ಎಂದು ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ. ಸೀತಾರಾಮನ್ ಹೇಳಿದ್ದಾರೆ.

ಪರಿಣಾಮಕಾರಿ ಬೋಧನೆ ಮತ್ತು ಕಲಿಕೆಯ ಪರಿಸರವನ್ನು ರೂಪಿಸುವುದರ ಸಲುವಾಗಿ ಒಳನೋಟಗಳೊಂದಿಗೆ ಭಾಗವಹಿಸುವವರನ್ನು ಸಜ್ಜುಗೊಳಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಇದು ಕೃತಕ ಬುದ್ಧಿಮತ್ತೆ- ಚಾಲಿತ ಮಾಹಿತಿ ಮತ್ತು ಸಂಶೋಧನೆಯ ಹೆಚ್ಚುತ್ತಿರುವ ಪಾರಮ್ಯವನ್ನು ತಿಳಿಸುತ್ತದೆ. ಡೇಟಾ ವಿಶುಯಲೈಸೇಷನ್, ನ್ಯಾಚುರಲ್ ಲ್ಯಾಂಗ್ವೇಜ್ ಪ್ರೊಸೆಸಿಂಗ್, ಟೈಮ್ ಸೀರೀಸ್ ಮತ್ತು ಆಪ್ಟಿಮೈಸೇಶನ್, ಅಪ್ಲಿಕೇಶನ್ಸ್‌, ಜನರೇಟಿವ್ ಎಐ ಮತ್ತು ದೊಡ್ಡ ಭಾಷಾ ಮಾದರಿಗಳು ಸೇರಿದಂತೆ ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿರುವ ಪಠ್ಯಕ್ರಮವು ವಿಜ್ಞಾನ, ಎಂಜಿನಿಯರಿಂಗ್, ಆರೋಗ್ಯ ಮತ್ತು ಉದಾರ ಕಲೆಗಳಂಥ ಕ್ಷೇತ್ರಗಳಾದ್ಯಂತ ಎಐ ಮತ್ತು ಡೇಟಾ ಸೈನ್ಸ್ ನ ದೂರಗಾಮಿ ಪರಿಣಾಮಗಳನ್ನು ಪರಿಶೀಲಿಸುತ್ತದೆ.

ಇದರ ಜತೆಗೆ ಈ ಕಾರ್ಯಕ್ರಮವು ತಾಂತ್ರಿಕ ವ್ಯಾಪ್ತಿಯ ಒಳಗೆ ಉದಯೋನ್ಮುಖ ಅವಕಾಶಗಳನ್ನು ಅನ್ವೇಷಿಸುತ್ತದೆ. ಜಾಗತಿಕ ತಜ್ಞರು ಮತ್ತು ಶಿಕ್ಷಣತಜ್ಞರ ವಿಶಿಷ್ಟ ವ್ಯಾಪ್ರಿಯಲ್ಲಿ ಕಾರ್ಯಕ್ರಮವನ್ನು ನೀಡಲಾಗುವುದು. ಜಿಯೋ ಇನ್‌ಸ್ಟಿಟ್ಯೂಟ್‌ನ ಡಾ.ಜಿ ರವಿಚಂದ್ರನ್, ಡಾ. ರವೀ ಚಿತ್ತೂರು ಮತ್ತು ಡಾ. ನಿಲಯ್ ಯಾಜ್ಞಿಕ್, ಹಾಗೆಯೇ ಡಾ. ಶೈಲೇಶ್ ಕುಮಾರ್ (ಎಐ ಸಿಒಇ, ಜಿಯೋ), ಪ್ರೊ. ವಿಷ್ಣುಪ್ರಸಾದ್ ನಾಗದೇವರ (ಮಾಜಿ ಡೀನ್, ಐಐಎಂ ಬೆಂಗಳೂರು), ಡಾ. ಲ್ಯಾರಿ ಬಿರ್ನ್‌ಬಾಮ್ (ನಾರ್ತ್-ವೆಸ್ಟರ್ನ್ ಯೂನಿವರ್ಸಿಟಿ ಅಮೆರಿಕ), ಜಾಯೆನ್ ಠಾಕ್ಕರ್ (ಮಾಜಿ-ಟ್ಯಾಬ್ಲೋ ಮತ್ತು ಐಬಿಎಂ), ಪ್ರಸಾದ್ ಜೋಶಿ (ಎಐ ಸಿಒಇ, ಜಿಯೋ) ವಿವಿಧ ಸೆಷನ್ ಗಳನ್ನು ಮುನ್ನಡೆಸುತ್ತಾರೆ.

ಈ ಸುದ್ದಿಯನ್ನೂ ಓದಿ: Education Guide : ಎಲ್ಲರ ಶಿಕ್ಷಣಕ್ಕಾಗಿ ದೂರ ಶಿಕ್ಷಣ!

ಪಾಲುದಾರಿಕೆಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ ಜಿಯೋ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಡಾ. ಪಾಲಕ್ ಶೇಠ್, “ಜಿಯೋ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಣದ ಗಡಿಗಳನ್ನು ಸತತವಾಗಿ ದಾಟುವ ಮೂಲಕ ಶೈಕ್ಷಣಿಕ ಉತ್ಕೃಷ್ಟತೆಯನ್ನು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ. ಈ ಕಾರ್ಯಕ್ರಮವು ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್‌ನ ಜ್ಞಾನವನ್ನು ನೀಡುವುದನ್ನು ಮೀರಿ ವಿಸ್ತರಿಸುತ್ತದೆ. ಇದು ಶಿಕ್ಷಕರಿಗೆ ತಮ್ಮ ವಿದ್ಯಾರ್ಥಿಗಳಲ್ಲಿ ಆಳವಾದ ನೈತಿಕ ಜವಾಬ್ದಾರಿಯನ್ನು ಬೆಳೆಸಲು ಸಬಲಗೊಳಿಸುತ್ತದೆ. ಭಾರತದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದಕ್ಕೆ ಕೊಡುಗೆ ನೀಡಲು ನಾವು ಬಹಳ ಉತ್ಸುಕರಾಗಿದ್ದೇವೆ,” ಎಂದಿದ್ದಾರೆ.

ಈ ಕಾರ್ಯಕ್ರಮವು ಆಗಸ್ಟ್ 25 ರಂದು ಕಲೆ ಮತ್ತು ಪರಂಪರೆಯಲ್ಲಿ ಕೃತಕ ಬುದ್ಧಿಮತ್ತೆಯ ಅನ್ವಯದ ಕುರಿತು ಪ್ರಬುದ್ಧ ಚರ್ಚೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಆ ನಂತರ ದಕ್ಷಿಣ ಮುಂಬೈನ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಮತ್ತು ಇತರ ಮಹತ್ವದ ಪರಂಪರೆಯ ತಾಣಗಳಿಗೆ ಭೇಟಿ ನೀಡಲಾಗುವುದು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತಿದೆ. ಮೂರೂ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ.

VISTARANEWS.COM


on

narendra modi amit shah jp nadda
Koo

ಹೊಸದಿಲ್ಲಿ: ಇತ್ತೀಚೆಗೆ ತಾನು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೂರು ರಾಜ್ಯಗಳಲ್ಲಿ (Assembly Election 2023) ಮುಖ್ಯಮಂತ್ರಿಗಳನ್ನು (Chief minister) ಆಯ್ಕೆ ಮಾಡಲು ಬಿಜೆಪಿ ನಾಯಕತ್ವವು (BJP High command) ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದೆ. ಮೂರೂ ರಾಜ್ಯಗಳಲ್ಲೂ ಹೊಸ ಮುಖಗಳನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯು ಅಮೋಘ ಚುನಾವಣಾ ಗೆಲುವು ದಾಖಲಿಸಿರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತಿದೆ. ಮೂರೂ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಈ ವೇಳೆ ಮೂರು ರಾಜ್ಯಗಳ ಮುಂಚೂಣಿಯಲ್ಲಿರುವವರನ್ನು ಪರಿಗಣಿಸಲಾಗಿದೆ. ಸಭೆಯಲ್ಲಿ ಪ್ರಧಾನಿ, ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ (JP Nadda) ಉಪಸ್ಥಿತರಿದ್ದರು. ಈ ಮ್ಯಾರಥಾನ್ ಸಭೆಯಲ್ಲಿ ಈ ರಾಜ್ಯಗಳ ಬಿಜೆಪಿಯ ಉಸ್ತುವಾರಿಗಳೊಂದಿಗೆ ರಾಜ್ಯ ನಾಯಕರ ಪ್ರತಿಕ್ರಿಯೆಯನ್ನು ಸಂಗ್ರಹಿಸಲು ಸಭೆ ನಡೆಸಲು ನಿರ್ಧರಿಸಲಾಗಿದೆ.

ಬಿಜೆಪಿಯ ಕೇಂದ್ರ ನಾಯಕತ್ವವು ಮೂರು ರಾಜ್ಯಗಳಿಗೆ ವೀಕ್ಷಕರನ್ನು ಶೀಘ್ರದಲ್ಲೇ ನೇಮಿಸುವ ಸಾಧ್ಯತೆಯಿದೆ. ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರು ವಿಧಾನಸಭೆಯಲ್ಲಿ ತಮ್ಮ ನಾಯಕರನ್ನು ಆಯ್ಕೆ ಮಾಡಲು ನಡೆಸುವ ಸಭೆಗಳನ್ನು ಈ ವೀಕ್ಷಕರು ಮೇಲ್ವಿಚಾರಣೆ ಮಾಡುತ್ತಾರೆ.

ಮಧ್ಯಪ್ರದೇಶದಲ್ಲಿ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ, ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರೊಂದಿಗೆ ಉನ್ನತ ಹುದ್ದೆಗೆ ಆಕಾಂಕ್ಷಿಯಾಗಿದ್ದಾರೆ.

ರಾಜಸ್ಥಾನದ ಉನ್ನತ ಹುದ್ದೆಗೂ ಹಲವಾರು ಹೆಸರುಗಳು ಸುತ್ತು ಹಾಕುತ್ತಿವೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಶಾಸಕರಾಗಿ ಆಯ್ಕೆಯಾಗಿದ್ದರೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ರಾಮ್ ಮೇಘವಾಲ್, ಪಕ್ಷದ ರಾಜ್ಯಾಧ್ಯಕ್ಷ ಸಿಪಿ ಜೋಶಿ, ಪ್ರಮುಖ ನಾಯಕರಾದ ದಿಯಾ ಕುಮಾರಿ ಮತ್ತು ಮಹಂತ ಬಾಲಕನಾಥ್ ಅವರನ್ನು ಸಂಭಾವ್ಯ ಎಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸ್ಪರ್ಧಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ.ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಬಿಜೆಪಿ ನಾಯಕತ್ವ ಅಚ್ಚರಿದಾಯಕ ಆಯ್ಕೆಗಳಿಗೆ ಹೆಸರಾಗಿದೆ. ಹೀಗಾಗಿ ಈ ಪಟ್ಟಿಗಳಲ್ಲಿ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಿ ಶಾಕ್‌ ನೀಡಲೂ ಸಾಧ್ಯತೆಗಳಿವೆ.

ಇದನ್ನೂ ಓದಿ: Assembly election 2023: ಐದು ರಾಜ್ಯಗಳ ಎಲೆಕ್ಷನ್‌ನಲ್ಲಿ ಶೇ.18ರಷ್ಟು ಅಭ್ಯರ್ಥಿಗಳು ಕ್ರಿಮಿನಲ್!

Continue Reading

ಕ್ರಿಕೆಟ್

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Danish Kaneria: ರಾಹುಲ್‌ ಗಾಂಧಿ ವಿರುದ್ಧ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅವರೇನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

danish
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ (ICC Cricket World Cup 2023)ಗೆ ಅದ್ಧೂರಿಯಾಗಿ ತೆರೆ ಎಳೆಯಲಾಗಿದೆ. ನವೆಂಬರ್​ 19ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿ ಆಸ್ಟ್ರೇಲಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಫೈನಲ್‌ ಪಂದ್ಯ ವೀಕ್ಷಣೆಗೆ ಪ್ರಧಾನಮಂತ್ರಿ ನರೆಂದ್ರ ಮೋದಿ (Narendra Modi) ಸ್ಟೇಡಿಯಮ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರು. ಮೋದಿ ʼಪನೌತಿʼ (ದುರದೃಷ್ಟದ ವ್ಯಕ್ತಿ). ಇದರಿಂದಲೇ ಭಾರತ ಸೋಲು ಕಂಡಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಲೇವಡಿ ಮಾಡಿದ್ದರು. ಇದೀಗ ಈ ಚರ್ಚೆಗೆ ಪಾಕಿಸ್ತಾನದ ಮಾಜಿ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಎಂಟ್ರಿ ಕೊಟ್ಟಿದ್ದು, ಹೆಸರು ಹೇಳದೆ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಾನಿಶ್ ಕನೇರಿಯಾ ಹೇಳಿದ್ದೇನು?

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ದಾನಿಶ್ ಕನೇರಿಯಾ “ಪನೌತಿ ಕೌನ್?” (ಈಗ ಯಾರು ದುರದೃಷ್ಟವಂತರು?) ಎಂದು ಪ್ರಶ್ನಿಸಿದ್ದಾರೆ. ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದು, ಇದನ್ನೇ ಮುಂದಿಟ್ಟುಕೊಂಡು ಅವರು ರಾಹುಲ್‌ ಗಾಂಧಿಯ ಕಾಲೆಳೆದಿದ್ದಾರೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಮಾಜಿ ಕ್ರಿಕೆಟಿಗ ತಮ್ಮ ಪೋಸ್ಟ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಆದರೂ ಬಹುತೇಕರು ಇದು ರಾಹುಲ್‌ ಗಾಂಧಿ ಅವರನ್ನು ಉದ್ದೇಶಿಸಿಯೇ ಹೇಳಿದ್ದು ಎಂದು ಊಹಿಸಿದ್ದಾರೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಈ ಮಧ್ಯೆ ತೆಲಂಗಾಣದಲ್ಲಿ ಗದ್ದುಗೆಗೆ ಏರಿದ್ದೊಂದೇ ಕೈ ಪಡೆಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಕೊಟ್ಟ ಯಶಸ್ಸು.

ರಾಹುಲ್‌ ಗಾಂಧಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಭಾರತ ತಂಡ ಸೋತಿದ್ದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ʼಪನೌತಿʼ (ದುರದೃಷ್ಟದ ವ್ಯಕ್ತಿ) ಎಂದು ಕರೆದಿದ್ದರು. ಮೋದಿ ಕ್ರೀಡಾಂಗಣಕ್ಕೆ ಪ್ರವೇಶಿಸಿದ್ದರಿಂದ ಪಂದ್ಯವನ್ನು ಭಾರತ ತಂಡ ಸೋತಿತು ಎಂದು ಆರೋಪಿಸಿದ್ದರು. 

ಈ ಮಧ್ಯೆ ಬಿಜೆಪಿ ನಾಯಕ ಸಿ.ಟಿ.ರವಿ ಕೂಡ ರಾಹುಲ್ ಗಾಂಧಿ ಹೇಳಿಕೆಗೆತಿರುಗೇಟು ನೀಡಿದ್ದಾರೆ. ‘ಅತಿ ದೊಡ್ಡ ಪನೌತಿ ಯಾರು?’ ಎಂದು ಪ್ರಶ್ನಿಸಿದ್ದಾರೆ. ಅವರು ಒಂದು ಹೆಜ್ಜು ಮುಂದೆ ಹೋಗಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿದ್ದರು. ಸದ್ಯ ದಾನಿಶ್ ಕನೇರಿಯಾ ಪೋಸ್ಟ್‌ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

ಇದನ್ನೂ ಓದಿ: ಇಲ್ಲ, ಆಕೆ ನನ್ನನ್ನು ಪಿಎಂ ಮಾಡಲ್ಲ! ಪ್ರಣಬ್ ಮುಖರ್ಜಿ ಹಾಗೇಕೆ ಹೇಳಿದ್ದು?

ಯಾರು ಈ ದಾನಿಶ್ ಕನೇರಿಯಾ?

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ 2000 ಮತ್ತು 2010ರ ನಡುವೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಪರವಾಗಿ ಆಡಿದ್ದಾರೆ. ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ದೇಶ

ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

ಪ್ರಣಬ್‌ ಮುಖರ್ಜಿ (Pranab Mukherjee) ಅವರು ರಾಹುಲ್ ಗಾಂಧಿ (Rahul Gandhi) ಮತ್ತು ಸೋನಿಯಾ ಗಾಂಧಿ (Sonia Gandhi) ಸೇರಿದಂತೆ ಇತರ ಕಾಂಗ್ರೆಸ್‌ ನಾಯಕರ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದರು ಎಂಬ ಕುತೂಹಲಕ್ಕೆ ಈ ಮೂಲಕ ಉತ್ತರ ದೊರೆತಿದೆ.

VISTARANEWS.COM


on

pranab mukherjee and rahul gandhi
Koo

ಹೊಸದಿಲ್ಲಿ: ರಾಹುಲ್ ಗಾಂಧಿ (Rahul Gandhi) ರಾಜಕೀಯವಾಗಿ ಇನ್ನೂ ಪ್ರಬುದ್ಧರಾಗಿಲ್ಲ; ಅವರಿಗೆ ಆ ವಿಷಯದಲ್ಲಿ ಇನ್ನೂ ಪ್ರೌಢಿಮೆ ಅಗತ್ಯ ಇದೆ ಎಂದು ಕಾಂಗ್ರೆಸ್‌ನ (Congress Party) ಉನ್ನತ ನಾಯಕರಾಗಿದ್ದ ಪ್ರಣಬ್ ಮುಖರ್ಜಿ (Pranab Mukherjee) ಒಮ್ಮೆ ಹೇಳಿದ್ದರಂತೆ. ಹೀಗೆಂದು ಪ್ರಣಬ್ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ (Sharmishta Mukherjee) ಬರೆದ ʼಇನ್ ಪ್ರಣಬ್, ಮೈ ಫಾದರ್: ಎ ಡಾಟರ್ ರೆಮೆಂಬರ್ಸ್ʼ (In Pranab, My Father: A Daughter Remembers) ಕೃತಿಯಲ್ಲಿ ಬರೆದಿದ್ದಾರೆ.

ಪ್ರಣಬ್‌ ಮುಖರ್ಜಿ ಅವರು ರಾಹುಲ್ ಗಾಂಧಿ (Rahul Gandhi) ಮತ್ತು ಸೋನಿಯಾ ಗಾಂಧಿ (Sonia Gandhi) ಸೇರಿದಂತೆ ಇತರ ಕಾಂಗ್ರೆಸ್‌ ನಾಯಕರ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದರು ಎಂಬ ಕುತೂಹಲಕ್ಕೆ ಈ ಮೂಲಕ ಉತ್ತರ ದೊರೆತಿದೆ. ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಗೆ (PM Post) ಆಯ್ಕೆ ಮಾಡುವುದಿಲ್ಲ ಎಂಬ ಸಂಗತಿ ಪ್ರಣಬ್ ಅವರಿಗೆ ಖಚಿತವಾಗಿ ಗೊತ್ತಿತ್ತಂತೆ!

ರಾಹುಲ್ ಗಾಂಧಿ ಅವರನ್ನು ‘ಅತ್ಯಂತ ಸೌಜನ್ಯಯುತ’ ಮತ್ತು ‘ಪ್ರಶ್ನೆಗಳಿಂದ ತುಂಬಿದ’ ಎಂದು ಪ್ರಣಬ್ ಮುಖರ್ಜಿ ಅವರು ಬಣ್ಣಿಸಿದ್ದರು. ಇದನ್ನು ಅವರು ರಾಹುಲ್ ಅವರ ಕಲಿಯುವ ಬಯಕೆಯ ಸಂಕೇತವಾಗಿ ಪರಿಗಣಿಸಿದ್ದರು. ಆದರೆ ರಾಹುಲ್ ರಾಜಕೀಯವಾಗಿ ಇನ್ನೂ ಪ್ರಬುದ್ಧವಾಗಿಲ್ಲ. ರಾಷ್ಟ್ರಪತಿ ಭವನದಲ್ಲಿ ಪದೇ ಪದೇ ಅಲ್ಲದಿದ್ದರೂ ರಾಹುಲ್ ಪ್ರಣಬ್ ಅವರನ್ನು ಭೇಟಿಯಾಗುತ್ತಲೇ ಇದ್ದರು. ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಮತ್ತು ಆಡಳಿತದಲ್ಲಿ ಸ್ವಲ್ಪ ಅನುಭವವನ್ನು ಪಡೆಯಲು ಪ್ರಣಬ್ ಅವರು ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದರು. ಆದರೆ, ರಾಹುಲ್ ಗಾಂಧಿ ಅವರು ಈ ಸಲಹೆಗಳಿಗೆ ಕಿವಿಗೊಡುತ್ತಿರಲಿಲ್ಲ. ಒಂದು ವಿಷಯದಿಂದ ಇನ್ನೊಂದು ವಿಷಯಕ್ಕೆ ಕ್ಷಿಪ್ರವಾಗಿ ಲಂಘಿಸುತ್ತಿದ್ದರು ಎಂಬ ಮಾಹಿತಿ ಸಂಗತಿ ಪುಸ್ತಕದಲ್ಲಿದೆ.

ಕಾಂಗ್ರೆಸ್‌ನ ಮಾಜಿ ವಕ್ತಾರೆ ಶರ್ಮಿಷ್ಠಾ ಮುಖರ್ಜಿ ಅವರು ಈ ಕೃತಿಯಲ್ಲಿ ಅನೇಕ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. 2021ರಲ್ಲಿ ಶರ್ಮಿಳಾ ಅವರು ರಾಜಕಾರಣವನ್ನು ತೊರೆದಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡದಿದ್ದಕ್ಕಾಗಿ ಅವರು ಯಾವುದೇ ದ್ವೇಷವನ್ನು ಹೊಂದಿರಲಿಲ್ಲ ಮತ್ತು ಆಯ್ಕೆಯಾದ ಮನಮೋಹನ್ ಸಿಂಗ್ ಅವರ ಬಗ್ಗೆಯಂತೂ ಯಾವುದೇ ತಕಾರರು ಇರಲಿಲ್ಲ ಎಂದು ಪ್ರಣಬ್ ಅವರು ಹೇಳಿದ್ದರು ಎಂಬ ಸಂಗತಿಯೂ ಪುಸ್ತಕದಲ್ಲಿದೆ.

ಪ್ರಣಬ್ ಅವರು ಬರೆದ ಡೈರಿ, ತಾವೇ ಕೇಳಿದ ಮಾಹಿತಿಗಳು ಮತ್ತು ಸ್ವಂತ ಸಂಶೋಧನೆಯನ್ನು ಒಳಗೊಂಡ ಅನೇಕ ಒಳನೋಟಗಳನ್ನು ಈ ಹೊಸ ಪುಸ್ತಕದಲ್ಲಿ ಕಾಣಬಹುದು. ಪ್ರಣಬ್ ಅವರ ರಾಜಕೀಯ ಜೀವನದ ಅನೇಕ ಹೊಸ ಸಂಗತಿಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಇದುವರೆಗೂ ಗೊತ್ತಿರದ ಅನೇಕ ಸಂಗತಿಗಳನ್ನು ಬರೆದಿದ್ದಾರೆ. ಸೋನಿಯಾ ಗಾಂಧಿಯವರ ನಂಬಿಕೆಯನ್ನು ಗಳಿಸಲು, ನೆಹರು-ಗಾಂಧಿ ಕುಟುಂಬದ ಸುತ್ತಲಿನ ವ್ಯಕ್ತಿತ್ವ ಆರಾಧನೆ ಮತ್ತು ರಾಹುಲ್ ಗಾಂಧಿಯವರ ವರ್ಚಸ್ಸಿನ ಕೊರತೆ ಮತ್ತು ರಾಜಕೀಯ ತಿಳುವಳಿಕೆ ಇತರ ವಿಷಯಗಳ ಜೊತೆಗೆ ಅನೇಕ ಸಂಗತಿಗಳು ಪುಸ್ತಕದಲ್ಲಿವೆ.

ಪ್ರಣಬ್ ಮುಖರ್ಜಿ ಅವರು ಭಾರತದ ವಿತ್ತ ಸಚಿವರಾಗಿ, ವಿದೇಶಾಂಗ ಸಚಿವರಾಗಿ, ರಕ್ಷಣೆ, ಫೈನಾನ್ಸ್ ಮತ್ತು ವಾಣಿಜ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ. 2012ರಿಂದ 2017ರವರೆಗೆ ಅವರು ದೇಶದ 13ನೇ ರಾಷ್ಟ್ರಪತಿಯಾಗಿ ಕೆಲಸ ಮಾಡಿದ್ದಾರೆ. ಅವರು ತಮ್ಮ 84ನೇ ವಯಸ್ಸಿನಲ್ಲಿ 2020ರ ಆಗಸ್ಟ್‌ 31ರಂದು ನಿಧನರಾದರು.

ಶರ್ಮಿಷ್ಠಾ ಮುಖರ್ಜಿ ಅವರು ಬರೆದಿರುವ ಪುಸ್ತಕದಲ್ಲಿ ಭಾರತ ಎಂದೂ ಹೊಂದದ ಪ್ರಧಾನಿ(ದಿ ಪಿಎಂ ಇಂಡಿಯಾ ನೆವರ್ ಹ್ಯಾಡ್) ಅಧ್ಯಾಯದಲ್ಲಿ ಸಾಕಷ್ಟು ಅಂಶಗಳ ಕುರಿತು ಚರ್ಚಿಸಿದ್ದಾರೆ. 2004ರಲ್ಲಿ ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆ ರೇಸಿನಿಂದ ಹಿಂದೆ ಸರಿದ ಬಳಿಕ, ಮುಂದಿನ ಪ್ರಧಾನಿ ಯಾರಾಗುತ್ತಾರೆಂಬ ಮಾಧ್ಯಮಗಳು ಮತ್ತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿತ್ತು.

ಡಾ. ಮನಮೋಹನ್ ಸಿಂಗ್ ಮತ್ತು ಪ್ರಣಬ್ ಮುಖರ್ಜಿ ಅವರು ಹೆಸರುಗಳು ಪ್ರಧಾನವಾಗಿ ಕೇಳಿ ಬರುತ್ತಿದ್ದವು. ಆ ದಿನಗಳಲ್ಲಿ ನಾನು ಎರಡು ದಿನಗಳ ಕಾಲ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಆಗ ನಾನು ಫೋನ್ ಮೂಲಕ ಅವರೊಂದಿಗೆ ಮಾತನಾಡಿದೆ. ನೀವು ಪ್ರಧಾನಿಯಾಗುತ್ತೀರಾ ಎಂದು ಕೇಳಿದೆ. ಆಗ ಅವರು, ”ಇಲ್ಲ ಆಕೆ(ಸೋನಿಯಾ ಗಾಂಧಿ) ನನ್ನನ್ನು ಪ್ರಧಾನಿಯನ್ನಾಗಿ ಮಾಡುವುದಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಯಾಗುತ್ತಾರೆ. ಆದರೆ, ಈ ಬಗ್ಗೆ ಆದಷ್ಟು ಬೇಗನೆ ನಿರ್ಧಾರ ಕೈಗೊಳ್ಳಬೇಕು. ಅನಿಶ್ಚಿತತೆ ದೇಶದ ಹಿತ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದು ಹೇಳಿದರು ಎಂದು ಶರ್ಮಿಷ್ಠಾ ಬರೆದಿದ್ದಾರೆ.

ಶರ್ಮಿಷ್ಠಾ ಮುಖರ್ಜಿಯವರು ಹೇಳುವಂತೆ, ಜನರು ತಮ್ಮ ತಂದೆಗೆ ನಿಜವಾಗಿಯೂ ಪ್ರಧಾನಿಯಾಗಬೇಕೆಂಬ ಮಹತ್ವಾಕಾಂಕ್ಷೆ ಇದೆಯೇ ಎಂದು ಆಗಾಗ್ಗೆ ಕೇಳುತ್ತಿದ್ದರು. ಯುಪಿಎ-1 ಅವಧಿಯಲ್ಲಿ ಶರ್ಮಿಷ್ಟಾ ಅವರು ಈ ಪ್ರಶ್ನೆಯನ್ನು ಪ್ರಣಬ್ ಅವರಿಗೂ ಕೇಳಿದ್ದರು.

ಹೌದು ಖಂಡಿತವಾಗಿಯೂ, ನಾನು ಕೂಡ ಭಾರತದ ಪ್ರಧಾನಿಯಾಗಬೇಕು. ಅರ್ಹ ಆಗಿರುವ ಯಾವುದೇ ರಾಜಕೀಯ ನಾಯಕ ಇಂಥ ಮಹತ್ವಾಕಾಂಕ್ಷೆ ಹೊಂದಿರುತ್ತಾನೆ. ಆದರೆ ನಾನು ಅದನ್ನು ಬಯಸುವುದರಿಂದ ನಾನು ಅದನ್ನು ಪಡೆಯಲಿದ್ದೇನೆ ಎಂದು ಅರ್ಥವಲ್ಲ ಎಂದು ಹೇಳಿದ್ದರು ಎಂಬ ಸಂಗತಿಯನ್ನು ಶರ್ಮಿಷ್ಠಾ ಅವರು ದಾಖಲಿಸಿದ್ದಾರೆ.

ಇದನ್ನೂ ಓದಿ: ಇಲ್ಲ, ಆಕೆ ನನ್ನನ್ನು ಪಿಎಂ ಮಾಡಲ್ಲ! ಪ್ರಣಬ್ ಮುಖರ್ಜಿ ಹಾಗೇಕೆ ಹೇಳಿದ್ದು?

Continue Reading

ದೇಶ

Mamata Banerjee: ಸಲ್ಮಾನ್‌ ಖಾನ್‌ ಜತೆ ಮಮತಾ ಬ್ಯಾನರ್ಜಿ ಡ್ಯಾನ್ಸ್‌! ವಿಡಿಯೊ ಇಲ್ಲಿದೆ

Mamata Banerjee: 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಡ್ಯಾನ್ಸ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

mamtha
Koo

ಕೋಲ್ಕತ್ತಾ: ಸದಾ ರಾಜಕೀಯದಲ್ಲಿ ಬ್ಯುಸಿ ಇರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜಕೀಯವನ್ನೆಲ್ಲ ಮರೆತು ವೇದಿಕೆ ಮೇಲೆ ಡ್ಯಾನ್ಸ್‌ ಮಾಡಿದ್ದಾರೆ. ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಜತೆ ಮಮತಾ ಸ್ಟೆಪ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ. ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ (KIFF) ಮಂಗಳವಾರ (ಡಿಸೆಂಬರ್ 6) ಉದ್ಘಾಟನೆಗೊಂಡಿತು. ಈ ವೇಳೆ ಮಮತಾ ಡ್ಯಾನ್ಸ್‌ ಮಾಡಿ ಬೆರಗು ಮೂಡಿಸಿದರು.

ಸಲ್ಮಾನ್ ಖಾನ್ ಹಾಗೂ ಇತರ ಸೆಲೆಬ್ರಿಟಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಆ ವೇಳೆ ಮಮತಾ ಬ್ಯಾನರ್ಜಿ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ಡ್ಯಾನ್ಸ್ ಮಾಡುವಂತೆ ಮಮತಾ ಬ್ಯಾನರ್ಜಿ ಬಳಿ ಬಂದು ಸಲ್ಮಾನ್ ಖಾನ್ ಮನವಿ ಮಾಡಿದರು. ಅದಕ್ಕೆ ಮಮತಾ ಬ್ಯಾನರ್ಜಿ ಒಪ್ಪಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಸಲ್ಮಾನ್, ಮಮತಾ ಮಾತ್ರವಲ್ಲದೆ ಮಹೇಶ್ ಭಟ್, ಅನಿಲ್ ಕಪೂರ್, ಸೋನಾಕ್ಷಿ ಸಿನ್ಹಾ, ಶತ್ರುಘ್ನ ಸಿನ್ಹಾ ಕೂಡ ಸೊಂಟ ಬಳುಕಿಸಿದ್ದಾರೆ. ವೇದಿಕೆಯಲ್ಲೇ ಇದ್ದ ಸೌರವ್‌ ಗಂಗೂಲಿ ನಗುತ್ತಾ ಚಪ್ಪಾಳೆ ತಟ್ಟುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಮಮತಾ ಬ್ಯಾನರ್ಜಿ ಜಾಸ್ತಿ ಸ್ಟೆಪ್ಸ್‌ ಹಾಕಿಲ್ಲ. ಬರೀ ಕೈ ಬೀಸಿದ್ದಾರೆ. ಇದನ್ನೇ ಕೆಲವರು ಟ್ರೋಲ್‌ ಮಾಡುತ್ತಿದ್ದಾರೆ. ಅಲ್ಲದೆ ಮಮತಾ ಬ್ಯಾನರ್ಜಿ ಅವರಿಂದ ಸ್ಟೆಪ್‌ ಮಾಡಿಸಿದ ಸಲ್ಮಾನ್‌ ಖಾನ್‌ ಅವರಿಗೂ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಡಿಸೆಂಬರ್ 12ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಈ ವೇಳೆ 39 ದೇಶಗಳ 219 ಚಲನಚಿತ್ರ ಪ್ರದರ್ಶನವಾಗಲಿದೆ. ಹಲವು ಸೆಲೆಬ್ರಿಟಿಗಳು, ನಿರ್ದೇಶಕರು, ವಿಮರ್ಶಕರು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Continue Reading
Advertisement
kim
ವಿದೇಶ8 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ21 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್21 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ36 mins ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

Government Job Vistara Exclusive
ಉದ್ಯೋಗ55 mins ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್1 hour ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್1 hour ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

pranab mukherjee and rahul gandhi
ದೇಶ1 hour ago

ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

Murder case in kopal
ಕರ್ನಾಟಕ1 hour ago

Murder Case : ನಿದ್ರೆಗೆ ಜಾರಿದಾಗ ವ್ಯಕ್ತಿಯ ಕತ್ತು ಕೊಯ್ದ ಹಂತಕರು!

gold bride
ಕರ್ನಾಟಕ2 hours ago

Gold Rate Today: ಬಂಗಾರದ ಬೆಲೆಯಲ್ಲಿ ತುಸು ಇಳಿಕೆ, ಬೆಳ್ಳಿ ದರವೂ ಕುಸಿತ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive
ಉದ್ಯೋಗ55 mins ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ16 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ16 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ4 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

ಟ್ರೆಂಡಿಂಗ್‌