Site icon Vistara News

ಸರ್ಕಾರಿ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳಿಗೆ ನಿರ್ಬಂಧ: ಹಿಂದು ವಿರೋಧಿ ನಿಲುವು?

Ban on celebration of religious festivals in residential schools colleges in Karnataka

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು (Religious festivals) ಆಚರಿಸುವಂತಿಲ್ಲ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ (National Festivals) ಆದೇಶಿಸಲಾಗಿದೆ.

ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು. ಆದರೆ ಕೆಲವು ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

1) ಗಣರಾಜ್ಯೋತ್ಸವ
2) ಸ್ವಾತಂತ್ರ್ಯ ದಿನಾಚರಣೆ
3) ಗಾಂಧಿ ಜಯಂತಿ
4) ಕನ್ನಡ ರಾಜ್ಯೋತ್ಸವ
5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ
6) ವಾಲ್ಮೀಕಿ ಜಯಂತಿ
7) ಕನಕದಾಸ ಜಯಂತಿ
8) ಬಸವ ಜಯಂತಿ
9) ಸಂವಿಧಾನ ಜಯಂತಿ
10) ಯೋಗ ದಿನಾಚರಣೆ


ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಕಾಲೇಜುಗಳಲ್ಲಿ ಈ ಮೇಲಿನ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿದೆ.

ಹಿಂದು ವಿರೋಧಿ ನಿಲುವು: ಬಿಜೆಪಿ ಆಕ್ಷೇಪ

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಯನ್ನು ನಿರ್ಬಂಧಿಸುವ ಮೂಲಕ ಕಾಂಗ್ರೆಸ್‌ ಸರ್ಕಾರ ತನ್ನ ಹಿಂದು ವಿರೋಧಿ ನೀತಿಯನ್ನು ಮುಂದುವರಿಸಿದೆ ಎಂದು ಬಿಜೆಪಿ ಆಕ್ಷೇಪಿಸಿದೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿ ಕುಮಾರ್‌ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿ, ಸರ್ಕಾರ ಅನಗತ್ಯವಾಗಿ ಇಂಥ ನಿರ್ಧಾರಗಳನ್ನು ತಳೆಯುತ್ತಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version