cannabis Sale: ಶಿಕ್ಷಣ ಸಂಸ್ಥೆಗಳ ಸುತ್ತ ಗಾಂಜಾ ಮಾರಾಟ; ಸೂಕ್ತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ - Vistara News

ಶಿಕ್ಷಣ

cannabis Sale: ಶಿಕ್ಷಣ ಸಂಸ್ಥೆಗಳ ಸುತ್ತ ಗಾಂಜಾ ಮಾರಾಟ; ಸೂಕ್ತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

cannabis Sale: ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ ನಡೆಯುತ್ತಿದ್ದು, ಸೂಕ್ತ ಕ್ರಮವಹಿಸಲು ಡಿಜಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಮಾದಕವಸ್ತು ಜಾಲ ಹಬ್ಬಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಅವರು ಪತ್ರ ಬರೆದು ಗಮನ ಸೆಳೆದಿದ್ದರು.

VISTARANEWS.COM


on

cannabis Sale near schools
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ (cannabis Sale) ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಎಚ್ಚರಿಸಿದ್ದರು. ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಪತ್ರದಲ್ಲಿ ಮನವಿ ಮಾಡಿದ್ದರು.

ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಮಹಾ ನಿರ್ದೇಶಕರು, ಈ ಬಗ್ಗ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಲು ನಿರ್ದೇಶನ ನೀಡಿದ್ದಾರೆ.

ಮಕ್ಕಳು ಭವಿಷ್ಯದ ರೂವಾರಿಗಳಾಗಿದ್ದು, ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳ ಸಮೀಪದಲ್ಲಿಯೇ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಸಂಬಂಧ ಕ್ರಮ ವಹಿಸಬೇಕು. ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಶಾಸಕ ದಿನೇಶ್‌ ಗೂಳಿಗೌಡ ಪತ್ರದಲ್ಲೇನಿದೆ?

“ಮಕ್ಕಳು ದೇವರ ರಾಜ್ಯದ ಪ್ರಜೆಗಳು”. ರಾಷ್ಟ್ರಕವಿ ಕುವೆಂಪು ಅವರ ಈ ಮಾತು ಅಕ್ಷರಶಃ ಸತ್ಯ. ಆದರೆ, ಈ ನಾಡಿನಲ್ಲಿ ನಿಜಕ್ಕೂ ಏನಾಗುತ್ತಿದೆ? ಮಕ್ಕಳು ನೀತಿವಂತರಾಗಿ, ಸುಸಂಸ್ಕೃತರಾಗಿ, ದುಶ್ಚಟಗಳಿಲ್ಲದೇ ಕಲಿಕೆ ಮಾಡುತ್ತಿದ್ದಾರೆಯೇ? ಅಂಥದ್ದೊಂದು ಸುಂದರ ಜೀವನ ಅವರದ್ದಾಗಿದೆಯೇ? ಎಂಬ ಪ್ರಶ್ನೆಯನ್ನು ಕೇಳಿಕೊಂಡಾಗ, ಸಿಗುವ ಉತ್ತರ “ಇಲ್ಲ”. ನಾನಿಂದು ಅತ್ಯಂತ ವಿಷಾದ ಹಾಗೂ ನೋವಿನಿಂದ ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಅದೂ ನೊಂದ ಮಕ್ಕಳ ಹಾಗೂ ಅವರ ಪೋಷಕರ ಪರವಾಗಿ ಸರ್ಕಾರದ ಗಮನಕ್ಕೆ ತರಲು ಬಯಸುತ್ತಿದ್ದೇನೆ. ಮಾದಕ ವ್ಯಸನಗಳಿಗೆ ಇಂದು ಅನೇಕ ಮಕ್ಕಳು ಬಲಿಯಾಗುತ್ತಿದ್ದಾರೆ. ಬದುಕನ್ನು ಕಟ್ಟಿಕೊಳ್ಳಬೇಕಾದ ಈ ಸಮಯದಲ್ಲಿ ಗಾಂಜಾ ಮತ್ತಿತರೆ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದನ್ನು ನಾವೀಗ ತಪ್ಪಿಸಬೇಕಿದೆ. ಮಕ್ಕಳಿಗೆ ಸುಸ್ಥಿರ ಬದುಕನ್ನು ಕಟ್ಟಿಕೊಡಲು ಬಲಿಷ್ಠ ಹಾಗೂ ಬಲಾಢ್ಯ ಕಾನೊನು ರೂಪಿಸಬೇಕಿದೆ.

ಹಾಗಂತ ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ಹಲವು ದಶಕಗಳಿಂದ ಬೆನ್ನು ಹತ್ತಿರುವ ಪೆಡಂಭೂತವಾಗಿದೆ. ಈ ಮಧ್ಯೆ ಅನೇಕ ಸರ್ಕಾರಗಳು ಆಳಿ ಹೋಗಿವೆ. ಅದೆಷ್ಟೋ ದಕ್ಷ ಅಧಿಕಾರಿಗಳ ಅವಧಿಗಳು ಮುಗಿದು ಹೋಗಿವೆ. ಆದರೆ, ಇದುವರೆಗೂ ಇಂಥ ಸಮಸ್ಯೆಯನ್ನು ಬೇರು ಸಮೇತ ಕಿತ್ತೊಗೆಯಲು ಸಾಧ್ಯವೇ ಆಗಿಲ್ಲ. ‌ಮಾದಕ ವ್ಯಸನಗಳಿಗೆ, ಗಾಂಜಾ ವಹಿವಾಟಿಗೆ ಪದೇ ಪದೇ ಮಕ್ಕಳು ಟಾರ್ಗೆಟ್ ಆಗುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿವೆ. ಅನೇಕ ಪಾಲಕರ ಅಳಲು ಹೀಗಾಗಿ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುವುದು ಈಗಿನ ತುರ್ತು ಕ್ರಮಗಳಲ್ಲಿ ಒಂದು ಎಂಬುದು ನನ್ನ ಭಾವನೆಯಾಗಿದೆ.

ಏಕೆಂದರೆ ಗಾಂಜಾ ಹಾವಳಿ ದೊಡ್ಡ ಪಿಡುಗಿನಂತೆ ವ್ಯಾಪಿಸಿದೆ. ಇದರ ಸುಳಿಗೆ ಯುವಜನತೆ ದೊಡ್ಡ ಸಂಖ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಶೈಕ್ಷಣಿಕ ಬದುಕು ಮೂರಾಬಟ್ಟೆಯಾಗಿದೆ. ಗಾಂಜಾ ಖರೀದಿಗೆ ಹಣವಿಲ್ಲದೆ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳ್ಳತನ, ಸುಲಿಗೆಗಳಿಗೆ ಕೆಲವರು ಇಳಿದಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇದು ಪೋಷಕರನ್ನು ಕಂಗೆಡಿಸಿದೆ. ಈ ಸಕ್ರಿಯ ಜಾಲಕ್ಕೆ ಕೊನೆ ಹಾಡಲೇಬೇಕಿದೆ.

ಇದನ್ನು ಕೂಲಂಕಷವಾಗಿ ನೋಡುತ್ತಾ ಹೋದರೆ ಪೊಲೀಸರಿಗೆ ಮಾಹಿತಿ ಇದ್ದರೂ ಏಕೆ ಸುಮ್ಮನಿದ್ದಾರೆ ಎಂಬ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಹಾಗಾಗದೇ ಗಾಂಜಾ ಮಾರಾಟ ಹಾಗೂ ಸೇವನೆ ಜಾಲವನ್ನು ಬೇರು ಸಮೇತ ಕಿತ್ತೊಗೆಯಲು ತಾವು ಮುಂದಾಗಬೇಕು. ಇದಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನಡಿ ಕ್ರಮವನ್ನು ಜರುಗಿಸಬೇಕು.

ಸರ್ಕಾರ ತಗೆದುಕೊಳ್ಳಬಹುದಾದ ಕ್ರಮಗಳು

  • ಜಿಲ್ಲಾ ಮಟ್ಟದಲ್ಲಿ ವಿಶೇಷ ದಳವನ್ನು ರಚಿಸುವುದು. ಆ ದಳಕ್ಕೆ ಮುಕ್ತ ಅಧಿಕಾರ ಮತ್ತು ಬೆಂಬಲ ನೀಡುವುದು
  • ಸಾರ್ವಜನಿಕರ ಸಹಕಾರ ಪಡೆಯಲು ಸಹಾಯವಾಣಿಯನ್ನು ಆರಂಭಿಸುವುದು
  • ಜನರು ಮುಕ್ತವಾಗಿ ಮಾಹಿತಿ ನೀಡುವಂತಾಗಲು ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಮನವರಿಕೆ ಮಾಡುವುದು
  • ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಶೇಷ ಗಸ್ತು ವ್ಯವಸ್ಥೆ ಮಾಡುವುದು
  • ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು
  • ಇಂಥ ಜಾಲದ ಬಗ್ಗೆ ಗಮನಕ್ಕೆ ಬಂದರೆ ಶಾಲಾ ಮುಖ್ಯಸ್ಥರು, ಇಲ್ಲವೇ ಪೋಷಕರ ಗಮನಕ್ಕೆ ತರುವಂತೆ ಮನವರಿಕೆ ಮಾಡುವುದು

ಇದನ್ನೂ ಓದಿ: Love Jihad: ಅಪ್ರಾಪ್ತೆ ಜತೆಗೆ ಲವ್‌; ಮುಸ್ಲಿಂ ಯುವಕನ ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಹಿಂದೂ ಕಾರ್ಯಕರ್ತರು

ಕೂಡಲೇ ನಮ್ಮ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಬೇಕು ಎಂದು ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024: ಅಧಿವೇಶನದಲ್ಲಿ ‘ನೀಟ್‌’ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ; ಪ್ರತ್ಯುತ್ತರ ಕೊಟ್ಟ ಕೇಂದ್ರ ಸಚಿವ

NEET UG 2024: ನೀಟ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ರೀತಿಯ ಅಕ್ರಮ ನಡೆದಿರುವ ಕುರಿತು ರಾಹುಲ್‌ ಗಾಂಧಿ ಅವರು ಸಂಸತ್‌ನಲ್ಲಿ ಪ್ರಶ್ನಿಸಿದರು. ಇಷ್ಟೆಲ್ಲ ಸಮಸ್ಯೆಯಾದರೂ, ಸಮಸ್ಯೆ ಬಗೆಹರಿಸಲು ಶಿಕ್ಷಣ ಸಚಿವರು ತೆಗೆದುಕೊಂಡು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬುದಾಗಿ ರಾಹುಲ್‌ ಗಾಂಧಿ ಪ್ರಶ್ನಿಸಿದರು. ಇದಕ್ಕೆ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಪ್ರತ್ಯುತ್ತರ ನೀಡಿದರು.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ನೀಟ್‌ ಪರೀಕ್ಷೆ (NEET UG 2024) ಅಕ್ರಮದ ಕುರಿತು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಂಸತ್‌ ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಸೋಮವಾರದಿಂದ ಬಜೆಟ್‌ ಅಧಿವೇಶನ (Union Budget Session 2024) ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಲೇ ರಾಹುಲ್‌ ಗಾಂಧಿ ಅವರು ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಪ್ರಸ್ತಾಪಿಸಿದರು. ಅಖಿಲೇಶ್‌ ಯಾದವ್‌ ಅವರು ಕೂಡ, ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಕುಟುಕಿದರು. ಇದಕ್ಕೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ (Dharmendra Pradhan) ಅವರು ಪ್ರತ್ಯುತ್ತರ ನೀಡಿದರು. ಇದೇ ವೇಳೆ ಆರೋಪ-ಪ್ರತ್ಯಾರೋಪಗಳೂ ನಡೆದವು.

ರಾಹುಲ್‌ ಗಾಂಧಿ ಹೇಳಿದ್ದೇನು?

“ದೇಶಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಗಂಭೀರ ಸಮಸ್ಯೆ ಇದೆ ಎಂಬುದು ದೃಢವಾಗಿದೆ. ಇದು ನೀಟ್‌ ಮಾತ್ರವಲ್ಲ, ಎಲ್ಲ ಪ್ರಮುಖ ಪರೀಕ್ಷೆಗಳ ವ್ಯವಸ್ಥೆಯಲ್ಲೂ ಲೋಪದೋಷವಿದೆ. ಆದರೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ತಮ್ಮೊಬ್ಬರನ್ನು ಬಿಟ್ಟು ಎಲ್ಲರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಏನು ನಡೆಯುತ್ತಿದೆ, ಯಾವ ಮೂಲಭೂತ ಸಮಸ್ಯೆಯು ವಿದ್ಯಾರ್ಥಿಗಳನ್ನು ಕಾಡುತ್ತಿದೆ ಎಂಬುದೇ ಧರ್ಮೇಂದ್ರ ಪ್ರಧಾನ್‌ ಅವರಿಗೆ ಅರ್ಥವಾಗಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ದೇಶದ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಂದರೆಯಾಗುತ್ತಿದೆ” ಎಂದು ಹೇಳಿದರು.

ಧರ್ಮೇಂದ್ರ ಪ್ರಧಾನ್‌ ಪ್ರತ್ಯುತ್ತರ

ರಾಹುಲ್‌ ಗಾಂಧಿ ಆರೋಪಗಳಿಗೆ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಪ್ರತ್ಯುತ್ತರ ನೀಡಿದರು. “ಒಂದು ಸುಳ್ಳನ್ನು ಪದೇಪದೆ ಹೇಳಿದರೆ ಅದು ಸತ್ಯವಾಗುವುದಿಲ್ಲ. ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳೇ ಇಲ್ಲ. ನೀಟ್‌ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳದಲ್ಲಿದೆ. ಸುಮಾರು 240ಕ್ಕೂ ಹೆಚ್ಚಿನ ಪರೀಕ್ಷೆಗಳನ್ನು ಜವಾಬ್ದಾರಿಯಿಂದ ನಡೆಸಲಾಗಿದೆ ಎಂಬುದಾಗಿ ನಾನು ಸ್ಪಷ್ಟಪಡಿಸುತ್ತೇನೆ” ಎಂದು ಹೇಳಿದರು.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Continue Reading

ದೇಶ

NEET UG 2024: ನೀಟ್‌ ಪ್ರಶ್ನೆಪತ್ರಿಕೆ ಟ್ರಂಕ್‌ ಕದ್ದ ಮತ್ತೊಬ್ಬ ಕಿಂಗ್‌ಪಿನ್‌ ಸೇರಿ ಮೂವರನ್ನು ಬಂಧಿಸಿದ ಸಿಬಿಐ!

NEET UG 2024: ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೂವರು ಆರೋಪಿಗಳನ್ನು ಕುಮಾರ ಮಂಗಳಂ ಬಿಷ್ಣೋಯಿ, ದೀಪೇಂದ್ರ ಕುಮಾರ್‌ ಹಾಗೂ ಶಶಿಕುಮಾರ್‌ ಪಾಸ್ವಾನ್‌ ಎಂದು ಗುರುತಿಸಲಾಗಿದೆ. ಇವರಲ್ಲಿ ಶಶಿಕುಮಾರ್‌ ಪಾಸ್ವಾನ್‌ ಬಿ.ಟೆಕ್‌ ಓದಿದ್ದು, ಪ್ರಕರಣದ ಪ್ರಮುಖ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾಗಿದ್ದಾನೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ಕ್ಷೇತ್ರವಾರು ಫಲಿತಾಂಶ ಪ್ರಕಟಿಸಲಾಗಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್‌ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಮತ್ತೊಬ್ಬ ಕಿಂಗ್‌ಪಿನ್‌ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೂವರು ಆರೋಪಿಗಳನ್ನು ಕುಮಾರ ಮಂಗಳಂ ಬಿಷ್ಣೋಯಿ, ದೀಪೇಂದ್ರ ಕುಮಾರ್‌ ಹಾಗೂ ಶಶಿಕುಮಾರ್‌ ಪಾಸ್ವಾನ್‌ ಎಂದು ಗುರುತಿಸಲಾಗಿದೆ. ಇವರಲ್ಲಿ ಶಶಿಕುಮಾರ್‌ ಪಾಸ್ವಾನ್‌ ಬಿ.ಟೆಕ್‌ ಓದಿದ್ದು, ಪ್ರಕರಣದ ಪ್ರಮುಖ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾಗಿದ್ದಾನೆ. ಈತನು ಪಂಕಜ್‌ ಎಂಬ ಮತ್ತೊಬ್ಬ ಆರೋಪಿಯ ಜತೆಗೂಡಿ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ನೀಟ್‌ ಪ್ರಶ್ನೆಪತ್ರಿಕೆಯ ಟ್ರಂಕ್‌ಗಳನ್ನು ಕದ್ದಿದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸಿಬಿಐ ಅಧಿಕಾರಿಗಳು 21 ಆರೋಪಿಗಳನ್ನು ಬಂಧಿಸಿದ್ದಾರೆ.

NEET UG 2024

ಅಕ್ರಮಕ್ಕೆ ಸಂಬಂಧಿಸಿದಂತೆ ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್‌ನ ನಾಲ್ಕು ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ (CBI) ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಪಂಕಜ್ ಕುಮಾರ್ ಅಲಿಯಾಸ್ ಆದಿತ್ಯ ಮತ್ತು ರಾಜು ಸಿಂಗ್ ಅವರನ್ನು ಪಟನಾ ಮತ್ತು ಹಜಾರಿಬಾಗ್ (ಜಾರ್ಖಂಡ್)ನಿಂದ ಅರೆಸ್ಟ್‌ ಮಾಡಲಾಗಿತ್ತು. ಇದಕ್ಕೂ ಮೊದಲು ಪ್ರಕರಣ ರೂವಾರಿ ಎಂದೇ ಹೇಳಲಾಗುತ್ತಿರುವ ರಾಕೇಶ್‌ ರಂಜನ್‌ ಅಲಿಯಾಸ್‌ ರಾಕಿಯನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

Continue Reading

ದೇಶ

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

Manoj Soni: ಮನೋಜ್‌ ಸೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರೂ ಆಗಿದ್ದಾರೆ. ಮೋದಿ ಅವರು ಗುಜರಾತ್‌ ಸಿಎಂ ಆಗಿದ್ದಾಗ ವಡೋದರಾದಲ್ಲಿರುವ ಎಂಎಸ್‌ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಮನೋಜ್‌ ಸೋನಿ ಅವರನ್ನು ನೇಮಿಸಲಾಗಿತ್ತು. ಕಳೆದ ಜೂನ್‌ನಲ್ಲಿಯೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Manoj Soni
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ನೀಟ್‌ ಯುಜಿ (NEET UG 2024) ಪರೀಕ್ಷೆಯ ಅಕ್ರಮ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ, ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರು ನಕಲಿ ದಾಖಲೆ ಸೃಷ್ಟಿಸಿ, ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕೂಡ ಅಷ್ಟೇ ಸದ್ದು ಮಾಡುತ್ತಿದೆ. ಇದರಿಂದಾಗಿ ಕೇಂದ್ರ ಲೋಕಸೇವಾ ಆಯೋಗದ (UPSC) ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ (Manoj Soni) ರಾಜೀನಾಮೆ ನೀಡಿದ್ದಾರೆ.

ಮನೋಜ್‌ ಸೋನಿ ಅವರು ರಾಜೀನಾಮೆ ಸಲ್ಲಿಸಿದ್ದು, ಇದುವರೆಗೆ ಅವರ ರಾಜೀನಾಮೆಯನ್ನು ಅಂಗೀಕಾರ ಆಗಿಲ್ಲ ಎಂಬುದಾಗಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಮೂಲಗಳು ತಿಳಿಸಿವೆ ಎಂಬುದಾಗಿ ಎಎನ್‌ಐ ಸುದ್ದಿಸಂಸ್ಥೆಯು ತಿಳಿಸಿದೆ. 2023ರ ಮೇ 16ರಂದು ಯುಪಿಎಸ್‌ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಮನೋಜ್‌ ಸೋನಿ ಅವರ ಅಧಿಕಾರದ ಅವಧಿಯು 2029ರವರೆಗೆ ಇದೆ. 2017ರಿಂದಲೂ ಇವರು ಯುಪಿಎಸ್‌ಸಿ ಸದಸ್ಯರೂ ಆಗಿದ್ದರು. ಈಗ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ.

ಮನೋಜ್‌ ಸೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರೂ ಆಗಿದ್ದಾರೆ. ಮೋದಿ ಅವರು ಗುಜರಾತ್‌ ಸಿಎಂ ಆಗಿದ್ದಾಗ ವಡೋದರಾದಲ್ಲಿರುವ ಎಂಎಸ್‌ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಮನೋಜ್‌ ಸೋನಿ ಅವರನ್ನು ನೇಮಿಸಲಾಗಿತ್ತು. ಆಗ ಮನೋಜ್‌ ಸೋನಿ ಅವರಿಗೆ 40 ವರ್ಷ ವಯಸ್ಸು. ಆ ಮೂಲಕ ಅವರು ದೇಶದ ಅತಿ ಕಿರಿಯ ವಯಸ್ಸಿನ ಕುಲಪತಿ ಎಂಬ ಖ್ಯಾತಿಗೂ ಭಾಜನರಾಗಿದ್ದರು. ಕಳೆದ ತಿಂಗಳೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿವೆ. ಅವರು ಅಂಗವೈಕಲ್ಯ ಪ್ರಮಾಣಪತ್ರ ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ. ಯಪಿಎಸ್‌ಸಿಯು ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಆದರೆ, ಯುಪಿಎಸ್‌ಸಿ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಹಿನ್ನೆಲೆಯಲ್ಲಿಯೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

Continue Reading

ಕರ್ನಾಟಕ

LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

LKG UKG in Anganwadis: ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ಜುಲೈ 22ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ.

VISTARANEWS.COM


on

LKG UKG in Anganwadis
Koo

ಬೆಂಗಳೂರು: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಆರಂಭಿಸುತ್ತಿದ್ದು, ಜುಲೈ 22ರಂದು ಸೋಮವಾರ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ (LKG UKG in Anganwadis) ಚಾಲನೆ ನೀಡಲಿದ್ದಾರೆ.

ಗೋವಿಂದರಾಜನಗರದ ಪಟ್ಟೆಗಾರಪಾಳ್ಯ ಮುಖ್ಯರಸ್ತೆಯ ಕಾವೇರಿಪುರ 4ನೇ ಕ್ರಾಸ್‌ನ ಬಾಲಯ್ಯ ಪಾರ್ಕ್ ಎದುರು ಜುಲೈ 22ರಂದು ಮಧ್ಯಾಹ್ನ 12ಗಂಟೆಗೆ ಪೂರ್ವ ಪ್ರಾಥಮಿಕ ತರಗತಿಗೆ ಚಾಲನೆ ಕಾರ್ಯಕ್ರಮ ನಡೆಯಲಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸರ್ಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ (LKG UKG in Anganwadis) ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ಹೇಳಿದ್ದರು.

ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

ಈ ಮೊದಲು ಪ್ರಾಥಮಿಕ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Continue Reading
Advertisement
Chaluvadi Narayanaswamy
ಕರ್ನಾಟಕ7 mins ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ21 mins ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ45 mins ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ1 hour ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ1 hour ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ1 hour ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್1 hour ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ1 hour ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು2 hours ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌