CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ - Vistara News

ಶಿಕ್ಷಣ

CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

CET 2024 Exam: ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ. ಈಗ ಗ್ರೇಸ್‌ ಮಾರ್ಕ್ಸ್‌ ಕೊಡುವ ಬಗ್ಗೆ ಕೆಇಎ ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟ ಮಾಡಿಲ್ಲ. ಈ ಸಂಬಂಧ ಬುಧವಾರ ಸಭೆ ಕರೆಯಲಿದ್ದು, ಅಲ್ಲಿ ಚರ್ಚೆ ಮಾಡಿ ಸಮಿತಿಯೊಂದನ್ನು ರಚನೆ ಮಾಡುವುದಾಗಿ ಹೇಳಿದೆ.

VISTARANEWS.COM


on

CET 2024 exam Complaint against syllabus question of Mathematics and Biology KEA to set up committee on April 24
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ.

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ನಾಳೆ ಯಾವ ಪರೀಕ್ಷೆ?

ಸಿಇಟಿ 2024ರ ಪರೀಕ್ಷೆಗಳು ಏಪ್ರಿಲ್‌ 18ರಿಂದ ಆರಂಭವಾಗಿದ್ದು, ಏಪ್ರಿಲ್ 20ರವರೆಗೆ ನಡೆಯಲಿದೆ. ಏಪ್ರಿಲ್ 19ರ ಬೆಳಗ್ಗೆ 10.30ರಿಂದ ಭೌತಶಾಸ್ತ್ರ , ಮಧ್ಯಾಹ್ನ ರಸಾಯನ ಶಾಸ್ತ್ರ, ಏಪ್ರಿಲ್ 20 – ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

CET Exam: ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

VISTARANEWS.COM


on

CET exam 2024
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET exam 2024) ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್‌ನನಲ್ಲಿ ಪ್ರಕಟಿಸಲಾಗಿದೆ. ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್‌ ಮೂಲಕ ಏಪ್ರಿಲ್ 30ರಂದು ಬೆಳಗ್ಗೆ 11ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಈ ಮೂಲಕ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ. ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Continue Reading

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading

ಕರ್ನಾಟಕ

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

CET 2024: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇದರ ಬೆನ್ನಲ್ಲೇ, ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸೋಮವಾರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಎಲ್ಲರ ಗಮನವೀಗ ರಾಜ್ಯ ಸರ್ಕಾರದ ತೀರ್ಮಾನದ ಮೇಲಿದೆ.

VISTARANEWS.COM


on

CET
Koo

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET 2024) ಔಟ್‌ ಆಫ್‌ ಸಿಲಬಸ್‌ (Out Of Syllabus) ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಪರಿಶೀಲನೆ ನಡೆಸಲು ರಚಿಸಿರುವ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ (Karnataka Government) ವರದಿ ಸಲ್ಲಿಸಿದೆ. ತಜ್ಞರ ಸಮಿತಿಯ ವರದಿ ಅನ್ವಯ ರಾಜ್ಯ ಸರ್ಕಾರವು ಸೋಮವಾರ (ಏಪ್ರಿಲ್‌ 29) ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದ್ದು, ಮರು ಪರೀಕ್ಷೆ ನಡೆಸಲಾಗುತ್ತದೆಯೋ ಅಥವಾ ಗ್ರೇಸ್‌ ಅಂಕಗಳನ್ನು ನೀಡಲಾಗುತ್ತದೆಯೋ ಎಂಬ ಕುತೂಹಲ ವಿದ್ಯಾರ್ಥಿಗಳಲ್ಲಿ ಮೂಡಿದೆ.

ಪಿಯು ಬೋರ್ಡ್‌ ಹಾಗೂ ಕೆಇಎ ನಡುವೆ ಪಠ್ಯಕ್ರಮದ ಕುರಿತು ಪತ್ರಗಳ ಸಮರ ನಡೆದಿದೆ. ಇದರ ಮಧ್ಯೆಯೇ, ಸಿಇಟಿ ಗೊಂದಲವೂ ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿದೆ. ಹಾಗಾಗಿ, ಸಿಇಟಿ ವೇಳೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲು ಏನು ಕಾರಣ? ಎಲ್ಲಿ ಲೋಪವಾಯಿತು ಎಂಬುದರ ಕುರಿತು ವರದಿ ಆಧರಿಸಿ ರಾಜ್ಯ ಸರ್ಕಾರವು ಸೋಮವಾರವೇ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನವೀಗ ರಾಜ್ಯ ಸರ್ಕಾರದ ಮೇಲಿದೆ.

cet exam karnataka exam authority

ಎಂಜಿನಿಯರಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆಯಲ್ಲಿ ಔಟ್‌ ಆಫ್‌‌‌ ಸಿಲಬಸ್‌‌ ಪ್ರಶ್ನೆಗಳ ಕುರಿತಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಈಗಾಗಲೇ ಭುಗಿಲೆದ್ದಿದೆ. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಪಿಯು ಬೋರ್ಡ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡುವೆ ಪತ್ರ ಸಮರವೂ ನಡೆದಿತ್ತು. ಕೊನೆಗೆ ಎಚ್ಚೆತ್ತ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.

ಪ್ರತಿ ಪತ್ರಿಕೆಯೂ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎಷ್ಟು ಪ್ರಶ್ನೆಗಳು ಪಠ್ಯಕ್ಕೆ ಹೊರತಾಗಿವೆಯೋ ಅಷ್ಟು ಕೃಪಾಂಕ ನೀಡಬಹುದು. ಹಾಗೆ ನೀಡಿದರೆ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ. ಪಿಯು ಅಂಕಗಳನ್ನಷ್ಟೇ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿದರೆ ಸಿಇಟಿ ಉದ್ದೇಶ, ಮಾಡಿದ ಖರ್ಚು ವ್ಯರ್ಥವಾಗುತ್ತದೆ. ಹಾಗಾಗಿ, ಮರು ಪರೀಕ್ಷೆ ನಡೆಸುವ ಅಥವಾ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳನ್ನಷ್ಟೇ ಮೌಲ್ಯಮಾಪನ ಮಾಡಿ ಶೇ.100ಕ್ಕೆ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪದವಿ ಪೂರ್ಣ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದ ಪ್ರಶ್ನೆಗಳನ್ನು ಕೇಳಿರುವ ಕುರಿತು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆರೋಪಿಸಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಿತ್ತು. ತಜ್ಞರ ಸಮಿತಿಯು ಏಪ್ರಿಲ್‌ 25ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

Continue Reading
Advertisement
Dina Bhavishya
ಭವಿಷ್ಯ15 mins ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ15 mins ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು3 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ4 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ5 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ5 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ6 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ6 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ6 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ6 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 mins ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌