Site icon Vistara News

KCET 2022: ವೃತ್ತಿಪರ ಕೋರ್ಸ್‌ಗಳಿಗೆ ಜೂನ್‌ 16 ಮತ್ತು 18ಕ್ಕೆ ಸಿಇಟಿ ಪರೀಕ್ಷೆ

PU Exam Date 2023

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್‌, ಕೃಷಿ, ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಿಇಟಿ-2022ರ ಪರೀಕ್ಷೆಯನ್ನು ಜೂನ್‌ 16 ಕ್ಕೆ ನಡೆಸಲಿದೆ. ಹೊರ ನಾಡ ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಜೂನ್‌ 18ರಂದು ನಡೆಸಲಿದೆ.

ಸಿಇಟಿ-2022ರ ಪ್ರವೇಶ ಪತ್ರವನ್ನು ಜೂನ್‌ 2ರಿಂದ ಡೌನ್‌ಲೋಡ್‌ ಮಾಡಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ ನಿಗದಿತ ಲಿಂಕ್‌ ಅನ್ನು ಆಯ್ಕೆ ಮಾಡಿ, ಪ್ರವೇಶಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಂಡು ಪ್ರಾಧಿಕಾರದ ಮಾರ್ಗದರ್ಶನದ ಪ್ರಕಾರ ನಿಗದಿತ ಕೇಂದ್ರಗಳಿಗೆ ಹಾಜರಾಗಬೇಕು ಎಂದು ತಿಳಿಸಿದೆ.

Exit mobile version