Site icon Vistara News

CET Exams: ಇಂದು ಜೀವಶಾಸ್ತ್ರ, ಗಣಿತ ಪರೀಕ್ಷೆ; ಹಿಜಾಬ್‌ ತೆಗೆದಿಟ್ಟು ಎಕ್ಸಾಂಗೆ ತೆರಳಿದ ವಿದ್ಯಾರ್ಥಿನಿಯರು

PU Exam Date 2023

ಬೆಂಗಳೂರು: ಎಂಜಿನಿಯರಿಂಗ್‌ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority-KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (karnataka common entrance test) ಇಂದು ಆರಂಭವಾಗಲಿದ್ದು, ಮೊದಲ ದಿನ ಜೀವ ಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳು ನಡೆಯಲಿವೆ.

ಹಿಜಾಬ್‌ ಧರಿಸಿ ಬಂದರೆ ಪರೀಕ್ಷಾ ಕೇಂದ್ರದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಇಲಾಖೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದೆ. ಹಾಗಿದ್ದರೂ ಹಲವು ಪರೀಕ್ಷಾ ಕೇಂದ್ರದವರೆಗೆ ಬಹಳಷ್ಟು ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬಂದಿದ್ದರು. ಆದರೆ ಹಿಜಾಬ್‌ ಧರಿಸಿದವರಿಗೆ ಪ್ರವೇಶ ನಿರಾಕರಿಸಿದ ಬಳಿಕ ಹಿಜಾಬ್‌ ತೆಗೆದಿಟ್ಟು ಪರೀಕ್ಷಾ ಕೇಂದ್ರಕ್ಕೆ ತೆರಳಿದರು.

1.4 ಲಕ್ಷ ವಿದ್ಯಾರ್ಥಿಗಳು ಹಾಗೂ 1.7 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 486 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯಲ್ಲಿ ತೊಡಕುಗಳು ಉಂಟಾಗದಂತೆ ಭದ್ರತೆಗಾಗಿ 486 ವೀಕ್ಷಕರು, 972 ವಿಶೇಷ ಜಾಗೃತ ದಳ ಜಾರಿಗೊಳಿಸಲಾಗಿದೆ. 486 ಪ್ರಶ್ನೆ ಪತ್ರಿಕೆ ಪಾಲಕರು, 9,600 ಮೇಲ್ವಿಚಾರಕರು ಸೇರಿದಂತೆ ಒಟ್ಟು 20,483 ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನೇಮಕ ಮಾಡಲಾಗಿದೆ.

https://vistaranews.com/2022/06/15/all-over-state-tomorrow-cet-exam-kea-has-decided-to-conduct-exam-in-neet-formate/

ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದ್ದು, ಪರೀಕ್ಷಾ ಕೇಂದ್ರದ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಜಾರಿಯಲ್ಲಿರಲಿದೆ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವುದು ಕಡ್ಡಾಯವಾಗಿದೆ. ಪರೀಕ್ಷೆ ಸರಾಗವಾಗಿ ನಡೆಯಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇಂದು ಬೆಳಗ್ಗೆ 10.30 ರಿಂದ 11.50: ಜೀವಶಾಸ್ತ್ರ
ಮಧ್ಯಾಹ್ನ 2.30 ರಿಂದ 3.50: ಗಣಿತ ಪರೀಕ್ಷೆ

ಇದನ್ನೂ ಓದಿ: CET 2022 | ಸಿಇಟಿ ಅರ್ಜಿ ಸಲ್ಲಿಕೆಗೆ ಹೊಸ ಲಿಂಕ್‌: ಇಂದಿನಿಂದ ಆರಂಭ

Exit mobile version