Site icon Vistara News

Toilet Cleaning: ಇನ್ಮುಂದೆ ಶಾಲೆಗಳಲ್ಲಿ ಮಕ್ಕಳನ್ನು ಟಾಯ್ಲೆಟ್‌ ಕ್ಲೀನಿಂಗ್‌ಗೆ ಬಳಸುವಂತಿಲ್ಲ; ಮಹತ್ವದ ಆದೇಶ

students toilet cleaning

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಅನುದಾನದ ಕೊರತೆಯಿಂದ ಶೌಚಾಲಯಗಳನ್ನು ಮಕ್ಕಳಿಂದಲೇ ಸ್ವಚ್ಛಗೊಳಿಸುತ್ತಿರುವ (Toilet Cleaning) ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ತೆಗೆದುಕೊಂಡಿದೆ. ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತೆ ಇಲ್ಲ ಎಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಇಂತಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಒಂದು ವೇಳೆ ಇದನ್ನು ಮೀರಿ ಮಾಡಿಸಿದರೆ ಅಂಥವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದಲ್ಲದೆ, ಎಫ್‌ಐಆರ್‌ ಅನ್ನು ಸಹ ದಾಖಲು ಮಾಡಲಾಗುತ್ತದೆ ಎಂದೂ ಹೇಳಲಾಗಿದೆ. ಜತೆಗೆ ಕೆಲವು ಮಾರ್ಗಸೂಚಿಯನ್ನೂ ಸಹ ನೀಡಿದೆ.

ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇತ್ತೀಚಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮಾಡಿಸುತ್ತಿರುವ ಕುರಿತಾದ ಘಟನೆಗಳು ಸರ್ಕಾರದ ಮತ್ತು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ, ಸಹ ಪಠ್ಯ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ. ಆದರೆ ಅವರುಗಳು ಈ ಹೊಣೆಗಾರಿಕೆಯನ್ನು ಮರೆತು ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಆಕ್ಷೇಪಣೀಯ ಮತ್ತು ಖಂಡನೀಯ. ಇಂತಹ ಘಟನೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಬಂಧಿಸಿದ ಎಲ್ಲರಿಗೂ ತಿಳಿಸಲಾಗಿದೆ.

ಇದನ್ನೂ ಓದಿ: Taluk In charge Officer: ತಾಲೂಕು ಉಸ್ತುವಾರಿ ಅಧಿಕಾರಿಗಳ ನೇಮಕ; ಇವರ ಜವಾಬ್ದಾರಿಗಳೇನು?

ಮೇಲ್ಕಂಡ ಎಲ್ಲ ಅಂಶಗಳನ್ನು ಹಾಗೂ ಈ ಕುರಿತು ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಲು ಹಾಗೂ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಂಬಂಧಿಸಿದ ಎಲ್ಲ ಇಲಾಖಾಧಿಕಾರಿಗಳಿಗೆ ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

Exit mobile version