Site icon Vistara News

CUET UG Result 2023 : ವಿವಿಗಳ ಪ್ರವೇಶಕ್ಕೆ ಸಾಮಾನ್ಯ ಪರೀಕ್ಷೆ; ಫಲಿತಾಂಶ ಪ್ರಕಟ

cuet result 2023

ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಇತ್ತೀಚೆಗೆ ನಡೆಸಿದ್ದ “ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆʼʼಯ‌ (CUET UG Result 2023) ಪಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮರ್ಥ್‌ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.

ದೇಶದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಇನ್ನಿತರ ವಿಶ್ವವಿದ್ಯಾನಿಲಯಗಳಲ್ಲಿನ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಈ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಸುಮಾರು 250 ವಿವಿಗಳು, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಈ ಪರೀಕ್ಷೆ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಿವೆ. ಕಳೆದ ಮೇ ಮತ್ತು ಜೂನ್‌ನಲ್ಲಿ ಕಂಪ್ಯೂಟರ್‌ ಆಧಾರಿತ ಈ ಪರೀಕ್ಷೆಯನ್ನು ದೇಶದ 285 ನಗರಗಳಲ್ಲಿ ಮತ್ತು ವಿದೇಶಗಳ 23 ನಗರಗಳಲ್ಲಿ ನಡೆಸಲಾಗಿತ್ತು. ಕನ್ನಡದಲ್ಲಿ ಪರೀಕ್ಷೆ ಬರೆದ ಒಂಬತ್ತು ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿದ್ದಾರೆ.

ಫಲಿತಾಂಶ ನೋಡಲು ವಿದ್ಯಾರ್ಥಿಗಳು ರೋಲ್‌ ನಂಬರ್‌ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್‌ ಆಗಬೇಕಿರುತ್ತದೆ. ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ, ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿ) ಜಂಟಿಯಾಗಿ ಈ ಪರೀಕ್ಷೆ ನಡೆಸುತ್ತಿದ್ದು, ಇದಕ್ಕಾಗಿಯೇ ವಿಶೇಷ ವೆಬ್‌ಸೈಟ್‌ ತೆರೆದಿವೆ. ಇಲ್ಲಿಯೇ ಫಲಿತಾಂಶ ಪ್ರಕಟಗೊಂಡಿದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶವನ್ನು ನೋಡಲು ಇಲ್ಲಿ (Click Here) ಕ್ಲಿಕ್‌ ಮಾಡಿ.

48,779 ವಿಷಯಗಳ ಅಧ್ಯಯನಕ್ಕಾಗಿ 14,99,796 ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 11,16,018 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. 5,13,978 ವಿದ್ಯಾರ್ಥಿಗಳು ಮಹಿಳೆಯರಾಗಿದ್ದರೆ 6,02,028 ವಿದ್ಯಾರ್ಥಿಗಳು ಪುರುಷರಾಗಿದ್ದಾರೆ. ಒಟ್ಟಾರೆ 64,35,144 ಪರೀಕ್ಷೆಗಳನ್ನು ನಡೆಸಲಾಗಿತ್ತು. ಒಟ್ಟು 34 ದಿನ 93 ಶಿಫ್ಟ್‌ಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಕನ್ನಡ ಸೇರಿದಂತೆ ಒಟ್ಟು 13 ಭಾಷೆಗಳಲ್ಲಿ ಪರೀಕ್ಷೆ ನಡೆದಿದ್ದು, 268 ಅಭ್ಯರ್ಥಿಗಳು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 139 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಒಂಬತ್ತು ವಿದ್ಯಾರ್ಥಿಗಳು ಶೇ.100 ಫಲಿತಾಂಶ ಪಡೆದಿದ್ದರೆ, 9 ವಿದ್ಯಾರ್ಥಿಗಳು ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. 2200 ವಿಷಯ ತಜ್ಞರು, 800 ಅನುವಾದಕರು ಈ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿದ್ದರು.

ಅಕೌಂಟೆನ್ಸಿ, ಬಯೋಲಜಿ, ಬಿಸ್ನೆಸ್‌ ಸ್ಟಡೀಸ್‌, ಎಕನಾಮಿಕ್ಸ್‌, ಇಂಗ್ಲಿಷ್‌, ಹಿಸ್ಟರಿ ಮತ್ತು ಪೊಲಿಟಿಕಲ್‌ ಸೈನ್ಸ್‌ನಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದಾರೆ ಎಂದು ಯುಜಿಸಿಯ ಅಧ್ಯಕ್ಷ ಎಂ ಜಗದೀಶ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Education Guide : ಬೆಸ್ಟ್‌ ಶಿಕ್ಷಣ ಸಂಸ್ಥೆ ಯಾವುದು? ಇಲ್ಲಿದೆ ಮಾಹಿತಿ

Exit mobile version