ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಪ್ರಸಿದ್ಧ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ (DR Vijaya Sankeshwar) ಹೆಸರಿನಲ್ಲಿ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ (Vishwadarshana Education Society) ಮೀಡಿಯಾ ಸ್ಕೂಲ್ (Media School) ಸ್ಥಾಪನೆಯಾಗಿದ್ದು, ಶೀಘ್ರದಲ್ಲಿ ಕಾರ್ಯ ಆರಂಭಿಸಲಿದೆ.
ಭವಿಷ್ಯದ ಪತ್ರಕರ್ತರನ್ನು (Future journalists) ವೃತ್ತಿಪರವಾಗಿ ರೂಪಿಸುವ ರೀತಿಯಲ್ಲಿ ಕೋರ್ಸ್ ಅನ್ನು ವಿನ್ಯಾಸಗೊಳಿಸಲಾಗಿದ್ದು, ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಒಂದು ವರ್ಷದ ಪಿಜಿ ಡಿಪ್ಲೊಮಾ ಕೋರ್ಸ್ (One year PG Diploma Course) ಇದಾಗಿದೆ. ಇಂದಿನ ಅಗತ್ಯಕ್ಕೆ ತಕ್ಕಂತೆ “ಮುದ್ರಣ, ಡಿಜಿಟಲ್ ಹಾಗೂ ಟಿವಿ” ಈ ಮೂರೂ ಮಾಧ್ಯಮಗಳಲ್ಲಿ ವೃತ್ತಿಪರವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬೋಧನೆ ಮತ್ತು ತರಬೇತಿ ಇರಲಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಲಾಗುತ್ತದೆ ಎಂದು ವಿಶ್ವದರ್ಶನ ಎಜುಕೇಶನ್ ಸೊಸೈಟಿ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ (Hariprakash Konemane) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 15ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ಸದ್ಯ ಪದವಿ ಪೂರೈಸಿರುವವರು ಅಥವಾ ಈಗ ಅಂತಿಮ ಪದವಿ ಪರೀಕ್ಷೆ ಬರೆಯುತ್ತಿರುವವರು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 15ರಿಂದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಅಕ್ಟೋಬರ್ 1 ಮತ್ತು 2ರಂದು ಪ್ರವೇಶ ಪರೀಕ್ಷೆ (Entrance Test) ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Power Point with HPK : ಕಾಂಗ್ರೆಸ್ ಸರ್ಕಾರಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಏನೆಂಬುದೇ ಗೊತ್ತಿಲ್ಲ!
ಹೆಚ್ಚಿನ ವಿವರಗಳಿಗೆ ಇಲ್ಲಿ ಸಂಪರ್ಕಿಸಿ
ವೃತ್ತಿಪರ ಬೋಧಕ ವರ್ಗದ ಜತೆಗೆ, ಮುದ್ರಣ, ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳಲ್ಲಿನ ಹೆಸರಾಂತ ಹಾಗೂ ನುರಿತ ಪತ್ರಕರ್ತರಿಂದಲೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ದೊರೆಯಲಿದೆ. ವಿವರಗಳಿಗೆ ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ (ಮೊಬೈಲ್: 8884432196) ಅಥವಾ ವಿಶ್ವದರ್ಶನ ಎಜುಕೇಶನ್ ಸೊಸೈಟಿ ಸಿಇಒ ಅಜಯ್ ಭಾರತೀಯ (ಮೊಬೈಲ್: 8904134073) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.