Education News age calculator for school admission in karnatakaEducation News : ಮಗುವನ್ನು ಶಾಲೆಗೆ ಸೇರಿಸಲು ಹೊರಟಿರಾ? ವಯಸ್ಸಿನ ಲೆಕ್ಕಾಚಾರವನ್ನು ಸರಿಯಾಗಿ ತಿಳಿದುಕೊಳ್ಳಿ! Vistara News
Connect with us

ಪ್ರಮುಖ ಸುದ್ದಿ

Education News : ಮಗುವನ್ನು ಶಾಲೆಗೆ ಸೇರಿಸಲು ಹೊರಟಿರಾ? ವಯಸ್ಸಿನ ಲೆಕ್ಕಾಚಾರವನ್ನು ಸರಿಯಾಗಿ ತಿಳಿದುಕೊಳ್ಳಿ!

2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಿಕೊಳ್ಳಲು ಮಗುವಿಗೆ ಆರು ವರ್ಷ ಪೂರ್ಣಗೊಂಡಿರುವುದು ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಇಲಾಖೆ (Education News) ಸೂಚಿಸಿದೆ. ಹೀಗಾಗಿ ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ಮಗುವಿಗೆ ನಾಲ್ಕು ವರ್ಷ ಪೂರ್ಣಗೊಂಡಿರಬೇಕಾದದು ಕಡ್ಡಾಯ.

VISTARANEWS.COM


on

Education News age calculator for school admission in karnataka
Koo

ಬೆಂಗಳೂರು: ಶಾಲೆಗೆ ಮಕ್ಕಳನ್ನು ಸೇರಿಸಲು ಹೊರಟಿರಾ? ನಿಮ್ಮ ಮಗುವಿನ ವಯಸ್ಸೆಷ್ಟು ಎಂಬುದನ್ನು ಸರಿಯಾಗಿ (Education News) ನೋಡಿಕೊಳ್ಳಿ. ಏಕೆಂದರೆ ಈ ವರ್ಷ ಯುಕೆಜಿಗೆ ದಾಖಲಾಗುವ ಮಕ್ಕಳು ದಿನಾಂಕ 31-05-2019 ಅಥವಾ ಅದಕ್ಕೂ ಮೊದಲು ಜನಿಸಿರಬೇಕು.

ಯುಕೆಜಿಗೆ ದಾಖಲಾಗುವ ಮಕ್ಕಳು ದಿನಾಂಕ 31-12-2018 ಅಥವಾ ಅದಕ್ಕೂ ಮೊದಲು ಜನಿಸಿರಬೇಕು. ಒಂದನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿ/ ವಿದ್ಯಾರ್ಥಿನಿ 31-12-2017ಕ್ಕೆ ಅಥವಾ ಅದಕ್ಕೂ ಮೊದಲು ಜನಿಸಿರಬೇಕು. 1 ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳು, ಗರಿಷ್ಠ 7 ವರ್ಷ ಆಗಿರಬೇಕು ಎಂದು ಈಗಾಗಲೇ ಇಲಾಖೆ ಸೂಚಿಸಿದೆ. ಆದರೆ 2025-26 ನೇ ಶೈಕ್ಷಣಿಕ ಸಾಲಿನಿಂದ ಜೂನ್‌ 1ನೇ ತಾರೀಖಿಗೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರುವ ಮಗುವನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳಲಾಗುತ್ತದೆ.

ಕಳೆದ ವರ್ಷವೇ ಈ ಸಂಬಂಧ ಆದೇಶ ಹೊರಡಿಸಲಾಗಿದೆ. ಹೀಗಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಎಲ್‌ಕೆಜಿ ತರಗತಿಗೆ ದಾಖಲು ಮಾಡಿಕೊಳ್ಳಲು ಜೂನ್‌ 01ನೇ ತಾರೀಖಿಗೆ ಅನ್ವಯವಾಗುವಂತೆ ನಾಲ್ಕು (4) ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಈ ಸಂಬಂಧ ಇಲಾಖೆಯು ಜ್ಞಾಪನ ಪತ್ರ ಹೊರಡಿಸಿದ್ದು, ಬರುವ ಜೂನ್‌ 1ಕ್ಕೆ ನಾಲ್ಕು ವರ್ಷ ಪೂರ್ಣಗೊಂಡ ಮಕ್ಕಳು ಮಾತ್ರ ಈ ಬಾರಿ ಎಲ್‌ಕೆಜಿಗೆ ಸೇರಬಹುದಾಗಿದೆ. ಮುಂದೆ ಗೊಂದಲವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಇಲಾಖೆಯು ಈ ಕ್ರಮತೆಗೆದುಕೊಂಡಿದೆ.

ಕಳೆದ ವರ್ಷ ಅಂದರೆ 2022 ಜುಲೈ 26ರಂದು ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ ಇನ್ನು ಮುಂದೆ ಒಂದು ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಬೇಕಾದರೆ ಜೂನ್‌ ಒಂದನೇ ತಾರೀಖಿಗೆ ಅನ್ವಯವಾಗುವಂತೆ ಆರು ವರ್ಷ ತುಂಬಿರಲೇಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನು 2023-24 ನೇ ಸಾಲಿನಿಂದಲೇ ಜಾರಿಗೆ ತರಬೇಕೆಂದು ಸೂಚಿಸಲಾಗಿತ್ತಾದರೂ ಪೋಷಕರು ಮತ್ತು ಶಾಲೆಗಳ ಆಡಳಿತ ಮಂಡಳಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಇದನ್ನು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿತ್ತು.

Karnataka education department
4 years minimum age for LKG
ಶಿಕ್ಷಣ ಇಲಾಖೆ ಹೊರಡಿಸಿದ ಜ್ಞಾಪನ ಪತ್ರ

ಹೊಸ ನಿಯಮದಂತೆ 2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ನಿಮ್ಮ ಮಗುವನ್ನು ಸೇರಿಸಿಬೇಕೆಂದರೆ ಎಲ್‌ಕೆಜಿ ಸೇರ್ಪಡೆ ವಿಷಯದಲ್ಲಿ ಈಗಿನಿಂದಲೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಂದರೆ 2025-26ನೇ ಸಾಲಿಗೆ ಬರುವಾಗ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರುವುದು ಕಡ್ಡಾಯ. ಹಾಗಾಗಿ, ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ನಿಮ್ಮ ಮಗು ಕಡ್ಡಾಯವಾಗಿ ನಾಲ್ಕು ವರ್ಷ ಪೂರ್ಣಗೊಳಿಸಿರಬೇಕು. ಇಲ್ಲದೇ ಇದ್ದಲ್ಲಿ ಎಲ್‌ಕೆಜಿ ಅಥವಾ ಯುಕೆಜಿಯಲ್ಲಿಯೇ ಮಗು ಒಂದು ವರ್ಷ ಹೆಚ್ಚಾಗಿ ಉಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದ್ದು, ಇದು ಮಗುವಿನ ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದಾಗಿದೆ.

ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗಲೇ ವಯಸ್ಸನ್ನು ಸರಿಯಾಗಿ ನೋಡಿಕೊಂಡು ಸೇರಿಸಿದಲ್ಲಿ, ಮುಂದೆ ಗೊಂದಲವಾಗುವುದು ತಪ್ಪಲಿದೆ. ಆರು ವರ್ಷಪೂರ್ಣಗೊಳ್ಳದ ಮಕ್ಕಳನ್ನು ಯಾವುದೇ ಕಾರಣಕ್ಕೂ ಮುಂದೆ (2025-26ನೇ ಸಾಲಿನಲ್ಲಿ ) ಒಂದನೇ ತರಗತಿಗೆ ಸೇರಿಸಿಕೊಳ್ಳಲಾಗುವುದಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ವಯಸ್ಸು ಎಷ್ಟಿತ್ತು?

ಶಿಕ್ಷಣ ಹಕ್ಕು ಕಾಯ್ದೆಯ ಅನ್ವಯ 2016-17ನೇ ಶೈಕ್ಷಣಿಕ ವರ್ಷದಲ್ಲಿ ಎಲ್​ಕೆಜಿ ಪ್ರವೇಶಕ್ಕೆ ಮಗುವಿಗೆ 4 ವರ್ಷ, 10 ತಿಂಗಳು ತುಂಬಿರಬೇಕು ಎಂದು ನಿಯಮ ಮಾಡಲಾಗಿತ್ತು. ಅದಕ್ಕೂ ಮೊದಲು ಎಲ್​ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳು ಆಗಿದ್ದರೆ ಸಾಕಾಗಿತ್ತು. ಅದೇ ರೀತಿ 1ನೇ ತರಗತಿ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ನಡುವೆ ಮಗುವಿನ ವಯಸ್ಸು ಇದ್ದರೆ ದಾಖಲಾತಿ ಮಾಡಿಕೊಳ್ಳಬಹುದು ಎಂದು ನಿಯಮ ರೂಪಿಸಿತ್ತು.

ಕರ್ನಾಟಕ ಸರ್ಕಾರವು ಈ ನಿಯಮವನ್ನು 2018ರಲ್ಲಿ ಮತ್ತೊಮ್ಮೆ ಸಡಿಲಿಸಿತ್ತು. 1ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳು, ಗರಿಷ್ಠ 7 ವರ್ಷ ಆಗಿರಬೇಕು ಎಂದು ಆದೇಶ ಹೊರಡಿಸಿತ್ತು.

ಇದನ್ನೂ ಓದಿ : Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್‌ ಪ್ರಹಾರ

ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಬಿ.ಕೆ. ಹರಿಪ್ರಸಾದ್‌, ನಾನು ಪಕ್ಷ ಕಟ್ಟಿದವನು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ ಎಂದಿದ್ದಾರೆ.

VISTARANEWS.COM


on

Edited by

BK Hariprasad expresses displeasure over not including his name in karnataka cabinet expansion
Koo

ಬೆಂಗಳೂರು: ಚುನಾವಣೆಯುದ್ದಕ್ಕೂ ಒಗ್ಗಟ್ಟಿನ ಮಂತ್ರವನ್ನು ಜಪಿಸಿಕೊಂಡು ಸರಳ ಬಹುಮತ ಪಡೆದ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ವಿಸ್ತರಣೆ ನಂತರ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ.

ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಸಚಿವ ಸ್ಥಾನ ಮಿಸ್‌ ಆದ ಕುರಿತು ಮಾತನಾಡಿದ ಹರಿಪ್ರಸಾದ್‌, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು.

ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಬಿ.ಕೆ. ಹರಿಪ್ರಸಾದ್‌, ನಾನು ಪಕ್ಷ ಕಟ್ಟಿದವನು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ. ನಾನು ಸ್ವಂತ ಮನೆಯಲ್ಲಿ ಇರುವವನು, ಬಾಡಿಗೆ ಮನೆಯಲ್ಲಿ ಇರುವವನು ಅಲ್ಲ. ನನ್ನ ಸಾಮಾಜಿಕ ನ್ಯಾಯಕ್ಕೂ ಅಹಿಂದಕ್ಕೂ ವ್ಯತ್ಯಾಸ ಇದೆ. ನಾನು ಅಹಿಂದ ಅಂತಾ ಹೇಳೋನಲ್ಲಾ. ನಾನು ಅಧಿಕಾರ ಕೊಡಿ ಅಂತಾ ಎಂದೂ ಕಾಲು ಹಿಡಿದವನಲ್ಲ. ನಾನು ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Karnataka Election : ಮಂಕಾಳ ವೈದ್ಯಗೆ ಗೆಲುವು ಮಾತ್ರವಲ್ಲ ಮಂತ್ರಿಗಿರಿಯೂ ಗ್ಯಾರಂಟಿ ಎಂದ ಬಿ.ಕೆ. ಹರಿಪ್ರಸಾದ್‌

Continue Reading

ಕರ್ನಾಟಕ

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

Karnataka Cabinet expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮೂಲಕ ಇದೇ ಮೊದಲ ಬಾರಿಗೆ ಮಂತ್ರಿ ಪಟ್ಟ ಗಿಟ್ಟಿಸಿಕೊಂಡ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಅಜ್ಜಿಯಾಗಿದ್ದಾರೆ. ಒಂದೇ ದಿನ ಎರಡು ಸಂತಸದ ಸುದ್ದಿಯನ್ನು ಅವರು ಪಡೆದಂತಾಗಿದೆ.

VISTARANEWS.COM


on

Edited by

Laxmi Hebbalkar oath taking as a minister
Koo

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ (Laxmi Hebbalkar) ಅವರಿಗೆ ಇಂದು ಶುಭ ಶನಿವಾರ. ಅವರು ಶನಿವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಮೊದಲ ಬಾರಿಗೆ ಮಂತ್ರಿ ಪಟ್ಟವನ್ನು ಅಲಂಕರಿಸಿದ್ದಾರೆ. ಇದೇ ವೇಳೆ ಅವರು ಅಜ್ಜಿಯೂ ಆಗಿದ್ದಾರೆ.

ಪುತ್ರ ಮೃಣಾಲ್ ಹಾಗೂ ಹಿತಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಮೂಲಕ ಇವರ ಮನೆಗೆ ಮತ್ತೊಂದು ಪುಟ್ಟ ಲಕ್ಷ್ಮಿ ಪ್ರವೇಶ ಆದಂತೆ ಆಗಿದೆ. ಒಂದು ಕಡೆ ಸಚಿವರಾಗಿರುವ ಖುಷಿಯಲ್ಲಿದ್ದ ಲಕ್ಷ್ಮಿ ಅವರಿಗೆ ಈ ಸುದ್ದಿಯು ಸಖತ್‌ ಖುಷಿ ಕೊಟ್ಟಿದೆ.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸೊಸೆ ಹಿತಾ ಮೃಣಾಲ್ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವಾಗಿ ಅವರು ತಮ್ಮ ಆಪ್ತರ ಬಳಿ ಖುಷಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Cabinet: ಸಂಪುಟದಲ್ಲಿ ಸೋತರೂ ಖಾತೆಯಲ್ಲಿ ಗೆದ್ದ ಡಿ.ಕೆ. ಶಿವಕುಮಾರ್‌: ಇಲ್ಲಿದೆ ಎಲ್ಲ ಸಚಿವರ ಖಾತೆಗಳ ಪಟ್ಟಿ

ಎರಡನೇ ಬಾರಿಯೇ ಬಂಪರ್‌

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ ಎರಡನೇ ಬಾರಿಗೆ ವಿಜಯ ಸಾಧಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಅವರ ಸಂಪುಟ ಸೇರುವ ಅವಕಾಶ ಒದಗಿ ಬಂದಿದೆ. ಲಿಂಗಾಯತ ಕೋಟಾದಡಿ ಹೆಬ್ಬಾಳ್ಕರ್ ಅವರು ಸಂಪುಟ ಸೇರಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಏರ್ಪಟ್ಟಿದ್ದ ತೀವ್ರ ಪೈಪೋಟಿಯ ಮಧ್ಯೆಯೂ ರಮೇಶ್‌ ಬೆಂಬಲಿಗ ಹಾಗೂ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಅವರನ್ನು ಮಣಿಸುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಯಶಸ್ವಿಯಾಗಿದ್ದರು.

ಅಲ್ಲದೆ, ತಮ್ಮ ಕ್ಷೇತ್ರದಲ್ಲಿ ಪ್ರಭಾವವನ್ನು ಹೊಂದಿಲ್ಲದೆ, ಕಾಂಗ್ರೆಸ್‌ ಮಟ್ಟಿಗೆ ಬೆಳಗಾವಿ ಜಿಲ್ಲೆಯಲ್ಲಿ ಹಿಡಿತವನ್ನು ಸಾಧಿಸಿದ್ದಾರೆ. ಚುನಾವಣೆಗೂ ಪೂರ್ವದಲ್ಲಿ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಥಣಿಯಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಇದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದಲ್ಲದೆ, ಬೆಂಬಲಿಗರ ಸಭೆಯನ್ನೂ ನಡೆಸಿದ್ದರು. ಕೊನೆಗೆ ಬಿಜೆಪಿ ಹೈಕಮಾಂಡ್‌ ರಮೇಶ್‌ ಜಾರಕಿಹೊಳಿ ಅವರ ಒತ್ತಡಕ್ಕೆ ಮಣಿದು ಅವರ ಬೆಂಬಲಿಗ ಮಹೇಶ್‌ ಕುಮಟಳ್ಳಿ ಅವರಿಗೆ ಟಿಕೆಟ್‌ ನೀಡಿತ್ತು. ಇದರಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸವದಿ ಮುಂದಾಗಿದ್ದರು. ಆದರೆ, ಈ ವೇಳೆ ಮಧ್ಯ ಪ್ರವೇಶ ಮಾಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಕರೆತಂದು ಪಕ್ಷ ಸೇರ್ಪಡೆ ಮಾಡಿಸಿದ್ದರು. ಅಲ್ಲದೆ, ಲಕ್ಷ್ಮಣ ಸವದಿ ಅವರು ಈಗ ಗೆದ್ದು ಬೀಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್‌ ಪದಗ್ರಹಣ; ವಿಡಿಯೊ ಇಲ್ಲಿದೆ

ಇದನ್ನೂ ಓದಿ: ‌Electricity Bill: ಇವತ್ತಿಂದ ಕರೆಂಟ್‌ ಬಿಲ್‌ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆರ್ಡರ್!

ಜಗದೀಶ್‌ ಶೆಟ್ಟರ್‌ ಸೇರ್ಪಡೆಯಲ್ಲೂ ಮಹತ್ವದ ಪಾತ್ರ

ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿಯಲ್ಲಿದ್ದಾಗ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಮಹೇಶ್ ನಲವಾಡ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಇದಾದ ಬಳಿಕ ತಕ್ಷಣವೇ ಕಾರ್ಯಪ್ರವೃತ್ತರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ಅಳಿಯ, ಕಾಂಗ್ರೆಸ್‌ನ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ ಅವರನ್ನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರವಂತೆ ಸೂಚಿಸಿದರು. ಅವರು ಈ ನಿಟ್ಟಿನಲ್ಲಿ ಸಕಲ ಪ್ರಯತ್ನವನ್ನು ಮಾಡುತ್ತಿರುವಾಗಲೇ ಬಿಜೆಪಿಯಿಂದ ಶೆಟ್ಟರ್‌ಗೆ ಟಿಕೆಟ್‌ ಕೈತಪ್ಪಿತ್ತು. ಆಗ ಅವರ ಮಾಸ್ಟರ್‌ ಪ್ಲ್ಯಾನ್‌ ಮಾಡುವ ಲಕ್ಷ್ಮಿ ಹೆಬ್ಬಾಳ್ಕರ್, ಅಳಿಯನ ಮೂಲಕ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ಗೆ ಕರೆತಂದರು. ಈ ಮೂಲಕ ಲಿಂಗಾಯತ ಮತ ಕ್ರೋಢೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.

Continue Reading

ದೇಶ

NITI Aayog Meeting: ನೀತಿ ಆಯೋಗದ ಸಭೆಗೆ ಸಿದ್ದು ಸೇರಿ 10 ಸಿಎಂಗಳು ಗೈರು; ರಾಜ್ಯಗಳಿಗೆ ನಷ್ಟವೇನು?

NITI Aayog Meeting: ಕೇಂದ್ರ ಸರ್ಕಾರದ ಮೇಲಿನ ಮುನಿಸು, ಆಕ್ರೋಶದಿಂದಾಗಿ ನೀತಿ ಆಯೋಗದ ಸಭೆಗೆ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಆದರೆ, ಸಭೆಗೆ ಗೈರಾಗುವುದರಿಂದ ರಾಜ್ಯಗಳಿಗೇ ನಷ್ಟ ಎನ್ನಲಾಗುತ್ತಿದೆ.

VISTARANEWS.COM


on

Edited by

NITI Aayog Meeting Chaired By PM Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಎಂಟನೇ ಗವರ್ನಿಂಗ್‌ ಸಮಿತಿ ಸಭೆ (Governing Council Meeting) ನಡೆದಿದ್ದು, ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಆದರೆ, ಕೇಂದ್ರ ಸರ್ಕಾರದ ವಿರುದ್ಧದ ಆಕ್ರೋಶ, ಮುನಿಸಿನಿಂದಾಗಿ 10 ರಾಜ್ಯಗಳ ಮುಖ್ಯಮಂತ್ರಿಗಳು ಸಭೆಗೆ ಗೈರಾಗಿದ್ದಾರೆ. ಆದರೆ, ಅಭಿವೃದ್ಧಿ ದೃಷ್ಟಿಯಿಂದ ಮಹತ್ವ ಪಡೆದಿರುವ ಸಭೆಗೆ ಸಿಎಂಗಳು ಗೈರಾಗಿರುವುದು ಆಯಾ ರಾಜ್ಯಗಳಿಗೇ ನಷ್ಟ ಎಂದು ವಿಶ್ಲೇಷಿಸಲಾಗುತ್ತಿದೆ.

ನೀತಿ ಆಯೋಗದ ಸಭೆಯಲ್ಲಿ ದೇಶದ ಅಭಿವೃದ್ಧಿಯ ದೃಷ್ಟಿಯಿಂದ 100 ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್‌ ಗವರ್ನರ್‌ಗಳು, ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲಾಗಿದೆ. ಎಂಎಸ್‌ಎಂಇ, ಮೂಲ ಸೌಕರ್ಯ, ಹೂಡಿಕೆ, ಮಹಿಳಾ ಸಬಲೀಕರಣ, ಆರೋಗ್ಯ, ಕೌಶಲಾಭಿವೃದ್ಧಿ ಸೇರಿ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಕೆಲವು ರಾಜ್ಯಗಳು ಕೂಡ ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಿವೆ. ಏಳಿಗೆ ದಿಸೆಯಲ್ಲಿಯೇ ಪ್ರಮುಖ ತೀರ್ಮಾನಗಳನ್ನೂ ತೆಗೆದುಕೊಳ್ಳಲಾಗಿದೆ. ಈಗ ಗೈರಾದ ರಾಜ್ಯಗಳಿಗೆ ಈ ವಿಷಯಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ. ತೀರ್ಮಾನಗಳ ಜಾರಿಗೆ ಕಷ್ಟವಾಗಲಿದೆ ಎನ್ನಲಾಗುತ್ತಿದೆ.

ಗೈರಾದ ಸಿಎಂಗಳು ಯಾರು? ಏಕೆ?

ದೆಹಲಿಯಲ್ಲಿ ಆಡಳಿತ ಸೇವೆಗಳ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸಭೆಗೆ ಹಾಜರಾಗಿಲ್ಲ. ಇನ್ನು, ಕೇಂದ್ರದಿಂದ ಅನುದಾನ ಸಿಗುತ್ತಿಲ್ಲ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಕೂಡ ಗೈರಾಗಿದ್ದಾರೆ. ಕರ್ನಾಟಕದಲ್ಲಿ ಸಚಿವರ ಪ್ರಮಾಣವಚನ, ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.

ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌, ಬೇರೆ ಕಾರ್ಯಕ್ರಮದಿಂದಾಗಿ ಒಡಿಶಾ ಸಿಎಂ ನವೀನ್‌ ಪಾಟ್ನಾಯಕ್‌, ಕೇಂದ್ರದ ಮೇಲಿನ ಅಸಮಾಧಾನದಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್‌ ಕುಮಾರ್‌, ತೆಲಂಗಾಣದ ಕೆ.ಚಂದ್ರಶೇಖರ ರಾವ್‌ ಹಾಗೂ ಯಾವುದೇ ಕಾರಣ ನೀಡದೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.

ಇದನ್ನೂ ಓದಿ: NITI Aayog Meeting:‌ ಕೇಂದ್ರಕ್ಕೆ ಬಾಯ್ಕಾಟ್‌ ಬಿಸಿ; ದೀದಿ ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕೇಜ್ರಿವಾಲ್

Continue Reading

ಉದ್ಯೋಗ

ISRO Recruitment 2023 : ಇಸ್ರೊದಲ್ಲಿ ವಿಜ್ಞಾನಿಯಾಗಬೇಕೇ? ಈಗ ಒದಗಿ ಬಂದಿದೆ ಅವಕಾಶ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 303 ಸೈಂಟಿಸ್ಟ್‌/ಎಂಜಿನಿಯರ್‌-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದ್ದು ಈ ನೇಮಕದ ಮಾಹಿತಿ ಇಲ್ಲಿದೆ.

VISTARANEWS.COM


on

Edited by

ISRO Recruitment 2023 ISRO Recruitment 2023 for Scientist Engineer SC
Koo

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಒಂದಲ್ಲಾ ಒಂದು ರೀತಿಯ ಸಾಧನೆ ಮಾಡುತ್ತಿರುವ ನಮ್ಮ ದೇಶದ ಹೆಮ್ಮೆಯ ʻಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆʼ (ಇಸ್ರೊ) 303 ಸೈಂಟಿಸ್ಟ್‌/ಎಂಜಿನಿಯರ್‌-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದೆ.

ಮುಖ್ಯವಾಗಿ ಉಪಗ್ರಹಗಳ ನಿರ್ಮಾಣ, ಉಪಗ್ರಹಗಳ ಉಡಾವಣೆ, ಬಾಹ್ಯಾಕಾಶದಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿರುವ ಇಸ್ರೊ, ಗ್ರೂಪ್‌ ʻಎʼಗೆ ಸೇರಿದ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌ ಮತ್ತು ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿಇ/ಬಿಟೆಕ್‌ ಮಾಡಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

1. ಸೈಂಟಿಸ್ಟ್‌/ಎಂಜಿನಿರ್‌-ಎಸ್‌ಸಿ (ಎಲೆಕ್ಟ್ರಾನಿಕ್ಸ್‌) – 90 ಹುದ್ದೆ
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

2. ಸೈಂಟಿಸ್ಟ್‌/ ಎಂಜಿನಿಯರ್‌ ʻಎಸ್‌ಸಿʼ (ಮೆಕ್ಯಾನಿಕಲ್‌)- 160 ಹುದ್ದೆ
ವಿದ್ಯಾರ್ಹತೆ: ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

3. ಸೈಂಟಿಸ್ಟ್‌/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್‌ ಸೈನ್ಸ್‌)- 47 ಹುದ್ದೆ
ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

4. ಸೈಂಟಿಸ್ಟ್‌/ ಎಂಜಿನಿಯರ್‌ ʻಎಸ್‌ಸಿʼ (ಎಲೆಕ್ಟ್ರಾನಿಕ್ಸ್‌)- 2 ಹುದ್ದೆ (Autonomous Body)
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

5. ಸೈಂಟಿಸ್ಟ್‌/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್‌ ಸೈನ್ಸ್‌)- 01 ಹುದ್ದೆ (Autonomous Body)
ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-06-2023
ಮಾಹಿತಿ ಪಡೆಯಲು ಇ-ಮೇಲ್‌ ವಿಳಾಸ: [email protected]
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: www.isro.gov.in

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ವಯೋಮಿತಿ ಎಷ್ಟು?

ಈ ಎಲ್ಲ ಹುದ್ದೆಗಳಿಗೂ ಗರಿಷ್ಠ ವಯೋಮಿತಿ 28 ವರ್ಷ. ವಯೋಮಿತಿಯನ್ನು ದಿನಾಂಕ 14-06-2023ಕಕ್ಕೆ ಲೆಕ್ಕ ಹಾಕಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ.

ಅರ್ಜಿ ಶುಲ್ಕ ಎಷ್ಟು?

ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದ್ದು, ಒಂದು ವೇಳೆ ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ಎಸ್‌ಬಿಐ ಶಾಖೆಗಳ ಮೂಲಕವೂ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಅಭ್ಯರ್ಥಿಗಳು ಈ ಮೇಲಿನ ಯಾವುದಾದರೂ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಾಗ ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಆದರೆ ಒಂದೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.

ನೇಮಕ ಹೇಗೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಅರ್ಜಿ ಸಲ್ಲಿಸುವಾಗಲೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕಿರುತ್ತದೆ. ಪರೀಕ್ಷೆಯ ಕುರಿತು ಅಭ್ಯರ್ಥಿಯ ಇ-ಮೇಲ್‌ ವಿಳಾಸಕ್ಕೆ ಮಾಹಿತಿ ನೀಡಲಾಗುತ್ತದೆ.

ಅಬ್ಜೆಕ್ಟೀವ್‌ ಮಾದರಿಯಲ್ಲಿ ಲಿಖಿತ ಪರೀಕ್ಷೆಯು ನಡೆಯಲಿದ್ದು, ಪ್ರಶ್ನೆ ಪತ್ರಿಕೆಯು ಎರಡು ಭಾಗಗಳನ್ನು ಒಳಗೊಂಡಿರಲಿದೆ. 120 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.

ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್‌ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ

Continue Reading
Advertisement
Shivamogga MP B Y Raghavendra meeting
ಕರ್ನಾಟಕ11 mins ago

Shivamogga News: ಶಿವಮೊಗ್ಗ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ: ಸಂಸದ ಬಿ.ವೈ. ರಾಘವೇಂದ್ರ

bus stand in dilapidated condition at challakere taluk
ಕರ್ನಾಟಕ15 mins ago

Challakere News: ಶಿಥಿಲಾವಸ್ಥೆಯಲ್ಲಿ ದೊಡ್ಡೇರಿ ಗ್ರಾಮದ ಬಸ್ ತಂಗುದಾಣ; ದುರಸ್ತಿಗೆ ಬೇಕಿದೆ ಅನುದಾನ

ಬಾಲಿವುಡ್15 mins ago

Aahana Kumra: ಐಫಾ ಕಾರ್ಯಕ್ರಮದಲ್ಲಿ ಡ್ರೆಸ್‌ ಜಾರದಂತೆ ಹಿಡಿದುಕೊಂಡ ನಟಿ ಅಹಾನಾ ಕುಮ್ರಾ; ವಿಡಿಯೊ ವೈರಲ್​

Snake Found In Mid Day Meal
ವೈರಲ್ ನ್ಯೂಸ್27 mins ago

Viral News : ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಸಿಕ್ಕಿತು ಹಾವು! ಹಲವು ಮಕ್ಕಳು ಅಸ್ವಸ್ಥ

G-20 Summit Preparatory Meeting at Vijayanagara district
ಕರ್ನಾಟಕ28 mins ago

Vijayanagara News: ಜಿ-20 ಶೃಂಗಸಭೆಯ ಪೂರ್ವಸಿದ್ಧತಾ ಸಭೆ; ಸಂಸ್ಕೃತಿಯ ಅನಾವರಣಕ್ಕೆ ತೀರ್ಮಾನ

Declare Diwali As Federal Holiday In US Lawmaker Introduces Bill
ವಿದೇಶ33 mins ago

ದೀಪಾವಳಿಗೆ ಯುಎಸ್​​ನಲ್ಲಿ ಸಾರ್ವತ್ರಿಕ ರಜೆ ಕೊಡಬೇಕು; ಮಸೂದೆ ಮಂಡನೆ ಮಾಡಿದ ಅಮೆರಿಕ ಜನಪ್ರತಿನಿಧಿ

congress workers celebration
ಕರ್ನಾಟಕ35 mins ago

Karnataka Cabinet Expansion: ಸಚಿವರ ಪ್ರಮಾಣ ವಚನ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ

BK Hariprasad expresses displeasure over not including his name in karnataka cabinet expansion
ಕರ್ನಾಟಕ38 mins ago

Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್‌ ಪ್ರಹಾರ

karwali rain
ಉಡುಪಿ43 mins ago

Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ

Kidwai Hospital
ಆರೋಗ್ಯ57 mins ago

Oxygen Shortage: ಕಿದ್ವಾಯಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಕ್ಯಾನ್ಸರ್‌ ರೋಗಿ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ14 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Laxmi Hebbalkar oath taking as a minister
ಕರ್ನಾಟಕ1 hour ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ23 hours ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ24 hours ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ1 day ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ2 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ3 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ3 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!