ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದ ವತಿಯಿಂದ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನೀಡುತ್ತಿರುವ ವೈದ್ಯಕೀಯ ಧನಸಹಾಯವನ್ನು (Education News) ಪರಿಷ್ಕರಿಸಲಾಗಿದೆ.
ಕಳೆದ ಡಿಸೆಂಬರ್‌ನಲ್ಲಿ ನಡೆದ ಈ ನಿಧಿಗಳ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಈ ಪರಿಷ್ಕರಣೆ ಮಾಡಲಾಗಿದೆ. ಈ ಸಂಬಂಧ ಫೆಬ್ರವರಿ 13 ರಂದು ಸುತ್ತೋಲೆ ಹೊರಡಿಸಲಾಗಿದೆ.
ಪರಿಷ್ಕೃತ ದರ ಇಂತಿದೆ
ವರ್ಗೀಕರಣ | ಚಾಲ್ತಿಯಲ್ಲಿರುವ ದರ ರೂ.ಗಳಲ್ಲಿ | ಪರಿಷ್ಕರಿಸಲಾಗುವ ದರ ರೂ.ಗಳಲ್ಲಿ |
ಎ | 10,000 | 20,000 |
ಬಿ | 30,000 | 50,000 |
ಸಿ | 50,000 | 75,000 |
ಡಿ | 1,00,000 | 2,50,000 |
ಈ ಪರಿಷ್ಕರಣೆಯು ಏಪ್ರಿಲ್ 1 ರ ನಂತರ ಚಿಕಿತ್ಸೆ ಪಡೆಯುವ ಶಿಕ್ಷಕರು/ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. (Education News) ಉಳಿದಂತೆ ಈಗಾಗಲೇ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ಗೆ ಭೇಟಿ ನೀಡಿ: https://kstbfonline.karnataka.gov.in
ಇದನ್ನೂ ಓದಿ : NPS News : ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ