Education News : ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ನಿವಾರಣೆಗೆ ಕ್ರಮ; ನೂತನ ಶಿಕ್ಷಕರ ನಿಯೋಜನೆ - Vistara News

ಕರ್ನಾಟಕ

Education News : ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ನಿವಾರಣೆಗೆ ಕ್ರಮ; ನೂತನ ಶಿಕ್ಷಕರ ನಿಯೋಜನೆ

Education News : ಈ ಮೊದಲು ಕೆಲವೊಂದು ಜಿಲ್ಲೆಗಳಲ್ಲಿ “ಸಿ” ವಲಯದಲ್ಲಿ ಖಾಲಿ ಹುದ್ದೆಗಳು ಲಭ್ಯವಿಲ್ಲದ ಕಾರಣ, ಅಂತಹ ಶಿಕ್ಷಕರಿಗೆ ಆಯಾ ವ್ಯಾಪ್ತಿಯ ಉಪನಿರ್ದೇಶಕರ ಕಚೇರಿ (ಆಡಳಿತ) / ಡಯಟ್ ಕಚೇರಿಯನ್ನು ಕೌನ್ಸೆಲಿಂಗ್‌ನಲ್ಲಿ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಈಗ ನಿಯೋಜನೆ ಮಾಡಿ ಆದೇಶಿಸಲಾಗಿದೆ.

VISTARANEWS.COM


on

Education news primary school teachers appointment letter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ (Government Primary School) ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು (Graduate Primary Teachers) (6 ರಿಂದ 8ನೇ ತರಗತಿ) ಹುದ್ದೆಗೆ ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ಮಾಡುವ ಸಂಬಂಧ ಶಿಕ್ಷಣ ಇಲಾಖೆ (Department of Education) ಮಹತ್ವದ ಆದೇಶವನ್ನು ನೀಡಿದೆ. ಆದರೆ, ಈ ನಿಯೋಜನೆ ತಾತ್ಕಾಲಿಕ ಕ್ರಮ ಎಂದೂ ಸಹ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಮೂಲಕ ಶಿಕ್ಷಣ (Education News) ಕ್ಷೇತ್ರಕ್ಕೆ ಬಲ ನೀಡಲು ಮುಂದಾಗಲಾಗಿದೆ,

ಈ ಮೊದಲು ಕೆಲವೊಂದು ಜಿಲ್ಲೆಗಳಲ್ಲಿ “ಸಿ” ವಲಯದಲ್ಲಿ ಖಾಲಿ ಹುದ್ದೆಗಳು ಲಭ್ಯವಿಲ್ಲದ ಕಾರಣ, ಅಂತಹ ಶಿಕ್ಷಕರಿಗೆ ಆಯಾ ವ್ಯಾಪ್ತಿಯ ಉಪನಿರ್ದೇಶಕರ ಕಚೇರಿ (ಆಡಳಿತ) / ಡಯಟ್ ಕಚೇರಿಯನ್ನು ಕೌನ್ಸೆಲಿಂಗ್‌ನಲ್ಲಿ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಆಯ್ಕೆ ಮಾಡಿಕೊಂಡಿರುವ ಶಿಕ್ಷಕರು ಉಪನಿರ್ದೇಶಕರ ಕಚೇರಿ (ಆಡಳಿತ)ಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರನ್ನು ತಕ್ಷಣವೇ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಖಾಲಿ ಹುದ್ದೆಗಳಿರುವ ಒಂದು ಪ್ರಾಥಮಿಕ ಶಾಲೆಗಳಿಗೆ ನಿಯೋಜಿಸುವಂತೆ ಆದೇಶಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೆಲವು ಅಂಶಗಳನ್ನು ಸೂಚಿಸಿದೆ.

ಆದೇಶದಲ್ಲಿ ನೀಡಲಾಗಿರುವ ಸೂಚನೆ ಇಂತಿದೆ

  • ಸದರಿ ನಿಯೋಜನೆಯು ತಾತ್ಕಾಲಿಕವಾಗಿದ್ದು ” ವಲಯದಲ್ಲಿ ಖಾಲಿ ಹುದ್ದೆಯನ್ನು ಸ್ಥಳ ನಿಯುಕ್ತಿವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.
  • ನಿಯೋಜನೆಗೆ ಶಾಲೆಯನ್ನು ಆಯ್ಕೆ ಮಾಡುವಾಗ ಕಡ್ಡಾಯವಾಗಿ ವ್ಯಾಪ್ತಿಯಲ್ಲಿನ ಅತಿ ಹೆಚ್ಚು ಮಕ್ಕಳ ಸಂಖ್ಯೆ ಇರುವ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪ್ರಥಮ ಆದ್ಯತೆಯನ್ನು ನೀಡುವುದು.
  • ಬಹುಮಾಧ್ಯಮ ದ್ವಿ-ಭಾಷಾ ಮಾಧ್ಯಮ ಶಾಲೆಗಳು/ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ, ಅಗತ್ಯತೆಗಳನುಸಾರವಾಗಿ ನಿಯೋಜಿಸತಕ್ಕದ್ದು
  • ಹೀಗೆ ನಿಯೋಜನೆ ಮಾಡುವಾಗ ಹಾಲಿ ಕರ್ತವ್ಯ ನಿರತ ಶಿಕ್ಷಕರು ವಿವಿಧ ಕಾರಣಗಳಿಂದಾಗಿ ದೀರ್ಘಾವಧಿ ರಜೆ ಹಾಗೂ ಇನ್ನಿತರೆ ಕಾರಣಗಳಿಂದ ರಜೆ ಪಡೆದ ಶಾಲೆಗಳಿಗೆ ಶೈಕ್ಷಣಿಕ ಹಿತದೃಷ್ಟಿಯನ್ನು ಗದುನಿಸಿ ನಿಯೋಜಿಸುವುದು.
  • ಹೊಸದಾಗಿ ನೇಮಕಗೊಂಡ ಶಿಕ್ಷಕರು ನಿಯೋಜನೆ ಸಂಬಂಧ ಯಾವುದೇ ಪ್ರಭಾವ (ಶಿಫಾರಸು ತಂದಲ್ಲಿ ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಗಳು-2021 ರನ್ವಯ ಸೂಕ್ತ ಶಿಸ್ತು ಕ್ರಮ ಜರುಗಿಸುವುದು.
  • ಹೊಸದಾಗಿ ನೇಮಕವಾದ ಶಿಕ್ಷಕರ ಪಾಠಬೋಧನೆಯ ಕಾರ್ಯವೈಖರಿಯನ್ನು ವ್ಯಾಪ್ತಿಯು ಕ್ಷೇತ್ರಶಿಕ್ಷಣಾಧಿಕಾರಿಗಳು ಕಾಲಕಾಲಕ್ಕೆ ನಿಗಾವಹಿಸತಕ್ಕದ್ದು, ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಕಾಲಕಾಲಕ್ಕೆ ಕ್ಷೇತ್ರಶಿಕ್ಷಣಾಧಿಕಾರಿಗೆ ವರದಿ ಸಲ್ಲಿಸತಕ್ಕದ್ದು.
  • ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊಸದಾಗಿ ನೇಮಕವಾದ ಶಿಕ್ಷಕರ ಆದೇಶವನ್ನು ಪರಿಶೀಲಿಸಿಕೊಂಡು ಕರ್ತವ್ಯಕ್ಕೆ ಹಾಜರಾದ ದಿನಾಂಕ ಮತ್ತು ನಿಯೋಜಿಸಿದ ದಿನಾಂಕ ಮತ್ತು ಹಾಜರಾತಿಯನ್ನು ಕಡ್ಡಾಯವಾಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು ನಿರ್ವಹಿಸತಕ್ಕದ್ದು, ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ದಾಖಲೆಯನ್ನು ಸಂರಕ್ಷಿಸಬೇಕು. ಈ ಕುರಿತಂತೆ ವ್ಯಾಪ್ತಿಯ ಉಪನಿರ್ದೇಶಕರು(ಆಡಳಿತ) ಇವರಿಗೆ ವರದಿಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಕಡ್ಡಾಯವಾಗಿ ಸಲ್ಲಿಸುವುದು.

ಇದನ್ನೂ ಓದಿ: Exam Scam : ಸರ್ಕಾರಿ ನೇಮಕಾತಿ ಅಕ್ರಮ ತಡೆಯಲು ವಿಧೇಯಕ; ಅಧಿವೇಶನದಲ್ಲಿ ಮಂಡನೆ

  • ಉಪನಿರ್ದೇಶಕರ ಕಚೇರಿ/ಡಯಟ್ ಕಚೇರಿಗೆ ಸ್ಥಳ ಆಯ್ಕೆ ಮಾಡಿಕೊಂಡಿರುವ ಶಿಕ್ಷಕರಿಗೆ ಪ್ರಸ್ತುತ ನಿಯೋಜಿಸುವ ಆದೇಶವು ತಾತ್ಕಾಲಿಕವಾಗಿರುತ್ತದೆ. ಸದರಿ ನಿಯೋಜಿತ ಶಾಲೆಯನ್ನು ಮೂಲ ಶಾಲೆಯೆಂದು ಭಾವಿಸತಕ್ಕದ್ದಲ್ಲ ಎಂಬುದನ್ನು ಶಿಕ್ಷಕರುಗಳಿಗೆ ಕ್ಷೇತ್ರಶಿಕ್ಷಣಾಧಿಕಾರಿಗಳು ಸ್ಪಷ್ಟಪಡಿಸತಕ್ಕದ್ದು. ಶಿಕ್ಷಕರ ನಿಯೋಜನೆ ಸಂಬಂಧ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. ಬಿ ಏನ್ ಎಸ್

    19 November 2023, 10:40 AM at 10:40 am

    ನಿರೋದ್ಯೊಗ ಜಾಸ್ತಿ ಆಗುತ್ತಿದೆ. ಪ್ರೈವೆಟ್ ಸ್ಕೂಲ್ ಗಳಲ್ಲಿ 15000 ರಿಂದ 20000 ತಿಂಗಳಿಗೆ ಇರುವಾಗ. ಸರಕಾರ ಕಡಿಮೆ ಸಂಬಳದಲ್ಲಿ ಜಾಸ್ತಿ ಜನಕ್ಕೆ ಕೆಲಸ ಕೊಟ್ಟರೆ ಒಳ್ಳೇದು. ಈಗ ಲೈಫ್ ಟೈಮ್ ಎಂಪ್ಲಾಯಮೆಂಟ್ ಅಂತ ಎಲ್ಲೂ ಇಲ್ಲ. ಲಕ್ಷಾನ್ತರ ಕೆಲಸ ಖಾಲಿ ಜೊತೆಗೆ ಲಕ್ಷಾನ್ತರ ನಿರೊದ್ಯೊಗ. ಸರಕಾರದಲ್ಲಿ ಹಣ ಇಲ್ಲ. ಹೊಸ ಯೋಚ್ಗನೆ ಬೇಕು

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

Mrs India Karnataka: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಮಿಸಸ್ ಕರ್ನಾಟಕ ಮಂಗಳೂರು ಕಾರ್ಯಕ್ರಮ ನೆರವೇರಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಫ್ಯಾಷನ್‌ ಶೋ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

VISTARANEWS.COM


on

Mrs India Karnataka
Koo

ಮಂಗಳೂರು: ಮಹಿಳೆಯರಿಗೆ ಫ್ಯಾಷನ್ ಲೋಕದಲ್ಲಿ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಸಂಶೀಮಠ ಅವರ ನೇತೃತ್ವದಲ್ಲಿ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮಿಸಸ್ ಕರ್ನಾಟಕ ಮಂಗಳೂರು (Mrs India Karnataka) ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸುಮಾರು 26 ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ವರ್ಷಗಳಿಂದ ಮಿಸಸ್ ಕರ್ನಾಟಕವನ್ನು ಆಯೋಜನೆ ಮಾಡುತ್ತಿದ್ದು, ಇದೀಗಾ 5ನೇ ವರ್ಷದ ಮಿಸಸ್ ಕರ್ನಾಟಕ ಆವೃತ್ತಿ ಮಂಗಳೂರಿನಲ್ಲಿ ನಡೆಯಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಈ ಗ್ರ್ಯಾಂಡ್ ಫಿನಾಲೆ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

ಇದನ್ನೂ ಓದಿ | Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Continue Reading

ಕರ್ನಾಟಕ

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

Tourist Boat Capsizes: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಬಳಿ ಸಮುದ್ರದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ.

VISTARANEWS.COM


on

Tourist boat capsizes
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Continue Reading

ಕರ್ನಾಟಕ

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Dangerous Bike Stunt: ಬೆಂಗಳೂರಿನಲ್ಲಿ ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Dangerous Bike Stunt
Koo

ಬೆಂಗಳೂರು: ನಗರದಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ (Dangerous Bike Stunt) ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ಯುವಕ ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಚಾಲನೆ ಮಾಡಿದ್ದ ವಿಡಿಯೊ ವೈರಲ್‌ ಆಗಿತ್ತು. ಇದರಿಂದ ಬೈಕ್ ನಂಬರ್ ಪ್ಲೇಟ್ ಅಧರಿಸಿ ಸಿಲಂಬರಸನ್‌ನನ್ನು ಪೊಲೀಸರು ಬಂಧಿಸಿ, ಡಿಎಲ್ ರದ್ದು ಮಾಡಲು ಆರ್‌ಟಿಒಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್!

yelahanka flyover

ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಅದೇ ರೀತಿ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿತ್ತು.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದರು. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ನಂತರ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿತ್ತು. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಯಲಹಂಕ ಸಂಚಾರ ಪೊಲೀಸ್ ಠಾಣೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Continue Reading

ಕರ್ನಾಟಕ

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Drown in Lake: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ನೀರುಪಾಲಾಗಿದ್ದಾರೆ

VISTARANEWS.COM


on

Drowned in Lake
Koo

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading
Advertisement
Ebrahim Raisi
ವಿದೇಶ15 mins ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ19 mins ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ48 mins ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ1 hour ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ1 hour ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ1 hour ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ2 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ2 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ3 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ3 hours ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ9 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ10 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌