Site icon Vistara News

Govt Employees News : ನೌಕರರ ಸಂಘದ ಪ್ರತಿಭಾ ಪುರಸ್ಕಾರ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Karnataka State Govt Employees Association

Govt Employees News prathibha puraskara application last date extended

ಬೆಂಗಳೂರು: ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ‌ ನೀಡುವ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು (Govt Employees News) ವಿಸ್ತರಿಸಲಾಗಿದೆ. ಈಗ ಜೂನ್‌ 10 ರವರೆಗೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಘ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯದ ಸರ್ಕಾರಿ ನೌಕರರ ಮಕ್ಕಳಿಗೆ ಮಾತ್ರ ಈ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಈ ಹಿಂದೆ ಈ ಪುರಸ್ಕಾರಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವೆಂದು ಪ್ರಕಟಿಸಲಾಗಿತ್ತು. ಈಗ ಸರ್ಕಾರಿ ನೌಕರರ ಕೋರಿಕೆಯ ಮೇರೆಗೆ ದಿನಾಂಕವನ್ನು ಜೂನ್‌ 10 ರವರೆಗೆ ವಿಸ್ತರಿಸಲಾಗಿದೆ ಎಂದು ಸಂಘದ ಪ್ರಕಟಣೆಯು ಹೇಳಿದೆ.

ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ಸರ್ಕಾರಿ ಹೊಂದಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಯು 2023ರ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು ಎಂದು ಸಂಘ ಹೇಳಿದೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿಯ ಜತೆಗೆಯಲ್ಲಿ ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು, ಬೆಂಗಳೂರು ನಗರ, ರಾಜ್ಯ ಪರಿಷತ್‌ ಸದಸ್ಯರಿಂದ ಪಡೆದ ದೃಢೀಕರಣ ಪತ್ರವನ್ನು ಕೂಡ ಅಪ್‌ಲೋಡ್‌ ಮಾಡಬೇಕಾಗಿರುತ್ತದೆ. ಈ ದೃಢೀಕರಣ ಪತ್ರದ ನಮೂನೆಯನ್ನು KSGEA NEWS Blog ನಿಂದ ಪಡೆದುಕೊಳ್ಳಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನಿಸಲಾಗುತ್ತದೆ. ಶೇಕಡಾವಾರು ಅಂಕಗಳ ಆಧಾರದಲ್ಲಿ ಈ ಪುರಸ್ಕಾರವನ್ನು ನೀಡಲಾಗುತ್ತದೆ ಎಂದು ಸಂಘ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಬೆಳಗ್ಗೆ 10.00 ರಿಂದ ಸಂಜೆ 6.00ವರೆಗೆ ಕಚೇರಿಯೆ ವ್ಯವಸ್ಥಾಪಕರಾದ ಸುರೇಶ್‌ ಎನ್‌. ಅವರನ್ನು ದೂರವಾಣಿ ಸಂಖ್ಯೆ 080 22354784/83 ರಲ್ಲಿ ಅಥವಾ ಲೆಕ್ಕ ಸಹಾಯಕ ಸೈಯದ್‌ ಜಬಿ ಅವರನ್ನು ಮೊಬೈಲ್‌ ನಂಬರ್‌ 9902135813 ರಲ್ಲಿ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: NPS News : ಗ್ಯಾರಂಟಿಗಳಂತೆ ಓಪಿಎಸ್‌ ಜಾರಿ ಕೂಡ ಸದ್ಯಕ್ಕಿಲ್ಲ; ಸರ್ಕಾರ ಯೋಚಿಸುತ್ತಿರುವುದಾದರೂ ಏನು?

Exit mobile version