ಮದ್ರಾಸ್‌ ಐಐಟಿಯಿಂದ ನಾಲ್ಕು ವರ್ಷಗಳ ಆನ್‌ಲೈನ್‌ ಬಿಎಸ್‌ ಪದವಿ ಶುರು - Vistara News

ಶಿಕ್ಷಣ

ಮದ್ರಾಸ್‌ ಐಐಟಿಯಿಂದ ನಾಲ್ಕು ವರ್ಷಗಳ ಆನ್‌ಲೈನ್‌ ಬಿಎಸ್‌ ಪದವಿ ಶುರು

ಮದ್ರಾಸ್‌ ಐಐಟಿಯು ಆನ್‌ಲೈನ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ಗೆ ಸಂಬಂಧಿಸಿದ ನಾಲ್ಕು ವರ್ಷಗಳ ಬಿಎಸ್‌ ಪದವಿಯನ್ನು ಆರಂಭಿಸಿದ್ದು, ದ್ವಿತೀಯ ಪಿಯುಸಿ ಓದಿದವರು ಈ ಪದವಿ ಪಡೆಯಬಹುದಾಗಿದೆ.

VISTARANEWS.COM


on

IIT-Madras launches four-year online BS degree programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚೆನ್ನೈ: ಮದ್ರಾಸ್‌ ಐಐಟಿಯು ಆನ್‌ಲೈನ್‌ನಲ್ಲಿ ಮತ್ತೊಂದು ನಾಲ್ಕು ವರ್ಷಗಳ ಪದವಿಯನ್ನು ಪರಿಚಯಿಸಿದೆ. ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ನಲ್ಲಿ ಬಿಎಸ್‌ ಪದವಿಯನ್ನು ನೀಡಲಾಗುತ್ತಿದ್ದು, ಇದನ್ನು ದ್ವಿತೀಯ ಪಿಯುಸಿ ಓದಿರುವ ಯಾರು ಬೇಕಾದರೂ ಪಡೆದುಕೊಳ್ಳಬಹುದಾಗಿದೆ.

ಎಲೆಕ್ಟ್ರಾನಿಕ್ಸ್‌ ಕ್ಷೇತ್ರದಲ್ಲಿ ಕೌಶಲ ಹೊಂದಿರುವ ಪದವೀಧರರ ಕೊರತೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮದ್ರಾಸ್‌ ಐಐಟಿಯ ಈ ಕ್ರಮ ಮಹತ್ವ ಪಡೆದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಈ ಪದವಿ ನೀಡುವ ಶೈಕ್ಷಣಿಕ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿದ್ದಾರೆ. ಮದ್ರಾಸ್‌ ಐಐಟಿಯ ಪದವಿ ನೀಡುವ ಈ ಕಾರ್ಯಕ್ರಮ ಐತಿಹಾಸಿಕವಾದದು ಎಂದು ಅವರು ಬಣ್ಣಿಸಿದ್ದಾರೆ.

ಪದವಿಗೆ ಅರ್ಹತೆ ಏನು?

ಈ ಪದವಿಯನ್ನು ಎಲೆಕ್ಟ್ರಾನಿಕ್‌ ಸಿಸ್ಟಮ್‌ನಲ್ಲಿ ಆಸಕ್ತಿ ಹೊಂದಿದ ಯಾರು ಬೇಕಾದರೂ ಪಡೆದುಕೊಳ್ಳಬಹುದು. ಇದು ಆನ್‌ಲೈನ್‌ ಪದವಿಯಾಗಿರುವುದರಿಂದ ವಯಸ್ಸಿನ ನಿರ್ಬಂಧಗಳಿಲ್ಲ. ಆದರೆ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಓದಿರಬೇಕು.

ನಾಲ್ಕು ವಾರಗಳ ಅರ್ಹತಾ ಪ್ರಕ್ರಿಯೆಯ ಮೂಲಕ (qualifier process) ಅರ್ಹ ವಿದ್ಯಾರ್ಥಿಗಳನ್ನು ಈ ಪದವಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಅರ್ಹತಾ ಪರೀಕ್ಷೆ ಕೂಡ ನಡೆಯುತ್ತದೆ ಎಂದು ಮದ್ರಾಸ್‌ ಐಐಟಿಯ ನಿರ್ದೇಶಕ ವಿ. ಕಾಮಕೋಟಿ ತಿಳಿಸಿದ್ದಾರೆ. ಮೊಬೈಲ್‌ ಫೋನ್‌, ಇ-ವಾಹನಗಳ ಬಳಕೆ ಹೆಚ್ಚಿರುವುದರಿಂದ ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿ ನಿಪುಣತೆ ಹೊಂದಿದವರಿಗೆ ಬಹಳ ಬೇಡಿಕೆ ಇದೆ. ಹೀಗಾಗಿ ಈ ಕೋರ್ಸ್‌ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರವಲ್ಲದೆ, ಈಗಾಗಲೇ ವೃತ್ತಿಯಲ್ಲಿರುವವರು ಕೂಡ ತಮ್ಮ ಕೌಶಲವನ್ನು ಹೆಚ್ಚಿಸಿಕೊಳ್ಳಲು ಈ ಪದವಿಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಯನ್ನು ಮದ್ರಾಸ್‌ ವಿವಿಯ ವೆಬ್‌ಸೈಟ್‌ನಿಂದ ಪಡೆದುಕೊಳ್ಳಲು ಇಲ್ಲಿ ಕ್ಲಿಕ್‌ ಮಾಡಿ.

ಈ ಪದವಿಯ ಕಾರ್ಯಕ್ರಮದಲ್ಲಿ ಥಿಯರಿ ಮತ್ತು ಲ್ಯಾಬರೋಟರಿ ಕೋರ್ಸ್‌ಗಳಿರಲಿವೆ. ಮದ್ರಾಸ್‌ ಐಐಟಿಯ ಮತ್ತು ಉದ್ಯಮದ ಸಂಪನ್ಮೂಲ ವ್ಯಕ್ತಿಗಳು ಈ ವಿಷಯದ ಕುರಿತು ಪಾಠ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಬೋಧನೆಯ ರೆಕಾರ್ಡ್‌ ಆಗಿರುವ ವಿಡಿಯೋವನ್ನು ಒದಗಿಸಲಾಗುತ್ತದೆ.

ಅಭ್ಯಾಸ ಸಾಮಗ್ರಿಗಳನ್ನು ಒದಗಿಸುವುದರ ಜತೆಗೆ ವಿದ್ಯಾರ್ಥಿಗಳಿಗೆ ತಮ್ಮ ಗೊಂದಲವನ್ನು ಬಗೆಹರಿಸಿಕೊಳ್ಳಲು ಆನ್‌ಲೈನ್‌ ವೇದಿಕೆಯನ್ನು ಕಲ್ಪಿಸಲಾಗುತ್ತದೆ. ಲ್ಯಾಬರೋಟರಿ ಕೋರ್ಸ್‌ಗೆ ವಿದ್ಯಾರ್ಥಿಗಳು ಮದ್ರಾಸ್‌ ಐಐಟಿಗೆ ಹಾಜರಾಗುವುದು ಅವಶ್ಯವಾಗಿದ್ದು, ಪ್ರತಿ ಸೆಮಿಸ್ಟರ್‌ನಲ್ಲಿ ಎರಡು ವಾರಗಳ ಕಾಲ ಅವರು ಲ್ಯಾಬರೋಟರಿ ಕ್ಲಾಸ್‌ಗೆ ಹಾಜರಾಗಿರಬೇಕಿರುತ್ತದೆ ಎಂದು ಐಐಟಿಯು ತಿಳಿಸಿದೆ.

ಇದನ್ನೂ ಓದಿ : Australia -India : ಭಾರತೀಯ ಕಾಲೇಜುಗಳ ಪದವಿಗಳಿಗೆ ಆಸ್ಟ್ರೇಲಿಯಾ ಮಾನ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

VISTARANEWS.COM


on

ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗುತ್ತಿದ್ದಂತೆಯೇ ಮತ್ತೆ ಹಳೆಯ ವಿವಾದವೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ನಡೆದಿದೆ. ತಪಾಸಣೆ ನೆಪದಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಡೆದ ಸಿಬ್ಬಂದಿ, “ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ” ಎಂದು ಧಮ್ಕಿ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರೇ ಮನನೊಂದು ಜನಿವಾರ ತೆಗೆಸಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸುವಂತಾಯಿತು.

ಈ ವಿಚಾರ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಅಧಿಕಾರಿಗಳು, ಪೋಷಕರಿಂದ “ದೂರು ನೀಡುವುದಿಲ್ಲ” ಎಂಬ ಪತ್ರ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ವರ್ತನೆಯು ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಅನಗತ್ಯವಾಗಿ ಧಾರ್ಮಿಕ ಸಂಕೇತಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ಶುರುವಾಗಿವೆ.

ಇದೇ ವೇಳೆ ಚಿಕ್ಕಮಗಳೂರಿನ ಎಂಇಎಸ್ (MES) ಕಾಲೇಜಿನಲ್ಲೂ ಪರೀಕ್ಷಾ ಸಿಬ್ಬಂದಿಗಳ ಕಟ್ಟುನಿಟ್ಟಿನ ಕ್ರಮ ವಿದ್ಯಾರ್ಥಿನಿಯರಿಗೆ ಸಂಕಷ್ಟ ತಂದೊಡ್ಡಿದೆ. ಪರೀಕ್ಷಾ ಕೇಂದ್ರಕ್ಕೆ ಮೆಟಲ್ ವಸ್ತುಗಳನ್ನು ಧರಿಸಿ ಬರುವಂತಿಲ್ಲ ಎಂಬ ನಿಯಮವಿದ್ದ ಕಾರಣ, ಮೂಗುತಿ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‌ನಲ್ಲೇ ತಡೆಹಿಡಿಯಲಾಗಿತ್ತು. ಕೊನೆಗೆ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು. ಒಟ್ಟಾರೆಯಾಗಿ ಸಿಇಟಿ ಪರೀಕ್ಷೆಯ ಮೊದಲ ದಿನವೇ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಗಳ ಹೆಸರಿನಲ್ಲಿ ನಡೆದ ಇಂತಹ ಕಿರಿಕ್‌ಗಳು ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿವೆ.

Continue Reading

Latest

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ದಿನಾಂಕ ಪ್ರಕಟ: ಅನುತ್ತೀರ್ಣರಾದವರಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ

VISTARANEWS.COM


on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 94.10 ರಷ್ಟು ದಾಖಲೆ ಪ್ರಮಾಣದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ‘ಪರೀಕ್ಷೆ-2’ (ಮರುಪರೀಕ್ಷೆ) ದಿನಾಂಕಗಳನ್ನು ಘೋಷಿಸಲಾಗಿದ್ದು, ಮೇ 18ರಿಂದ ಮೇ 25, 2026ರವರೆಗೆ ಪರೀಕ್ಷೆಗಳು ಜರುಗಲಿವೆ. ವಿಶೇಷವೆಂದರೆ, ಈ ಬಾರಿ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಪರೀಕ್ಷಾ ಶುಲ್ಕವನ್ನು ವಸೂಲಿ ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಕಳೆದ ವರ್ಷಗಳಲ್ಲಿ ಪ್ರತಿ ವಿಷಯಕ್ಕೆ ₹250 ಶುಲ್ಕವನ್ನು ನಿಗದಿಪಡಿಸಲಾಗುತ್ತಿತ್ತು, ಆದರೆ ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಸಂಪೂರ್ಣ ಉಚಿತಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಮರುಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕಿದೆ. ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ, ಈ ವರ್ಷ ಮಂಡಳಿಯು ಕೇವಲ ಎರಡು ಪರೀಕ್ಷೆಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಈ ಹಿಂದೆ ಇದ್ದಂತೆ ‘ಮೂರನೇ ಪರೀಕ್ಷೆ’ (Exam-3) ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇದು ಈ ಸಾಲಿನ ಅಂತಿಮ ಅವಕಾಶವಾಗಲಿದೆ.

ಇನ್ನು ತಮ್ಮ ಫಲಿತಾಂಶದಲ್ಲಿ ಅಂಕಗಳ ವ್ಯತ್ಯಯವಾಗಿದೆ ಎಂದು ಭಾವಿಸುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ (Revaluation) ಮತ್ತು ಅಂಕಗಳ ಮರುಎಣಿಕೆಗೆ (Re-totalling) ಅವಕಾಶ ಕಲ್ಪಿಸಲಾಗಿದೆ. ಫಲಿತಾಂಶ ಪ್ರಕಟವಾದ ದಿನದಿಂದ 15 ದಿನಗಳ ಒಳಗಾಗಿ ಆಸಕ್ತ ವಿದ್ಯಾರ್ಥಿಗಳು kseab.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಮಟ್ಟದ ಫಲಿತಾಂಶ ಬಂದಿದ್ದರೂ, ಒಂದು ವೇಳೆ ಅಂಕಗಳಲ್ಲಿ ಅಸಮಾಧಾನವಿದ್ದರೆ ಈ ತಾಂತ್ರಿಕ ಸೌಲಭ್ಯವನ್ನು ಬಳಸಿಕೊಳ್ಳಲು ಮಂಡಳಿ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Continue Reading

Latest

ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶಿಕ್ಷಣ ಇಲಾಖೆಯಿಂದ ಅಧಿಕೃತ ಘೋಷಣೆ!

VISTARANEWS.COM


on

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತುರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ರಾಜ್ಯದ ಒಟ್ಟು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 8.65 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಇಂದು ನಿರ್ಧಾರವಾಗಲಿದೆ. ಫಲಿತಾಂಶದ ನಂತರ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

ಈ ಬಾರಿಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಹಿಂದಿ ವಿಷಯಕ್ಕೆ ಗ್ರೇಡ್ ನೀಡಲು ಸರ್ಕಾರ ಯೋಚಿಸಿತ್ತಾದರೂ, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅಂಕಗಳನ್ನೇ ನೀಡಲು ಶಿಕ್ಷಣ ಇಲಾಖೆ ಅಂತಿಮ ನಿರ್ಧಾರ ಕೈಗೊಂಡಿದೆ. ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಎಲ್ಲ ವಿಷಯಗಳಿಗೂ ಅಂಕಗಳೇ ನಮೂದಾಗಲಿವೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಸಂಭ್ರಮದ ನಡುವೆಯೇ ಇಂದಿನಿಂದ ರಾಜ್ಯಾದ್ಯಂತ ಸಿಇಟಿ (CET) ಪರೀಕ್ಷೆಗಳೂ ಆರಂಭವಾಗುತ್ತಿವೆ. ಈ ಬಾರಿ ದಾಖಲೆ ಮಟ್ಟದ 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೆಇಎ (KEA) ಕಚೇರಿಯಿಂದಲೇ ಇಡೀ ಪರೀಕ್ಷಾ ಪ್ರಕ್ರಿಯೆಯ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Continue Reading

ಕರ್ನಾಟಕ

SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ

VISTARANEWS.COM


on

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 24ರಂದು ಬಿಡುಗಡೆಯಾಗುವುದು ಅನುಮಾನ ಮೂಡಿಸಿದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಕೊಡಬೇಕೆ? ಅಥವಾ ಅಂಕ ಕೊಡಬೇಕೆ ಎಂಬ ವಿಷಯ ನ್ಯಾಯಾಲಯದ ಅಂಗಳದಲ್ಲಿದ್ದು ರಿಸಲ್ಟ್‌ ಮುಂದೆ ಹೋಗುವಂತೆ ಮಾಡಿದೆ. ಪರೀಕ್ಷೆ ಬರೆದ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಈ ಪ್ರಕರಣದ ವಿಚಾರಣೆ ನಾಳೆ ಏಪ್ರಿಲ್ 21ರಂದು ನಡೆಯಲಿದ್ದು, ನ್ಯಾಯಾಲಯದ ತೀರ್ಪು ಪ್ರಕಟವಾದ ನಂತರ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ನೀಡಿದೆ.
ಮರುಪರಶೀಲನೆಗೆ ಸರ್ಕಾರ ಮೇಲ್ಮನವಿ
ರಾಜ್ಯ ಸರ್ಕಾರ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರ ಪ್ರಕಟಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ತೃತೀಯ ಭಾಷೆಗೆ ಗ್ರೇಡ್ ಬದಲು ಮೊದಲಿನಂತೆ ಅಂಕಗಳನ್ನು ನೀಡಲು ಸೂಚಿಸಿತ್ತು. ನಂತರ ಈ ಆದೇಶವನ್ನು ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು ನಾಳೆ ವಿಚಾರಣೆ ನಡೆಯಲಿದೆ.
ತೃತೀಯ ಭಾಷೆಯ ಉತ್ತರ ಪತ್ರಿಕೆಗಳನ್ನು ಅಂಕಗಳ ಆಧಾರದಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಕೋರ್ಟ್ ತೀರ್ಪಿನ ಮೇಲೆ ಫಲಿತಾಂಶ ಪ್ರಕಟವಾಗುತ್ತದೆ. ಈಗಾಗಲೇ ಸಿಬಿಎಸ್‌ಇ ಫಲಿತಾಂಶ ಹೊರ ಬಿದ್ದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕಾಗಿಯೇ ಪದವಿ ಪೂರ್ವ ಕಾಲೇಜುಗಳು ಕಾಯುತ್ತಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆದಿದ್ದವು. ಈ ಪರೀಕ್ಷೆಯಲ್ಲಿ ಒಟ್ಟು 9,02,889 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು.

Continue Reading
Advertisement
Latest7 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest12 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest13 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌