ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) 2023-24 ಸಾಲಿನಲ್ಲಿ ನಡೆಸಲಿರುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಜೆಇಇ (ಮೇನ್) 2023 (JEE Main 2023) ಸೆಷನ್ 1ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಿದೆ.
2023ರ ಜನವರಿ 24, 25, 27, 28, 29, 30, 31ರಂದು ಈ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಜನವರಿ 12 ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಕೂಡ ಜನವರಿ 12 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಯಾವ ನಗರದಲ್ಲಿ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ಜನವರಿ 2ನೇ ವಾರದಲ್ಲಿ ಪ್ರಕಟಿಸಲಾಗುತ್ತದೆ. ಪ್ರವೇಶ ಪತ್ರವನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ಜನವರಿ ಮೂರನೇವಾರದ ಪ್ರಾರಂಭದಲ್ಲಿಯೇ ಒದಗಿಸಲಾಗುತ್ತದೆ.
ಪರೀಕ್ಷೆ ಹೇಗಿರುತ್ತದೆ?
ಜೆಇಇ ಮೇನ್ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾಗುತ್ತದೆ. ನಿತ್ಯ ಎರಡು ಶಿಫ್ಟ್‌ಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಸೆಷನ್ 2ರ ಪರೀಕ್ಷೆಯು ಏಪ್ರಿಲ್ 06, 08, 10, 11, 12 ರಂದು ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://jeemain.nta.nic.in/
ಇದನ್ನೂ ಓದಿ | NTA Exam Calender 2023 | ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ; ಈ ಬಾರಿ ಮೇ 7ಕ್ಕೆ ನೀಟ್ ಎಕ್ಸಾಮ್