JEE Main 2024 Session 2: ಜೆಇಇ ಮೇನ್ಸ್‌ ಸೆಷನ್‌ 2 ನೋಂದಣಿ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ - Vistara News

ಶಿಕ್ಷಣ

JEE Main 2024 Session 2: ಜೆಇಇ ಮೇನ್ಸ್‌ ಸೆಷನ್‌ 2 ನೋಂದಣಿ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

JEE Main 2024 Session 2: ಜೆಇಇ ಮೇನ್ಸ್‌ ಸೆಷನ್‌ 2 ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹರು ಮಾರ್ಚ್‌ 2ರ ತನಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ವಿವರ ಇಲ್ಲಿದೆ.

VISTARANEWS.COM


on

jee mains
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜೆಇಇ ಮೇನ್ಸ್‌ ಸೆಷನ್‌ 2 (JEE Main 2024 Session 2) ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹರು ಮಾರ್ಚ್‌ 2ರ ತನಕ ಅರ್ಜಿ ಸಲ್ಲಿಸಬಹುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ. ಏಪ್ರಿಲ್‌ 1ರಿಂದ 15ರ ಮಧ್ಯೆ ಈ ಜೆಇಇ ಎರಡನೇ ಹಂತದ ಪರೀಕ್ಷೆ ನಡೆಯಲಿದೆ.

ಮೊದಲ ಸೆಷನ್‌ಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದವರು ಎರಡನೇ ಸೆಷನ್‌ ಅರ್ಜಿ ಸಲ್ಲಿಕೆ ವೇಳೆ ಸೆಷನ್‌ನ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನಮೂದಿಸಬೇಕು ಎಂದು ಸೂಚಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರು ನಿಗದಿತ ದಿನಾಂಕದೊಳಗೆ ಮಾರ್ಗಸೂಚಿ ಅನುಸಾರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಈ ಲಾಗಿನ್‌ ವೇಳೆ ಅಭ್ಯರ್ಥಿಗಳು ಪತ್ರಿಕೆ, ಪರೀಕ್ಷಾ ಮಾಧ್ಯಮ, ರಾಜ್ಯ ಅರ್ಹತಾ ಸಂಹಿತೆ, ಸೆಷನ್ 2ಗೆ ಆದ್ಯತೆಯ ನಗರಗಳು, ಶೈಕ್ಷಣಿಕ ಅರ್ಹತೆ ವಿವರಗಳನ್ನು ನಮೂದಿಸಬೇಕು. ಬಳಿಕ ಪರೀಕ್ಷಾ ಶುಲ್ಕ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಕಳೆದ ವಾರ ಮುಕ್ತಾಯವಾದ ಜೆಇಇ ಮೇನ್ಸ್‌ ಮೊದಲ ಸೆಷನ್‌ನಲ್ಲಿ ಒಟ್ಟು ಅರ್ಜಿ ಸಲ್ಲಿಸಿದವರ ಪೈಕಿ ಶೇ. 95.8ರಷ್ಟು ಅಭ್ಯರ್ಥಿಗಳು ಹಾಜರಿದ್ದರು ಎಂದು ಮೂಲಗಳು ತಿಳಿಸಿವೆ. ಜೆಇಇ ಮೇನ್ಸ್‌ ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ 12 ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲಿದೆ. ಭಾರತದ ಹೊರಗಿನ 21 ನಗರಗಳಲ್ಲಿಯೂ ಈ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜೆಇಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ವಿದ್ಯಾರ್ಥಿಗಳು ದೇಶದ ಪ್ರತಿಷ್ಟಿತ ಎನ್‌ಐಟಿ, ಐಐಟಿ ಮತ್ತು ಕೇಂದ್ರದ ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಹೊಂದುತ್ತಾರೆ. ಜೆಇಇ ಮೇನ್ಸ್‌ ಸೆಷನ್‌ 2ರ ಫಲಿತಾಂಶ ಏಪ್ರಿಲ್‌ 25ರಂದು ಹೊರ ಬರುವ ನಿರೀಕ್ಷೆ ಇದೆ.

ಜೆಇಇ ಮೇನ್ಸ್‌ ಸೆಷನ್‌ 2 ಅರ್ಜಿ ಸಲ್ಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://jeemain.nta.nic.in/ಗೆ ಭೇಟಿ ನೀಡಿ.
  • ಈಗ ಓಪನ್‌ ಆಗುವ ಹೋಮ್‌ ಪೇಜ್‌ನಲ್ಲಿ ಕಾಣಿಸುವ JEE Main 2024 Session 2 ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ಹೆಸರು ನೋಂದಾಯಿಸಿದ ಬಳಿಕ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಾದ ಮಾಹಿತಿ ತುಂಬಿ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ಮಾಹಿತಿಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: JEE Mains : 24ರಂದು ಜೆಇಇ ಮೇನ್ಸ್ 2024 ಪ್ರವೇಶ ಪತ್ರ ಬಿಡುಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ರಾಜ್ಯದಲ್ಲಿ ಇನ್ನೇನು ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲೆಗಳಲ್ಲಿ ಅಡ್ಮಿಷನ್‌ ಪ್ರಕ್ರಿಯೆ ಕೂಡ ಆರಂಭವಾಗಲಿದೆ. ಇದಕ್ಕಾಗಿ ಮಕ್ಕಳು ಮಾತ್ರವಲ್ಲ ಪೋಷಕರು ಕೂಡ ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ, ಶಾಲಾ ಶುಲ್ಕ ಪಡೆಯುವಾಗ ಎಚ್ಚರದಿಂದ ಇರಿ ಎಂದು ಖಾಸಗಿ ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Madhu Bangarappa
Koo

ಶಿವಮೊಗ್ಗ: ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಫಲಿತಾಂಶ ಪ್ರಕಟವಾಗಿದೆ. ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪೋಷಕರು ಮಕ್ಕಳನ್ನು ಯಾವ ಶಾಲೆಗೆ ಸೇರಿಸಿದರೆ ಒಳ್ಳೆಯದು? ಎಲ್ಲಿ ಎಷ್ಟು ಫೀ ಇದೆ? ಯಾವ ಶಾಲೆಗೆ ಸೇರಿಸಬೇಕು ಎಂದರೆ ಎಷ್ಟು ಡೊನೇಷನ್‌ ಕೊಡಬೇಕು ಎಂಬುದು ಸೇರಿ ಹಲವು ರೀತಿಯಲ್ಲಿ ಯೋಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಪ್ರಾಥಮಿಕ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಖಾಸಗಿ ಶಾಲೆಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಖಾಸಗಿ ಶಾಲೆಗಳಿಗೆ ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್‌ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್‌ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ವಸೂಲಿ ಮಾಡಿದರೆ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂಬುದಾಗಿ ಅವರು ಶಿವಮೊಗ್ಗದಲ್ಲಿ ಎಚ್ಚರಿಕೆ ನೀಡಿದರು.

ಅಂಕಿತಾಗೆ ವೈಯಕ್ತಿಕ ಸಹಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೇ ಮೊದಲ ರ‍್ಯಾಂಕ್‌ ಬಂದ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊನ್ನೂರ್‌ಗೆ ವೈಯಕ್ತಿಕವಾಗಿಯೂ ನೆರವು ನೀಡುವುದಾಗಿ ಮಧು ಬಂಗಾರಪ್ಪ ಘೋಷಿಸಿದರು. “ಏನಾದರೂ ಸಹಾಯ ಬೇಕು ಎಂದರೆ ಕೇಳು ಎಂಬುದಾಗಿ ಅಂಕಿತಾಗೆ ಹೇಳಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಆಕೆಗೆ ಸಿಗುತ್ತವೆ. ಉನ್ನತ ಶಿಕ್ಷಣಕ್ಕೆ ಬೇಕಾದರೆ ಆಕೆಗೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ” ಎಂಬುದಾಗಿ ಮಧು ಬಂಗಾರಪ್ಪ ಹೇಳಿದರು.

“ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ನಾನೂ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುತ್ತೇನೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಪುಣ್ಯದ ಕೆಲಸವಾಗಿದ್ದು, ಹಂತ ಹಂತವಾಗಿ ಎಲ್ಲ ಕೆಲಸವನ್ನೂ ಮಾಡುತ್ತೇವೆ. ಮಳೆಗಾಲ ಸಮೀಪಿಸುತ್ತಿದ್ದು, ಸರ್ಕಾರಿ ಶಾಲೆಗಳ ದುರಸ್ತಿಗೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು. ಹಾಸನ ಪೆನ್‌ಡ್ರೈ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾನೂನು ಇದೆ, ಅದರ ಅನ್ವಯ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಷ್ಟೇ ಹೇಳಿದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Continue Reading

ಕರ್ನಾಟಕ

UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

UGCET 2024: ಯುಜಿಸಿಇಟಿ-2024 ಅರ್ಜಿಯಲ್ಲಿ ಆರ್‌ಡಿ ಸಂಖ್ಯೆ ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.

VISTARANEWS.COM


on

KEA
Koo

ಬೆಂಗಳೂರು: ಯುಜಿಸಿಇಟಿ-2024ಕ್ಕೆ (UGCET 2024) ಆನ್‌ಲೈನ್ ಅರ್ಜಿಯಲ್ಲಿ ನೀಡಿರುವ ಆರ್‌ಡಿ ಸಂಖ್ಯೆಗಳನ್ನು ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕೆಇಎ ಅಂತಿಮ ಅವಕಾಶ ನೀಡಿದೆ. ಅಭ್ಯರ್ಥಿಗಳು ಮೇ 15ರ ರಾತ್ರಿ 11.59 ಗಂಟೆವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕೆಇಎ ನಡೆಸುವ ಸಿಇಟಿ-2024ರ ಆನ್‌ಲೈನ್ ಅರ್ಜಿಯಲ್ಲಿ ಆ‌ರ್‌ಡಿ ಸಂಖ್ಯೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಡಿ ಸಂಖ್ಯೆಗಳನ್ನು ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮೇ 15ರ ರಾತ್ರಿ 11.59 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.inಗೆ ಭೇಟಿ ನೀಡಬಹುದು.

ಯುಜಿಸಿಇಟಿ-2024 ಅರ್ಜಿ ತಿದ್ದಪಡಿ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಿದ್ದುಪಡಿ ಮಾಡಿಕೊಳ್ಳಲು ಅನುಸರಿಸಬೇಕಾದ ಕ್ರಮ

  1. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅಭ್ಯರ್ಥಿಗಳ ಲಾಗಿನ್ ಮೂಲಕ ತಿದ್ದುಪಡಿ ಮಾಡಿಕೊಳ್ಳುವುದು.
  2. ಲಿಂಕ್ ಆಯ್ಕೆ ಮಾಡಿದ ನಂತರ ಯಾವುದನ್ನು ಎಡಿಟ್ ಮಾಡಬೇಕು ಎಂಬುದನ್ನು ಸೆಲೆಕ್ಟ್ ಮಾಡಿ, ನಂತರ , (eligibility clause Update, RD details update, Course Update, Upload Documents, Reservation Claims, Special Category claims.) ತಿದ್ದುಪಡಿ ಮಾಡಿ
  3. Declaration button ಅನ್ನು ಆಯ್ಕೆ (Select) ಮಾಡುವ ಮೊದಲು ಪರಿಶೀಲಿಸಿ, ಒಂದು ಸಾರಿ Declaration button ಅನ್ನು ಆಯ್ಕೆ (Select) ಮಾಡಿದ ನಂತರ ಪುನಹ ತಿದ್ದುಪಡಿಮಾಡಿಕೊಳ್ಳಲು ಅವಕಾಶ ವಿರುವುದಿಲ್ಲ.
  4. ತಿದ್ದುಪಡಿ ಮಾಡಿಕೊಂಡ ನಂತರ ತಪ್ಪದೇ Declaration button ಅನ್ನು ಆಯ್ಕೆ (Select) ಮಾಡಿ ನಂತರ Final Submission ಅನ್ನು ಸಲ್ಲಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ಮೊದಲು ಸಲ್ಲಿಸಿದ ಮಾಹಿತಿಯನ್ನೇ ಮುಂದಿನ ಎಲ್ಲಾ ಪ್ರಕ್ರಿಯೆಗೆ ಪರಿಗಣಿಸಲಾಗುವುದು.
  5. ನಂತರ ಮಾರ್ಪಡಿಸಿದ ಅರ್ಜಿಯನ್ನು ಮುದ್ರಿಸಿ ತಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಮುದ್ರಿತ ಅರ್ಜಿಯ ಕನಿಷ್ಟ ಐದು ಪ್ರತಿಗಳು ತಮ್ಮಲ್ಲಿ ಇರುವುದು ಸೂಕ್ತ.

ಇದನ್ನೂ ಓದಿ | SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

Continue Reading

ದೇಶ

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

NEET-UG: ನೀಟ್-ಯುಜಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

NEET-UG
Koo

ಗಾಂಧಿನಗರ: ನೀಟ್-ಯುಜಿ (NEET-UG) ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಭಾನುವಾರ (ಮೇ 5) ನೀಟ್-ಯುಜಿ ಪರೀಕ್ಷೆ ನಡೆಸಿತ್ತು. ಈ ವೇಳೆ ಗೋಧ್ರಾ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆದಿದೆ ಎಂಬ ಸುಳಿವು ಜಿಲ್ಲಾಧಿಕಾರಿಗೆ ದೊರೆತ ನಂತರ ತನಿಖೆ ನಡೆಸಲಾಗಿತ್ತು. ಈ ವೇಳೆ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು

ಸದ್ಯ ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಷಾರ್ ಭಟ್‌ ಕಾರಿನಲ್ಲಿ 7 ಲಕ್ಷ ರೂ. ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಇದು ಅಭ್ಯರ್ಥಿಯೊಬ್ಬರನ್ನು ಮೆರಿಟ್ ಪಟ್ಟಿಗೆ ಸೇರಿಸಲು ಸಹಾಯ ಮಾಡುವಂತೆ ವೋರಾ ಮುಂಗಡವಾಗಿ ಪಾವತಿಸಿದ ಮೊತ್ತ ಎಂದು ಪೊಲೀಸರು ತಿಳಿಸಿದ್ದಾರೆ.

ವಂಚನೆ ಹೇಗೆ?

ವಿಚಾರಣೆ ವೇಳೆ ವಂಚನೆಯ ಜಾಲದ ವಿವರ ಬೆಳಕಿಗೆ ಬಂದಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ದೂರಿನ ಮೇರೆಗೆ ಗೋಧ್ರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯ್ ಜಲರಾಮ್ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತುಷಾರ್ ಭಟ್ ನೀಟ್‌ ಕೇಂದ್ರದ ಉಪ ಅಧೀಕ್ಷಕರಾಗಿ ನೇಮಕಗೊಂಡಿದ್ದರು. ತನಿಖೆ ವೇಳೆ ಅವರ ಮೊಬೈಲ್‌ನಲ್ಲಿ ಸಾಕ್ಷಿ ದೊರೆತಿದೆ. ಪರಶುರಾಮ್ ರಾಯ್ ವ್ಯಾಟ್‌ಆ್ಯಪ್‌ ಮೂಲಕ ಕಳುಹಿಸಿದ 16 ಅಭ್ಯರ್ಥಿಗಳ ಪಟ್ಟಿ ಕಂಡು ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಪಟ್ಟಿಯ ಬಗ್ಗೆ ಕೇಳಿದಾಗ ತುಷಾರ್‌ ಭಟ್‌, ಇವರು ತಮ್ಮ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಎಂದು ಹೇಳಿದ್ದಾರೆ. ಈ ಅಭ್ಯರ್ಥಿಗಳು ಬಿಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಲು ತಲಾ 10 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ಕಿರಿತ್ ಪಟೇಲ್ ತಿಳಿಸಿದ್ದಾರೆ.

ಸದ್ಯ ತುಷಾರ್‌ ಭಟ್‌ ಅವರ ಮೊಬೈಲ್‌ ಫೋನ್‌, ನಗದು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದೆ ಎಂದು ಗೋಧ್ರಾ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Continue Reading

ಉತ್ತರ ಕನ್ನಡ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

SSLC Result 2024: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ. ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Koo

ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Result 2024) ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ.

ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

ವಿವಿವಿ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡದೇ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ. ಆದಾಗ್ಯೂ ಅಂಕ ಗಳಿಕೆಯಲ್ಲೂ ನಮ್ಮ ವಿದ್ಯಾರ್ಥಿಗಳು ಮುಂದಿರುವುದು ಸಂಸ್ಥೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ದೇಶದ ಭಾವಿ ಪ್ರಜೆಗಳ ಭದ್ರ ಭವಿಷ್ಯದ ಅಡಿಪಾಯ ಇದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಎಂದು ಅವರು ಆಶೀರ್ವದಿಸಿದ್ದಾರೆ.

ಪರೀಕ್ಷೆ ತೆಗೆದುಕೊಂಡ 33 ವಿದ್ಯಾರ್ಥಿಗಳ ಪೈಕಿ 19 ಮಂದಿ ಅತ್ಯುನ್ನತ ದರ್ಜೆಯಲ್ಲಿ 13 ಮಂದಿ ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪನ್ನಗ ಎಸ್. ಭಟ್ 613 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, 603 ಅಂಕ ಗಳಿಸಿದ ರಾಮಚಂದ್ರ ಉಪಾಧ್ಯ ಎರಡನೇ ಸ್ಥಾನ ಗಳಿಸಿದ್ದಾರೆ. ತಲಾ 600 ಅಂಕಗಳನ್ನು ಪಡೆದ ಎನ್. ತನ್ವಿ ಗೌರಿ ಮತ್ತು ಸುಮುಖ ಹೆಗಡೆ ಜಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಅತ್ಯುತ್ತಮ ಸಾಧನೆಗೆ ಕಾರಣವಾಗಿರುವ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಹೆಗಡೆ, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ ಮತ್ತಿತರರು ಅಭಿನಂದಿಸಿದ್ದಾರೆ.

Continue Reading
Advertisement
IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ2 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ3 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು3 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು3 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್3 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ5 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ5 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ6 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ6 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು11 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ21 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ3 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌