ಶಿಕ್ಷಣ
CET 2022 | ಸಿಇಟಿ ಅರ್ಜಿ ಸಲ್ಲಿಕೆಗೆ ಹೊಸ ಲಿಂಕ್: ಇಂದಿನಿಂದ ಆರಂಭ
ಈ ಹಿಂದೆ ವಿದ್ಯಾರ್ಥಿಗಳು ₹1 ನೀಡಿ ಅರ್ಜಿ ಭರ್ತಿ ಮಾಡಿದ್ದರೆ ಅದು ಪ್ರಾಯೋಗಿಕವಾಗಿರುತ್ತದೆ. ಈಗ ಹೊಸ ಅರ್ಜಿ ಭರ್ತಿ ಮಾಡಬೇಕು ಎಂದು ಪ್ರಾಧಿಕಾರ ತಿಳಿಸಿದೆ.
ಬೆಂಗಳೂರು: ಇಂಜಿನಿಯರಿಂಗ್ ಹಾಗೂ ವಿವಿಧ ವೃತ್ತಿಪರ ಕೋರ್ಸ್ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority-KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (karnataka common entrance test) ಅರ್ಜಿಸಲ್ಲಿಸಲು ಹೊಸ ಲಿಂಕ್ ಸೋಮವಾರ ತೆರೆದುಕೊಂಡಿದೆ.
ಈ ಬಾರಿ ಪರೀಕ್ಷೆಗಳು ಜೂನ್ 16ರಿಂದ ಆರಂಭವಾಗಲಿವೆ. ಈಗಾಗಲೆ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ವಿದ್ಯಾರ್ಥಿಗಳು ಅರ್ಜಿ ಭರ್ತಿ ಮಾಡಲು ಅನುಕೂಲವಾಗಲು ಸರಳವಾದ ಲಿಂಕ್ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ಅರ್ಜಿ ಭರ್ತಿ ಮಾಡಲು ಈ ಹಿಂದೆಯೇ ಒಂದು ಲಿಂಕ್ ನೀಡಲಾಗಿತ್ತು. ಅದರಲ್ಲಿ ಅರ್ಜಿ ಶುಲ್ಕವನ್ನು ಕೇವಲ ₹1 ರೂ. ಎಂದು ತಿಳಿಸಲಾಗಿತ್ತು, ಅಭ್ಯರ್ಥಿಗಳು ಅಷ್ಟೇ ಶುಲ್ಕವನ್ನು ಪ್ರಾಯೋಗಿಕವಾಗಿ ಪಾವತಿ ಮಾಡಿದ್ದರು.
ಆದರೆ ಅನೇಕ ಅಭ್ಯರ್ಥಿಗಳು ಅದೇ ಅಸಲಿ ಅರ್ಜಿ ಎಂದು ಭಾವಿಸಿದ್ದಾರೆ. ಹಳೆಯ ಲಿಂಕ್ ಅನ್ನು KEA ಹಿಂಪಡೆದಿದೆ. ಇದೀಗ ಹೊಸ ಅರ್ಜಿಯ ಲಿಂಕ್ ಅನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ KEA ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಮೇ5ರ ವರೆಗೆ ಅವಧಿಯಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಅಭ್ಯರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದಿಸಿದರೆ ಸಾಕು ವಿದ್ಯಾರ್ಥಿಯ ಹೆಸರು, ತಂದೆ ತಾಯಿಯ ಹೆಸರು ತಾನಾಗಿಯೇ ಭರ್ತಿಯಾಗುತ್ತದೆ. ವಿದ್ಯಾರ್ಥಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡಿದ ವಿವರ, ಮೀಸಲಾತಿ ಮಾಹಿತಿಗಳನ್ನು ಅಪ್‌ಲೋಡ್ ಮಾಡಿದರೆ ಸಾಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.
ವಿದ್ಯಾರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ ಆನ್‌ಲೈನ್ ಅರ್ಜಿ ಪಡೆಯಬಹುದು
ಈ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ರಮ್ಯಾ, ₹1 ಪಾವತಿ ಮಾಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಇದೀಗ ನೀಡಲಾಗಿರುವ ಹೊಸ ಲಿಂಕ್ ಭರ್ತಿ ಮಾಡಬೇಕು. ಅಸಲಿಗೆ ಶುಲ್ಕ ಸಾಮಾನ್ಯ ವಿದ್ಯಾರ್ಥಿಗಳಿಗೆ ₹750, ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ₹350 ಹಾಗೂ ಶುಲ್ಕ ವಿನಾಯಿತಿ ಇರುತ್ತದೆ. ಈ ಬಾರಿ ವಿದ್ಯಾರ್ಥಿಗಳು ಮಾಹಿತಿ ಮಾತ್ರ ನೀಡಬೇಕಿದ್ದು, ಯಾವುದೇ ದಾಖಲೆ ನೀಡಬೇಕಿಲ್ಲ. ದಾಖಲಾತಿಗಳನ್ನು ದಾಖಲಾತಿ ಪರಿಶೀಲನಾ ಸಮಯದಲ್ಲಿ ನೀಡಿದರೆ ಸಾಕು ಎಂದು ಹೇಳಿದ್ದಾರೆ. ಸಿಇಟಿ ಪರೀಕ್ಷೆ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ದೇಶ
NIRF Ranking 2023 : ದೇಶದ ಟಾಪ್ 40 ಡೆಂಟಲ್ ಕಾಲೇಜುಗಳ ಪೈಕಿ 10 ಕರ್ನಾಟಕದಲ್ಲಿವೆ!
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್ ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿ ಪ್ರಕಾರ ದೇಶದ 40 ಟಾಪ್ ಡೆಂಟಲ್ ಕಾಲೇಜುಗಳ ಪೈಕಿ ಹತ್ತು ಕಾಲೇಜುಗಳಿ ರಾಜ್ಯದಲ್ಲಿವೆ. ಅವು ಯಾವುವು? ಇಲ್ಲಿದೆ ಮಾಹಿತಿ
ಬೆಂಗಳೂರು : ವೈದ್ಯಕೀಯ ಶಿಕ್ಷಣದಂತೆ ದಂತ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ರಾಜ್ಯ ಮುಂಚುಣಿಯಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದ್ದು, ದೇಶದ ಟಾಪ್ 40 ದಂತ ವೈದ್ಯಕೀಯ ಕಾಲೇಜುಗಳ ಪೈಕಿ ಹತ್ತು ಕಾಲೇಜುಗಳು ರಾಜ್ಯದಲ್ಲಿಯೇ ಇವೆ.
ದೇಶದ ಟಾಪ್ 10 ದಂತ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ ರಾಜ್ಯದ ಮೂರು ಕಾಲೇಜುಗಳು ಸ್ಥಾನ ಪಡೆದಿವೆ. ಮಣಿಪಾಲದ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್‌ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಐದನೇ ಸ್ಥಾನ ಪಡೆದುಕೊಂಡಿದೆ. ಮಂಗಳೂರಿನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ 8 ನೇ ಸ್ಥಾನ ಪಡೆದುಕೊಂಡಿದೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್ ರಾಜನ್ ಸಿಂಗ್ ಸೋಮವಾರ ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಜೆಎಸ್‌ಎಸ್ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ 11ನೇ ಸ್ಥಾನ, ಬೆಂಗಳೂರಿನ ಎಂ.ಎಸ್. ರಾಮಯ್ಯ ಯೂನಿರ್ವಸಿಟಿ ಆಫ್ ಅಪ್ಲಯ್ಡ್ ಸೈನ್ಸ್ 14 ನೇ ಸ್ಥಾನ ಹಾಗೂ ಧಾರವಾಡದ ಎಸ್‌ಡಿಎಂ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ 22ನೇ ಸ್ಥಾನ ಪಡೆದುಕೊಂಡಿವೆ.
ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಕಾರ ಟಾಪ್ ಕಾಲೇಜುಗಳು;
ಕ್ರಮ ಸಂಖ್ಯೆ | ಡೆಂಟಲ್ ಕಾಲೇಜುಗಳ ಹೆಸರು | ರಾಷ್ಟ್ರೀಯ ರ‍್ಯಾಂಕಿಂಗ್ |
1 | ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಮಣಿಪಾಲ್. | 2 |
2 | ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್‌ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು | 5 |
3 | ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ , ಮಂಗಳೂರು. | 8 |
4 | ಜೆಎಸ್‌ಎಸ್ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು | 11 |
5 | ಎಂ.ಎಸ್. ರಾಮಯ್ಯ ಯೂನಿರ್ವಸಿಟಿ ಆಫ್ ಅಪ್ಲಯ್ಡ್ ಸೈನ್ಸ್, ಬೆಂಗಳೂರು | 14 |
6 | ಎಸ್‌ಡಿಎಂ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಧಾರವಾಡ | 22 |
7 | ಗೌರ್ಮೆಂಟ್ ಡೆಂಟಲ್ ಕಾಲೇಜು, ಬೆಂಗಳೂರು | 24 |
8 | ಯಾನೆಪೋಯ ಡೆಂಟಲ್ ಕಾಲೇಜು, ಮಂಗಳೂರು | 28 |
9 | ಕೆಎಲ್‌ಇ ವಿಶ್ವನಾಥಕಟ್ಟಿ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಬೆಳಗಾವಿ | 35 |
10 | ಬಾಪೂಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ , ದಾವಣಗೆರೆ | 36 |
ಇನ್ನು ದೇಶದ ವೈದ್ಯಕೀಯ ಕಾಲೇಜುಗಳ (medical colleges) ಪಟ್ಟಿಯಲ್ಲಿ ಬೆಂಗಳೂರಿನ ನಿಮಾನ್ಸ್ ಮೊದಲ ಸ್ಥಾನ ಪಡೆದುಕೊಂಡಿದೆ. ಮಣಿಪಾಲದ ಕಸ್ತುರ್ಬಾ ಮೆಡಿಕಲ್ ಕಾಲೇಜು ಟಾಪ್ 10ರ ಪಟ್ಟಿಯಲ್ಲಿದ್ದು, 9ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು 14 ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್ ಮೆಡಿಕಲ್ ಕಾಲೇಜು 20ನೇ ಸ್ಥಾನ, ಮಂಗಳೂರಿನ ಕಸ್ತುರ್ಬಾ ಮೆಡಿಕಲ್ ಕಾಲೇಜು 21 ಸ್ಥಾನ ಪಡೆದಿವೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು 30 ನೇ ಸ್ಥಾನದಲ್ಲಿದೆ. ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ 36ನೇ ಸ್ಥಾನ ಪಡೆದುಕೊಂಡಿದೆ.
ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮಣಿಪಾಲ್‌ನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.
ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 54 ಸ್ಥಾನ ಪಡೆದುಕೊಂಡಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಬೆಸ್ಟ್ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್
ಎನ್‌ಐಆರ್‌ಎಫ್ ವಿವಿಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ
ದೇಶ
NIRF Ranking 2023 : ಮೆಡಿಕಲ್ ಕಾಲೇಜುಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಿಮಾನ್ಸ್‌ಗೆ 4 ನೇ ಸ್ಥಾನ; ಟಾಪ್ ವೈದ್ಯಕೀಯ ಕಾಲೇಜುಗಳಿವು
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್ ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿ ಪ್ರಕಾರ ರಾಜ್ಯದಲ್ಲಿನ ಬೆಸ್ಟ್ ಮೆಡಿಕಲ್ ಕಾಲೇಜುಗಳ ಪಟ್ಟಿ ಇಲ್ಲಿದೆ.
ಬೆಂಗಳೂರು : ನಗರದ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮಾನ್ಸ್) ಮತ್ತೆ ಬೆಂಗಳೂರಿನ ಹೆಗ್ಗಳಿಕೆಯನ್ನು ಹೆಚ್ಚಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯ ವೈದ್ಯಕೀಯ ರ‍್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ರಾಜ್ಯದ ವೈದ್ಯಕೀಯ ಕಾಲೇಜುಗಳ (medical colleges) ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ನಿರೀಕ್ಷೆಯಂತೆಯೇ ದಿಲ್ಲಿಯ ಏಮ್ಸ್ ಈ ರಾಷ್ಟ್ರೀಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ತಮಿಳು ನಾಡಿನ ವೆಲ್ಲೂರಿನಲ್ಲಿ ಕ್ರಿಶ್ಚಿನ್ ಮೆಡಿಕಲ್ ಕಾಲೇಜ್ ಮೂರನೇ ಸ್ಥಾನದಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್ ರಾಜನ್ ಸಿಂಗ್ ಸೋಮವಾರ ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಮಣಿಪಾಲದ ಕಸ್ತುರ್ಬಾ ಮೆಡಿಕಲ್ ಕಾಲೇಜು ಟಾಪ್ 10ರ ಪಟ್ಟಿಯಲ್ಲಿದ್ದು, 9ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು 14 ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್ ಮೆಡಿಕಲ್ ಕಾಲೇಜು 20ನೇ ಸ್ಥಾನ, ಮಂಗಳೂರಿನ ಕಸ್ತುರ್ಬಾ ಮೆಡಿಕಲ್ ಕಾಲೇಜು 21 ಸ್ಥಾನ ಪಡೆದಿವೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು 30 ನೇ ಸ್ಥಾನದಲ್ಲಿದೆ. ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ 36ನೇ ಸ್ಥಾನ ಪಡೆದುಕೊಂಡಿದೆ.
ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಕಾರ ಟಾಪ್ ಕಾಲೇಜುಗಳು;
ಕ್ರಮ ಸಂಖ್ಯೆ | ವೈದ್ಯಕೀಯ ಕಾಲೇಜುಗಳ ಹೆಸರು | ರಾಷ್ಟ್ರೀಯ ರ‍್ಯಾಂಕಿಂಗ್ |
1 | ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮಾನ್ಸ್), ಬೆಂಗಳೂರು | 4 |
2 | ಕಸ್ತುರ್ಬಾ ಮೆಡಿಕಲ್ ಕಾಲೇಜು, ಮಣಿಪಾಲ | 9 |
3 | ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು | 14 |
4 | ಜೆಎಸ್‌ಎಸ್ ಮೆಡಿಕಲ್ ಕಾಲೇಜು, ಮೈಸೂರು | 20 |
5 | ಕಸ್ತುರ್ಬಾ ಮೆಡಿಕಲ್ ಕಾಲೇಜು, ಮಂಗಳೂರು | 21 |
6 | ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು, ಬೆಂಗಳೂರು | 30 |
7 | ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ಮಂಗಳೂರು | 36 |
ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮಣಿಪಾಲ್‌ನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.
ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 54 ಸ್ಥಾನ ಪಡೆದುಕೊಂಡಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಬೆಸ್ಟ್ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್
ಎನ್‌ಐಆರ್‌ಎಫ್ ವಿವಿಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.
ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್ ನೀಡಲಾಗಿದೆ.
ಇದನ್ನೂ ಓದಿ : NIRF Ranking 2023 : ರಾಜ್ಯದ ಬೆಸ್ಟ್ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್ 10 ಕಾಲೇಜುಗಳು!
ದೇಶ
NIRF Ranking 2023 : ರಾಜ್ಯದ ಬೆಸ್ಟ್ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್ 10 ಕಾಲೇಜುಗಳು!
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್ ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿ ಪ್ರಕಾರ ರಾಜ್ಯದಲ್ಲಿನ ಬೆಸ್ಟ್ ಎಂಜಿನಿಯರಿಂಗ್ ಕಾಲೇಜುಗಳು ಯಾವವು? ಇಲ್ಲಿದೆ ಟಾಪ್ 10 ಕಾಲೇಜುಗಳ ಪಟ್ಟಿ.
ಬೆಂಗಳೂರು : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ.
ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮದ್ರಾಸ್ ಐಐಟಿ ಮೊದಲ ಸ್ಥಾನ ಪಡೆದಿದ್ದರೆ, ದಿಲ್ಲಿ ಐಐಟಿ ಎರಡನೇ ಸ್ಥಾನದಲ್ಲಿದೆ. ಬಾಂಬೆ ಐಐಟಿ ಮೂರನೇ ಸ್ಥಾನ ಪಡೆದುಕೊಂಡಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್ ರಾಜನ್ ಸಿಂಗ್ ಸೋಮವಾರ ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಮಣಿಪಾಲ್‌ನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.
ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಕಾರ ಟಾಪ್ 10 ಕಾಲೇಜುಗಳು;
ಕ್ರಮ ಸಂಖ್ಯೆ | ಎಂಜಿನಿಯರಿಂಗ್ ಕಾಲೇಜುಗಳ ಹೆಸರು | ರಾಷ್ಟ್ರೀಯ ರ‍್ಯಾಂಕಿಂಗ್ |
1 | ಎನ್‌ಐಟಿ ಸುರತ್ಕಲ್, ಮಂಗಳೂರು | 13 |
2 | ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ್ | 45 |
3 | ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಬೆಳಗಾವಿ | 55 |
4 | ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು | 59 |
5 | ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ, ಬೆಂಗಳೂರು | 62 |
6 | ಆರ್‌ವಿ ಎಂಜಿನಿಯರಿಂಗ್ ಕಾಲೇಜು, ಬೆಂಗಳೂರು | 70 |
7 | ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು | 73 |
8 | ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ತುಮಕೂರು | 91 |
9 | ಪಿಇಎಸ್ ಯೂನಿರ್ವಸಿಟಿ, ಬೆಂಗಳೂರು | 93 |
10 | ನ್ಯೂ ಹರಿಜಾನ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು | 114 |
ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 54 ಸ್ಥಾನ ಪಡೆದುಕೊಂಡಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಬೆಸ್ಟ್ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್
ಎನ್‌ಐಆರ್‌ಎಫ್ ವಿವಿಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.
ದೇಶದ ಅತ್ಯುತ್ತಮ ಡೆಂಟಲ್ ಕಾಲೇಜುಗಳ ಪಟ್ಟಿಯಲ್ಲಿ ಮಣಿಪಾಲ್‌ನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್‌ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಐದನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್ ನೀಡಲಾಗಿದೆ.
ಇದನ್ನೂ ಓದಿ: NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್
ದೇಶ
NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮದ್ರಾಸ್ ಐಐಟಿ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನವ ದೆಹಲಿ: ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ದೇಶದ ಎರಡನೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಹಿರಿಮೆಗೆ (NIRF Ranking 2023) ಪಾತ್ರವಾಗಿದೆ. ಕಳೆದ ಕೆಲವು ವರ್ಷಗಳಿಂದ ಮೊದಲ ಸ್ಥಾನದಲ್ಲಿದ್ದ ಈ ಶಿಕ್ಷಣ ಸಂಸ್ಥೆ ಈ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದ್ದು, ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್ ಮೊದಲ ಸ್ಥಾನ ಪಡೆದುಕೊಂಡಿದೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್ ರಾಜನ್ ಸಿಂಗ್ ಸೋಮವಾರ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ದೆಹಲಿ ಐಐಟಿ ಪಡೆದುಕೊಂಡಿದೆ.
IIT Madras ranked best institution followed by IISC Bengaluru and IIT Delhi as per the NIRF Ranking released by the Union Ministry of Education pic.twitter.com/yAKN3uVnuU
— ANI (@ANI) June 5, 2023
ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 54 ಸ್ಥಾನ ಪಡೆದುಕೊಂಡಿದೆ.
ಕಾನೂನು ಸಂಶೋಧನೆಯಲ್ಲಿ ಬೆಂಗಳೂರು ಫಸ್ಟ್
ಎನ್‌ಐಆರ್‌ಎಫ್ ಕಾನೂನು ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮೊದಲ ಸ್ಥಾನ ಪಡೆದುಕೊಂಡಿದೆ. ಸಂಶೋಧನಾ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಮೊದಲ ಸ್ಥಾನವನ್ನು ಕಾಪಾಡಿಕೊಂಡಿದೆ.
ಬೆಸ್ಟ್ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್
ಎನ್‌ಐಆರ್‌ಎಫ್ ವಿವಿಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರೀಸರ್ಚ್ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.
ಮ್ಯಾನೇಜ್‌ಮೆಂಟ್ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರು ಐಐಎಂಗೆ ಸೆಕೆಂಡ್
ಎನ್‌ಐಆರ್‌ಎಫ್ ಮ್ಯಾನೇಜ್‌ಮೆಂಟ್ (ಬಿಸ್ಕೂಲ್) ರ‍್ಯಾಂಕಿಂಗ್‌ನಲ್ಲಿ ಬೆಂಗಳೂರು ಐಐಎಂ ಎರಡನೇ ಸ್ಥಾನ ಪಡೆದುಕೊಂಡಿದೆ. ಅಲಹಾಬಾದ್ ಐಐಎಂ ಮೊದಲ ಸ್ಥಾನ ಪಡೆದುಕೊಂಡಿದೆ.
ದೇಶದ ಅತ್ಯುತ್ತಮ ಡೆಂಟಲ್ ಕಾಲೇಜುಗಳ ಪಟ್ಟಿಯಲ್ಲಿ ಮಣಿಪಾಲದ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್‌ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಐದನೇ ಸ್ಥಾನ ಪಡೆದುಕೊಂಡಿದೆ. ಮಂಗಳೂರಿನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ 8 ನೇ ಸ್ಥಾನದಲ್ಲಿವೆ. ಒಟ್ಟು ಮೂರು ಕಾಲೇಜುಗಳು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್ ನೀಡಲಾಗಿದೆ.
ಇದನ್ನೂ ಓದಿ : ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಮಿಡಿದ ಸೆಹ್ವಾಗ್, ಸಂತ್ರಸ್ತರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಭರವಸೆ
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಕರ್ನಾಟಕ7 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
-
ಕರ್ನಾಟಕ9 hours ago
Free Bus: ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿತು ಅನುಮೋದನೆ; ಏಳು ಕಂಡೀಷನ್ನೊಂದಿಗೆ ಚಾಲನೆ!