ಬೆಂಗಳೂರು: ಡಿಪ್ಲೊಮಾ ಮಾಡಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪದವಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಪ್ರವೇಶ ಪರೀಕ್ಷೆ “ಡಿಸಿಇಟಿ ಪರೀಕ್ಷೆʼʼಗೆ (Karnataka DCET 2022) ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, 07-10-2022 (11.59 pm) ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕವನ್ನು ಪಾವತಿಸಲು ಅಂದು ಸಂಜೆ 5.30 ರವರೆಗೆ ಕಾಲಾವಕಾಶ ನೀಡಲಾಗಿದೆ.
ಡಿಪ್ಲೊಮಾ ಮಾಡರಿವವರಿಗೆ ಲ್ಯಾಟರಲ್ ಪ್ರವೇಶ ಯೋಜನೆಯಡಿಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಹಾಗೂ ಆರ್ಕಿಟೆಕ್ಚರ್ ಕೋರ್ಸಿಗೆ ಮೊದಲನೇ ವರ್ಷದ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಲಿಂಕ್| https://cetonline.karnataka.gov.in/Diplomacet2022/Forms/Loginpage.aspx
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಡಿಪ್ಲೊಮಾ ಮಾಡಿದವರಿಗೆ ಈ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ. ಪರೀಕ್ಷೆಯ ದಿನಾಂಕವನ್ನು ಮುಂದೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ, ಪರೀಕ್ಷೆ ಹೇಗಿರುತ್ತದೆ ಎಂಬ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.
ಪರೀಕ್ಷೆಯಲ್ಲಿ ಬದಲಾವಣೆಈ ವರ್ಷ ಈ ಪರೀಕ್ಷೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಪರೀಕ್ಷೆ ಅಂಕಗಳನ್ನು 180ರಿಂದ 100ಕ್ಕೆ ಇಳಿಸಲಾಗಿದೆ. ಡಿಪ್ಲೊಮೊ ವ್ಯಾಸಂಗಕ್ಕೆ ಅಪ್ಲೈಡ್ ವಿಜ್ಞಾನ ಮತ್ತು ಗಣಿತವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ಕೋರ್ಸ್‌ಗಳಿಗೆ ಅನ್ವಯವಾಗು ವಂತೆ ಪರೀಕ್ಷೆ ನಡೆಸಲಾಗುತ್ತದೆ.
ಯಾವುದೇ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಅಭ್ಯರ್ಥಿಗಳು ಬೇರೆ ಯಾವುದೇ ಎಂಜಿನಿಯರಿಂಗ್ ಪದವಿ ಪ್ರವೇಶಕ್ಕೆ ಅರ್ಹರು ಎಂದು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) 2020ರಲ್ಲಿ ನಿಯಮಗಳನ್ನು ಬದಲಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೂತನ ನಿಯಮಗಳನ್ನು ಜಾರಿಗೆ ತರಲಾಗಿದೆ.
ಏನೇನು ಬದಲಾವಣೆ?
1. ಡಿಪ್ಲೊಮೊ ವ್ಯಾಸಂಗದಲ್ಲಿ ಅಭ್ಯಾಸ ಮಾಡಿರುವ Applied Science and Applied Mathematics ವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ಟ್ರೇಡ್‌ಗಳಿಗೆ ಅನ್ವಯಿಸುವಂತೆ ಒಂದು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ ಪರೀಕ್ಷೆಯನ್ನು 100ಅಂಕಗಳಿಗೆ 3 ಗಂಟೆಯ ಅವಧಿಯಲ್ಲಿ ನಡೆಸುವುದು. 2. ಅಂತಿಮ ವರ್ಷದ (05 ಮತ್ತು06 ನೇ ಸೆಮಿಸ್ಟರ್) ಪರೀಕ್ಷೆಯ ತೇರ್ಗಡೆಯಾದ ಫಲಿತಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳುವುದು. ೩. ಡಿಸಿಇಟಿ-2022ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100 ಅಂಕಗಳಿಗೆ ಗಳಿಸಿದ ಅಂಕಗಳ ಶೇ.50 ಅನ್ನು ಪರಿಗಣಿಸುವುದು ಹಾಗೂ ಅದೇ ರೀತಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾದಲ್ಲಿ ತೇರ್ಗಡೆಯಾದ ಪಡೆದ ಒಟ್ಟಾರೆ ಅಂಕಗಳ ಶೇ. 50 ಅನ್ನು ಪರಿಗಣನೆಗೆ ತೆಗೆದುಕೊಂಡು, ಇವೆರಡನ್ನೂ ಸೇರಿಸಿ ವಿಧ್ಯಾರ್ಥಿಗಳ ರ‍್ಯಾಂಕ್ ಅನ್ನು ನಿಗದಿಪಡಿಸುವುದು.
ಈಗ ಕೆಇಎಯು ಡಿಪ್ಲೊಮಾದಲ್ಲಿ ಬೇರೆ ಬೇರೆ ಕೋರ್ಸ್‌ಗಳನ್ನು ಕಲಿಯುವವರಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ, ಈ ಪರೀಕ್ಷೆ ನಡೆಸಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇದನ್ನು ಗಮನಿಸಬೇಕೆಂದು ಕೆಇಎಯು ಪ್ರಕಟಣೆಯಲ್ಲಿ ಕೋರಿದೆ.
ಇದನ್ನೂ ಓದಿ| KCET 2022 | ಸಿಇಟಿ ರ‍್ಯಾಂಕಿಂಗ್ ಬಿಕ್ಕಟ್ಟು ಶಮನ, ಸೆ.29ಕ್ಕೆ ಪರಿಷ್ಕೃತ ರ‍್ಯಾಂಕಿಂಗ್, ಅ.3ರಿಂದ ಕೌನ್ಸೆಲಿಂಗ್