Stipend Hike: ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಹೆಚ್ಚಳ, ಆಗಸ್ಟ್‌ 1ರಿಂದಲೇ ಅನ್ವಯ - Vistara News

ಶಿಕ್ಷಣ

Stipend Hike: ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಹೆಚ್ಚಳ, ಆಗಸ್ಟ್‌ 1ರಿಂದಲೇ ಅನ್ವಯ

ಶೇ.100ರಷ್ಟು ಸ್ಟೈಪೆಂಡ್ ಹೆಚ್ಚಳಕ್ಕೆ (Stipend Hike) ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದರು. ವೈದ್ಯಕೀಯ ಶಿಕ್ಷಣ ಸಚಿವರ ಭರವಸೆ ಬೆನ್ನಲ್ಲೇ ವಿದ್ಯಾರ್ಥಿಗಳು ಮುಷ್ಕರ ವಾಪಸ್ ಪಡೆದಿದ್ದಾರೆ.

VISTARANEWS.COM


on

medical students stipend
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ (PG Medical Students) ಸ್ಟೈಪೆಂಡ್​ (Stipend) ಅನ್ನು ಕರ್ನಾಟಕ ರಾಜ್ಯ ಸರಕಾರ (Karnataka Government) ಶೇ.25ರಷ್ಟು ಹೆಚ್ಚಳ ಮಾಡಿದೆ. ಆ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳ ಮುಷ್ಕರಕ್ಕೆ (Medical Students Strike) ಸರ್ಕಾರ ಮಣಿದಿದೆ. ಶೇ.100ರಷ್ಟು ಸ್ಟೈಪೆಂಡ್ ಹೆಚ್ಚಳಕ್ಕೆ (Stipend Hike) ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ (Minister for Medical Education Sharanaparakash Patil) ಸುದ್ದಿಗೋಷ್ಠಿ ನಡೆಸಿ, ಶೇ.25ರಷ್ಟು ಸ್ಟೈಪೆಂಡ್​​ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಸಚಿವರ ಭರವಸೆ ಬೆನ್ನಲ್ಲೇ ವಿದ್ಯಾರ್ಥಿಗಳು ಮುಷ್ಕರ ವಾಪಸ್ ಪಡೆದಿದ್ದಾರೆ.

ಪರಿಷ್ಕೃತ ವೇತನ ಹೀಗಿರಲಿದೆ:

ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು:
1ನೇ ವರ್ಷ – ರೂ. 45,000 ದಿಂದ 56,250
2ನೇ ವರ್ಷ- ರೂ. 50,000 ದಿಂದ 62,500
3ನೇ ವರ್ಷ- ರೂ. 55,000 ದಿಂದ 68,750

ಸೂಪರ್ ಸ್ಪೆಷಾಲಿಟಿ ವೈದ್ಯ ವಿದ್ಯಾರ್ಥಿಗಳು:
1ನೇ ವರ್ಷ – ರೂ. 55,000 ದಿಂದ 68,750
2ನೇ ವರ್ಷ- ರೂ. 60,000 ದಿಂದ 75,000
3ನೇ ವರ್ಷ- ರೂ. 65,000 ದಿಂದ 81,250
ಸೀನಿಯರ್ ರೆಸಿಡೆಂಟ್ಸ್: ರೂ. 60,000 ದಿಂದ 75,000

ಮಂಜೂರಾದ ಸೀಟುಗಳು:
ಸ್ನಾತಕೋತ್ತರ- 3,540
ಸೂಪರ್ ಸ್ಪೆಷಾಲಿಟಿ- 445
ಸೀನಿಯರ್ ರೆಸಿಡೆಂಟ್- 527
ಒಟ್ಟು ಸೀಟುಗಳು- 4,312

ಮಹಿಳಾ ವೈದ್ಯರ ಸುರಕ್ಷತೆಗಾಗಿ ಮಾರ್ಗಸೂಚಿ

ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.

ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ಸಚಿವರು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ವಿಶೇಷವಾಗಿ ಮಹಿಳಾ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸುವಂತೆ ಒತ್ತಿಹೇಳಿದರು.

ಈ ಹಿನ್ನೆಲೆಯಲ್ಲಿ ಮಹಿಳಾ ವೈದ್ಯರ ಸುರಕ್ಷತೆಗಾಗಿ ವೈದ್ಯಕೀಯ ಸಮುದಾಯದ ಸಲಹೆ ಸೂಚನೆಗಳಂತೆ ರಾಜ್ಯ ಸರ್ಕಾರವು ಶೀಘ್ರವೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಈ ಮಾರ್ಗಸೂಚಿಗಳು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಅನ್ವಯವಾಗುತ್ತವೆ ಎಂದು ಸಚಿವರು ತಿಳಿಸಿದರು. “ವೃತ್ತಿಪರ ಮಹಿಳೆಯರ ಮೇಲಾಗುವ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ. ಮತ್ತು ಮಹಿಳಾ ವೈದ್ಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

State Best Teacher Award: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ಬಿಡುಗಡೆ

State Best Teacher Award: ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದೆ.

VISTARANEWS.COM


on

State Best Teacher Award
Koo

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ (State Best Teacher Award) ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ₹25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ. ಶಿಕ್ಷಕರ ಪಟ್ಟಿ ಈ ಕೆಳಗಿನಂತಿದೆ.

ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್‌. ಸಿರಸಿಗಿ, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್‌. ಮಧುಸೂದನ್‌, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್‌, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ ಕೆ. ಯಮುನಾ, ಹಾವೇರಿ ಜಿಲ್ಲೆಯ ಜಮೀರ್‌ ಅಬ್ದುಲ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಚಂದಾಪುರದ ಜಿ. ರಂಗನಾಥ, ಚಿಕ್ಕಬಳ್ಳಾಪುರ ಜಿಲ್ಲೆಯ ಇನಮಿಂಚೇನಹಳ್ಳಿಯ ಸುಶೀಲಮ್ಮ, ಮಧುಗಿರಿಯ ಬಸವನಹಳ್ಳಿಯ ಎಸ್‌.ವಿ. ರಮೇಶ್‌, ಧಾರವಾಡ ಜಿಲ್ಲೆ ಹಳೇಹುಬ್ಬಳ್ಳಿಯ ಹನುಮಂತಪ್ಪ ಎಂ. ಕುಂದರಗಿ, ಚಿತ್ರದುರ್ಗ ಜಿಲ್ಲೆ ಹೊಸಹಟ್ಟಿಯ ಆರ್‌.ಟಿ. ಪರಮೇಶ್ವರಪ್ಪ, ಶಿರಸಿ ಜೋಗೇಶ್ವರ ಹಳ್ಳದ ರಾಮಚಂದ್ರ ಶೇಷಾಜಪ್ಪ ಕಲಾಲ, ಶಿವಮೊಗ್ಗ ಗುತ್ಯಪ್ಪ ಕಾಲೊನಿಯ ಎಂ. ಭಾಗೀರಥಿ, ವಿಜಯನಗರ ಜಿಲ್ಲೆ ಹಿರೇಕೊಳಚಿಯ ಎಲ್‌. ಮಧುನಾಯ್ಕ, ರಾಮನಗರ ಜಿಲ್ಲೆ ಅರಳಾಳುಸಂದ್ರದ ಪಿ. ಸುರೇಶ, ಯಾದಗಿರಿ ಜಿಲ್ಲೆ ಬಸ್ಸಾಪುರದ ನೀಲಪ್ಪ ಎಸ್. ತೆಗ್ಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನೆಮಡಿಯ ರಾಘವೇಂದ್ರ ಎಸ್. ಮಡಿವಾಳ, ದೊಡ್ಡಬಳ್ಳಾಪುರದ ಬೀಡಿಕೆರೆಯ ಎಚ್‌.ಎಂ. ಮಂಗಳಕುಮಾರಿ, ಗದಗ ಜಿಲ್ಲೆ ಬಸಾಪುರದ ರತ್ನಾಬಾಯಿ.

ಪ್ರೌಢಶಾಲಾ ಶಿಕ್ಷಕರು

ಚಿಕ್ಕಮಗಳೂರು ಜಿಲ್ಲೆ ಲೋಕನಾಥಪುರದ ಆರ್‌.ಡಿ.ರವೀಂದ್ರ, ಬೆಂಗಳೂರು ಗ್ರಾಮಾಂತರದ ಟಿ. ಬೇಗೂರಿನ ಟಿ.ಕೆ. ರವಿಕುಮಾರ್, ಉತ್ತರ ಕನ್ನಡ ಹಿರೇಗುತ್ತಿಯ ಮಹಾದೇವ ಬೊಮ್ಮಗೌಡ, ಶಿವಮೊಗ್ಗ ಜಿಲ್ಲೆ ಹೊಸೂರು–ಗುಡ್ಡೆಕೇರಿಯ ಟಿ. ವೀರೇಶ, ಧಾರವಾಡ ಜಿಲ್ಲೆ ಇಂಗಳಹಳ್ಳಿಯ ಕಳಕ ಮಲ್ಲೇಶ ಪಟ್ಟಣಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರಹಳ್ಳಿಯ ಎಸ್‌. ಶ್ಯಾಮಲಾ, ಉಡುಪಿ ಜಿಲ್ಲೆ ರಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಜಿಲ್ಲೆ ಕೋನಪ್ಪನ ಅಗ್ರಹಾರದ ಸಿ. ಪದ್ಮಾವತಿ, ವಿಜಯಪುರ ಜಿಲ್ಲೆ ನಾದ ಕೆ.ಡಿ.ಯ ಶಶಿಕಲಾ ಲಕ್ಷ್ಮಣ ಬಡಿಗೇರ, ಚಿಕ್ಕಬಳ್ಳಾಪುರ ಜಿಲ್ಲೆ ಹಂಪಸಂದ್ರದ ಹರೀಶ್‌ ರಾಜ ಅರಸ್‌, ದಕ್ಷಿಣ ಕನ್ನಡದ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ ಕೆ. ವಿಶ್ವನಾಥ ಗೌಡ.

Continue Reading

ಪ್ರಮುಖ ಸುದ್ದಿ

KPSC Exam 2024 : ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು; ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಅಮಾನತು

KPSC Exam 2024 : ಕೆಪಿಎಸ್ ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು ಎಂದಿದ್ದು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

VISTARANEWS.COM


on

By

Govt approves KPSC re-examination Officials suspended for dereliction of duty
Koo

ಬೆಂಗಳೂರು: ಕೆಪಿಎಸ್‌ಸಿ ಪ್ರಿಮಿಲ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಎಡವಟ್ಟು ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ತಮ್ನ X ಖಾತೆ ಮೂಲಕ ಮರು ಪರೀಕ್ಷೆ ನಡೆಸುವ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಕ್ಕೆ ಅನುವಾದ ಮಾಡುವ ವೇಳೆ ಆಗಿದ್ದ ಲೋಪದೋಷಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ.

ಕಳೆದ ಆಗಸ್ಟ್ 27ರಂದು ಕೆಪಿಎಸ್‌ಸಿ ಪೂರ್ವ ಭಾವಿ ಪರೀಕ್ಷೆ ನಡೆದಿತ್ತು. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳಿಗೆ ಪ್ರಿಲಿಮ್ಸ್ ಎಕ್ಸಾಂ ನಡೆಸಿತ್ತು. ಸುಮಾರು 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ದಾರೆ. ಆದರೆ ಈ ಪರೀಕ್ಷೆಯಲ್ಲಿ ಕನ್ನಡದ ಕಗ್ಗೋಲೆ ಮಾಡಲಾಗಿದೆ, ಕನ್ನಡದ ಪ್ರಶ್ನೆಗಳನ್ನು ತಪ್ಪಾಗಿ ಕೇಳಲಾಗಿದೆ. ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ತೊಂದರೆಯಾಗಿತ್ತು. 60ಕ್ಕೂ ಹೆಚ್ಚು ತಪ್ಪುಗಳನ್ನು ಈ ಪರೀಕ್ಷೆಯಲ್ಲಿ ಮಾಡಲಾಗಿತ್ತು.

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ.

ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು ಹಿನ್ನೆಲೆಯಲ್ಲಿ ಫ್ರೀಡ್ಂ ಪಾರ್ಕ್‌ನಲ್ಲಿ ಅಭ್ಯರ್ಥಿಗಳ ಸಂಭ್ರಮಾಚರಣೆ ಜೋರಾಗಿತ್ತು. ಈ ಕುರಿತು ಕರವೇ ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಗೊಂದಲಕ್ಕೆ ಕಾರಣವಾಗಿತ್ತು. ಕನ್ನಡದ ಮಕ್ಕಳಿಗೆ ಅನ್ಯಾಯವಾಗಿತ್ತು. 160 ಪ್ರಶ್ನೆಗಳು ಗೊಂದಲ ಇದೆ ಎಂದು ಅಭ್ಯರ್ಥಿಗಳು ಹೇಳಿದ್ದರು. ಅಭ್ಯರ್ಥಿಗಳ ಜತೆ ನಾವಿದ್ದೇವೆ ಎಂದು ಹೋರಾಟಕ್ಕೆ ಕರೆ ಕೊಟ್ಟಿದ್ದೆವು. ಮರು ಪರೀಕ್ಷೆಗೆ ನಾವು ಆಗ್ರಹಿಸಿದ್ದೆವು. ಲಕ್ಷಾಂತರ ಮಕ್ಕಳ ಒತ್ತಾಯದಂತೆ ಮರು ಪರೀಕ್ಷೆ ಮಾಡಲು ಆಗ್ರಹಿಸಿದ್ದೆವು. ನಾವು ಸರ್ಕಾರದ ಮುಂದೆ ಬೇಡಿಕೆಯನ್ನು ಇಟ್ಟಿದ್ದವು. ಇವತ್ತು ಸರ್ಕಾರ, ಸಿಎಂ ಮರು ಪರೀಕ್ಷೆಗೆ ಆದೇಶ ಮಾಡಿದ್ದಾರೆ. ಮರು ಪರೀಕ್ಷೆಗೆ ಅವಕಾಶ ಕೊಟ್ಟಿರುವ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾವ ಅಧಿಕಾರಿಗಳು ಈ ಲೋಪಕ್ಕೆ ಕಾರಣವಾಗಿದ್ರಲ್ಲ ಅವರಿಗೆ ಶಿಕ್ಷೆಯಾಗಬೇಕು. ಇದು ಕನ್ನಡಿಗರ ಸಿಕ್ಕ ಜಯವೆಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Physical Abuse : ಅರ್ಥವಾಗದ ಪಾಠವನ್ನು ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಕರೆಸಿ ಅತ್ಯಾಚಾರವೆಸಗಿದ ಉಪನ್ಯಾಸಕ

Physical Abuse : ಅರ್ಥವಾಗದ ವಿಷಯವನ್ನು ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ
ಸ್ನೇಹ ಬೆಳೆಸಿದ್ದ. ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

VISTARANEWS.COM


on

By

Physical Abuse
Koo

ಶಿವಮೊಗ್ಗ : ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಉಪನ್ಯಾಸಕನೊಬ್ಬ ಮದುವೆ ಆಗುವುದಾಗಿ (Physical Abuse) ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನಾಗಿರುವ ಪುನೀತ್ ಬಂಧಿತ ಆರೋಪಿಯಾಗಿದ್ದಾನೆ.

ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ
ಸ್ನೇಹ ಬೆಳೆಸಿದ್ದ. ಸ್ನೇಹ ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಅತ್ಯಾಚಾರ ಕುರಿತು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಉಪನ್ಯಾಸಕ ಪುನೀತ್ ವಶಕ್ಕೆ ಪಡೆದ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ಲೈಂಗಿಕ ದೌರ್ಜನ್ಯ; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್‌ಐಆರ್‌

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು ಬಂದಿದೆ. ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಅರುಣ್‌ ಕುಮಾರ್‌ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆಯಲ್ಲಿ ಬಿಜೆಪಿಗೆ ಠಕ್ಕರ್‌ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಚಿಕ್ಕ ತಿರುಪತಿಯ ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ಗ್ರಾಮದ ಶ್ರೀ ರಾಮು (42) ಗುರುತಿಸಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹಗಳೇ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024: ಸಿಇಟಿ, ನೀಟ್ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಚಾಯ್ಸ್ ಆಯ್ಕೆ ಆ.31 ರಿಂದ ಆರಂಭ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ನೀಟ್-24 ಮತ್ತು ಯುಜಿ ಸಿಇಟಿ-24 (UGCET 2024) ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದೆ. ಉದ್ದೇಶಿತ ಪ್ರಕಟಣೆಗೂ ಎರಡು ದಿನ‌ ಮೊದಲೇ ಫಲಿತಾಂಶ ಪ್ರಕಟಿಸಿದೆ. ಇದರೊಂದಿಗೆ, ಅಭ್ಯರ್ಥಿಗಳಿಗೆ ‘ಚಾಯ್ಸ್’ ಆಯ್ಕೆ ಪ್ರಕ್ರಿಯೆ ಆಗಸ್ಟ್ 31 ರಿಂದ (ಶನಿವಾರ) ಆರಂಭವಾಗಲಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

UGCET 2024
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ನೀಟ್-24 ಮತ್ತು ಯುಜಿ ಸಿಇಟಿ-24 (UGCET 2024) ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದೆ. ಉದ್ದೇಶಿತ ಪ್ರಕಟಣೆಗೂ ಎರಡು ದಿನ‌ ಮೊದಲೇ ಫಲಿತಾಂಶ ಪ್ರಕಟಿಸಿದೆ. ಇದರೊಂದಿಗೆ, ಅಭ್ಯರ್ಥಿಗಳಿಗೆ ‘ಚಾಯ್ಸ್’ ಆಯ್ಕೆ ಪ್ರಕ್ರಿಯೆ ಆಗಸ್ಟ್ 31 ರಿಂದ (ಶನಿವಾರ) ಆರಂಭವಾಗಲಿದೆ.

ವೈದ್ಯಕೀಯ, ದಂತವೈದ್ಯಕೀಯ, ಆಯುಷ್, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ, ಬಿಎಸ್ಸಿ (ನರ್ಸಿಂಗ್), ಯೋಗ ಮತ್ತು ನ್ಯಾಚುರೋಪತಿ ಮುಂತಾದ ಕೋರ್ಸ್‌ಗಳ ಅಭ್ಯರ್ಥಿಗಳಿಗೆ ಇದು ಅನ್ವಯವಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Invest Karnataka: ಕೆನಡಾದ ವಿಟೆರಾದಿಂದ ವಿಜಯಪುರದಲ್ಲಿ 250 ಕೋಟಿ ರೂ. ಹೂಡಿಕೆ: ಸಚಿವ ಎಂ.ಬಿ. ಪಾಟೀಲ್‌

ಪೋಷಕರ ಜೊತೆ ಚರ್ಚಿಸಿ ಸೂಕ್ತವಾದ ‘ಚಾಯ್ಸ್’ ಆಯ್ಕೆ ಮಾಡಿಕೊಳ್ಳಲು ಆಗಸ್ಟ್ 31ರ ಬೆಳಿಗ್ಗೆ 11 ರಿಂದ ಸೆಪ್ಟೆಂಬರ್ 3ರವರೆಗೆ (ರಾತ್ರಿ 11.59) ಅವಕಾಶವಿರುತ್ತದೆ.

ಅಭ್ಯರ್ಥಿಗಳು ನಾಲ್ಕು ಚಾಯ್ಸ್‌ಗಳಲ್ಲಿ ತಮಗೆ ಸರಿ ಎನಿಸುವ ಯಾವುದಾದರೂ ಒಂದು ಚಾಯ್ಸ್ ಆಯ್ಕೆ ಮಾಡುವ ಮೊದಲು, ಅದಕ್ಕೆ ಸಂಬಂಧಿಸಿದ ವಿವರಣೆ ಓದಿ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಚಾಯ್ಸ್ 1 ಮತ್ತು ಚಾಯ್ಸ್ 2 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಆಗಸ್ಟ್ 31ರ ಮಧ್ಯಾಹ್ನ 1 ರಿಂದ ಸೆಪ್ಟೆಂಬರ್ 4ರ ಸಂಜೆ 4ರ ಒಳಗೆ ಶುಲ್ಕ ಪಾವತಿಸಬೇಕು.

ಚಾಯ್ಸ್ 1 ಆಯ್ಕೆ ಮಾಡಿಕೊಂಡು ಶುಲ್ಕ ಪಾವತಿಸಿದ ನೀಟ್ ಅಭ್ಯರ್ಥಿಗಳು ಮೂಲ ದಾಖಲೆಗಳು ಮತ್ತು ಎರಡು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಕೆಇಎ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಸಲ್ಲಿಸಲು ಸೆಪ್ಟೆಂಬರ್ 2ರ ಬೆಳಿಗ್ಗೆ 10:30 ರಿಂದ ಸೆಪ್ಟೆಂಬರ್ 4 ರ ಸಂಜೆ 4 ರವರೆಗೆ ಅವಕಾಶವಿರುತ್ತದೆ. (ಯಾವ ವರ್ಗದ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂಬುದನ್ನು ಸೂಚನೆ ಓದಿ ತಿಳಿದುಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ)

ಚಾಯ್ಸ್ 1 ಆಯ್ಕೆ ಮಾಡಿ ಶುಲ್ಕ ಪಾವತಿಸಿ ಮೂಲ ದಾಖಲೆಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸೆಪ್ಟೆಂಬರ್ 2ರಿಂದ ಸೆಪ್ಟಂಬರ್ 5ರೊಳಗೆ ಡೌನ್ಲೋಡ್ ಮಾಡಿಕೊಳ್ಳಬೇಕು. ಸೀಟು ಹಂಚಿಕೆಯಾದ ಕಾಲೇಜುಗಳಲ್ಲಿ ಸೆಪ್ಟೆಂಬರ್ 5ರ ಸಂಜೆ 5.30ಕ್ಕೆ ಮುಂಚೆ ಪ್ರವೇಶ ಪಡೆಯಬೇಕು.

ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಮುಗಿಸುವ ಸಲುವಾಗಿ ಎಲ್ಲಾ ಶನಿವಾರ, ಭಾನುವಾರ ಹಾಗೂ ಗೆಜೆಟ್ ಪ್ರಕಟಿತ ರಜಾದಿನಗಳನ್ನು ಕೆಲಸದ ದಿನಗಳೆಂದು ಪರಿಗಣಿಸಲಾಗುವುದು ಎಂದು ಎಚ್. ಪ್ರಸನ್ನ ಹೇಳಿದ್ದಾರೆ.

ಇದನ್ನೂ ಓದಿ: Karnataka Weather : ಸಂಜೆ ಸುರಿದ ಭಾರಿ ಮಳೆಗೆ ನೆಲಕ್ಕುರುಳಿದ ಬೃಹತ್‌ ಮರ; ಕಾರು, ಶೆಡ್‌ ಜಖಂ

ಎಂಜಿನಿಯರಿಂಗ್ ಪ್ರವೇಶ ಪಡೆಯುವ ಅಭ್ಯರ್ಥಿಗಳು ಮೂಲ ದಾಖಲೆಗಳ ಸಮೇತ ಸಂಬಂಧಪಟ್ಟ ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.

Continue Reading
Advertisement
TA Sharavana
ಕರ್ನಾಟಕ3 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾದ ಬಳಿಕ ಕಚೇರಿ ಉದ್ಘಾಟನೆ ಮಾಡಿದ ಟಿ.ಎ ಶರವಣ

actor darshan
ಸಿನಿಮಾ5 hours ago

Actor Darshan : ನಟ ದರ್ಶನ್‌-ಪವಿತ್ರಾ ಐಫೋನ್‌ಗಳಲ್ಲಿ ಇದ್ಯಾ ಕೊಲೆ ರಹಸ್ಯ! ಹೈದರಾಬಾದ್‌ನಿಂದ ರಿಟರ್ನ್‌ ಆದ ಫೋನ್‌ಗಳು

Actor Darshans gang moves Google to destroy evidence after Renukaswamys murder
ಸಿನಿಮಾ5 hours ago

Actor darshan : ಪಟ್ಟಣಗೆರೆ ಶೆಡ್‌ನಲ್ಲಿ ಡೆವಿಲ್‌‌‌ ಗ್ಯಾಂಗ್‌‌‌ನ ಕ್ರೌರ್ಯ ಹೇಗಿತ್ತು? ; ಸಾಕ್ಷಿ ನಾಶಕ್ಕೆ ಗೂಗಲ್‌ ಮೊರೆ!

Actor Darshan gang
ಬೆಂಗಳೂರು7 hours ago

Actor Darshan : ರೇಣುಕಾಸ್ವಾಮಿಗೆ ಹೊಡೆದು ಬಡಿದಿದ್ದ ಫೋಟೊಗಳು ಆರೋಪಿ ಪವನ್‌ ಫೋನ್‌ನಲ್ಲಿ ಪತ್ತೆ!

ROad Accident
ಗದಗ9 hours ago

Road Accident : ನೀರಿನಲ್ಲಿ ಕೊಚ್ಚಿ ಹೋದ ಬೈಕ್‌ ಸವಾರ ಶವವಾಗಿ ಪತ್ತೆ; ಸ್ಕಿಡ್ ಆಗಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದ ಗೂಡ್ಸ್ ಗಾಡಿ

darling krishna
ಸಿನಿಮಾ10 hours ago

Darling Krishna: ಕೃಷ್ಣನ ಮನೆಗೆ ಮಹಾಲಕ್ಷ್ಮಿ”KrissMi” ಪದಾರ್ಪಣೆ

Road Accident
ರಾಯಚೂರು10 hours ago

Road Accident : ಸ್ಕೂಲ್‌ ಬಸ್‌-ಸಾರಿಗೆ ಬಸ್‌ ಡಿಕ್ಕಿ; ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಮಕ್ಕಳಿಬ್ಬರು ಬಲಿ, ತುಂಡಾಯ್ತು ಮಕ್ಕಳ ಕಾಲುಗಳು

Road Accident
ಚಿಕ್ಕಬಳ್ಳಾಪುರ11 hours ago

Road Accident : ಕಂಟ್ರೋಲ್ ತಪ್ಪಿ‌ ಹೋಟೆಲ್‌ಗೆ ನುಗ್ಗಿದ ಟಿಪ್ಪರ್ ಲಾರಿ; ಕ್ಯಾಶಿಯರ್‌, ಅಡುಗೆ ಭಟ್ಟ ದಾರುಣ ಸಾವು

One and a half year old boy dies of suffocation after swallowing bottle cap in Shivamogga
ಶಿವಮೊಗ್ಗ11 hours ago

Child Death: ಶಿವಮೊಗ್ಗದಲ್ಲಿ ಜ್ಯೂಸ್‌ ಬಾಟೆಲ್‌ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಉಸಿರುಗಟ್ಟಿ ಸಾವು

Karnataka Weather Forecast
ಮಳೆ11 hours ago

Karnataka Weather : ಗೌರಿ-ಗಣೇಶ ಹಬ್ಬಕ್ಕೆ ಮಳೆ ಅಡ್ಡಿ!ನಿರಂತರ ಗಾಳಿ ಜತೆಗೆ ಭಾರಿ‌ ವರ್ಷಧಾರೆ ಎಚ್ಚರಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್5 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌