Site icon Vistara News

K-SET: 2023ರ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷಾ ದಿನಾಂಕ ಪ್ರಕಟ, ಇಲ್ಲಿದೆ ಡಿಟೇಲ್

Karnataka State Eligibility Test 2023

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ‌ ನಡೆಸುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ. ಇದೀಗ ಸರ್ಕಾರದ ನಿರ್ದೇಶನದಂತೆ ಶಾರ್ಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. K SET ಪರೀಕ್ಷೆಯನ್ನು 2023ರ ನವೆಂಬರ್ 5ರಂದು ನಿಗದಿಪಡಿಸಲಾಗಿದೆ.

ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಈ ಪರೀಕ್ಷೆ ನಡೆಸುತ್ತಿದೆ.

ಕೆ-ಸೆಟ್‌ 2023 ತಾತ್ಕಾಲಿಕ ವೇಳಾಪಟ್ಟಿ

ಅಧಿಸೂಚನೆ ಹೊರಡಿಸುವ ದಿನಾಂಕ05-09-2023
ಮಾಹಿತಿ ಪುಸ್ತಕ ಪ್ರಕಟಿಸಲಾಗುವ ದಿನಾಂಕ05-09-2023
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ10-09-2023 ರಿಂದ 30-09-2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ03-10-2023
ಪರೀಕ್ಷೆ ದಿನಾಂಕ05-11-2023

KSET ಪರೀಕ್ಷೆ ಮಾದರಿ

ಕೆಎಸ್‌ಇಟಿ ಪರೀಕ್ಷೆಯನ್ನು ಒಟ್ಟು 300 ಅಂಕಗಳಿಗೆ ನಡೆಸಲಾಗುತ್ತದೆ.
ಪತ್ರಿಕೆ-1 (ಎಲ್ಲಾ ವಿದ್ಯಾರ್ಥಿಗಳಿಗೆ ಸಾಮಾನ್ಯ ಪತ್ರಿಕೆ): 100 ಅಂಕಗಳಿಗೆ .
ಪತ್ರಿಕೆ-2 (ವಿಷಯ ಪತ್ರಿಕೆ) : 200 ಅಂಕಗಳಿಗೆ

ಇದನ್ನೂ ಓದಿ: Job News : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಉಪನ್ಯಾಸಕರ ಹುದ್ದೆ; 21 ವಿಭಾಗಗಳಿಗೆ ಅರ್ಜಿ ಆಹ್ವಾನ

ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು

ಸಾಮಾನ್ಯ ವರ್ಗದ ಮತ್ತು ಮೀಸಲಾತಿಗೆ ಒಳಪಡದ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳೊಂದಿಗೆ ಪಾಸ್‌ ಆಗಿರಬೇಕು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಎಸ್‌ಸಿ/ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇ.50 ಅಂಕಗಳೊಂದಿಗೆ ಪಾಸ್‌ ಆಗಿರಬೇಕು.
ಸ್ನಾತಕೋತ್ತರ ಪದವಿಯಲ್ಲಿ ಮೊದಲ ವರ್ಷ, ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಥವಾ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಅರ್ಹತೆ ಎಷ್ಟು?
ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಯಸ್ಸಿನ ಯಾವುದೇ ಮಿತಿ ಇರುವುದಿಲ್ಲ.

Exit mobile version