ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸುವ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಗೆ (KCET 2023) ಇಂದಿನಿಂದ ಅಂದರೆ ಫೆ.2 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಮಾರ್ಚ್ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 7 ಶುಲ್ಕ ಪಾವತಿಗೆ ಕೊನೆ ದಿನವಾಗಿರುತ್ತದೆ. ಆನ್‌ಲೈನ್ ಅಪ್ಲಿಕೇಷನ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ವಿದ್ಯಾರ್ಥಿಗಳು ತಮ್ಮ ಅರ್ಜಿಯ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂದೇಹಗಳಿದ್ದಲ್ಲಿ, ಪ್ರಾಧಿಕಾರದ ಇ-ಮೇಲ್‌ಗೆ (keaugcet2023@gmail.com) ಮೇಲ್ ಮಾಡಿದಲ್ಲಿ ಉತ್ತರಿಸಲಾಗುವುದು ಎಂದು ಪ್ರಾಧಿಕಾರವು ತಿಳಿಸಿದೆ. ಸಹಾಯವಾಣಿ ಸಂಖ್ಯೆ: 080-23 460 460 ಯನ್ನೂ ಕೂಡ ಸಂಪರ್ಕಿಸಬಹುದು.
ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿದೆಯಾದರೂ ದಾಖಲಿಸಿರುವ ಎಲ್ಲ ವಿವರಗಳನ್ನು ಪರದೆಯ ಮೇಲೆ ಸ್ಪಷ್ಟವಾಗಿ ನೋಡುವುದಕ್ಕಾಗಿ ಡೆಸ್ಕ್‌ಟಾಪ್‌ಗಳನ್ನು ಬಳಸುವಂತೆ ಕೆಇಎಯು ಸಲಹೆ ನೀಡಿದೆ.
ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್ ಮಾಡಿ.
ಅರ್ಜಿಯಲ್ಲಿ ವಿದ್ಯಾರ್ಥಿಗಳು ಜಾತಿ/ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆಯನ್ನು ಆನ್‌ಲೈನ್‌ನಲ್ಲಿ ಸರಿಯಾಗಿ ದಾಖಲಿಸಬೇಕು. ಆನ್‌ಲೈನ್‌ನಲ್ಲಿಯೇ ಈ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ಆರ್‌ಡಿ ಸಂಖ್ಯೆ ತಾಳೆಯಾಗದಿದ್ದಲ್ಲಿ ಜೂನ್‌ನಲ್ಲಿ ಖುದ್ದಾಗಿ ದಾಖಲೆ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ಸಿಇಟಿ ಕುರಿತ ಪೂರ್ಣ ವಿವರಗಳಿರುವ ಮಾಹಿತಿ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ಈ ಬಾರಿ ಮೇ 20, 21 ಮತ್ತು 22ರಂದು ಪರೀಕ್ಷೆ ನಡೆಯಲಿದೆ ಎಂದು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಲ್ಲದೆ ಪರೀಕ್ಷೆಯ ವೇಳಾ ಪಟ್ಟಿಯನ್ನು (CET Exam Time table) ಪ್ರಕಟಿಸಿದ್ದು, ಯಾವಾಗ ಯಾವ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ಒದಗಿಸಿದೆ.
ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ,
ಮೇ 20- ಜೀವಶಾಸ್ತ್ರ ಮತ್ತು ಗಣಿತ
ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ
ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಈ ಪರೀಕ್ಷೆ ನಡೆಯಲಿದೆ.
ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗುತ್ತದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://cetonline.karnataka.gov.in
ಇದನ್ನೂ ಓದಿ: CET Exam Time table : ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಯಾವ ದಿನ ಯಾವ ಪರೀಕ್ಷೆ? ಇಲ್ಲಿದೆ ಫುಲ್ ಡಿಟೇಲ್ಸ್