ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಬಿ.ಎಸ್.ಸಿ.(ನರ್ಸಿಂಗ್) ಕೋರ್ಸುಗಳ (kea bsc nursing admission 2023) ಸಾಮಾನ್ಯ ಪ್ರವೇಶ ಪರೀಕ್ಷೆಗೆ (KCET 2023) ಅರ್ಜಿ ಆಹ್ವಾನಿಸಿದೆ.
ದ್ವಿತೀಯ ಪಿಯುಸಿಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಜೀವಶಾಸ್ತ್ರ ಮತ್ತು ಇಂಗ್ಲಿಷ್ ಅಭ್ಯಸಿಸಿ ಒಟ್ಟಾರೆ ಕನಿಷ್ಠ ಶೇ.45 ರಷ್ಟು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಾದ ವರ್ಗ-1, 2ಎ, 3ಬಿ, 3ಎ ಮತ್ತು 3ಬಿಗಳಿಗೆ ಸೇರಿರುವ ಅಭ್ಯರ್ಥಿಗಳು ಶೇ. 40) ಅಂಕಗಳನ್ನು ಪಿಸಿಬಿ ವಿಷಯಗಳಲ್ಲಿ ಪಡೆದು ತೇರ್ಗಡೆಯಾದವರು ಈ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ದಿನಾಂಕ 18-04-2023ರ ರಾತ್ರಿ 8.00 ರಿಂದ 22-04-2023ರ ರಾತ್ರಿ 11.59ರವರೆಗೆ ಸಿಇಟಿ-2023 ಗೆ ನೊಂದಣಿ ಮಾಡಿಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ. ದಿನಾಂಕ 23-04-2023 ರೊಳಗೆ ನಿಗದಿತ ಶುಲ್ಕವನ್ನು ಪಾವತಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್ ಮಾಡಿ.
ನಂತರ ಬಿ.ಎಸ್.ಸಿ (ನರ್ಸಿಂಗ್) ಕೋರ್ಸುಗಳ ಪ್ರವೇಶಾತಿಗೆ ಅರ್ಹತೆ ಪಡೆಯಲು ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸಿಇಟಿ-2023ರ (KCET 2023) ಪರೀಕ್ಷೆಗಳಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದ ವಿಷಯಗಳಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ ಹಾಜರಾಗಬೇಕಿರುತ್ತದೆ.
ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿಯ ಸವಲತ್ತುಗಳು ಅನ್ವಯಿಸುವುದಿಲ್ಲ. ಕರ್ನಾಟಕೇತರ ಅಭ್ಯರ್ಥಿಗಳು ಸರ್ಕಾರದ ಪಾಲಿನ ಬಿ.ಎಸ್.ಸಿ ನರ್ಸಿಂಗ್ ಕೋರ್ಸುಗಳ ಪ್ರವೇಶಕ್ಕೂ ಅರ್ಹತೆ ಪಡೆಯುವುದಿಲ್ಲ. ಸಿಇಟಿ-2023ಕ್ಕೆ (KCET 2023) ಈಗಾಗಲೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಕರ್ನಾಟಕದ ಅಭ್ಯರ್ಥಿಗಳು ಬಿ.ಎಸ್.ಸಿ. (ನರ್ಸಿಂಗ್) ಕೋರ್ಸುಗಳ ಪ್ರವೇಶಾತಿಗೆ ಪ್ರತ್ಯೇಕವಾಗಿ ನೊ೦ದಣಿ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.
ಸಿಇಟಿ-2023 ಮತ್ತೆ ದಿನಾಂಕ ವಿಸ್ತರಣೆ
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸುವ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಗೆ (KCET 2023) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ.
ಈಗ ವಿದ್ಯಾರ್ಥಿಗಳು ದಿನಾಂಕ 22-04-2023 ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ದಿನಾಂಕ 23-04-2023ರವರೆಗೆ ಕಾಲಾವಕಾಶ ನೀಡಲಾಗಿದೆ. ಸಿಇಟಿ-2023ಕ್ಕೆ (KCET 2023) ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.
ಆನ್‌ಲೈನ್ ಅಪ್ಲಿಕೇಷನ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಅರ್ಜಿಯ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂದೇಹಗಳಿದ್ದಲ್ಲಿ, ಪ್ರಾಧಿಕಾರದ ಇ-ಮೇಲ್‌ಗೆ (keaugcet2023@gmail.com) ಮೇಲ್ ಮಾಡಿದಲ್ಲಿ ಉತ್ತರಿಸಲಾಗುವುದು ಎಂದು ಪ್ರಾಧಿಕಾರವು ತಿಳಿಸಿದೆ. ಸಹಾಯವಾಣಿ ಸಂಖ್ಯೆ: 080-23 460 460 ಯನ್ನೂ ಕೂಡ ಸಂಪರ್ಕಿಸಬಹುದು.
ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿದೆಯಾದರೂ ದಾಖಲಿಸಿರುವ ಎಲ್ಲ ವಿವರಗಳನ್ನು ಪರದೆಯ ಮೇಲೆ ಸ್ಪಷ್ಟವಾಗಿ ನೋಡುವುದಕ್ಕಾಗಿ ಡೆಸ್ಕ್‌ಟಾಪ್‌ಗಳನ್ನು ಬಳಸುವಂತೆ ಕೆಇಎಯು ಸಲಹೆ ನೀಡಿದೆ.
ಅರ್ಜಿಯಲ್ಲಿ ವಿದ್ಯಾರ್ಥಿಗಳು ಜಾತಿ/ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆಯನ್ನು ಆನ್‌ಲೈನ್‌ನಲ್ಲಿ ಸರಿಯಾಗಿ ದಾಖಲಿಸಬೇಕು. ಆನ್‌ಲೈನ್‌ನಲ್ಲಿಯೇ ಈ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ಆರ್‌ಡಿ ಸಂಖ್ಯೆ ತಾಳೆಯಾಗದಿದ್ದಲ್ಲಿ ಜೂನ್‌ನಲ್ಲಿ ಖುದ್ದಾಗಿ ದಾಖಲೆ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ಸಿಇಟಿ ಕುರಿತ ಪೂರ್ಣ ವಿವರಗಳಿರುವ ಮಾಹಿತಿ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ಈ ಬಾರಿ ಮೇ 20, 21 ಮತ್ತು 22ರಂದು ಪರೀಕ್ಷೆ ನಡೆಯಲಿದೆ ಎಂದು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಲ್ಲದೆ ಪರೀಕ್ಷೆಯ ವೇಳಾ ಪಟ್ಟಿಯನ್ನು (CET Exam Time table) ಪ್ರಕಟಿಸಿದ್ದು, ಯಾವಾಗ ಯಾವ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ಒದಗಿಸಿದೆ.
ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ,
ಮೇ 20- ಜೀವಶಾಸ್ತ್ರ ಮತ್ತು ಗಣಿತ
ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ
ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಈ ಪರೀಕ್ಷೆ ನಡೆಯಲಿದೆ.
ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗುತ್ತದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://cetonline.karnataka.gov.in
ಇದನ್ನೂ ಓದಿ: KCET 2023 : ಸಿಇಟಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ; ಏ.9 ಅರ್ಜಿ ಸಲ್ಲಿಸಲು ಕೊನೆಯ ದಿನ